ಅ.6 ರಿಂದ ನಮ್ಮ ಮೆಟ್ರೋ ನೇರಳೆ ಮಾರ್ಗ ಪೂರ್ಣ ಪ್ರಮಾಣದ ಸಂಚಾರ ಸಾಧ್ಯತೆ 

ಮೆಟ್ರೋ ರೈಲು ಸುರಕ್ಷತಾ ಆಯುಕ್ತರು (CMRS) ಈಗಾಗಲೇ ಎರಡೂ ಮಾರ್ಗಗಳನ್ನು ಪರಿಶೀಲಿಸಿದ್ದಾರೆ. ಜೊತೆಗೆ ಈಗಾಗಲೇ ಕೆಆರ್​ಪುರಂ ಯಿಂದ ಬೈಯಪ್ಪನಹಳ್ಳಿ ಸುರಕ್ಷತೆಯ ಅನುಮೋದನೆಯನ್ನು ಸ್ವೀಕರಿಸಿದ್ದಾರೆ

ಅ.6 ರಿಂದ ನಮ್ಮ ಮೆಟ್ರೋ ನೇರಳೆ ಮಾರ್ಗ ಪೂರ್ಣ ಪ್ರಮಾಣದ ಸಂಚಾರ ಸಾಧ್ಯತೆ 
ನಮ್ಮ ಮೆಟ್ರೋ ನೇರಳೆ ಮಾರ್ಗದ ಪೂರ್ಣ ಸಂಚಾರ ಸಾಧ್ಯತೆ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 05, 2023 | 9:57 PM

ಬೆಂಗಳೂರು, ಅ.05:  ನಮ್ಮ ಮೆಟ್ರೋದ ನೇರಳೆ ಬಣ್ಣ (Purple Line Metro)ದ ಬಹು ನಿರೀಕ್ಷಿತ ಕೆಆರ್​ಪುರಂ-ಬೈಯಪ್ಪನಹಳ್ಳಿ ಮತ್ತು ಕೆಂಗೇರಿ-ಚಲ್ಲಘಟ್ಟ ಎರಡು ಮಾರ್ಗಗಳು, ಅಕ್ಟೋಬರ್ 6 ರಿಂದ ಕಾರ್ಯನಿರ್ವಹಿಸುವ ಸಾಧ್ಯತೆಯಿದೆ ಎಂದು ಮಾಧ್ಯಮವೊಂದರಲ್ಲಿ ವರದಿಯಾಗಿದೆ. ಈ ಎರಡು ಮೆಟ್ರೋ ಮಾರ್ಗಗಳ ಉದ್ಘಾಟನೆಯೊಂದಿಗೆ ನೇರಳೆ ಮಾರ್ಗವು ಸಂಪೂರ್ಣವಾಗಿ ಕಾರ್ಯನಿರ್ವಹಿಸಲಿದೆ. ಇದರಿಂದ ಬೆಂಗಳೂರು ಪೂರ್ವದ  ಜನದಟ್ಟಣೆ ಕಡಿಮೆ ಆಗುವ ನಿರೀಕ್ಷೆಯಿದೆ.

ಮೆಟ್ರೋ ರೈಲು ಸುರಕ್ಷತಾ ಆಯುಕ್ತರು (CMRS) ಈಗಾಗಲೇ ಎರಡೂ ಮಾರ್ಗಗಳನ್ನು ಪರಿಶೀಲಿಸಿದ್ದಾರೆ. ಜೊತೆಗೆ ಈಗಾಗಲೇ ಕೆಆರ್​ಪುರಂ ಯಿಂದ ಬೈಯಪ್ಪನಹಳ್ಳಿ ಸುರಕ್ಷತೆಯ ಅನುಮೋದನೆಯನ್ನು ಸ್ವೀಕರಿಸಿದ್ದಾರೆ. ಕೆಂಗೇರಿ-ಚಲ್ಲಘಟ್ಟ ಮಾರ್ಗಕ್ಕೆ ನಾಳೆ(ಅ.06) ಸಿಎಂಆರ್‌ಎಸ್‌ ಅನುಮೋದನೆ ದೊರೆಯುವ ನಿರೀಕ್ಷೆಯಿದ್ದು, ಶುಕ್ರವಾರ ಉದ್ಘಾಟನೆಗೆ ಬಿಎಂಆರ್‌ಸಿಎಲ್‌ ಪ್ಲ್ಯಾನ್​ ಮಾಡಿದೆ.

ಇದನ್ನೂ ಓದಿ:Pink Line: ಬೆಂಗಳೂರಿನ ಅತಿ ಉದ್ದದ ಭೂಗತ ಮೆಟ್ರೋ ಮಾರ್ಗ ಬಹುತೇಕ ರೆಡಿ, ನಮ್ಮ ಮೆಟ್ರೋ ರೈಲು ಸಂಚಾರಕ್ಕೆ BMRCL ಸಿದ್ಧತೆ

ಈ ಕುರಿತು ಮಾತನಾಡಿದ ಹಿರಿಯ ಅಧಿಕಾರಿಯೊಬ್ಬರು, “ಕೆಂಗೇರಿ-ಚಲ್ಲಘಟ್ಟ ಮಾರ್ಗಕ್ಕೆ ಸಿಎಂಆರ್‌ಎಸ್‌ನಿಂದ ಇನ್ನೂ ಸುರಕ್ಷತೆಯ ಅನುಮೋದನೆ ಸಿಕ್ಕಿಲ್ಲ. ನಾಳೆ ಸಿಗುವ ನಿರೀಕ್ಷೆಯಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಅಕ್ಟೋಬರ್ 6 ರಿಂದ ನೇರಳೆ ಮಾರ್ಗವು ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತದೆ ಎಂದರು.

