ಒಮಿಕ್ರಾನ್ ಭೀತಿ ಬೆನ್ನಲ್ಲೇ ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಇಬ್ಬರಿಗೆ ಕೊವಿಡ್ ಸೋಂಕು ದೃಢ

ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿ ತಪಾಸಣೆಗೆ ಒಳಪಡಿಸಿದಾಗ ಕೊರೊನಾ ಸೋಂಕು ತಗುಲಿರುವುದು ಖಚಿತವಾಯಿತು. ತಕ್ಷಣ ಆ ಸ್ಯಾಂಪಲ್ ಅನ್ನು ಲ್ಯಾಬ್​ಗೆ ಕಳುಹಿಸಲಾಯಿತು. ಅವರಿಗೆ ತಗುಲಿರುವುದು ಒಮಿಕ್ರಾನ್ ಅಲ್ಲ, ಅದು ಡೆಲ್ಟಾ ಪ್ಲಸ್ ಎಂಬುದು ದೃಢಪಟ್ಟಿದೆ.

ಒಮಿಕ್ರಾನ್ ಭೀತಿ ಬೆನ್ನಲ್ಲೇ ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಇಬ್ಬರಿಗೆ ಕೊವಿಡ್ ಸೋಂಕು ದೃಢ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Nov 27, 2021 | 9:18 PM

ಬೆಂಗಳೂರು: ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡಿರುವ ಅಪಾಯಕಾರಿ ಕೊವಿಡ್ ರೂಪಾಂತರಿ ವೈರಸ್​ಗೆ ಒಮಿಕ್ರಾನ್ ಎಂದು ಹೆಸರಿಡಲಾಗಿದೆ. ಈಗಾಗಲೇ ಕೆಲವು ದೇಶಗಳಲ್ಲಿ ಈ ಸೋಂಕು ಪತ್ತೆಯಾಗಿರುವುದರಿಂದ ಭಾರತ ಸರ್ಕಾರ ಮುಂದಿನ ತಿಂಗಳಿನಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರಕ್ಕೆ ನೀಡಲಾಗಿದ್ದ ಅನುಮತಿಯನ್ನು ಮರುಪರಿಶೀಲನೆ ಮಾಡಲು ನಿರ್ಧರಿಸಿದೆ. ಅಲ್ಲದೆ, ಕೊರೊನಾ ಸೋಂಕು ಹೆಚ್ಚಾಗಿರುವ ದೇಶಗಳ ಮೇಲೆ ಹೆಚ್ಚಿನ ನಿಗಾ ಇರಿಸಿದೆ. ಇದುವರೆಗೂ ಭಾರತದಲ್ಲಿ ಯಾವುದೇ ಒಮಿಕ್ರಾನ್ ಸೋಂಕಿನ ಪ್ರಕರಣ ಪತ್ತೆಯಾಗಿಲ್ಲ ಎಂಬುದು ಸಮಾಧಾನಕರ ಸಂಗತಿ. ಆದರೆ, ಬೆಂಗಳೂರು ವಿಮಾನ ನಿಲ್ದಾಣಕ್ಕೆ ದಕ್ಷಿಣ ಆಫ್ರಿಕಾದಿಂದ ಇಂದು ಬಂದಿಳಿದ ಇಬ್ಬರು ಪ್ರಯಾಣಿಕರಿಗೆ ಕೊರೊನಾ ಸೋಂಕು ದೃಢಪಟ್ಟಿರುವುದು ಕರ್ನಾಟಕದಲ್ಲಿ ಮತ್ತೆ ಆತಂಕ ಹೆಚ್ಚಾಗಲು ಕಾರಣವಾಗಿದೆ.

