ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ವಿರುದ್ಧ ಬಿಜೆಪಿ ಮುಖಂಡ ಎನ್ಆರ್ ರಮೇಶ್(NR Ramesh) ಗಂಭೀರ ಆರೋಪ ಮಾಡಿದ್ದು ದಾಖಲೆ ಬಿಡುಗಡೆ ಮಾಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನ ರಾಜ್ಯ BJP ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ದಾಖಲೆ ಸಮೇತ ಸಿದ್ದರಾಮಯ್ಯ ವಿರುದ್ಧ 200 ಕೋಟಿ ಹಗರಣ ಆರೋಪ ಮಾಡಿದ್ದಾರೆ.
ಸಿದ್ದರಾಮಯ್ಯ ಅವಧಿಯಲ್ಲಿ ಕಾಫಿ, ತಿಂಡಿ, ಬಿಸ್ಕತ್ ಹೆಸರಲ್ಲಿ ಹಗರಣ ನಡೆದಿದೆ. 5 ವರ್ಷದಲ್ಲಿ ಸುಮಾರು 200 ಕೋಟಿ ರೂಪಾಯಿ ಲೂಟಿ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ದೂರು ನೀಡಿದ್ದೇನೆ ಎಂದು ಎನ್.ಆರ್.ರಮೇಶ್ ತಿಳಿಸಿದ್ದಾರೆ. ಅಲ್ಲದೆ ಸಿದ್ದರಾಮಯ್ಯ ವಿರುದ್ಧ ಕಾಫಿ ತಿಂಡಿ ಹಗರಣದ ತನಿಖೆಗೆ ಸಿಎಂಗೆ ಮನವಿ ಮಾಡಿದ್ದೇನೆ. ಮುಖ್ಯಮಂತ್ರಿಗಳು ಕೂಡ ನನ್ನ ಮನವಿಗೆ ಸ್ಪಂದಿಸಿದ್ದಾರೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಸಿಐಡಿಗೆ ಕೊಡುವ ಬಗ್ಗೆ ಬುಧವಾರದೊಳಗೆ ತಿಳಿಸೋದಾಗಿ ಭರವಸೆ ನೀಡಿದ್ದಾರೆ ಎಂದರು.
ಇದನ್ನೂ ಓದಿ: KSDA Recruitment 2023: ಕೃಷಿ ಇಲಾಖೆ ನೇಮಕಾತಿ: ಸ್ನಾತಕೋತ್ತರ ಪದವೀಧರರು ಅರ್ಜಿ ಸಲ್ಲಿಸಿ
ಹಾಸಿಗೆ , ದಿಂಬು, ಇಂದಿರಾ ಕ್ಯಾಂಟೀನ್ ತಿಂಡಿ, ನೆಲದಡಿಯ ಕಸದ ಡಬ್ಬಗಳು ಮತ್ತು ಎಲ್,ಇ,ಡಿ ದೀಪಗಳ ಅಳವಡಿಕೆಯಂತಹ ಯೋಜನೆಗಳ ಹೆಸರಿನಲ್ಲೂ ಸಾವಿರಾರು ಕೋಟಿ ರೂಪಾಯಿಗಳನ್ನು ಲೂಟಿ ಹಾಗೂ ಮುಖ್ಯಮಂತ್ರಿಗಳ ಕಛೇರಿಯ ಕಾರ್ಯಗಳಿಗೆ ಕಾಫೀ, ತಿಂಡಿ, ಬಿಸ್ಕೇಟ್, ಪೂರೈಕೆ ಹೆಸರಿನಲ್ಲೂ 200 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣವನ್ನು ಲೂಟಿ ಈ ಬೃಹತ್ ಹಗರಣವನ್ನು ಸಿಬಿಐ ಅಥವಾ ಸಿಐಡಿ ತನಿಖೆಗೆ ವಹಿಸುವಂತೆ ಮಾನ್ಯ ಮುಖ್ಯಮಂತ್ರಿಗಳನ್ನು ಆಗ್ರಹಿಸಿರುವ ಎನ್, ಆರ್ ರಮೇಶ್ ಮನವಿ ಮಾಡಿದ್ದಾರೆ.
ಈ ಬೃಹತ್ ಹಗರಣಕ್ಕೆ ಸಾಕ್ಷಿ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಅವಧಿಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿಗಳಾಗಿ ಕಾರ್ಯ ನಿರ್ವಹಿಸಿರುವ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲು ಮಾಡಿದ್ದೇವೆ ಎಂದು ಆರೋಪ ಮಾಡಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 2:50 pm, Mon, 6 March 23