Omicron in Karnataka: ಒಮಿಕ್ರಾನ್ ಪತ್ತೆಯಾಗಿರುವ 11 ದೇಶಗಳ ಸ್ಥಿತಿ ನೋಡಿಕೊಂಡು ಮುಂದಿನ ಕ್ರಮ; ಸಚಿವ ಅಶ್ವಥ್ ನಾರಾಯಣ ಮಾಹಿತಿ
Karnataka Omicron Cases: ಕರ್ನಾಟಕದಲ್ಲಿ ಇಬ್ಬರಿಗೆ ಒಮಿಕ್ರಾನ್ ವೈರಸ್ ಪತ್ತೆಯಾಗಿದ್ದರೂ ಅವರಲ್ಲಿ ವೈರಸ್ ತೀವ್ರವಾಗಿಲ್ಲ. ಇಬ್ಬರನ್ನೂ ಐಸೋಲೇಷನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬೆಂಗಳೂರಿನಲ್ಲಿ ಸಚಿವ ಡಾ.ಅಶ್ವತ್ಥ್ ನಾರಾಯಣ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರು: ಕರ್ನಾಟಕದ ಇಬ್ಬರಿಗೆ ಒಮಿಕ್ರಾನ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮತ್ತೆ ಆತಂಕ ಹೆಚ್ಚಾಗಿದೆ. ಈಗಾಗಲೇ ಆ ಇಬ್ಬರು ಸೋಂಕಿತರನ್ನು ಐಸೋಲೇಷನ್ನಲ್ಲಿ ಇರಿಸಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಭಾರತದಲ್ಲಿ ಮೊದಲ ಒಮಿಕ್ರಾನ್ ಕೇಸ್ ಕರ್ನಾಟಕದಲ್ಲೇ ಪತ್ತೆಯಾಗಿರುವುದ ರಾಜ್ಯ ಸರ್ಕಾರಕ್ಕೂ ತಲೆನೋವು ತಂದಿಟ್ಟಿದೆ. ಈ ಹಿನ್ನೆಲೆಯಲ್ಲಿ ಸಚಿವ ಅಶ್ವಥ್ ನಾರಾಯಣ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣ ಪತ್ತೆಯಾಗಿದೆ. ಸೋಂಕಿತರ ಜಿನೋಮಿಕ್ ಸೀಕ್ವೆನ್ಗೆ ಕಳಿಸಲಾಗಿತ್ತು. ಸೋಂಕಿತರ ಸಂಪರ್ಕಿತರ ಪತ್ತೆ ಹಚ್ಚಿ ಚಿಕಿತ್ಸೆ ನೀಡಲಾಗುತ್ತಿದೆ. ಒಮಿಕ್ರಾನ್ ವೈರಸ್ ಕುರಿತು ಅಧ್ಯಯನ ಮಾಡಲಾಗಿದೆ. 11 ದೇಶಗಳ ಸ್ಥಿತಿಗತಿ ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು. ಒಮಿಕ್ರಾನ್ ವೇಗವಾಗಿ ಹರಡುತ್ತದೆ. ಅದರಿಂದ ಜೀವಕ್ಕೆ ಅಪಾಯವಿಲ್ಲ. ಒಮಿಕ್ರಾನ್ ವೈರಸ್ ಕುರಿತು ಸರ್ಕಾರ ಕಟ್ಟೆಚ್ಚರ ವಹಿಸಿದೆ ಎಂದಿದ್ದಾರೆ.
ಕರ್ನಾಟಕದಲ್ಲಿ ಪತ್ತೆಯಾಗಿರುವ ಒಮಿಕ್ರಾನ್ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕೂಡ ಕ್ವಾರಂಟೈನ್ ಮಾಡಲಾಗಿದೆ. ಈ ವೈರಸ್ ಹೇಗೆ ಬರಲಿದೆ ಅಂತ ಅಧ್ಯಯನ ಮಾಡಲಾಗಿದೆ. ಬೇರೆ ಬೇರೆ ದೇಶದಲ್ಲಿ ಈಗಾಗಲೇ ಒಮಿಕ್ರಾನ್ ಕಾಣಿಸಿಕೊಂಡಿದೆ. ಕರ್ನಾಟಕದಲ್ಲಿ ಇಬ್ಬರಿಗೆ ಒಮಿಕ್ರಾನ್ ವೈರಸ್ ಪತ್ತೆಯಾಗಿದ್ದರೂ ಅವರಲ್ಲಿ ವೈರಸ್ ತೀವ್ರವಾಗಿಲ್ಲ. ಇಬ್ಬರನ್ನೂ ಐಸೋಲೇಷನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬೆಂಗಳೂರಿನಲ್ಲಿ ಸಚಿವ ಡಾ.ಅಶ್ವತ್ಥ್ ನಾರಾಯಣ ಪ್ರತಿಕ್ರಿಯೆ ನೀಡಿದ್ದಾರೆ.
