AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ಮನೆ ಕಟ್ಟುವ ಮುಂಚೆ OC ಸರ್ಟಿಫಿಕೆಟ್ ಕಡ್ಡಾಯ: ಇಲ್ಲಾಂದ್ರೆ ವಿದ್ಯುತ್, ನೀರಿನ ಸಂಪರ್ಕವಿಲ್ಲ

ಬೆಂಗಳೂರಿನಲ್ಲಿ ಇನ್ಮುಂದೆ ಮನೆ ಕಟ್ಟುವ ಮುಂಚೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ಓಸಿ ಸರ್ಟಿಫಿಕೆಟ್​ ಪಡೆಯುವುದು ಕಡ್ಡಾಯವಾಗಿದೆ. ಆ ಬಳಿಕ ಮಾತ್ರ ವಿದ್ಯುತ್ ಮತ್ತು ನೀರಿನ ಸಂಪರ್ಕ ಸಿಗುತ್ತದೆ. ಸುಪ್ರಿಂಕೋರ್ಟ್ ಆದೇಶದಂತೆ OC ಸರ್ಟಿಫಿಕೆಟ್ ಕಡ್ಡಾಯಗೊಳಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್​ರಿಂದ ಆದೇಶ ಹೊರಡಿಸಲಾಗಿದೆ.

ಇನ್ಮುಂದೆ ಮನೆ ಕಟ್ಟುವ ಮುಂಚೆ OC ಸರ್ಟಿಫಿಕೆಟ್ ಕಡ್ಡಾಯ: ಇಲ್ಲಾಂದ್ರೆ ವಿದ್ಯುತ್, ನೀರಿನ ಸಂಪರ್ಕವಿಲ್ಲ
ಗ್ರೇಟರ್ ಬೆಂಗಳೂರು ಪ್ರಾಧಿಕಾರ
Shivaraj
| Edited By: |

Updated on:May 15, 2025 | 2:45 PM

Share

ಬೆಂಗಳೂರು, ಮೇ 15: ಇಂದಿನಿಂದ ಗ್ರೇಟರ್ ಬೆಂಗಳೂರು ಅಥಾರಿಟಿ (Greater Bengaluru Authority) ಜಾರಿಗೆ ಬಂದಿದೆ. ಇಡೀ ಬೆಂಗಳೂರಿನ ಆಡಳಿತ ಚಿತ್ರಣವೇ ಬದಲಾವಣೆ ಆಗಲಿದೆ. ಇದಕ್ಕೆ ಸಾಕ್ಷಿಯೆಂಬಂತೆ ವಿದ್ಯುತ್ ಮತ್ತು ನೀರಿನ ಸಂಪರ್ಕಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ಓಸಿ (OC) ಸರ್ಟಿಫಿಕೆಟ್ ಕಡ್ಡಾಯಗೊಳಿಸಲಾಗಿದೆ. ಸ್ವಾಧೀನನಾನುಭಾವ ಪತ್ರ ಇಲ್ಲದಿದ್ದರೆ ಸಂಪರ್ಕ ಸಿಗುವುದಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್​ರಿಂದ ಗುರುವಾರ ಆದೇಶ ಹೊರಡಿಸಲಾಗಿದೆ.

ಸುಪ್ರಿಂಕೋರ್ಟ್ ಆದೇಶದಂತೆ ಓಸಿ ಸರ್ಟಿಫಿಕೆಟ್ ಕಡ್ಡಾಯವಾಗಿದೆ. ಬೆಂಗಳೂರಿನ ‘ಎ’ ಖಾತಾ ಹಾಗೂ ‘ಬಿ’ ಖಾತಾ ನಿವೇಶನವಾಗಿರಲಿ ಕಡ್ಡಾಯವಾಗಿ ಪ್ರಮಾಣ ಪತ್ರ ಪಡೆಯಬೇಕು. ಈಗಾಗಲೇ ವಿದ್ಯುತ್ ಸಂಪರ್ಕಕ್ಕಾಗಿ ಸುಮಾರು 66 ಸಾವಿರದ 400 ಅರ್ಜಿಗಳು ಸಲ್ಲಿಸಲಾಗಿದೆ. ಅವರಿಗೆಲ್ಲ ಬಿಬಿಎಂಪಿ ಸಿಬ್ಬಂದಿಯೇ ಕರೆ ಮಾಡಿ ಬೇಕಾದ ದಾಖಲೆ ಪಡೆಯಲಿದ್ದಾರೆ. ಇನ್ಮುಂದೆ ಮನೆ ಕಟ್ಟುವ ಮುಂಚೆ ಓಸಿ ಸರ್ಟಿಫಿಕೇಟ್ ಕಡ್ಡಾಯ ಮಾಡಲಾಗಿದೆ.

