ಮತ್ತೆ ಆಪರೇಷನ್ ಕಮಲಕ್ಕೆ ಸಾಕ್ಷಿಯಾಗುತ್ತಾ ಹಳೇ ಮೈಸೂರು? ಆಪರೇಷನ್​ ಕಮಲದ ಸುಳಿವು ನೀಡಿದ್ದ ಸಚಿವ ಸೋಮಶೇಖರ್

ಜೆಡಿಎಸ್​ ಶಾಸಕ ಜಿ.ಟಿ.ದೇವೇಗೌಡ ಬಿಜೆಪಿಗೆ ಬಂದರೆ ಸ್ವಾಗತಿಸುತ್ತೇವೆ ಎಂದು ನಗರದಲ್ಲಿ ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಹೇಳಿಕೆ ನೀಡಿದ್ದಾರೆ. ಜಿಟಿಡಿ ಬಿಜೆಪಿ ಬಂದು ಈ ಭಾಗದಲ್ಲಿ 8 ಸ್ಥಾನ ಗೆಲ್ಲಿಸೋದಾದ್ರೆ, ಪಕ್ಷಕ್ಕಾಗಿ ಕ್ಷೇತ್ರ ಸೇರಿದಂತೆ ಯಾವುದೇ ತ್ಯಾಗಕ್ಕೂ ನಾನು ಸಿದ್ಧ.

ಮತ್ತೆ ಆಪರೇಷನ್ ಕಮಲಕ್ಕೆ ಸಾಕ್ಷಿಯಾಗುತ್ತಾ ಹಳೇ ಮೈಸೂರು? ಆಪರೇಷನ್​ ಕಮಲದ ಸುಳಿವು ನೀಡಿದ್ದ ಸಚಿವ ಸೋಮಶೇಖರ್
ಜಿಲ್ಲಾ ಉಸ್ತುವಾರಿ ಸಚಿವ ಎಸ್​.ಟಿ ಸೋಮಶೇಖರ್
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: May 14, 2022 | 3:20 PM

ಮೈಸೂರು: ಹಳೇ ಮೈಸೂರು ಭಾಗದಲ್ಲಿ 2ನೇ ಹಂತದ ಆಪರೇಷನ್​ಗೆ ಕಮಲ ಫಿಕ್ಸ್ ಆಗಿದ್ದು, ಶೀಘ್ರದಲ್ಲೇ ಈ ಭಾಗದ ಘಟಾನುಘಟಿ ನಾಯಕರು ಬಿಜೆಪಿಗೆ ಸೇರ್ಪಡೆಯಾಲಿದ್ದಾರೆ ಎಂದು ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್​.ಟಿ ಸೋಮಶೇಖರ್ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್​, ಜೆಡಿಎಸ್​ನ ಪ್ರಮುಖ ನಾಯಕರು ಬಿಜೆಪಿ ಸೇರಲಿದ್ದಾರೆ. ಆ ನಾಯಕರು ಯಾರೆಂದು ಈಗಲೇ ಹೇಳಲಾಗಲ್ಲ.​​ ಅಂತಹ ನಾಯಕರ ಜೊತೆ ಕೊನೆ ಹಂತದ ಮಾತುಕತೆ ನಡೆಯುತ್ತಿದೆ. ಯಾವುದೇ ಷರತ್ತುಗಳಿಲ್ಲದೇ ಪಕ್ಷ ಸೇರಲು ನಾಯಕರು ಒಪ್ಪಿದ್ದಾರೆ. ಪಕ್ಷ ಸೇರಲು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರ ಅನುಮತಿ ಬಾಕಿಯಿದೆ ಸಚಿವ S.T.ಸೋಮಶೇಖರ್ ಹೇಳಿದರು.

