ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ಖಂಡಿಸಿ NSUI ಪ್ರತಿಭಟನೆ; ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು

| Updated By: ಆಯೇಷಾ ಬಾನು

Updated on: May 04, 2022 | 12:14 PM

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸಚಿವ ಅಶ್ವತ್ಥ್ ನಾರಾಯಣ ಕಚೇರಿ ಎದುರು NSUI ಪ್ರತಿಭಟನೆ ನಡೆಸುತ್ತಿದ್ದು ಪ್ರತಿಭಟನಾನಿರತ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಸ್ತೆಯಲ್ಲಿ ಕುಳಿತು NSUI ಕಾರ್ಯಕರ್ತರು ಧರಣಿ ನಡೆಸಿದ್ದಾರೆ.

ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ಖಂಡಿಸಿ NSUI ಪ್ರತಿಭಟನೆ; ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು
ಸಂಗ್ರಹ ಚಿತ್ರ
Follow us on

ಬೆಂಗಳೂರು: ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ಖಂಡಿಸಿ ಇಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು NSUI ವಿದ್ಯಾರ್ಥಿ ಸಂಘಟನೆ ಮುಂದಾಗಿದೆ. PSI ಪರೀಕ್ಷೆ ಅಕ್ರಮದಲ್ಲಿ ಸಚಿವರ ಸಹೋದರ ಭಾಗಿ ಆರೋಪ ಹಿನ್ನೆಲೆ 80 ಲಕ್ಷಕ್ಕೆ ಪಿಎಸ್ಐ ಹುದ್ದೆ ಸೇಲ್ ಆರೋಪ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನಾನಿರತ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸಚಿವ ಅಶ್ವತ್ಥ್ ನಾರಾಯಣ ಕಚೇರಿ ಎದುರು NSUI ಪ್ರತಿಭಟನೆ ನಡೆಸುತ್ತಿದ್ದು ಪ್ರತಿಭಟನಾನಿರತ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಸ್ತೆಯಲ್ಲಿ ಕುಳಿತು NSUI ಕಾರ್ಯಕರ್ತರು ಧರಣಿ ನಡೆಸಿದ್ದಾರೆ. ಬ್ರೀಫ್ಕೇಸ್ನಿಂದ ಹಣ ತೆಗೆದು ಚೆಲ್ಲಿ ಅಣಕು ಪ್ರದರ್ಶನ ಮಾಡಿದ್ದಾರೆ. ಸಚಿವ ಡಾ.ಅಶ್ವತ್ಥ್ ನಾರಾಯಣ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದ್ದಾರೆ. ಸಚಿವರ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದಾಗ ಪೊಲೀಸರು ಎನ್ಎಸ್ಯುಐ ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಿಎಂಟಿಸಿ ಬಸ್ನಲ್ಲಿ ತುಂಬಿಸಿ ಕರೆದೊಯ್ದಿದ್ದಾರೆ.

KPSC ಆಯೋಗಕ್ಕೆ ಮುತ್ತಿಗೆ ಹಾಕಲು ಮುಂದಾದ ಆಪ್
ಇನ್ನು ಮತ್ತೊಂದು ಕಡೆ KPSC ಆಯೋಗಕ್ಕೆ ಮುತ್ತಿಗೆ ಹಾಕಲು ಆಮ್ ಆದ್ಮಿ ಪಾರ್ಟಿ ಮುಂದಾಗಿದೆ. ನಗರದ ಫ್ರೀಡಂ ಪಾರ್ಕ್ ಬಳಿ ಪರೀಕ್ಷೆಗಳ ಅಕ್ರಮದ ವಿರುದ್ಧ ಧರಣಿ ನಡೆಸುತ್ತಿದೆ. ಕೆಪಿಎಸ್ಸಿ ಆಯೋಗಕ್ಕೆ ಬೀಗ ಹಾಕಲು ಆಪ್ ಮುಂದಾಗಿದೆ. ಕೆಪಿಎಸ್ಸಿ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಪರೀಕ್ಷೆ ಬರೆದ ಉತ್ತರ ಪತ್ರಿಕೆಗಳ ಪ್ರತಿ ಕೊಡೋದಿಲ್ಲ. ಆರ್ಟಿಐನಲ್ಲಿ ಕೇಳಿದ್ರೂ ಮೌನವಾಗಿದ್ದಾರೆ. ಹೀಗಾಗಿ ಉದ್ಯೋಗಸೌಧಕ್ಕೆ ಬೀಗ ಜಡಿಯಲು ಆಪ್ ಮುಂದಾಗಿದ್ದು ಪ್ರತಿಭಟನಾಕಾರರನ್ನ ಬಂಧಿಸಲು ಪೊಲೀಸರು ಕೂಡ ಸಜ್ಜಾಗಿದ್ದಾರೆ.

ಪಿಎಸ್​ಐ ಅಕ್ರಮದ ಬಗೆಗಿನ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:14 pm, Wed, 4 May 22