ಆದೇಶ ಪತ್ರದಲ್ಲೇನಿ?

ಬಿಬಿಎಂಪಿ ವ್ಯಾಪ್ತಿಯಲ್ಲಿ ಬೆಸ್ಕಾಂಗೆ ವಿದ್ಯುತ್ ಸಂಪರ್ಕ ಕೋರಿ ಸುಮಾರು 66,400 ಸಂಪರ್ಕಗಳಿಗಾಗಿ ಅರ್ಜಿಗಳು ಸಲ್ಲಿಕೆಯಾಗಿದೆ. ಸುಪ್ರಿಂಕೋರ್ಟ್ ಆದೇಶದಂತೆ ಸ್ಥಳೀಯ ಸಂಸ್ಥೆಗಳಿಂದ ಸ್ವಾಧೀನಾನುಭವ ಪ್ರಮಾಣ ಪತ್ರ, ಪೂರ್ಣತಾ ಪ್ರಮಾಣ ಪತ್ರ ಪಡೆದಿರುವ ಕಟ್ಟಡಗಳಿಗೆ ಮಾತ್ರ ವಿದ್ಯುತ್ ಮತ್ತು ನೀರು ಸರಬರಾಜು, ಒಳಚರಂಡಿ ಸಂಪರ್ಕ ನೀಡುವಂತೆ ಆದೇಶಿಸಲಾಗಿದೆ.

ಬಿಬಿಎಂಪಿ ಟ್ವೀಟ್​

ಸುಪ್ರಿಂಕೋರ್ಟ್ ಆದೇಶ ಹಿನ್ನಲೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಬೆಸ್ಕಾಂ ವಿದ್ಯುತ್ ಸಂಪರ್ಕ ಕೋರಿರುವ ಕಟ್ಟಡಗಳಿಗೆ ಬಿಬಿಎಂಪಿಯಿಂದ ‘ಎ’ ಖಾತಾ ಅಥವಾ ‘ಬಿ’ ಖಾತಾ ಪಡೆಯಲಾಗಿರುವ ಬಗ್ಗೆ, ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ಪಡೆಯಲಾಗಿರುವ ಬಗ್ಗೆ ಮತ್ತು ಸ್ವಾಧೀನಾನುಭವ ಪ್ರಮಾಣ ಪತ್ರ, ಪೂರ್ಣತಾ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಿರುವ, ಸಲ್ಲಿಸುವ ವಿವರಗಳನ್ನು ಪಡೆಯಲು ಬಿಬಿಎಂಪಿಯಿಂದ ಎಸ್​​ಎಂಎಸ್​ ಮತ್ತು ದೂರವಾಣಿ ಕರೆ ಮುಖಾಂತರ ವಿದ್ಯುತ್ ಸಂಪರ್ಕಕ್ಕಾಗಿ ಬಾಕಿ ಇರುವ ಅರ್ಜಿದಾರರನ್ನು ಸಂಪರ್ಕಿಸಲಾಗುತ್ತದೆ.

ಇದನ್ನೂ ಓದಿ: ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ವಾಟ್ಸ್​ಆ್ಯಪ್​ನಲ್ಲೇ ಕಳುಹಿಸಿ ದೂರು ನೀಡಿ: ಬೆಸ್ಕಾಂ ಸಂಖ್ಯೆಗಳ ವಿವರ ಇಲ್ಲಿದೆ

ಬಿಬಿಎಂಪಿ ಕೋರುವ ಮಾಹಿತಿಯನ್ನು ಒದಗಿಸಲು ಹಾಗೂ ಈ ಕೆಳಕಂಡ ಆನ್‌ಲೈನ್ ಲಿಂಕ್‌ನಲ್ಲಿ ನೊಂದಾಯಿತ ಎಂಜಿನಿಯರ್​ಗಳ ಮುಖಾಂತರ ಸ್ವಾಧೀನಾನುಭವ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸುವಂತೆ ಬೆಂಗಳೂರು ನಾಗರೀಕರನ್ನು ಕೋರಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:45 pm, Thu, 15 May 25

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