Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC ಮಹಿಳಾ ಕಂಡಕ್ಟರ್​ಗಳಿಗೆ ಅಧಿಕಾರಿಗಳಿಂದ ಟಾರ್ಚರ್; ಕಣ್ಣೀರು ಹಾಕಿ ನೋವು ಹೇಳಿಕೊಂಡ ಸಿಬ್ಬಂದಿ

ಸಮಸ್ಯೆ ಇದೆ ಎಂದು ಹೇಳಿಕೊಂಡರೂ ಹೆಚ್ಚಿನ ಕೆಲಸ ಕೊಟ್ಟು ಅಧಿಕಾರಿಗಳು ಮಹಿಳಾ ಕಂಡಕ್ಟರ್​ಗಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ದೀಪಾಂಜಲಿ ನಗರದ KSRTC ಡಿಪೋ 5ರ ಕಂಡಕ್ಟರ್ ಮಂಜಮ್ಮ ವಿಡಿಯೋ ಮಾಡಿ ಕಣ್ಣೀರು ಹಾಕಿದ್ದಾರೆ. ಹಾಗೂ ಈ ಬಗ್ಗೆ ಸಿಎಂ, ಸಾರಿಗೆ ಸಚಿವರಿಗೆ ಪತ್ರ ಬರೆದಿದ್ದಾರೆ.

KSRTC ಮಹಿಳಾ ಕಂಡಕ್ಟರ್​ಗಳಿಗೆ ಅಧಿಕಾರಿಗಳಿಂದ ಟಾರ್ಚರ್; ಕಣ್ಣೀರು ಹಾಕಿ ನೋವು ಹೇಳಿಕೊಂಡ ಸಿಬ್ಬಂದಿ
KSRTC ಮಹಿಳಾ ಕಂಡಕ್ಟರ್​ಗಳಿಗೆ ಅಧಿಕಾರಿಗಳಿಂದ ಟಾರ್ಚರ್; ಕಣ್ಣೀರು ಹಾಕಿ ನೋವು ಹೇಳಿಕೊಂಡ ಸಿಬ್ಬಂದಿ
Follow us
Kiran Surya
| Updated By: ಆಯೇಷಾ ಬಾನು

Updated on: Mar 17, 2024 | 10:28 AM

ಬೆಂಗಳೂರು, ಮಾರ್ಚ್​.17: ಮಹಿಳೆಯರ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ (Karnataka Government) ಶಕ್ತಿ ಯೋಜನೆ (Free Bus Service For Women) ಜಾರಿ ಮಾಡಿದೆ. ಆದರೆ ಶಕ್ತಿ‌ ಯೋಜನೆಗಾಗಿ ಕೆಎಸ್​ಆರ್​ಟಿಸಿಯಲ್ಲಿ (KSRTC) ಮಹಿಳಾ ಕಂಡಕ್ಟರ್​ಗಳಿಗೆ ಹಗಲು ರಾತ್ರಿ ಶ್ರಮಿಸುವಂತೆ ಅಧಿಕಾರಿಗಳು ಟಾರ್ಚರ್ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ತಿಂಗಳ ಋತುಚಕ್ರದ ಸಮಸ್ಯೆ ಇದ್ದರೂ ಡ್ಯೂಟಿ ಮಾಡಿ ಅಂತಾರೇ ಎಂದು ದೀಪಾಂಜಲಿ ನಗರದ KSRTC ಡಿಪೋ 5ರ ಕಂಡಕ್ಟರ್ ಮಂಜಮ್ಮ ವಿಡಿಯೋ ಮಾಡಿ ಗಳಗಳನೆ ಕಣ್ಣೀರಿಟ್ಟಿದ್ದಾರೆ.

ಇನ್ನು ಮತ್ತೊಂದೆಡೆ ಅಧಿಕಾರಿಗಳ ಕಿರುಕುಳದ ಬಗ್ಗೆ ಸಿಟಿಎಂ ಅಂತೋಣಿ ಜಾರ್ಜ್ ಅವರ ಗಮನಕ್ಕೆ ತಂದರೆ ಅವರು ದರ್ಪದ ಮಾತುಗಳನ್ನಾಡುತ್ತಾರೆ ಎಂದು ಮಹಿಳಾ ಕಂಡಕ್ಟರ್ ಆರೋಪಿಸಿದ್ದಾರೆ. ಅಲ್ಲದೆ ಸಿಟಿಎಂ ಅಂತೋಣಿ ಜಾರ್ಜ್ ದರಿದ್ರ ಅಂತ ನಿಂದಿಸಿರುವ ಆಡಿಯೋ ಕೂಡ ಲಭ್ಯವಾಗಿದೆ. ಮಂಜಮ್ಮ ಅವರು ಅಧಿಕಾರಿಗಳ ಟಾರ್ಚರ್ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರಿಗೆ ಪತ್ರ ಬರೆದಿದ್ದಾರೆ. ದೀಪಾಂಜಲಿ ನಗರದ ಡಿಪೋ 5ರ 44 ಜನರ ಸಹಿ ಹಾಕಿ ಸಾರಿಗೆ ಸಚಿವರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಮೆಟ್ರೋ ಅಧಿಕಾರಿಯಿಂದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ; FIR ದಾಖಲು

