AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

40 ವರ್ಷಗಳ ಹಿಂದೆ ಬರೆದಿದ್ದ ಕಾದಂಬರಿಯ ಪಾತ್ರವೊಂದಕ್ಕೆ ಈಗ ಆಕ್ಷೇಪ: ನಾಡೋಜ ಪ್ರೊ.ಬರಗೂರು ಸ್ಪಷ್ಟನೆ   

ನಲವತ್ತು ವರ್ಷಗಳ ನಂತರ ನನ್ನ ಕಾದಂಬರಿಯ ಪಾತ್ರವೊಂದು ಕಟ್ಟಿದ ‘ನಗರಿಗೀತೆ’ಗೆ ಈಗ ಆಕ್ಷೇಪ ಕೇಳಿಬಂದಿರುವುದು ಆಶ್ಚರ್ಯ ತಂದಿದೆ.

40 ವರ್ಷಗಳ ಹಿಂದೆ ಬರೆದಿದ್ದ ಕಾದಂಬರಿಯ ಪಾತ್ರವೊಂದಕ್ಕೆ ಈಗ ಆಕ್ಷೇಪ: ನಾಡೋಜ ಪ್ರೊ.ಬರಗೂರು ಸ್ಪಷ್ಟನೆ   
ನಾಡೋಜ ಪ್ರೊ; ಬರಗೂರು ರಾಮಚಂದ್ರಪ್ಪ.
TV9 Web
| Edited By: |

Updated on: Aug 30, 2022 | 10:30 PM

Share

ಬೆಂಗಳೂರು: ರಾಜ್ಯದಲ್ಲಿ ಪಠ್ಯಕ್ರಮ ಪರಿಷ್ಕರಣೆ ವಿಚಾರಕ್ಕೆ (Textbook Revision Controversy) ಸಂಬಂಧಿಸಿ ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಲೋಪವಾಗಿದೆ ಎಂದು ವಿರೋಧ ಪಕ್ಷದ ನಾಯಕರು, ವಿದ್ಯಾರ್ಥಿ ಸಂಘಟನೆಗಳು, ಕೆಲವು ಸಾಹಿತಿಗಳು ಸೇರಿದಂತೆ ಅನೇಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತಾಗಿ ನಾಡೋಜ ಪ್ರೊ: ಬರಗೂರು ರಾಮಚಂದ್ರಪ್ಪರು ಸ್ಪಷ್ಟನೆ ನೀಡಿದ್ದಾರೆ. ನಲವತ್ತು ವರ್ಷಗಳ ನಂತರ ನನ್ನ ಕಾದಂಬರಿಯ ಪಾತ್ರವೊಂದು ಕಟ್ಟಿದ ‘ನಗರಿಗೀತೆ’ಗೆ ಈಗ ಆಕ್ಷೇಪ ಕೇಳಿಬಂದಿರುವುದು ಆಶ್ಚರ್ಯ ತಂದಿದೆ. ಇದು ತೀರ ಆಕಸ್ಮಿಕವೊ, ಹುನ್ನಾರವೋ ತಿಳಿಯದು. ಆದರೂ ನನ್ನ ಸ್ಪಷ್ಟನೆ ಕೊಡುತ್ತಿದ್ದೇನೆ ಎಂದು ನಾಡೋಜ ಪ್ರೊ: ಬರಗೂರು ರಾಮಚಂದ್ರಪ್ಪರು ಸ್ಪಷ್ಟನೆ ನೀಡಿದ್ದಾರೆ.

