Omicron in Karnataka: ಕರ್ನಾಟಕದಲ್ಲಿ ಒಮಿಕ್ರಾನ್ ದೃಢ: ರಾಜ್ಯದಲ್ಲಿ ಮತ್ತೆ ಕಠಿಣ ನಿರ್ಬಂಧ ಜಾರಿ ಸಾಧ್ಯತೆ

ತಜ್ಞರ ಸಲಹೆ ಪಡೆದು ಮತ್ತೆ ರಾಜ್ಯದಲ್ಲಿ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸುವ ಸಾಧ್ಯತೆಯಿದೆ ಎಂಬ ಮಾತುಗಳು ಪ್ರಬಲವಾಗಿ ಕೇಳಿ ಬರುತ್ತಿವೆ.

Omicron in Karnataka: ಕರ್ನಾಟಕದಲ್ಲಿ ಒಮಿಕ್ರಾನ್ ದೃಢ: ರಾಜ್ಯದಲ್ಲಿ ಮತ್ತೆ ಕಠಿಣ ನಿರ್ಬಂಧ ಜಾರಿ ಸಾಧ್ಯತೆ
ಸಾಂಕೇತಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Dec 02, 2021 | 6:22 PM

ಬೆಂಗಳೂರು: ಕರ್ನಾಟಕದ ಇಬ್ಬರಿಗೆ ಕೊರೊನಾ ವೈರಾಣುವಿನ ಒಮಿಕ್ರಾನ್​​ ರೂಪಾಂತರಿ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಕಠಿಣ ಕಾನೂನುಗಳು​ ಜಾರಿಯಾಗುವ ಸಾಧ್ಯತೆಯಿದೆ ಎಂಬ ಮಾತುಗಳು ಪ್ರಬಲವಾಗಿ ಕೇಳಿಬರುತ್ತಿವೆ. ಒಮಿಕ್ರಾನ್​ ಕೇಸ್ ಪತ್ತೆ ಬೆನ್ನಲ್ಲೇ ಆರೋಗ್ಯ ಇಲಾಖೆಯು ನಿಯಮಗಳನ್ನು ರೂಪಿಸಲು ಸಿದ್ಧತೆ ಆರಂಭಿಸಿದೆ. ತಜ್ಞರ ಸಲಹೆ ಪಡೆದು ಮತ್ತೆ ರಾಜ್ಯದಲ್ಲಿ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸುವ ಸಾಧ್ಯತೆಯಿದೆ. ಈ ಹಿಂದೆ ನಡೆದಿದ್ದ ತಜ್ಞರ ಸಮಿತಿ ಸಭೆಗಳಲ್ಲಿ ಒಮಿಕ್ರಾನ್​ ಪತ್ತೆಯಾದರೆ ಮತ್ತೆ ಕಠಿಣ ನಿಯಮಗಳನ್ನು ಜಾರಿಗೊಳಿಸಲು ಸಲಹೆ ಮಾಡಿದ್ದರು.

ಒಮಿಕ್ರಾನ್ ರೂಪಾಂತರದ ಸೋಂಕು ಪತ್ತೆ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಸಚಿವರಿಗೆ ಮಾಹಿತಿ ಸಂಗ್ರಹಿಸಿದರು. ಸಮಗ್ರ ಮಾಹಿತಿ ಪಡೆದುಕೊಂಡ ನಂತರ ಸರ್ಕಾರವು ತೆಗೆದುಕೊಳ್ಳಲಿರುವ ಮುಂಜಾಗ್ರತಾ ಕ್ರಮದ ಬಗ್ಗೆ ಸಚಿವರು ಪ್ರತಿಕ್ರಿಯೆ ನೀಡಲಿದ್ದಾರೆ.

ರಾಜ್ಯದಲ್ಲಿ ಒಮಿಕ್ರಾನ್ ಪತ್ತೆ ಕುರಿತು ಪ್ರತಿಕ್ರಿಯಿಸಿದರು ಸಚಿವ ಡಾ.ಅಶ್ವತ್ಥ್ ನಾರಾಯಣ, ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ಸೋಂಕಿತರಿಂದ ಸಂಗ್ರಹಿಸಿದ ಮಾದರಿಯನ್ನು ಜಿನೋಮಿಕ್​ ಸೀಕ್ವೆನ್​ಗೆ ಕಳಿಸಲಾಗಿತ್ತು. ಇದೀಗ ಸೋಂಕಿತರ ಸಂಪರ್ಕಕ್ಕೆ ಬಂದಿದ್ದವರನ್ನು ಪತ್ತೆಹಚ್ಚಲು ಪ್ರಯತ್ನಿಸಲಾಗುತ್ತಿದೆ. ಅಂಥವರನ್ನು ಗುರುತಿಸಿ ಚಿಕಿತ್ಸೆ ನೀಡಲಾಗುವುದು ಎಂದು ಹೇಳಿದರು. ಒಮಿಕ್ರಾನ್ ವೈರಸ್​ ಕುರಿತು ವಿಶ್ವದ ಹಲವು ದೇಶಗಳಲ್ಲಿ ಅಧ್ಯಯನ ಮಾಡಲಾಗಿದೆ. 11 ದೇಶಗಳ ಸ್ಥಿತಿಗತಿ ನೋಡಿಕೊಂಡು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ಒಮಿಕ್ರಾನ್​ ವೇಗವಾಗಿ ಹರಡುತ್ತೆ, ಜೀವಕ್ಕೆ ಅಪಾಯವಿಲ್ಲ. ಒಮಿಕ್ರಾನ್​ ವೈರಸ್​ ಕುರಿತು ಸರ್ಕಾರ ಕಟ್ಟೆಚ್ಚರ ವಹಿಸಿದೆ ಎಂದು ನುಡಿದರು.

