ಓಲಾ-ಉಬರ್ ಆಟೋ ಸೇವೆಯೇ ಅಕ್ರಮ: ನೋಟಿಸ್ ಕೊಟ್ಟು ಮೂರು ದಿನವಾದ್ರು ಪ್ರತಿಕ್ರಿಯೆ ನೀಡದ ಕಂಪನಿಗಳು

ಓಲಾ, ಉಬರ್​ ಕಂಪನಿಗಳು ಕ್ಯಾಬ್ ಅಗ್ರಿಗೇಟರ್ ಪರವಾನಗಿ ಮಾತ್ರ ಹೊಂದಿವೆ. ಆದ್ರೆ ನಿಯಮ ಗಾಳಿಗೆ ತೂರಿ ಟ್ಯಾಕ್ಸಿ ಜೊತೆ ಆಟೋ ಸೇವೆ ನೀಡ್ತಿದೆ. ಸಾರಿಗೆ ಇಲಾಖೆಯೇ ತಮ್ಮ ಸೇವೆ ನಿಲ್ಲಿಸುವಂತೆ ತಾಕೀತು ಮಾಡಿ ನೋಟಿಸ್ ನೀಡಿದೆ. ಆದ್ರೆ ಓಲಾ, ಉಬರ್ ಸಂಸ್ಥೆಗಳು ಇದಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಓಲಾ-ಉಬರ್ ಆಟೋ ಸೇವೆಯೇ ಅಕ್ರಮ: ನೋಟಿಸ್ ಕೊಟ್ಟು ಮೂರು ದಿನವಾದ್ರು ಪ್ರತಿಕ್ರಿಯೆ ನೀಡದ ಕಂಪನಿಗಳು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Oct 09, 2022 | 2:44 PM

ಬೆಂಗಳೂರು: ಬೆಂಗಳೂರಿನಲ್ಲಿ ಆಟೋ ಸೇವೆಗೆ ಮೀಡಿಯೇಟರ್ ಆಗಿರುವ ಓಲಾ-ಉಬರ್ ಸಂಸ್ಥೆಗಳು ಪ್ಲಾಟ್​ಫಾರ್ಮ್ ಹೆಸ್ರಲ್ಲಿ ಗ್ರಾಹಕರ ಬಳಿ ಸುಲಿಗೆ ಮಾಡ್ತಿವೆ. ಸ್ವತಃ ಸಾರಿಗೆ ಇಲಾಖೆಯೇ ಆನ್​ಲೈನ್ ಆಟೋ ಸೇವೆ ಅಕ್ರಮ ಅಂತ ಹೇಳಿದೆ. ತಮ್ಮ ಸೇವೆ ನಿಲ್ಲಿಸುವಂತೆ ತಾಕೀತು ಮಾಡಿ ನೋಟಿಸ್ ನೀಡಿದೆ. ಆದ್ರೆ ಓಲಾ, ಉಬರ್ ಸಂಸ್ಥೆಗಳು ಇದಕ್ಕೆ ಯಾವುದೇ ಪ್ರತಿಕ್ರಿಯೆ ನೀಡದೆ ಡೋಂಟ್ ಕೇರ್ ಅಂತಿವೆ.

ಓಲಾ, ಉಬರ್, ರಾಪಿಡೋ ವಿರುದ್ಧ ಸಾಲು ಸಾಲು ದೂರುಗಳು ಕೇಳಿ ಬರ್ತಿವೆ. ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ನೋಟಿಸ್ ಜಾರಿ ಮಾಡಿದೆ. ಇಷ್ಟು ವರ್ಷ ಸುಮ್ಮನೆ ಕುಳಿತಿದ್ದ ಅಧಿಕಾರಿಗಳು ಈಗ, ನಾವು ಕ್ಯಾಬ್ ಸೇವೆಗೆ ಮಾತ್ರ ಅನುಮತಿ ಕೊಟ್ಟಿರೋದು. ಆಟೋ ಸೇವೆ ನಿಲ್ಲಿಸಿ ಅಂತ ಓಲಾ, ಉಬರ್, ರ್ಯಾಪಿಡೋಗೆ ನೋಟಿಸ್ ನೀಡಿ 3 ದಿನ ಗಡುವು ನೀಡಿತ್ತು. ಆದ್ರೆ ಕೊಟ್ಟ ಕಾಲಾವಕಾಶ ಮುಗಿದ್ರೂ ಅಧಿಕಾರಿಗಳು ಯಾವುದೇ ನಿರ್ದಾಕ್ಷೀಣ್ಯ ಕ್ರಮ ಕೈಗೊಂಡಿಲ್ಲ.

