AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಲಂಚ: ಪ್ರಸೂತಿ ತಜ್ಞ ಅಮಾನತು

ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಲಂಚ ಪಡೆದ ಪ್ರಸೂತಿ ತಜ್ಞ ಡಾ.ರಾಮಚಂದ್ರರನ್ನು ಅಮಾನತುಗೊಳಿಸಿ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಆದೇಶ ಹೊರಡಿಸಿದ್ದಾರೆ.

Bengaluru News: ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಲಂಚ: ಪ್ರಸೂತಿ ತಜ್ಞ ಅಮಾನತು
ಪ್ರಾತಿನಿಧಿಕ ಚಿತ್ರ
ವಿನಯ್​ ಕಾಶಪ್ಪನವರ್​
| Edited By: |

Updated on:Jul 20, 2023 | 9:58 PM

Share

ಬೆಂಗಳೂರು, ಜುಲೈ 20: ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಲಂಚ (bribery) ಪಡೆದ ಪ್ರಸೂತಿ ತಜ್ಞ ಡಾ.ರಾಮಚಂದ್ರರನ್ನು ಅಮಾನತುಗೊಳಿಸಿ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಆದೇಶ ಹೊರಡಿಸಿದ್ದಾರೆ. ಯಲಹಂಕ ಆಸ್ಪತ್ರೆಯಲ್ಲಿ ಸಿಸೇರಿಯನ್ ಹೆರಿಗೆ ಮಾಡಿಸಲು ಮಂಜುಳಾ ಎಂಬ ಮಹಿಳೆಗೆ ಸಿಸೇರಿಯನ್​ 15 ಸಾವಿರ ರೂ. ಲಂಚಕ್ಕೆ ಬೇಡಿಕೆ ಆರೋಪ ಮಾಡಲಾಗಿದೆ.

ಲೋಕಾಯುಕ್ತರ ತನಿಖೆಯಲ್ಲಿ 10 ಸಾವಿರ ಹಣ ಪಡೆದಿರುವುದು ಸಾಬೀತಾಗಿದೆ. ಹಾಗಾಗಿ ಲೋಕಾಯುಕ್ತರ ತನಿಖೆ ಆಧರಿಸಿ ವೈದ್ಯ ಡಾ.ರಾಮಚಂದ್ರ ವಿರುದ್ಧ ಕ್ರಮಕೈಗೊಳ್ಳಲಾಗಿದೆ.

ಇದನ್ನೂ ಓದಿ: Mysuru News: ಮೈಸೂರಿನಲ್ಲಿ ಮುಂದುವರಿದ ಪುಂಡರ ಅಟ್ಟಹಾಸ; ವಿವಿಧ ರಸ್ತೆಗಳಲ್ಲಿ ಪುಂಡು ಪೋಕರಿಗಳಿಂದ ಬೈಕ್ ವ್ಹೀಲಿಂಗ್​

ಬೀದರ್ ನಗರಸಭೆಯಲ್ಲಿ ಲಂಚ ದರ್ಬಾರ್​

ಬೀದರ್​: ಬೀದರ್ ನಗರಸಭೆಯಲ್ಲಿ ಲಂಚ ದರ್ಬಾರ್​ ನಡೆಯುತ್ತಿದೆ. ಶುಲ್ಕದ ನೆಪದಲ್ಲಿ ಸಿಬ್ಬಂದಿಗಳು ಲಂಚ ಪಡೆಯುತ್ತಿದ್ದಾರೆ. ಜನನ ಪ್ರಮಾಣ ಪತ್ರಕ್ಕೆ ನೂರು ರೂ. ಸ್ವೀಕರಿಸುವಾಗ ಸಿಬ್ಬಂದಿ ಸಿಕ್ಕಿಬಿದಿದ್ದು, ಮೊಬೈಲ್​ನಲ್ಲಿ  ವಿಡಿಯೋ ಸೆರೆ ಆಗಿದೆ.

ಸಂಸದರ ಬಗ್ಗೆ ಅವಹೇಳನಕಾರಿ ಪೋಸ್ಟ್: ಪೊಲೀಸ್ ಹೆಡ್ ಕಾನ್ಸಟೇಬಲ್ ಅಮಾನತು 

ಮೈಸೂರು: ಸಂಸದರ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಆರೋಪದಲ್ಲಿ ಮೈಸೂರಿನಲ್ಲಿ ಪೊಲೀಸ್ ಹೆಡ್ ಕಾನ್ಸಟೇಬಲ್ ಅಮಾನತು ಮಾಡಲಾಗಿತ್ತು. ವಿ ವಿ.ಪುರಂ ಟ್ರಾಫಿಕ್ ಪೊಲೀಸ್ ಠಾಣೆಯ ಬಿ ಪ್ರದೀಪ್ ಅಮಾನತಾದ ಹೆಡ್ ಕಾನ್ಸಟೇಬಲ್.

ಇದನ್ನೂ ಓದಿ: Ramanagara News: ಧ್ವಜಸಂಹಿತೆ ಉಲ್ಲಂಘನೆ: ರಾಮನಗರ ಡಿಸಿ ಕಚೇರಿ ಮೇಲೆ ಹಾರಾಡುತ್ತಿದೆ ಹರಿದ ತ್ರಿವರ್ಣ ಧ್ವಜ

ಪ್ರದೀಪ್​ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಮೆಂಟ್ ಮಾಡಿದ್ದ ಬಗ್ಗೆ ಸ್ಕ್ರೀನ್ ಶಾಟ್ ಜೊತೆ ಪೊಲೀಸ್ ಕಮಿಷನರ್​ಗೆ ದೂರು ನೀಡಿ ಕ್ರಮ ಕೈಗೊಳ್ಳುವಂತೆ ಸಂಸದ ಪ್ರತಾಪ ಸಿಂಹ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಇಲಾಖಾ ವಿಚಾರಣೆ ಬಾಕಿ ಇರಿಸಿ ಅಮಾನತು ಮಾಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:58 pm, Thu, 20 July 23

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