ಮತ್ತೆ ಆಪರೇಷನ್ ಕಮಲಕ್ಕೆ ಸಾಕ್ಷಿಯಾಗುತ್ತಾ ಹಳೇ ಮೈಸೂರು? ಆಪರೇಷನ್​ ಕಮಲದ ಸುಳಿವು ನೀಡಿದ್ದ ಸಚಿವ ಸೋಮಶೇಖರ್

| Updated By: ಗಂಗಾಧರ​ ಬ. ಸಾಬೋಜಿ

Updated on: May 14, 2022 | 3:20 PM

ಜೆಡಿಎಸ್​ ಶಾಸಕ ಜಿ.ಟಿ.ದೇವೇಗೌಡ ಬಿಜೆಪಿಗೆ ಬಂದರೆ ಸ್ವಾಗತಿಸುತ್ತೇವೆ ಎಂದು ನಗರದಲ್ಲಿ ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಹೇಳಿಕೆ ನೀಡಿದ್ದಾರೆ. ಜಿಟಿಡಿ ಬಿಜೆಪಿ ಬಂದು ಈ ಭಾಗದಲ್ಲಿ 8 ಸ್ಥಾನ ಗೆಲ್ಲಿಸೋದಾದ್ರೆ, ಪಕ್ಷಕ್ಕಾಗಿ ಕ್ಷೇತ್ರ ಸೇರಿದಂತೆ ಯಾವುದೇ ತ್ಯಾಗಕ್ಕೂ ನಾನು ಸಿದ್ಧ.

ಮತ್ತೆ ಆಪರೇಷನ್ ಕಮಲಕ್ಕೆ ಸಾಕ್ಷಿಯಾಗುತ್ತಾ ಹಳೇ ಮೈಸೂರು? ಆಪರೇಷನ್​ ಕಮಲದ ಸುಳಿವು ನೀಡಿದ್ದ ಸಚಿವ ಸೋಮಶೇಖರ್
ಜಿಲ್ಲಾ ಉಸ್ತುವಾರಿ ಸಚಿವ ಎಸ್​.ಟಿ ಸೋಮಶೇಖರ್
Follow us on

ಮೈಸೂರು: ಹಳೇ ಮೈಸೂರು ಭಾಗದಲ್ಲಿ 2ನೇ ಹಂತದ ಆಪರೇಷನ್​ಗೆ ಕಮಲ ಫಿಕ್ಸ್ ಆಗಿದ್ದು, ಶೀಘ್ರದಲ್ಲೇ ಈ ಭಾಗದ ಘಟಾನುಘಟಿ ನಾಯಕರು ಬಿಜೆಪಿಗೆ ಸೇರ್ಪಡೆಯಾಲಿದ್ದಾರೆ ಎಂದು ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್​.ಟಿ ಸೋಮಶೇಖರ್ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್​, ಜೆಡಿಎಸ್​ನ ಪ್ರಮುಖ ನಾಯಕರು ಬಿಜೆಪಿ ಸೇರಲಿದ್ದಾರೆ. ಆ ನಾಯಕರು ಯಾರೆಂದು ಈಗಲೇ ಹೇಳಲಾಗಲ್ಲ.​​ ಅಂತಹ ನಾಯಕರ ಜೊತೆ ಕೊನೆ ಹಂತದ ಮಾತುಕತೆ ನಡೆಯುತ್ತಿದೆ. ಯಾವುದೇ ಷರತ್ತುಗಳಿಲ್ಲದೇ ಪಕ್ಷ ಸೇರಲು ನಾಯಕರು ಒಪ್ಪಿದ್ದಾರೆ. ಪಕ್ಷ ಸೇರಲು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರ ಅನುಮತಿ ಬಾಕಿಯಿದೆ
ಸಚಿವ S.T.ಸೋಮಶೇಖರ್ ಹೇಳಿದರು.

