ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಇಳಿಕೆ, ಸಾವಿನ ಸಂಖ್ಯೆ ಏರಿಕೆ! ನಾಳೆ ಡೆತ್ ಆಡಿಟ್ ಸಭೆ

ರಾಜ್ಯದಲ್ಲಿ ನಿನ್ನೆ ಹೊಸದಾಗಿ 5,339 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 39,12,100 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 38,11,615 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ.

ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಇಳಿಕೆ, ಸಾವಿನ ಸಂಖ್ಯೆ ಏರಿಕೆ! ನಾಳೆ ಡೆತ್ ಆಡಿಟ್ ಸಭೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: sandhya thejappa

Updated on:Feb 10, 2022 | 9:07 AM

ಬೆಂಗಳೂರು: ನಗರದಲ್ಲಿ ಸದ್ಯ ಕೊರೊನಾ (Coronavirus) ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜನವರಿ ಅಂತ್ಯದವರೆಗೆ 5-6 ಸೋಂಕಿತರು ಮೃತಪಡುತ್ತಿದ್ದರು. ಆದರೆ ನಿನ್ನೆ 2,161 ಕೊರೊನಾ ಕೇಸ್ ಪತ್ತೆಯಾಗಿತ್ತು. ಜೊತೆಗೆ 16 ಜನ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆ ಬಿಬಿಎಂಪಿ (BBMP) ವೈದ್ಯರು ನಾಳೆ (ಫೆ.11) ಡೆತ್ ಆಡಿಟ್ ಸಭೆ ನಡೆಸುತ್ತಾರೆ. ಸದ್ಯ ಒಂದು ವಾರದಿಂದ ಮೃತಪಟ್ಟವರ ಮಾಹಿತಿಯನ್ನು ಬಿಬಿಎಂಪಿ ಸಂಗ್ರಹಿಸುತ್ತಿದೆ.

ಕೊರೊನಾ ಸೋಂಕಿನಿಂದಲೇ ಸಾವನ್ನಪ್ಪುತ್ತಿದ್ದಾರಾ ಅಂತ ನಾಳೆ ಡೆತ್ಆಡಿಟ್ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ. ಕೊವಿಡ್ ಸಾವಿನ ಪ್ರಮಾಣ ಏರಿಕೆಗೆ ಕಾರಣವೇನು? ಆಸ್ಪತ್ರೆಗೆ ಬಂದಾಗ ಪರಿಸ್ಥಿತಿ ಹೇಗಿತ್ತು? ಏನೆಲ್ಲ ಚಿಕಿತ್ಸೆ ನೀಡಲಾಗಿದೆ? ಎಂಬ ಬಗ್ಗೆ ಆಸ್ಪತ್ರೆಗಳಿಗೆ ಹೋಗಿ ಬಿಬಿಎಂಪಿ ಮಾಹಿತಿ ಸಂಗ್ರಹಿಸುತ್ತಿದೆ. ಫೆ.6ಕ್ಕೆ 3,822 ಸೋಂಕಿತರು ಪತ್ತೆಯಾಗಿದ್ದರು. 17 ಸಾವನ್ನಪ್ಪಿದ್ದರು. ಫೆ.7ಕ್ಕೆ 2,718 ಸೋಂಕಿತರು ಪತ್ತೆಯಾಗಿದ್ದು, 15 ಸಾವನ್ನಪ್ಪಿದ್ದರು. ಫೆ.8ಕ್ಕೆ ಒಟ್ಟು 2,319 ಸೋಂಕಿತರಿಗೆ ಕೊರೊನಾ ತಗುಲಿತ್ತು. 17 ಸಾವನ್ನಪ್ಪಿದ್ದರು. ನಿನ್ನೆ 2,161 ಸೋಂಕಿತರು ಪತ್ತೆಯಾಗಿದ್ದರೆ, 16 ಜನ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ನಿನ್ನೆ ಹೊಸದಾಗಿ 5,339 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 39,12,100 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 38,11,615 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 48 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 39,495 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 60,956 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಇದನ್ನೂ ಓದಿ

Assembly Election Voter Slip: ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸುವುದು, ಫೋಟೊ ವೋಟರ್ ಸ್ಲಿಪ್ ಡೌನ್​ಲೋಡ್ ಮಾಡುವುದು ಹೇಗೆ

BJP Office Attacked: ತಮಿಳುನಾಡು ಬಿಜೆಪಿ ಕೇಂದ್ರ ಕಚೇರಿ ‘ಕಮಲಾಲಯಂ’ ಮೇಲೆ ಪೆಟ್ರೋಲ್ ಬಾಂಬ್​ ದಾಳಿ​

Published On - 9:02 am, Thu, 10 February 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್