ಓಲಾ, ಉಬರ್​ ಕಂಪನಿಗಳು ಕ್ಯಾಬ್ ಅಗ್ರಿಗೇಟರ್ ಪರವಾನಗಿ ಮಾತ್ರ ಹೊಂದಿವೆ. ಆದ್ರೆ ನಿಯಮ ಗಾಳಿಗೆ ತೂರಿ ಟ್ಯಾಕ್ಸಿ ಜೊತೆ ಆಟೋ ಸೇವೆ ನೀಡ್ತಿದೆ. ಸರ್ಕಾರ ಆಟೋ ಪ್ರಯಾಣಕ್ಕೆ ದರ ನಿಗದಿ ಮಾಡಿದೆ. ಆಟೋರಿಕ್ಷಾಗಳಿಗೆ ಮೊದಲ 2 ಕಿ.ಮೀ.ಗಳಿಗೆ 30 ರೂಪಾಯಿ, 2 ಕಿಲೋ ಮೀಟರ್ ಬಳಿಕ ಪ್ರತಿ ಕಿಲೋ ಮೀಟರ್​ಗೆ 15 ರೂಪಾಯಿ ನಿಗದಿ ಮಾಡಿದೆ. ರಾತ್ರಿ 10 ಗಂಟೆ ಬಳಿಕ ಬೆಳಗ್ಗೆ 5 ಗಂಟೆವರೆಗೂ ಬಾಡಿಗೆ ಶೇ.50ರಷ್ಟು ಹೆಚ್ಚಿಸಬಹುದು ಎಂದು ಹೇಳಿದೆ. ಆದ್ರೆ ಈ ನಿಯಮ ಅಗ್ರಿಗೇಟರ್ ಟ್ಯಾಕ್ಸಿ ಕಂಪನಿಗಳಿಗೆ ಅನ್ವಯಿಸಲ್ಲ. ಯಾಕಂದ್ರೆ ಓಲಾ, ಉಬರ್ ಬಳಿ ಇರೋದು ಟ್ಯಾಕ್ಸಿ ಸೇವೆಯ ಲೈಸನ್ಸ್. ಹೀಗಾಗಿ ಗ್ರಾಹಕರ ಬಳಿ ಓಲಾ, ಉಬರ್, ರಾಪಿಡೋ ಸುಲಿಗೆ ಮಾಡ್ತಿವೆ. 2 ಕಿ.ಮೀಟರ್​ಗೆ 100 ರೂಪಾಯಿ ಪಡೆದು, ಆಟೋ ಚಾಲಕರಿಗೆ 60 ರೂಪಾಯಿ ನೀಡಿ 40 ರೂಪಾಯಿ ಜೇಬಿಗೆ ಇಳಿಸ್ತಿವೆ. ಇದನ್ನೂ ಓದಿ: ಇನ್ಮುಂದೆ ಓಲಾ- ಉಬರ್ ಆಟೋ ಸಿಗೋದು ಡೌಟಾ?; ಪ್ರಯಾಣಿಕರ ಸುಲಿಗೆಗೆ ಇಳಿದ ಸಂಸ್ಥೆಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ

ಇನ್ನು ಈ ಆ್ಯಪ್​ಗಳ ಆಟಾಟೋಪ ಆಟೋ ಚಾಲಕರಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ. ಪ್ರಯಾಣಿಕರು ಆಟೋ ಹತ್ತಲು ಹಿಂದೇಟು ಹಾಕ್ತಿದ್ದಾರೆ ಅಂತ ಆಟೋ ಚಾಲಕರು ಸಹ ಅಳಲು ತೋಡಿಕೊಂಡಿದ್ದಾರೆ. ಈ ಬ್ಲೇಡ್ ಕಂಪನಿಗಳ ಕಳ್ಳಾಟ ಸಾರಿಗೆ ಇಲಾಖೆಯ ಗಮನಕ್ಕೂ ಬಂದಿದೆ. ಅಕ್ರಮ ನಡೀತಿದೆ, ಕಾನೂನು ಉಲ್ಲಂಘನೆ ಆಗ್ತಿದೆ ಎಂದು ತಿಳಿದಿದ್ದರೂ ಸಾರಿಗೆ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ. ಈಗ ಸಾರ್ವಜನಿಕರು ಈ ಬಗ್ಗೆ ಆಕ್ರೋಶ ಹೊರ ಹಾಕುತ್ತಿದ್ದಂತೆ ಓಲಾ, ಉಬರ್, ರಾಪಿಡೋ ಆಟೋ ಸೇವೆಯೇ ಅಕ್ರಮ. ನಿಮ್ಮ ಸೇವೆ ನಿಲ್ಲಿಸಿ ಅಂತ ನೋಟಿಸ್ ನೀಡಿದೆ. ಸಾರಿಗೆ ಅಧಿಕಾರಿಗಳು ಕೊಟ್ಟ 3 ದಿನಗಳ ಗಡುವು ನೀಡಿದ್ರೂ ಇದುವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್