ಜೆಡಿಎಸ್​ ಶಾಸಕ ಜಿ.ಟಿ.ದೇವೇಗೌಡ ಬಿಜೆಪಿಗೆ ಬಂದರೆ ಸ್ವಾಗತಿಸುತ್ತೇವೆ ಎಂದು ನಗರದಲ್ಲಿ ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಹೇಳಿಕೆ ನೀಡಿದ್ದಾರೆ. ಜಿಟಿಡಿ ಪುತ್ರನಿಗೆ ಟಿಕೆಟ್ ನೀಡಲು​​​​​ ಹೈಕಮಾಂಡ್​​​ ನಿರ್ಧರಿಸಿದರೆ ಚಾಮರಾಜ ಕ್ಷೇತ್ರ ಬಿಟ್ಟುಕೊಡಲು ಸಿದ್ಧ ಎಂದು ಎಲ್.ನಾಗೇಂದ್ರ ಹೇಳಿದ್ದಾರೆ. ಜಿಟಿಡಿ ಬಿಜೆಪಿ ಬಂದು ಈ ಭಾಗದಲ್ಲಿ 8 ಸ್ಥಾನ ಗೆಲ್ಲಿಸೋದಾದ್ರೆ, ಪಕ್ಷಕ್ಕಾಗಿ ಕ್ಷೇತ್ರ ಸೇರಿದಂತೆ ಯಾವುದೇ ತ್ಯಾಗಕ್ಕೂ ನಾನು ಸಿದ್ಧ. ಬಿಜೆಪಿಗೆ ಘಟಾನುಘಟಿ ನಾಯಕರು ಸೇರುತ್ತಾರೆ. ಸಚಿವ ಸೋಮಶೇಖರ್ ಹೇಳಿಕೆಗೆ ಶಾಸಕ ನಾಗೇಂದ್ರ ಪುಷ್ಟಿ ನೀಡಿದ್ದಾರೆ.

ವಿಧಾನ ಪರಿಷತ್ 4 ಸ್ಥಾನಗಳಿಗೆ ಜೂನ್ 15ಕ್ಕೆ ಮತದಾನ:

ವಿಧಾನ ಪರಿಷತ್​ನ ನಾಲ್ಕು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ಪದವೀಧರ ಕ್ಷೇತ್ರಗಳ ಎರಡು ಮತ್ತು ಶಿಕ್ಷಕರ ಕ್ಷೇತ್ರಗಳ ಎರಡು ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರ, ವಾಯವ್ಯ ಪದವೀಧರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಮೇ 19ರಂದು ಪರಿಷತ್​ ಚುನಾವಣೆಯ ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆಗೆ ಮೇ 26 ಕೊನೆಯ ದಿನ. ಜೂನ್ 13ರಂದು ಮತದಾನ ಮತ್ತು ಜೂನ್ 15ರಂದು ಮತ ಎಣಿಕೆ ನಡೆಯಲಿದೆ. ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಹನುಮಂತ ನಿರಾಣಿ, ಶ್ರೀಕಂಠೇಗೌಡ ಮತ್ತು ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಬಸವರಾಜ ಹೊರಟ್ಟಿ, ಅರುಣ ಶಹಾಪುರ ಅವಧಿ ಜುಲೈ 7ಕ್ಕೆ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಚುನಾವಣೆ ನಡೆಯಲಿದೆ.

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಮೇ 18ರಂದು ರಾಜೀನಾಮೆ ನೀಡುವ ಸಾಧ್ಯತೆಯಿದೆ. ರಾಜೀನಾಮೆ ನೀಡಿದ ನಂತರ ಮೇ 19ರಂದು ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆಯಿದೆ. ಮುಖ್ಯಮಂತ್ರಿಯು ದಾವೋಸ್​ಗೆ ತೆರಳುವ ಮುನ್ನ ಹೊರಟ್ಟಿ ಬಿಜೆಪಿಗೆ ಸೇರಲು ತೀರ್ಮಾನಿಸಿದ್ದಾರೆ. ಹೊರಟ್ಟಿ ಅವರ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ಹುಬ್ಬಳ್ಳಿಯಲ್ಲಿ ನಡೆಯುವ ಸಾಧ್ಯತೆಯಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.