ಬೆಂಗಳೂರಿಗೆ ದಕ್ಷಿಣ ಆಫ್ರಿಕಾದಿಂದ ಇಂದು 94 ಪ್ರಯಾಣಿಕರು ವಿಮಾನದಲ್ಲಿ ಬಂದಿಳಿದಿದ್ದಾರೆ. ಅವರಲ್ಲಿ ಇಬ್ಬರಿಗೆ ಕೊರೊನಾ ಸೋಂಕು ಖಚಿತವಾಗಿರುವುದರಿಂದ ಇದು ಒಮಿಕ್ರಾನ್ ಇರಬಹುದೇ? ಎಂಬ ಆತಂಕ ಎದುರಾಗಿತ್ತು. ಆದರೆ, ಆ ಇಬ್ಬರು ಪ್ರಯಾಣಿಕರಿಗೆ ತಗುಲಿರುವುದು ಡೆಲ್ಟಾ ಪ್ಲಸ್ ಸೋಂಕು ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಡೆಲ್ಟಾ ಪ್ಲಸ್ ಕೂಡ ಅಪಾಯಕಾರಿಯೇ ಆಗಿದ್ದರೂ ಒಮಿಕ್ರಾನ್ ಸೋಂಕಿನಷ್ಟು ಮಾರಣಾಂತಿಕವಲ್ಲವಾದ್ದರಿಂದ ಕರ್ನಾಟಕದ ಜನರು ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.

ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಮಾಹಿತಿ ನೀಡಿದ್ದು, ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿ ತಪಾಸಣೆಗೆ ಒಳಪಡಿಸಿದಾಗ ಕೊರೊನಾ ಸೋಂಕು ತಗುಲಿರುವುದು ಖಚಿತವಾಯಿತು. ತಕ್ಷಣ ಆ ಸ್ಯಾಂಪಲ್ ಅನ್ನು ಲ್ಯಾಬ್​ಗೆ ಕಳುಹಿಸಲಾಯಿತು. ಅವರಿಗೆ ತಗುಲಿರುವುದು ಒಮಿಕ್ರಾನ್ ಅಲ್ಲ, ಅದು ಡೆಲ್ಟಾ ಪ್ಲಸ್ ಎಂಬುದು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪರೀಕ್ಷೆ ನಡೆಸುತ್ತಿರುವ ಸಂದರ್ಭದಲ್ಲಿ ದಕ್ಷಿಣ ಆಫ್ರಿಕಾ ಮೂಲದ ಇಬ್ಬರು ಪ್ರಯಾಣಿಕರಲ್ಲಿ ಕೊರೊನಾವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ದಕ್ಷಿಣ ಆಫ್ರಿಕಾದಿಂದ ಇಂದು ಆಗಮಿಸಿದ ವಿಮಾನದಲ್ಲಿ ಬೆಂಗಳೂರಿಗೆ 94 ಮಂದಿ ಪ್ರಯಾಣಿಕರು ಶನಿವಾರ ಬಂದಿಳಿದಿದ್ದಾರೆ. ಈ ಪೈಕಿ ಇಬ್ಬರಿಗೆ ಕೊವಿಡ್-19 ಸೋಂಕು ತಗುಲಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊವಿಡ್ ಸೋಂಕು ಪತ್ತೆಯಾದ ಇಬ್ಬರು ದಕ್ಷಿಣ ಆಫ್ರಿಕಾದ ಪ್ರಯಾಣಿಕರನ್ನು ಕ್ವಾರೆಂಟೈನ್​ನಲ್ಲಿ ಇರಿಸಲಾಗಿದೆ. ಇಬ್ಬರು ಸೋಂಕಿತರ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಲಾಗಿದ್ದು, ವೈದ್ಯಕೀಯ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ರವಾನಿಸಲಾಗಿತ್ತು.

