AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ಖಂಡಿಸಿ NSUI ಪ್ರತಿಭಟನೆ; ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸಚಿವ ಅಶ್ವತ್ಥ್ ನಾರಾಯಣ ಕಚೇರಿ ಎದುರು NSUI ಪ್ರತಿಭಟನೆ ನಡೆಸುತ್ತಿದ್ದು ಪ್ರತಿಭಟನಾನಿರತ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಸ್ತೆಯಲ್ಲಿ ಕುಳಿತು NSUI ಕಾರ್ಯಕರ್ತರು ಧರಣಿ ನಡೆಸಿದ್ದಾರೆ.

ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ಖಂಡಿಸಿ NSUI ಪ್ರತಿಭಟನೆ; ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು
ಸಂಗ್ರಹ ಚಿತ್ರ
TV9 Web
| Edited By: |

Updated on:May 04, 2022 | 12:14 PM

Share

ಬೆಂಗಳೂರು: ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ಖಂಡಿಸಿ ಇಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು NSUI ವಿದ್ಯಾರ್ಥಿ ಸಂಘಟನೆ ಮುಂದಾಗಿದೆ. PSI ಪರೀಕ್ಷೆ ಅಕ್ರಮದಲ್ಲಿ ಸಚಿವರ ಸಹೋದರ ಭಾಗಿ ಆರೋಪ ಹಿನ್ನೆಲೆ 80 ಲಕ್ಷಕ್ಕೆ ಪಿಎಸ್ಐ ಹುದ್ದೆ ಸೇಲ್ ಆರೋಪ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನಾನಿರತ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸಚಿವ ಅಶ್ವತ್ಥ್ ನಾರಾಯಣ ಕಚೇರಿ ಎದುರು NSUI ಪ್ರತಿಭಟನೆ ನಡೆಸುತ್ತಿದ್ದು ಪ್ರತಿಭಟನಾನಿರತ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಸ್ತೆಯಲ್ಲಿ ಕುಳಿತು NSUI ಕಾರ್ಯಕರ್ತರು ಧರಣಿ ನಡೆಸಿದ್ದಾರೆ. ಬ್ರೀಫ್ಕೇಸ್ನಿಂದ ಹಣ ತೆಗೆದು ಚೆಲ್ಲಿ ಅಣಕು ಪ್ರದರ್ಶನ ಮಾಡಿದ್ದಾರೆ. ಸಚಿವ ಡಾ.ಅಶ್ವತ್ಥ್ ನಾರಾಯಣ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದ್ದಾರೆ. ಸಚಿವರ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದಾಗ ಪೊಲೀಸರು ಎನ್ಎಸ್ಯುಐ ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಿಎಂಟಿಸಿ ಬಸ್ನಲ್ಲಿ ತುಂಬಿಸಿ ಕರೆದೊಯ್ದಿದ್ದಾರೆ.

KPSC ಆಯೋಗಕ್ಕೆ ಮುತ್ತಿಗೆ ಹಾಕಲು ಮುಂದಾದ ಆಪ್ ಇನ್ನು ಮತ್ತೊಂದು ಕಡೆ KPSC ಆಯೋಗಕ್ಕೆ ಮುತ್ತಿಗೆ ಹಾಕಲು ಆಮ್ ಆದ್ಮಿ ಪಾರ್ಟಿ ಮುಂದಾಗಿದೆ. ನಗರದ ಫ್ರೀಡಂ ಪಾರ್ಕ್ ಬಳಿ ಪರೀಕ್ಷೆಗಳ ಅಕ್ರಮದ ವಿರುದ್ಧ ಧರಣಿ ನಡೆಸುತ್ತಿದೆ. ಕೆಪಿಎಸ್ಸಿ ಆಯೋಗಕ್ಕೆ ಬೀಗ ಹಾಕಲು ಆಪ್ ಮುಂದಾಗಿದೆ. ಕೆಪಿಎಸ್ಸಿ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಪರೀಕ್ಷೆ ಬರೆದ ಉತ್ತರ ಪತ್ರಿಕೆಗಳ ಪ್ರತಿ ಕೊಡೋದಿಲ್ಲ. ಆರ್ಟಿಐನಲ್ಲಿ ಕೇಳಿದ್ರೂ ಮೌನವಾಗಿದ್ದಾರೆ. ಹೀಗಾಗಿ ಉದ್ಯೋಗಸೌಧಕ್ಕೆ ಬೀಗ ಜಡಿಯಲು ಆಪ್ ಮುಂದಾಗಿದ್ದು ಪ್ರತಿಭಟನಾಕಾರರನ್ನ ಬಂಧಿಸಲು ಪೊಲೀಸರು ಕೂಡ ಸಜ್ಜಾಗಿದ್ದಾರೆ.

ಪಿಎಸ್​ಐ ಅಕ್ರಮದ ಬಗೆಗಿನ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:14 pm, Wed, 4 May 22

ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು