ಸ್ಲಂ ಬೋರ್ಡ್ ಮನೆಗಳನ್ನು ಖಾಲಿ ಮಾಡಿಸಲು ಯತ್ನ: ಸಂಸದ ಡಿಕೆ ಸುರೇಶ್ ವಿರುದ್ಧ ನಿವಾಸಿಗಳ ಆಕ್ರೋಶ

ಮನೆಯಲ್ಲಿದ್ದ ವಸ್ತುಗಳನ್ನು ಹೊರಗೆ ಹಾಕುತ್ತಿರುವ ಸಿಬ್ಬಂದಿಯ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸ್ಲಂ ಬೋರ್ಡ್​ನ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಬಾಲರಾಜ್ ಅವರನ್ನು ನಿವಾಸಿಗಳು ತರಾಟೆಗೆ ತೆಗೆದುಕೊಂಡರು.

ಸ್ಲಂ ಬೋರ್ಡ್ ಮನೆಗಳನ್ನು ಖಾಲಿ ಮಾಡಿಸಲು ಯತ್ನ: ಸಂಸದ ಡಿಕೆ ಸುರೇಶ್ ವಿರುದ್ಧ ನಿವಾಸಿಗಳ ಆಕ್ರೋಶ
ಸಂಸದ ಡಿಕೆ ಸುರೇಶ (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Apr 22, 2022 | 12:05 PM

ಬೆಂಗಳೂರು: ಸ್ಲಂ ಬೋರ್ಡ್ ನಿರ್ಮಿಸಿರುವ ಮನೆಗಳಲ್ಲಿ ವಾಸವಿರುವ ನಿವಾಸಿಗಳಿಗೆ ಮನೆ ಖಾಲಿ ಮಾಡಲು ನೀಡಿರುವ ಸೂಚನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದಕ್ಕೆ ಸಂಸದ ಡಿ.ಕೆ.ಸುರೇಶ್ ಕಾರಣ ಎಂದು ಉತ್ತರಹಳ್ಳಿಯ ಭುವನೇಶ್ವರಿ ನಗರ ಸ್ಲಂ ನಿವಾಸಿಗಳು ಬೇಸರ ವ್ಯಕ್ತಪಡಿಸಿದ್ದಾರೆ. 2018ರಲ್ಲಿ ಸ್ಲಂ ಬೋರ್ಡ್​ನಿಂದ 880 ಮನೆಗಳನ್ನು ನಿರ್ಮಿಸಲಾಗಿತ್ತು. ಈ ಪೈಕಿ 172 ಮನೆಗಳನ್ನು ಖಾಲಿ ಮಾಡಿಸಲು ಇದೀಗ ಅಧಿಕಾರಿಗಳು ಮುಂದಾಗಿದ್ದಾರೆ. ಮನೆಯಲ್ಲಿದ್ದ ವಸ್ತುಗಳನ್ನು ಹೊರಗೆ ಹಾಕುತ್ತಿರುವ ಸಿಬ್ಬಂದಿಯ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸ್ಲಂ ಬೋರ್ಡ್​ನ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಬಾಲರಾಜ್ ಅವರನ್ನು ನಿವಾಸಿಗಳು ತರಾಟೆಗೆ ತೆಗೆದುಕೊಂಡರು.

2018ರಲ್ಲಿ ಸ್ಲಂ ಬೋರ್ಡ್​ನಿಂದ 880 ಮನೆಗಳನ್ನು ನಿರ್ಮಿಸಲಾಗಿತ್ತು. ಆದರೆ ಈಗ ಸ್ಲಂ ಬೋರ್ಡ್ ಅಧಿಕಾರಿಗಳು ಸಂಸದ ಡಿಕೆ ಸುರೇಶ್ ಬೆಂಬಲಿಗರಿಗೆ ಮನೆ ಹಸ್ತಾಂತರ ಮಾಡಬೇಕೆಂದು 172 ಮನೆಗಳನ್ನು ಖಾಲಿ ಮಾಡಿಸಲು ಮುಂದಾಗಿದ್ದಾರೆ. ಈಗಾಗಲೇ ಮನೆಯಲ್ಲಿದ್ದ ವಸ್ತುಗಳನ್ನು ಹೊರಗೆ ಬೀಸಾಡಿದ್ದಾರೆ ಎಂದು ಗುಬ್ಳಾಲ ಮುಖ್ಯರಸ್ತೆ ಬಂದ್ ಮಾಡಿ ನಿವಾಸಿಗಳು ಪ್ರತಿಭಟನೆ ನಡೆಸಿದರು. ಈ ವೇಳೆ ಸಚಿವ ವಿ.ಸೋಮಣ್ಣ, ಸಂಸದ ಡಿ.ಕೆ.ಸುರೇಶ್ ಹಾಗೂ ಸ್ಥಳೀಯ ಶಾಸಕ ಕೃಷ್ಣಪ್ಪ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