ಇಂದು ಒಂದೇ ದಿನ 10 ರಾಷ್ಟ್ರಗಳಿಂದ ಒಟ್ಟು 548 ಪ್ರಯಾಣಿಕರು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ ಒಮಿಕ್ರಾನ್ ವೈರಸ್ ಡೆಲ್ಟಾ ರೂಪಾಂತರಿ ವೈರಸ್​ಗಿಂತ ಹೆಚ್ಚು ಅಪಾಯಕಾರಿ ಎನ್ನಲಾಗಿದ್ದು, ಕಳೆದ ಒಂದು ವಾರದಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಹೊಸ ಪ್ರಕರಣಗಳು ಶೇಕಡ 200ರಷ್ಟು ಹೆಚ್ಚಾಗಿದೆ. ದಕ್ಷಿಣ ಆಫ್ರಿಕಾದಿಂದ ಹುಟ್ಟಿಕೊಂಡ ಈ ರೂಪಾಂತರವು ಹಾಂಗ್ ಕಾಂಗ್, ಇಸ್ರೇಲ್ ಮತ್ತು ಬೋಟ್ಸ್ವಾನಾ ದೇಶಗಳಿಗೆ ವ್ಯಾಪಿಸಿದೆ. ವಿಜ್ಞಾನಿಗಳು ಇದನ್ನು ಭಯಾನಕ ಮತ್ತು ಅತ್ಯಂತ ಕೆಟ್ಟ ರೂಪಾಂತರಿ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ರೂಪಾಂತರದ ಮೊದಲ ಪ್ರಕರಣಗಳು ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿದ್ದು, ಈವರೆಗೆ ಇಲ್ಲಿ 77 ಜನರು ಈ ರೂಪಾಂತರದಿಂದ ಸೋಂಕಿಗೆ ತುತ್ತಾಗಿದ್ದಾರೆ. ಬೋಟ್ಸ್​ವಾನಾದಲ್ಲಿ 4 ಜನರು ಈ ಹೊಸ ಕೊರೊನಾ ರೂಪಾಂತರ ಸೋಂಕಿಗೆ ಒಳಗಾಗಿದ್ದಾರೆ. ಡೆಲ್ಟಾ ಪ್ರಭೇದದ ವೈರಸ್ 16 ರೂಪಾಂತರಗಳನ್ನು ಹೊಂದುವ ಸಾಮರ್ಥ್ಯ ಹೊಂದಿದೆ. ಆದರೆ, ಹೊಸ ಪ್ರಭೇದ ಓಮಿಕ್ರಾನ್ 32 ರೂಪಾಂತರ ಹೊಂದುವ ಸಾಮರ್ಥ್ಯ ಹೊಂದಿದೆ. ಜಗತ್ತಿನಲ್ಲಿ ಈಗಾಗಲೇ ಸಂಶೋಧನೆಯಾಗಿ ಬಳಕೆಯಲ್ಲಿರುವ ಕೊರೊನಾ ಲಸಿಕೆಗಳು ಡೆಲ್ಟಾ ಪ್ರಭೇದದ ವಿರುದ್ಧ ಪರಿಣಾಮಕಾರಿಯಾಗಿವೆ. ಆದರೇ ಓಮಿಕ್ರಾನ್ ಪ್ರಭೇದದ ವಿರುದ್ಧ ಕೊರೊನಾ ಲಸಿಕೆಗಳು ಪರಿಣಾಮಕಾರಿಯಾಗಿರಲ್ಲ. ಕೊರೊನಾ ಲಸಿಕೆಗಳು ಹಾಗೂ ಪ್ರತಿಕಾಯಗಳಿಂದ ಎಸ್ಕೇಪ್ ಆಗುವ ಸಾಮರ್ಥ್ಯವನ್ನು ಓಮಿಕ್ರಾನ್ ಪ್ರಭೇದದ ವೈರಸ್ ಹೊಂದಿದೆ ಎಂದು ತಜ್ಞರು ಹೇಳುತ್ತಿದ್ದಾರೆ.

ಇದನ್ನೂ ಓದಿ: ಒಮಿಕ್ರಾನ್ ಭೀತಿ; ಅಂತಾರಾಷ್ಟ್ರೀಯ ವಿಮಾನ ಪ್ರಯಾಣದ ನಿಯಮ ಸಡಿಲಿಕೆ ನಿರ್ಧಾರದ ಬಗ್ಗೆ ಪರಿಶೀಲಿಸಲು ಮೋದಿ ಸೂಚನೆ

ಕೊರೊನಾ ವೈರಸ್ ಹೊಸ ರೂಪಾಂತರಿ ಹಿಂದಿನ ರೂಪಾಂತರಿಗಳಿಗಿಂತ 30 ಪಟ್ಟು ಹೆಚ್ಚು ಶಕ್ತಿಶಾಲಿಯಾಗಿದೆ!

Published On - 9:04 pm, Sat, 27 November 21

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