ಇನ್ನು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಇತ್ತೀಚೆಗೆ ಕೆಆರ್​ಪುರಂ-ಬೈಯಪ್ಪನಹಳ್ಳಿ ಮೆಟ್ರೋ ಮಾರ್ಗವನ್ನು ಪ್ರಾರಂಭಿಸಲು ನಿರಂತರ ವಿಳಂಬ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ‘ಪ್ರತಿದಿನ ಸುಮಾರು 5 ರಿಂದ 6 ಲಕ್ಷ ಜನರು ಬೆಂಗಳೂರು ಮೆಟ್ರೋವನ್ನು ಬಳಸುತ್ತಾರೆ. ಬೈಯಪ್ಪನಹಳ್ಳಿ-ಕೆಆರ್ ಪುರಂ ಮೆಟ್ರೋ ವಿಭಾಗವು ತೆರೆದರೆ, ಸುಮಾರು 50-60 ಪ್ರತಿಶತದಷ್ಟು ಜನರಿಗೆ ಅನುಕೂಲವಾಗಲಿದೆ. ರಾಜ್ಯ ಸರ್ಕಾರವು ಎಲ್ಲಾ ಅನುಮೋದನೆಗಳು ಮತ್ತು ಹಸಿರು ನಿಶಾನೆಗಳನ್ನು ಪಡೆದಿದ್ದರೂ ಸಹ. ಸಿಎಂಆರ್‌ಎಸ್ ಪರಿಶೀಲನೆಯ ನಂತರವೂ ಈ ಮಾರ್ಗವನ್ನು ತೆರೆಯಲು ವಿಳಂಬ ಮಾಡುತ್ತಿದೆ ಎಂದು ಸೂರ್ಯ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ:ಮೆಟ್ರೋ ಯೆಲ್ಲೋ ಮಾರ್ಗ ಕಾಮಗಾರಿ ಈಗಾಗಲೇ ವಿಳಂಬವಾಗಿರುವುದರಿಂದ ಲೋಕಾರ್ಪಣೆಗಾಗಿ ಗಣ್ಯರನ್ನು ಕಾಯುವುದು ಬೇಡ: ತೇಜಸ್ವೀ ಸೂರ್ಯ, ಸಂಸದ

ಜುಲೈ ಮಧ್ಯದಲ್ಲಿ ಕೆಆರ್ ಪುರಂ-ಬೈಯಪ್ಪನಹಳ್ಳಿ ಮಾರ್ಗವನ್ನು ಉದ್ಘಾಟಿಸುವ ಗುರಿ ಇದೆ ಎಂದು ಬಿಎಂಆರ್‌ಸಿಎಲ್ ಈ ಹಿಂದೆ ಘೋಷಿಸಿತ್ತು. ಒಮ್ಮೆ ಉದ್ಘಾಟನೆಗೊಂಡರೆ, ನೇರಳೆ ಮಾರ್ಗವು ಬೆಂಗಳೂರಿನಲ್ಲಿ ಸಾರ್ವಜನಿಕ ಸಾರಿಗೆಯನ್ನು ಹೆಚ್ಚಿಸುವ ನಿರೀಕ್ಷೆಯಿದೆ. ಏಕೆಂದರೆ ವೈಟ್‌ಫೀಲ್ಡ್ ಹಲವಾರು ಟೆಕ್ ಪಾರ್ಕ್‌ಗಳನ್ನು ಹೊಂದಿದೆ ಮತ್ತು ನಗರದ ವಿವಿಧ ಭಾಗಗಳ ಉದ್ಯೋಗಿಗಳು ಅಲ್ಲಿ ಕೆಲಸ ಮಾಡುತ್ತಾರೆ. ನೇರಳೆ ಮಾರ್ಗದಲ್ಲಿರುವ ಈ 2 ಕಿಮೀ ವಿಸ್ತರಣೆಯು ಬೆಂಗಳೂರು ಪೂರ್ವ , ದಕ್ಷಿಣ ಮತ್ತು ಮಧ್ಯ ಬೆಂಗಳೂರಿನ ಹಲವು ಪ್ರದೇಶಗಳಿಗೆ ಸಂಪರ್ಕಿಸುತ್ತದೆ. ಹೀಗಾಗಿ ಜನರು ಮೆಟ್ರೋವನ್ನು ಬಳಸಲಿದ್ದಾರೆ. ಜೊತೆಗೆ ಇದರಿಂದ ವೈಟ್‌ಫೀಲ್ಡ್ ಪ್ರದೇಶದಲ್ಲಿ ಟ್ರಾಫಿಕ್ ದಟ್ಟಣೆಯು ಕಡಿಮೆಯಾಗುವ ಸಾಧ್ಯತೆಯಿದೆ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:35 pm, Thu, 5 October 23

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