ಸೋಂಕಿತರೊಂದಿಗೆ ಸಂಪರ್ಕಕ್ಕೆ ಬಂದಿದ್ದ ಪ್ರೈಮರಿ ಮತ್ತು ಸೆಕೆಂಡರಿ ಕಾಂಟ್ಯಾಕ್ಟ್​ಗಳನ್ನು ಐಸೊಲೇಟ್ ಮಾಡಲಾಗಿದೆ. ವಿಶ್ವದ ಹಲವು ದೇಶಗಳಲ್ಲಿ ಈಗಾಗಲೇ ಈ ಸೋಂಕು ಕಾಣಿಸಿಕೊಂಡಿದೆ, ಹಲವು ಅಧ್ಯಯನಗಳೂ ನಡೆದಿವೆ. ದೈಹಿಕವಾಗಿ ಸೋರ್‌ನೆಸ್, ಮಾಂಸಖಂಡಗಳ ನೋವು ಕಾಣಿಸಿಕೊಳ್ಳಲಿದೆ. 11 ದೇಶಗಳ ಸ್ಥಿತಿಗತಿ ನೋಡಿಕೊಂಡು ಕ್ರಮ ತೆಗೆದುಕೊಂಡಿದ್ದೇವೆ. ಈ ಸೋಂಕು ವೇಗವಾಗಿ ಹರಡುತ್ತದೆ. ಆದರೆ ಜೀವಕ್ಕೆ ಅಪಾಯ ಇಲ್ಲ. ಸರ್ಕಾರ ಕಟ್ಟೆಚ್ಚರ ವಹಿಸಿದೆ. ತಪಾಸಣೆ ಆಗಿದ್ದರೂ ರಿಪೋರ್ಟ್ ಬರುವವರೆಗೂ ಯಾರನ್ನೂ ಜನರೊಂದಿಗೆ ಬೆರೆಯಲು ಅವಕಾಶ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ವಿಧಾನಸೌಧ‌ದ ಸಚಿವಾಲಯದಿಂದಲೂ ಈ ಬಾರಿ ಅಧಿವೇಶನ ಬೇಡ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಮುಖ್ಯಮಂತ್ರಿ ಸಹ ಈ ಬಗ್ಗೆ ಗಮನ ಹರಿಸೋಣ ಎಂದಿದ್ದಾರೆ. ಇದು ಸರ್ಕಾರದ ಎದುರು ಇರುವ ಸವಾಲು ಮತ್ತು ಸಾಧ್ಯತೆ ಎರಡೂ ಹೌದು. ಮುಖ್ಯಮಂತ್ರಿ ಬೆಂಗಳೂರಿಗೆ ಬಂದ ಬಳಿಕೆ ಈ ಬಗ್ಗೆ ಸಭಾಧ್ಯಕ್ಷರ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: Omicron in Karnataka: ಒಮಿಕ್ರಾನ್ ಪತ್ತೆಯಾಗಿರುವ 11 ದೇಶಗಳ ಸ್ಥಿತಿ ನೋಡಿಕೊಂಡು ಮುಂದಿನ ಕ್ರಮ; ಸಚಿವ ಅಶ್ವಥ್ ನಾರಾಯಣ ಮಾಹಿತಿ ಇದನ್ನೂ ಓದಿ: ಭಾರತದಲ್ಲಿ ಎರಡು ಒಮಿಕ್ರಾನ್ ಪ್ರಕರಣ ಪತ್ತೆ; ಎರಡೂ ಪ್ರಕರಣ ಪತ್ತೆಯಾಗಿರುವುದು ಕರ್ನಾಟಕದಲ್ಲಿ