ಟಾರ್ಚರ್ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದಕ್ಕೆ ಮಹಿಳಾ ಕಂಡಕ್ಟರ್ ಮಂಜಮ್ಮಗೆ ಡ್ಯೂಟಿ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಡಿಪೋ ಮ್ಯಾನೇಜರ್ ಎಂ.ಕೃಷ್ಣಪ್ಪ ಅವರು ಬೇಗ ಬಂದರೂ ಲೇಟ್ ಆಗಿ ಡ್ಯೂಟಿ ನೀಡ್ತಿದ್ದಾರೆ. ಎಷ್ಟೇ ತಡವಾದ್ರೂ ಕೆಲಸ ಮುಗಿಸಿ ಮನೆಗೆ ಹೋಗುವಂತೆ ಟಾರ್ಚರ್ ಮಾಡ್ತಿದ್ದಾರೆ. ಡಿಪೋದ ಇತರ ಅಧಿಕಾರಿಗಳ ಗಮನಕ್ಕೂ ತಂದರೂ ಅವರಿಂದಲೂ ಟಾರ್ಚರ್ ಆಗ್ತಿದೆ. ಅಧಿಕಾರಿಗಳ ಟಾರ್ಚರ್ ಗೆ ರೋಸಿ ಸಾರಿಗೆ ಸಚಿವರಿಗೆ ಪತ್ರ ಬರೆದಿದ್ದೇನೆ. ನಾನು ಸೇರಿ 44 ಸಿಬ್ಬಂದಿ ಸಹಿ ಹಾಕಿದ್ದಾರೆ ಎಂದು ಮಂಜಮ್ಮ ತಿಳಿಸಿದ್ದಾರೆ.

ಪತ್ರದಲ್ಲಿ ಏನಿದೆ?

ಬೆಳಿಗ್ಗೆಯಿಂದ ಸಂಜೆವರೆಗೂ ಡ್ಯೂಟಿ ನೀಡದೆ ಸುಮ್ಮನೆ ರಜೆ ಅಂತ ಬರೆಯುತ್ತಿದ್ದಾರೆ. ತಡವಾಗಿ ಗಾಡಿ ಕೊಟ್ಟು ಪೂರ್ತಿ ಕಿಲೋ ಮೀಟರ್ ಮಾಡಬೇಕು ಅಂತ ಟಾರ್ಚರ್ ನೀಡ್ತಿದ್ದಾರೆ. ಡಿಪೋ ಮ್ಯಾನೇಜರ್ ಕೇಳಿದ್ರೆ ಬಾಯಿಗೆ ಬಂದ ಹಾಗೆ ಬೈಯುತ್ತಾರೆ. ಘಟಕದಲ್ಲಿ ಸುಮ್ಮನೆ ಮೂರ್ನಾಲ್ಕು ದಿನ ಕೂರಿಸಿಕೊಂಡು ರಜೆ ಅರ್ಜಿ ಬರೆಸಿಕೊಳ್ತಿದ್ದಾರೆ. ಮಹಿಳೆಯರಿಗೆ ತೊಂದರೆ ಇದೆ ಅಂದರೂ, ತಡವಾಗಿ ಗಾಡಿಕೊಟ್ಟು ಟ್ರಿಪ್ ಪೂರ್ತಿ ಮಾಡಲು ಟಾರ್ಚರ್ ನೀಡ್ತಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಡಿಪೋ 5ರ 44 ಜನರ ಸಹಿ ಹಾಕಿ ಸಾರಿಗೆ ಸಚಿವರಿಗೆ ಪತ್ರ ಬರೆಯಲಾಗಿದೆ. ಇನ್ನು ಕಂಡಕ್ಟರ್ ಮಂಜಮ್ಮ ಅವರು ಈ ಹಿಂದೆ ಸಿಎಂಗೂ ಜನಸ್ವಂದನ ಕಾರ್ಯಕ್ರಮದಲ್ಲಿ ದೂರು ನೀಡಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಜಾಮ್‌ನಗರದ ಬಳಿ ವಾಯುಪಡೆಯ ಯುದ್ಧ ವಿಮಾನ ಪತನವಾದ ಕ್ಷಣ ಸಿಸಿಟಿವಿಯಲ್ಲಿ ಸೆರೆ
ಜಾಮ್‌ನಗರದ ಬಳಿ ವಾಯುಪಡೆಯ ಯುದ್ಧ ವಿಮಾನ ಪತನವಾದ ಕ್ಷಣ ಸಿಸಿಟಿವಿಯಲ್ಲಿ ಸೆರೆ
‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ
ವಕ್ಫ್ ತಿದ್ದುಪಡಿ ಬಿಲ್ ಬಗ್ಗೆ ನನ್ನ ಪಕ್ಷದ ಹಿರಿಯರು ಮಾತಾಡುತ್ತಾರೆ: ಸಚಿವೆ
ವಕ್ಫ್ ತಿದ್ದುಪಡಿ ಬಿಲ್ ಬಗ್ಗೆ ನನ್ನ ಪಕ್ಷದ ಹಿರಿಯರು ಮಾತಾಡುತ್ತಾರೆ: ಸಚಿವೆ
ಯಡಿಯೂರಪ್ಪ ಜೊತೆ ಬಸ್ಸಲ್ಲಿ ಹೋಗಲು ಬಿಜೆಪಿ ನಾಯಕರಲ್ಲಿ ಪೈಪೋಟಿ
ಯಡಿಯೂರಪ್ಪ ಜೊತೆ ಬಸ್ಸಲ್ಲಿ ಹೋಗಲು ಬಿಜೆಪಿ ನಾಯಕರಲ್ಲಿ ಪೈಪೋಟಿ