3 ಲಕ್ಷ ಮನೆ ನಿರ್ಮಾಣ: ಸೋಮಣ್ಣ

ಕರ್ನಾಟಕದಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ 1.8 ಲಕ್ಷ ಮನೆಗಳನ್ನು ನಿರ್ಮಿಸಲು ಸರ್ಕಾರ ಯೋಜನೆ ರೂಪಿಸಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಇತ್ತೀಚೆಗೆ ಬೆಂಗಳೂರಿನ ವಿಶ್ವೇಶ್ವರಪುರಂನಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಹೇಳಿದ್ದರು. ನಗರ ಪ್ರದೇಶದಲ್ಲಿರುವ ಬಡವರಿಗೆ ಈಗಾಗಲೇ 1.20 ಲಕ್ಷ ಮನೆಗಳನ್ನು ಹಂಚಿಕೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ 1.8 ಲಕ್ಷ ಮನೆಗಳನ್ನು ಸೂರಿಲ್ಲದ ಬಡವರಿಗೆ ಹಂಚಿಕೆ ಮಾಡಲಾಗುವುದು. ರಾಜ್ಯದಲ್ಲಿ 2800ಕ್ಕೂ ಹೆಚ್ಚು ಕೊಳಗೇರಿ ಪ್ರದೇಶಗಳಿವೆ ಎಂದು ಸೋಮಣ್ಣ ತಿಳಿಸಿದ್ದರು.

ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ 6300 ಎಕರೆ ಭೂಮಿಯನ್ನು ಕೊಳಚೆ ಪ್ರದೇಶ ಅಭಿವೃದ್ಧಿಗಾಗಿ ಒದಗಿಸಲಾಗಿದೆ. ಹಕ್ಕುಪತ್ರ ಸಿಗದವರಿಗೆ ಅವರ ಮನೆ ಬಾಗಿಲಿನಲ್ಲಿಯೇ ಹಕ್ಕು ಪತ್ರ ವಿತರಿಸಲಾಗುವುದು ಎಂದು ಭರವಸೆ ನೀಡಿದರು. ಹಕ್ಕುಪತ್ರಗಳನ್ನು ಮಹಿಳೆಯರಿಗೆ ಮಾತ್ರ ನೀಡಲಾಗುವುದು. ಪುರುಷ ಫಲಾನುಭವಿಗಳು ಹಕ್ಕುಪತ್ರಗಳನ್ನು ಬೇರೆಯವರಿಗೆ ಮಾರಿಕೊಳ್ಳುವ ಸಾಧ್ಯತೆಯಿರುವುದರಿಂದ ಈ ಕ್ರಮಕ್ಕೆ ಸೂಚಿಸಲಾಗಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ಸ್ಲಂ ಬೋರ್ಡ್ ಮನೆಗಳಿಂದ ಹೊರಬಿದ್ದ 16 ಕುಟುಂಬ.. ಸೂರಿಲ್ಲದೇ ಬೀದಿಯಲ್ಲೇ ರಾತ್ರಿ ಕಳೆದ ಜನ

ಇದನ್ನೂ ಓದಿ: Agrahara Dasarahalli ಅಗ್ರಹಾರ ದಾಸರಹಳ್ಳಿ ಸ್ಲಂ ನಿವಾಸಿಗಳ ತೆರವು ವಿಚಾರ: ಮೂಲ ದಾಖಲೆ ಒದಗಿಸುವಂತೆ ಹೈಕೋರ್ಟ್ ಸೂಚನೆ