ಜೆಡಿಎಸ್​ ಶಾಸಕ ಜಿ.ಟಿ.ದೇವೇಗೌಡ ಬಿಜೆಪಿಗೆ ಬಂದರೆ ಸ್ವಾಗತಿಸುತ್ತೇವೆ ಎಂದು ನಗರದಲ್ಲಿ ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಹೇಳಿಕೆ ನೀಡಿದ್ದಾರೆ. ಜಿಟಿಡಿ ಪುತ್ರನಿಗೆ ಟಿಕೆಟ್ ನೀಡಲು​​​​​ ಹೈಕಮಾಂಡ್​​​ ನಿರ್ಧರಿಸಿದರೆ ಚಾಮರಾಜ ಕ್ಷೇತ್ರ ಬಿಟ್ಟುಕೊಡಲು ಸಿದ್ಧ ಎಂದು ಎಲ್.ನಾಗೇಂದ್ರ ಹೇಳಿದ್ದಾರೆ. ಜಿಟಿಡಿ ಬಿಜೆಪಿ ಬಂದು ಈ ಭಾಗದಲ್ಲಿ 8 ಸ್ಥಾನ ಗೆಲ್ಲಿಸೋದಾದ್ರೆ, ಪಕ್ಷಕ್ಕಾಗಿ ಕ್ಷೇತ್ರ ಸೇರಿದಂತೆ ಯಾವುದೇ ತ್ಯಾಗಕ್ಕೂ ನಾನು ಸಿದ್ಧ. ಬಿಜೆಪಿಗೆ ಘಟಾನುಘಟಿ ನಾಯಕರು ಸೇರುತ್ತಾರೆ. ಸಚಿವ ಸೋಮಶೇಖರ್ ಹೇಳಿಕೆಗೆ ಶಾಸಕ ನಾಗೇಂದ್ರ ಪುಷ್ಟಿ ನೀಡಿದ್ದಾರೆ.

ವಿಧಾನ ಪರಿಷತ್ 4 ಸ್ಥಾನಗಳಿಗೆ ಜೂನ್ 15ಕ್ಕೆ ಮತದಾನ:

ವಿಧಾನ ಪರಿಷತ್​ನ ನಾಲ್ಕು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ಪದವೀಧರ ಕ್ಷೇತ್ರಗಳ ಎರಡು ಮತ್ತು ಶಿಕ್ಷಕರ ಕ್ಷೇತ್ರಗಳ ಎರಡು ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರ, ವಾಯವ್ಯ ಪದವೀಧರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಮೇ 19ರಂದು ಪರಿಷತ್​ ಚುನಾವಣೆಯ ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆಗೆ ಮೇ 26 ಕೊನೆಯ ದಿನ. ಜೂನ್ 13ರಂದು ಮತದಾನ ಮತ್ತು ಜೂನ್ 15ರಂದು ಮತ ಎಣಿಕೆ ನಡೆಯಲಿದೆ. ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಹನುಮಂತ ನಿರಾಣಿ, ಶ್ರೀಕಂಠೇಗೌಡ ಮತ್ತು ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಬಸವರಾಜ ಹೊರಟ್ಟಿ, ಅರುಣ ಶಹಾಪುರ ಅವಧಿ ಜುಲೈ 7ಕ್ಕೆ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಚುನಾವಣೆ ನಡೆಯಲಿದೆ.

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಮೇ 18ರಂದು ರಾಜೀನಾಮೆ ನೀಡುವ ಸಾಧ್ಯತೆಯಿದೆ. ರಾಜೀನಾಮೆ ನೀಡಿದ ನಂತರ ಮೇ 19ರಂದು ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆಯಿದೆ. ಮುಖ್ಯಮಂತ್ರಿಯು ದಾವೋಸ್​ಗೆ ತೆರಳುವ ಮುನ್ನ ಹೊರಟ್ಟಿ ಬಿಜೆಪಿಗೆ ಸೇರಲು ತೀರ್ಮಾನಿಸಿದ್ದಾರೆ. ಹೊರಟ್ಟಿ ಅವರ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ಹುಬ್ಬಳ್ಳಿಯಲ್ಲಿ ನಡೆಯುವ ಸಾಧ್ಯತೆಯಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