
ಬೆಂಗಳೂರು, ಮೇ 15: ಇಂದಿನಿಂದ ಗ್ರೇಟರ್ ಬೆಂಗಳೂರು ಅಥಾರಿಟಿ (Greater Bengaluru Authority) ಜಾರಿಗೆ ಬಂದಿದೆ. ಇಡೀ ಬೆಂಗಳೂರಿನ ಆಡಳಿತ ಚಿತ್ರಣವೇ ಬದಲಾವಣೆ ಆಗಲಿದೆ. ಇದಕ್ಕೆ ಸಾಕ್ಷಿಯೆಂಬಂತೆ ವಿದ್ಯುತ್ ಮತ್ತು ನೀರಿನ ಸಂಪರ್ಕಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ಓಸಿ (OC) ಸರ್ಟಿಫಿಕೆಟ್ ಕಡ್ಡಾಯಗೊಳಿಸಲಾಗಿದೆ. ಸ್ವಾಧೀನನಾನುಭಾವ ಪತ್ರ ಇಲ್ಲದಿದ್ದರೆ ಸಂಪರ್ಕ ಸಿಗುವುದಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್ರಿಂದ ಗುರುವಾರ ಆದೇಶ ಹೊರಡಿಸಲಾಗಿದೆ.
ಸುಪ್ರಿಂಕೋರ್ಟ್ ಆದೇಶದಂತೆ ಓಸಿ ಸರ್ಟಿಫಿಕೆಟ್ ಕಡ್ಡಾಯವಾಗಿದೆ. ಬೆಂಗಳೂರಿನ ‘ಎ’ ಖಾತಾ ಹಾಗೂ ‘ಬಿ’ ಖಾತಾ ನಿವೇಶನವಾಗಿರಲಿ ಕಡ್ಡಾಯವಾಗಿ ಪ್ರಮಾಣ ಪತ್ರ ಪಡೆಯಬೇಕು. ಈಗಾಗಲೇ ವಿದ್ಯುತ್ ಸಂಪರ್ಕಕ್ಕಾಗಿ ಸುಮಾರು 66 ಸಾವಿರದ 400 ಅರ್ಜಿಗಳು ಸಲ್ಲಿಸಲಾಗಿದೆ. ಅವರಿಗೆಲ್ಲ ಬಿಬಿಎಂಪಿ ಸಿಬ್ಬಂದಿಯೇ ಕರೆ ಮಾಡಿ ಬೇಕಾದ ದಾಖಲೆ ಪಡೆಯಲಿದ್ದಾರೆ. ಇನ್ಮುಂದೆ ಮನೆ ಕಟ್ಟುವ ಮುಂಚೆ ಓಸಿ ಸರ್ಟಿಫಿಕೇಟ್ ಕಡ್ಡಾಯ ಮಾಡಲಾಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಬೆಸ್ಕಾಂಗೆ ವಿದ್ಯುತ್ ಸಂಪರ್ಕ ಕೋರಿ ಸುಮಾರು 66,400 ಸಂಪರ್ಕಗಳಿಗಾಗಿ ಅರ್ಜಿಗಳು ಸಲ್ಲಿಕೆಯಾಗಿದೆ. ಸುಪ್ರಿಂಕೋರ್ಟ್ ಆದೇಶದಂತೆ ಸ್ಥಳೀಯ ಸಂಸ್ಥೆಗಳಿಂದ ಸ್ವಾಧೀನಾನುಭವ ಪ್ರಮಾಣ ಪತ್ರ, ಪೂರ್ಣತಾ ಪ್ರಮಾಣ ಪತ್ರ ಪಡೆದಿರುವ ಕಟ್ಟಡಗಳಿಗೆ ಮಾತ್ರ ವಿದ್ಯುತ್ ಮತ್ತು ನೀರು ಸರಬರಾಜು, ಒಳಚರಂಡಿ ಸಂಪರ್ಕ ನೀಡುವಂತೆ ಆದೇಶಿಸಲಾಗಿದೆ.
Citizens are requested to obtain Occupancy Certificates from BBMP in order to receive electricity from BESCOM and water/sewer connections from BWSSB.
ಬಿ.ಡಬ್ಲ್ಯೂ.ಎಸ್.ಎಸ್.ಬಿ ಹಾಗೂ ಬೆಸ್ಕಾಂ ಇಲಾಖೆಗಳಿಂದ ಸಂಪರ್ಕ ಪಡೆಯಲು ಬಿಬಿಎಂಪಿ ಯಿಂದ ಕಟ್ಟಡಗಳ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯಲು ಮುಖ್ಯ ಆಯುಕ್ತರು… pic.twitter.com/mYDZLTaegt
— Bruhat Bengaluru Mahanagara Palike (@BBMPofficial) May 14, 2025
ಸುಪ್ರಿಂಕೋರ್ಟ್ ಆದೇಶ ಹಿನ್ನಲೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಬೆಸ್ಕಾಂ ವಿದ್ಯುತ್ ಸಂಪರ್ಕ ಕೋರಿರುವ ಕಟ್ಟಡಗಳಿಗೆ ಬಿಬಿಎಂಪಿಯಿಂದ ‘ಎ’ ಖಾತಾ ಅಥವಾ ‘ಬಿ’ ಖಾತಾ ಪಡೆಯಲಾಗಿರುವ ಬಗ್ಗೆ, ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ಪಡೆಯಲಾಗಿರುವ ಬಗ್ಗೆ ಮತ್ತು ಸ್ವಾಧೀನಾನುಭವ ಪ್ರಮಾಣ ಪತ್ರ, ಪೂರ್ಣತಾ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಿರುವ, ಸಲ್ಲಿಸುವ ವಿವರಗಳನ್ನು ಪಡೆಯಲು ಬಿಬಿಎಂಪಿಯಿಂದ ಎಸ್ಎಂಎಸ್ ಮತ್ತು ದೂರವಾಣಿ ಕರೆ ಮುಖಾಂತರ ವಿದ್ಯುತ್ ಸಂಪರ್ಕಕ್ಕಾಗಿ ಬಾಕಿ ಇರುವ ಅರ್ಜಿದಾರರನ್ನು ಸಂಪರ್ಕಿಸಲಾಗುತ್ತದೆ.
ಇದನ್ನೂ ಓದಿ: ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ವಾಟ್ಸ್ಆ್ಯಪ್ನಲ್ಲೇ ಕಳುಹಿಸಿ ದೂರು ನೀಡಿ: ಬೆಸ್ಕಾಂ ಸಂಖ್ಯೆಗಳ ವಿವರ ಇಲ್ಲಿದೆ
ಬಿಬಿಎಂಪಿ ಕೋರುವ ಮಾಹಿತಿಯನ್ನು ಒದಗಿಸಲು ಹಾಗೂ ಈ ಕೆಳಕಂಡ ಆನ್‌ಲೈನ್ ಲಿಂಕ್‌ನಲ್ಲಿ ನೊಂದಾಯಿತ ಎಂಜಿನಿಯರ್ಗಳ ಮುಖಾಂತರ ಸ್ವಾಧೀನಾನುಭವ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸುವಂತೆ ಬೆಂಗಳೂರು ನಾಗರೀಕರನ್ನು ಕೋರಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 2:45 pm, Thu, 15 May 25