ಒಡಿಶಾ ರೈಲು ದುರಂತ: ಹೌರಾದಲ್ಲಿ ಸಿಲುಕಿರುವ ಕರ್ನಾಟಕದ ಕ್ರೀಡಾಪಟುಗಳಿಗೆ ಊಟದ ವ್ಯವಸ್ಥೆ ಕಲ್ಪಿಸಿದ ಸಂತೋಷ್ ಲಾಡ್
ಒಡಿಶಾದ ಬಾಲಸೋರ್ನಲ್ಲಿ ಸಂಭವಿಸಿದ ರೈಲು ದುರಂತ ಪ್ರಕರಣ ಹಿನ್ನೆಲೆ ಪಶ್ಚಿಮ ಬಂಗಾಳದ ಹೌರಾದಲ್ಲಿ ಸಿಲುಕಿರುವ ಕರ್ನಾಟಕದ ಕ್ರೀಡಾಪಟುಗಳಿಗೆ ಸಂತೋಷ್ ಲಾಡ್ ಅವರು ಊಟದ ವ್ಯವಸ್ಥೆ ಕಲ್ಪಿಸಿದ್ದಾರೆ.
ಒಡಿಶಾದ (Odisha Train Accident) ಬಾಲಸೋರ್ನಲ್ಲಿ (Balasore) ಸಂಭವಿಸಿದ ರೈಲು ದುರಂತ ಪ್ರಕರಣ ಸಂಬಂಧ ಕನ್ನಡಿಗರ ಸುರಕ್ಷತೆ ಹೆಗಲ ಮೇಲೆ ಹೊತ್ತುಕೊಂಡಿರುವ ಸಚಿವ ಸಂತೋಷ್ ಲಾಡ್ (Santosh Lad) ಅವರು ಪಶ್ಚಿಮ ಬಂಗಾಳದ ಹೌರಾದಲ್ಲಿ ಸಿಲುಕಿರುವ ಕರ್ನಾಟಕದ ಕ್ರೀಡಾಪಟುಗಳಿಗೆ ಊಟದ ವ್ಯವಸ್ಥೆ ಕಲ್ಪಿಸಿದ್ದಾರೆ. ಇದರ ಜೊತೆಗೆ ರಾಜ್ಯದ ವಿವಿಧ ಭಾಗಗಳಿಂದ ತೆರಳಿರುವ 32 ವಾಲಿಬಾಲ್ ಆಟಗಾರರು ನಾಳೆ ಬೆಂಗಳೂರಿಗೆ ಬರಲು ಕ್ರೀಡಾಪಟುಗಳಿಗೆ ವಿಮಾನದ ವ್ಯವಸ್ಥೆ ಮಾಡಲಾಗಿದೆ.
ನಾಳೆ (ಜೂನ್ 4) ಮುಂಜಾನೆ 4.15ಕ್ಕೆ ಕೋಲ್ಕತ್ತಾದಿಂದ ವಿಮಾನದ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 7ಕ್ಕೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ. ಮೇ 24ರಂದು ರಾಜ್ಯದಿಂದ ಹೌರಾಗೆ ತೆರಳಿರುವ ಕ್ರೀಡಾಪಟುಗಳು ನಿನ್ನೆ ರಾತ್ರಿ 10.55ಕ್ಕೆ ಎಕ್ಸ್‌ಪ್ರೆಸ್ ರೈಲಿನಲ್ಲಿ ವಾಪಸಾಗಬೇಕಿತ್ತು. ಆದರೆ ಒಡಿಶಾದಲ್ಲಿ ರೈಲು ದುರಂತ ಹಿನ್ನೆಲೆ ರೈಲುಗಳ ಸಂಚಾರ ರದ್ದುಗೊಂಡಿವೆ. ಪರಿಣಾಮ ಕ್ರೀಡಾಪಟಗಳು ಹೌರಾದಲ್ಲೇ ಉಳಿದುಕೊಂಡಿದ್ದಾರೆ.
ಇದನ್ನೂ ಓದಿ: Odisha train accident: ಒಡಿಶಾ ರೈಲು ದುರಂತಕ್ಕೆ ನಿರ್ಲಕ್ಷ್ಯ ಕಾರಣವೇ ಆಥವಾ ತಾಂತ್ರಿಕ ದೋಷವೇ?
ಒಡಿಶಾ ರೈಲು ದುರಂತದ ಹಿನ್ನೆಲೆ
ಹೌರಾದಿಂದ ಚೆನ್ನೈಗೆ ತೆರಳುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಶುಕ್ರವಾರ ಸಂಜೆ ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಅಪಘಾತಕ್ಕೀಡಾಗಿ 261 ಜನರು ಸಾವನ್ನಪ್ಪಿದ್ದರು. ಮಾಹಿತಿಯ ಪ್ರಕಾರ, ಈ ರೈಲು ಒಡಿಶಾದ ಬಾಲಸೋರ್‌ನಿಂದ ಸುಮಾರು 40 ಕಿಲೋಮೀಟರ್ ದೂರದಲ್ಲಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ನಂತರ 3 ಸ್ಲೀಪರ್ ಕೋಚ್‌ಗಳನ್ನು ಬಿಟ್ಟು ಉಳಿದ ಬೋಗಿಗಳು ಹಳಿತಪ್ಪಿದ್ದವು.
ಎರಡು ದಶಕಗಳಲ್ಲೇ ಅತ್ಯಂತ ಭೀಕರವಾದ ರೈಲು ಅಪಘಾತದ ಎಂದು ಹೇಳಲಾಗುತ್ತಿದೆ. ರೈಲ್ವೆಯ ಸಿಗ್ನಲಿಂಗ್ ಕಂಟ್ರೋಲ್ ರೂಮ್‌ನ ಪ್ರಾಥಮಿಕ ವರದಿಗಳ ಪ್ರಕಾರ, ದುರಂತ ಸಂಭವಿಸುವ ಕೆಲವು ನಿಮಿಷಗಳ ಮೊದಲು ರೈಲು ತಪ್ಪಾದ ಟ್ರ್ಯಾಕ್ನಲ್ಲಿ ಸಂಚರಿಸಿತ್ತು. ನಿರ್ಕ್ಷ್ಯದ ಪರಿಣಾಮವಾಗಿ ಅಪಘಾತ ಸಂಭವಿಸಿರಬಹುದು ಎನ್ನಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