ಕರ್ನಾಟಕದಲ್ಲಿ ಇಬ್ಬರಿಗೆ ಒಮಿಕ್ರಾನ್ ವೈರಸ್ ಪತ್ತೆ ಹಿನ್ನೆಲೆಯಲ್ಲಿ ಒಮಿಕ್ರಾನ್ ದೃಢಪಟ್ಟ ವ್ಯಕ್ತಿಯ ಟ್ರಾವೆಲ್ ಹಿಸ್ಟರಿ ಟಿವಿ9ಗೆ ಲಭ್ಯವಾಗಿದೆ. ನ. 20ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿನ ಏರ್ಪೋರ್ಟ್ಗೆ ಬಂದಿದ್ದ ಪ್ರಯಾಣಿಕ ನ. 23ರಂದು ಕೊರೊನಾ ಟೆಸ್ಟ್ ಮಾಡಿಸಿಕೊಂಡಿದ್ದರು. ಏರ್ಪೋರ್ಟ್ನಲ್ಲಿ ಟೆಸ್ಟ್ ಮಾಡಿದಾಗ ಕೊವಿಡ್ ಪಾಸಿಟಿವ್ ಬಂದಿತ್ತು. ದಕ್ಷಿಣ ಆಫ್ರಿಕಾ ನಿವಾಸಿಯಾಗಿದ್ದ ಪ್ರಯಾಣಿಕನಿಗೆ ಕೊರೊನಾ ಪಾಸಿಟಿವ್ ಬಂದಿದ್ದರಿಂದ ಹೋಟೆಲ್ನಲ್ಲಿ ಕ್ವಾರಂಟೈನ್ ಆಗಿದ್ದರು. ಆರೋಗ್ಯ ಇಲಾಖೆ ಅವರನ್ನು 3 ದಿನ ಮಾತ್ರ ಕ್ವಾರಂಟೈನ್ ಮಾಡಿತ್ತು. 3 ದಿನದ ಬಳಿಕ ಕೊವಿಡ್ ಟೆಸ್ಟ್ ಮಾಡಿಸಿದ್ದ ಪ್ರಯಾಣಿಕನಿಗೆ ಮೂರನೇ ದಿನದ ವರದಿ ನೆಗೆಟಿವ್ ಎಂದು ಬಂದಿತ್ತು. ನೆಗೆಟಿವ್ ಬರುತ್ತಿದ್ದಂತೆ ಅವರನ್ನು ಬಿಟ್ಟು ಕಳುಹಿಸಲಾಗಿತ್ತು.
ಇದಾದ ಬಳಿಕ ನೇರವಾಗಿ ಬೊಮ್ಮಸಂದ್ರಕ್ಕೆ ತೆರಳಿದ್ದ ಪ್ರಯಾಣಿಕ ಮೀಟಿಂಗ್ನಲ್ಲಿ ಭಾಗಿಯಾಗಿದ್ದರು. ಹೋಂ ಕ್ವಾರಂಟೈನ್ ಆಗದೇ ಸೀದಾ ಮೀಟಿಂಗ್ನಲ್ಲಿ ಭಾಗಿಯಾಗಿದ್ದರು. ದಕ್ಷಿಣ ಆಫ್ರಿಕಾದಿಂದ ಬಂದ 3ನೇ ದಿನಕ್ಕೆ ಬೊಮ್ಮಸಂದ್ರದ ಅಡಾಕಾರ್ ಇಂಗ್ರಾಮ್ ಲಿಮಿಟೆಡ್ ಕಂಪನಿಯಲ್ಲಿ 6 ಜನರೊಂದಿಗೆ ಬೋರ್ಡ್ ಮೀಟಿಂಗ್ನಲ್ಲಿ ಭಾಗಿಯಾಗಿದ್ದರು. ಹೀಗಾಗಿ, ಆ 6 ಜನರಿಗೂ ಕೊವಿಡ್ ತಪಾಸಣೆ ನಡೆಸಿ, ಕ್ವಾರಂಟೈನ್ ಮಾಡಲಾಗಿದೆ.
ಇದನ್ನೂ ಓದಿ: ಭಾರತದಲ್ಲಿ ಎರಡು ಒಮಿಕ್ರಾನ್ ಪ್ರಕರಣ ಪತ್ತೆ; ಎರಡೂ ಪ್ರಕರಣ ಪತ್ತೆಯಾಗಿರುವುದು ಕರ್ನಾಟಕದಲ್ಲಿ
ಕರ್ನಾಟಕಕ್ಕೆ ಕಾಲಿಟ್ಟ ಒಮಿಕ್ರಾನ್! ಭಾರತದಲ್ಲಿ ಇದೇ ಮೊದಲ ಬಾರಿಗೆ ಎರಡು ಕೇಸ್ ಪತ್ತೆ
Published On - 5:56 pm, Thu, 2 December 21