“ಭರತ ನಗರಿ” ಎಂಬ ಕಾದಂಬರಿಯನ್ನು ನಾನು 40 ವರ್ಷಗಳ ಹಿಂದೆ ಬರೆದಿದ್ದೆ. ಆಗ ದೇಶವನ್ನು ಕಾಂಗ್ರೆಸ್ ಪಕ್ಷ ಆಳುತ್ತಿತ್ತು. ಹದಗೆಟ್ಟ ರಾಜಕೀಯ ವ್ಯವಸ್ಥೆಯನ್ನು ವ್ಯಂಗ್ಯ ವಿಡಂಬನೆಗಳಿಂದ ಚಿತ್ರಿಸಿದ ಈ ರೂಪಕಾತ್ಮಕ ಕಾದಂಬರಿಯಲ್ಲಿ ಒಬ್ಬ ಕ್ರಾಂತಿಕಾರಿ ಯುವಕನ ಪಾತ್ರವಿದೆ. ಆತನನ್ನು ಜೈಲಿಗೆ ಹಾಕಿ ಆಳುವ ವರ್ಗವು ತಮ್ಮ ಆಡಳಿತವನ್ನು ಹೊಗಳುವ ಗೀತೆ ಹಾಡಲು ಒತ್ತಾಯಿಸಿದಾಗ ಚಲನಶೀಲತೆಯನ್ನು ಕಳೆದುಕೊಂಡ ಭಾರತದ ಆಡಳಿತವನ್ನು ವಿಡಂಬಿಸಲು ‘ಜನಗಣಮನ’ದ ಲಯವನ್ನು ಬಳಸಿಕೊಳ್ಳುತ್ತಾನೆ. ಇದು ಆ ಪಾತ್ರದ ಸ್ವಭಾವ ಮತ್ತು ನಡವಳಿಕೆಯಾಗಿದೆ. ಇಷ್ಟಕ್ಕೂ ಹೀಗೆ ಗೀತೆ ಹಾಡಿದ ಆ ಯುವಕ ಗುಂಡೇಟಿಗೆ ಸಾಯುತ್ತಾನೆ. ಆಡಳಿತದ ಶಿಕ್ಷೆಗೆ ಗುರಿಯಾಗುತ್ತಾನೆ. ಕೃತಿಕಾರನಾದ ನಾನು ಕಾದಂಬರಿಯ ಎಲ್ಲಾ ಪಾತ್ರಗಳನ್ನೂ ಆಯಾ ಪಾತ್ರಗಳ ಗುಣಧರ್ಮ, ಸ್ವಭಾವಕ್ಕೆ ತಕ್ಕಂತೆ ಚಿತ್ರಿಸಬೇಕಾಗುತ್ತದೆ.

ಆ ಪಾತ್ರಗಳ ಮಾತು ಮತ್ತು ನಡವಳಿಕೆ ಕೃತಿಕಾರರದಾಗುವುದಿಲ್ಲ. ಅದು ಆ ಪಾತ್ರದ ಅಭಿಪ್ರಾಯವೇ ಹೊರತು ನನ್ನದಲ್ಲ. ಒಟ್ಟು ಕೃತಿಯು ಹೊರಡಿಸುವ ಆಶಯ ಮಾತ್ರ ಕೃತಿಕಾರರದು. ನಾನು ಆ ಕಾಲದ ಕಾಂಗ್ರೆಸ್ ಆಡಳಿತ ವ್ಯವಸ್ಥೆಯನ್ನು ವಿಡಂಬನೆಗೆ ಒಡ್ಡಿ, ಒಟ್ಟು ಬದಲಾವಣೆಗೆ ಆಶಿಸಿದ್ದೇನೆ. ಜಾತಿ, ವರ್ಗ, ಭ್ರಷ್ಟತೆಗಳನ್ನು ಮೀರಿದ ಭಾರತ ನನ್ನ ಆದರ್ಶ ಎನ್ನುವುದು ಕೃತಿಯಲ್ಲಿರುವ ಆಶಯ. ಸೃಜನಶೀಲ ಕೃತಿಯ ಸ್ವರೂಪವನ್ನು ಅರ್ಥ ಮಾಡಿಕೊಳ್ಳದೆ ನಾನು ರಾಷ್ಟ್ರಗೀತೆಗೆ ಅವಮಾನ ಮಾಡಿದ್ದೇನೆಂದು ಸುಳ್ಳು ಆರೋಪ ಮಾಡಲಾಗುತ್ತಿದೆ. ಈ ಮೂಲಕ ನಾಡಗೀತೆಗೆ ಅವಮಾನ ಮಾಡಿದವರನ್ನು ಸಮರ್ಥಿಸಿಕೊಳ್ಳುವ ಹುನ್ನಾರ ವ್ಯಕ್ತವಾಗಿದೆ. ಇನ್ನು ಗಂಗೆಯನ್ನು ನಾನು ಅವಮಾನಿಸಿಲ್ಲ. ಗಂಗೆಯಂತಿರುವ ಸತ್ಯ, ಸಮಾನತೆಗಳನ್ನು ಕ್ಷುಲ್ಲಕ ರಾಜಕೀಯ ರಂಗವು ಅತ್ಯಾಚಾರ ಮಾಡುತ್ತಿದೆ ಎಂಬ ಅರ್ಥಕ್ಕಾಗಿ ಆ ಸಾಲುಗಳನ್ನು ಬರೆದಿದ್ದೇನೆ.

