Gandhadagudi: ಶಾಲೆ ಮಕ್ಕಳಿಗೆ ಉಚಿತವಾಗಿ ಗಂಧದಗುಡಿ ಚಿತ್ರ ತೋರಿಸಲು ರಾಜ್ಯ ಸರ್ಕಾರಕ್ಕೆ ಎನ್.ಆರ್. ರಮೇಶ್ ಮನವಿ

| Updated By: ಆಯೇಷಾ ಬಾನು

Updated on: Nov 08, 2022 | 1:21 PM

ಗಂಧದಗುಡಿ ಕನ್ನಡ ಚಲನಚಿತ್ರವನ್ನು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಉಚಿತವಾಗಿ ಪ್ರದರ್ಶನ ಮಾಡಲು ಎನ್.ಆರ್. ರಮೇಶ್, ಸಿಎಂ ಬೊಮ್ಮಾಯಿ‌ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

Gandhadagudi: ಶಾಲೆ ಮಕ್ಕಳಿಗೆ ಉಚಿತವಾಗಿ ಗಂಧದಗುಡಿ ಚಿತ್ರ ತೋರಿಸಲು ರಾಜ್ಯ ಸರ್ಕಾರಕ್ಕೆ ಎನ್.ಆರ್. ರಮೇಶ್ ಮನವಿ
ಪುನೀತ್ ರಾಜ್​ಕುಮಾರ್
Follow us on

ಬೆಂಗಳೂರು: ದಿ. ಪುನೀತ್ ರಾಜ್ ಕುಮಾರ್(Puneeth Rajkumar) ಅಭಿನಯದ ಗಂಧದಗುಡಿ(Gandhadagudi) ಕನ್ನಡ ಚಲನಚಿತ್ರವನ್ನು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಉಚಿತವಾಗಿ ಪ್ರದರ್ಶನ ಮಾಡಲು ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಎನ್.ಆರ್. ರಮೇಶ್(NR Ramesh), ಸಿಎಂ ಬೊಮ್ಮಾಯಿ‌(Basavaraj Bommai) ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಅಕ್ಟೋಬರ್ 28ರಂದು ಬಿಡುಗಡೆಯಾದ ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ರವರ ನಟನೆಯ ಕೊನೆಯ ಚಿತ್ರ “ಗಂಧದಗುಡಿ” ಚಲನಚಿತ್ರವು ಅದ್ಭುತವಾದ ಚಲನಚಿತ್ರವಾಗಿದ್ದು, ಕರ್ನಾಟಕ ರಾಜ್ಯದ ನೈಸರ್ಗಿಕ ಸಂಪತ್ತನ್ನು, ವನ್ಯ ಜೀವಿಗಳ ವೈವಿಧ್ಯತೆಯನ್ನು ಮನಮುಟ್ಟುವಂತೆ ತೋರಿಸುವಲ್ಲಿ ಅತ್ಯಂತ ಯಶಸ್ವಿಯಾಗಿದೆ. ಅಮೋಘವರ್ಷ ಅವರ ನಿರ್ದೇಶನದ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ನಟನೆಯ “ಗಂಧದಗುಡಿ” ಚಲನಚಿತ್ರವು ಹಲವಾರು ಸಾಮಾಜಿಕ ಕಳಕಳಿಯ ಸಂದೇಶಗಳನ್ನು ಅತ್ಯಂತ ಯಶಸ್ವಿಯಾಗಿ ಪ್ರೇಕ್ಷಕರ ಮನಮುಟ್ಟಿಸಿರುವುದು ಎಲ್ಲರಿಗೂ ತಿಳಿದಿರುವ ವಿಷಯ.

ಈ ಚಲನಚಿತ್ರವು ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳೂ ಸೇರಿದಂತೆ ಎಲ್ಲ ಶಾಲೆಗಳಲ್ಲಿ ಮಕ್ಕಳಿಗೆ ಉಚಿತವಾಗಿ ಪ್ರದರ್ಶನ ಮಾಡಲು ವ್ಯವಸ್ಥೆ ಮಾಡುವ ಮೂಲಕ ಕನ್ನಡ ನಾಡಿನ ಪ್ರಾಕೃತಿಕ ಸಂಪತ್ತಿನ ಬಗ್ಗೆ ಮತ್ತು ವೈವಿಧ್ಯಮಯ ವನ್ಯ ಜೀವಿಗಳ ಬಗ್ಗೆ ಅರಿವು ಮೂಡಿಸಿದಂತಾಗುತ್ತದೆ. ಹೀಗಾಗಿ ರಾಜ್ಯದ ಪ್ರತೀ ಮೂಲೆ ಮೂಲೆಯಲ್ಲಿರುವ ಹಳ್ಳಿಗಳಲ್ಲಿ / ಗುಡ್ಡಗಾಡು ಪ್ರದೇಶಗಳಲ್ಲಿ ಇರುವ ಎಲ್ಲಾ ಶಾಲಾ – ಕಾಲೇಜುಗಳಲ್ಲಿ “ಗಂಧದಗುಡಿ ಚಲನಚಿತ್ರ’ದ ಉಚಿತ ಪ್ರದರ್ಶನ ನೀಡುವ ಬಗ್ಗೆ ರಾಜ್ಯ ಸರ್ಕಾರವು ಮುತುವರ್ಜಿ ವಹಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ಎನ್.ಆರ್. ರಮೇಶ್ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.

ಎನ್.ಆರ್. ರಮೇಶ್ ಪತ್ರ