ನನ್ನ ಒಟ್ಟು ಬರಹಗಳನ್ನು ಸರಿಯಾಗಿ ಅರ್ಥಮಾಡಿಕೊಳ್ಳುವ ಸಹೃದಯರಿಗೆ ನನ್ನಲ್ಲಿರುವ ಸಮಾಜ ಬದಲಾವಣೆಯ ಆಶಯ ಮತ್ತು ದೇಶ ಬದ್ಧತೆ ಅರ್ಥವಾಗುತ್ತದೆ. ನಾನು ಸದಾ ಸಮಾಜಿಕ ಕಾಳಜಿಯ ದೇಶನಿಷ್ಠ ಲೇಖಕ. ಇಷ್ಟಾಗಿಯೂ ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸಿದ್ದರೆ, ಜನರಲ್ಲಿ ವಿಷಾದ ವ್ಯಕ್ತಪಡಿಸುತ್ತೇನೆ. ಇದು ಜನರಿಗೆ ನಾನು ಕೊಡುವ ಗೌರವ. ಇನ್ನೊಂದು ವಿಷಯ ಹೇಳಬೇಕು. ಕೆಲವು ತಿಂಗಳ ಹಿಂದೆ ನನ್ನ ಸಮಗ್ರ ಸಾಹಿತ್ಯ ಸಂಪುಟಗಳು ಬಂದಿವೆ. ಅದರಲ್ಲಿ ಪರಿಷ್ಕರಣೆ ಕೂಡ ಮಾಡಿದ್ದೇನೆ. ಅದರಲ್ಲಿ ಭರತ ನಗರಿ ಕಾದಂಬರಿಯೂ ಒಂದು. ರಾಷ್ಟ್ರ ಗೀತೆಯ ಲಯದಲ್ಲಿದ್ದ ಗೀತೆಯನ್ನು ಬಿಟ್ಟಿದ್ದೇನೆ. ಅಂದರೆ ಹಿಂದಕ್ಕೆ ತೆಗೆದುಕೊಂಡು ಸಮತೆ ಮತ್ತು ಮಮತೆಯ ದೇಶ ಕಟ್ಟಬೇಕು ಎಂಬ ಗೀತೆ ಹಾಕಿದ್ದೇನೆ. ಹೀಗಿರುವಾಗ 40 ವರ್ಷಗಳ ಹಿಂದಿನ ಪಠ್ಯ ಇಟ್ಟುಕೊಂಡು ಅಪಾರ್ಥ ಮಾಡಿ ವಿವಾದ ಮಾಡುವುದೇ ಅಪ್ರಸ್ತುತ. ಈಗ ಹಿಂದಿನ ಗೀತೆ ಇಲ್ಲ. ಇದು ಮುಖ್ಯ ಎಂದು ನಾಡೋಜ ಪ್ರೊ.ಬರಗೂರು ಅವರು ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?