Published On - 6:02 pm, Thu, 2 December 21

ಬೆಳ್ಳಿ ಪರದೆ ಮೇಲೆ ‘ತ್ರಿವ್ಯ’ ಜೋಡಿ, ಭವ್ಯಾ ಗೌಡ ಹೇಳಿದ್ದೇನು?
ಬೆಳ್ಳಿ ಪರದೆ ಮೇಲೆ ‘ತ್ರಿವ್ಯ’ ಜೋಡಿ, ಭವ್ಯಾ ಗೌಡ ಹೇಳಿದ್ದೇನು?
ತ್ರಿವಿಕ್ರಮ ಜೊತೆ ಗೆಳೆತನ ಅಷ್ಟೇ, ಪೊಸ್ಸೆಸ್ಸಿವ್​ನೆಸ್ ಇರಲಿಲ್ಲ: ಭವ್ಯಾ
ತ್ರಿವಿಕ್ರಮ ಜೊತೆ ಗೆಳೆತನ ಅಷ್ಟೇ, ಪೊಸ್ಸೆಸ್ಸಿವ್​ನೆಸ್ ಇರಲಿಲ್ಲ: ಭವ್ಯಾ
‘ನನ್ನ, ತ್ರಿವಿಕ್ರಮ್ ನಡುವೆ ಏನೂ ಇಲ್ಲ, ಪದೇ ಪದೇ ಇದೇ ಹೇಳೋಕಾಗಲ್ಲ’: ಭವ್ಯಾ
‘ನನ್ನ, ತ್ರಿವಿಕ್ರಮ್ ನಡುವೆ ಏನೂ ಇಲ್ಲ, ಪದೇ ಪದೇ ಇದೇ ಹೇಳೋಕಾಗಲ್ಲ’: ಭವ್ಯಾ
ವಿಜಯೇಂದ್ರ ವಿರುದ್ಧ ನಡ್ಡಾ ಜೀಗೆ ಪತ್ರ ಬರೆದಿರುವುದು ನಿಜ: ಯತ್ನಾಳ್
ವಿಜಯೇಂದ್ರ ವಿರುದ್ಧ ನಡ್ಡಾ ಜೀಗೆ ಪತ್ರ ಬರೆದಿರುವುದು ನಿಜ: ಯತ್ನಾಳ್
ಹೊಸ ಗೆಟಪ್ ನಲ್ಲಿ ಸಭೆಗೆ ಆಗಮಿಸಿದ ಬಸನಗೌಡ ಪಾಟೀಲ್ ಯತ್ನಾಳ್!
ಹೊಸ ಗೆಟಪ್ ನಲ್ಲಿ ಸಭೆಗೆ ಆಗಮಿಸಿದ ಬಸನಗೌಡ ಪಾಟೀಲ್ ಯತ್ನಾಳ್!
ರೈಲ್ವೆ ಟಿಕೆಟ್ ಕಲೆಕ್ಟರ್ ವೇಗಕ್ಕೆ ಶರಣಾದ ಕ್ರಿಕೆಟ್ ಸಾಮ್ರಾಟ..!
ರೈಲ್ವೆ ಟಿಕೆಟ್ ಕಲೆಕ್ಟರ್ ವೇಗಕ್ಕೆ ಶರಣಾದ ಕ್ರಿಕೆಟ್ ಸಾಮ್ರಾಟ..!
ಪಕ್ಷದ ನಾಯಕರು ಒಂದೆಡೆ ಸೇರಿ ಊಟ ಮಾಡುವುದು ತಪ್ಪಲ್ಲ: ಸಿದ್ದರಾಮಯ್ಯ
ಪಕ್ಷದ ನಾಯಕರು ಒಂದೆಡೆ ಸೇರಿ ಊಟ ಮಾಡುವುದು ತಪ್ಪಲ್ಲ: ಸಿದ್ದರಾಮಯ್ಯ
ಬಿಜೆಪಿ ಆಂತರಿಕ ಕಚ್ಚಾಟ ನೆಚ್ಚಿಕೊಂಡು ಸರ್ಕಾರ ನಡೆಸುತ್ತಿಲ್ಲ: ಶಿವಕುಮಾರ್
ಬಿಜೆಪಿ ಆಂತರಿಕ ಕಚ್ಚಾಟ ನೆಚ್ಚಿಕೊಂಡು ಸರ್ಕಾರ ನಡೆಸುತ್ತಿಲ್ಲ: ಶಿವಕುಮಾರ್
ಎಸ್ಟಿ ಸಮುದಾಯದ ಶ್ರೀಗಳು ಜಾತ್ರೆಗೆ ಆಹ್ವಾನಿಸಲು ಬಂದಿದ್ದರು: ಪರಮೇಶ್ವರ್
ಎಸ್ಟಿ ಸಮುದಾಯದ ಶ್ರೀಗಳು ಜಾತ್ರೆಗೆ ಆಹ್ವಾನಿಸಲು ಬಂದಿದ್ದರು: ಪರಮೇಶ್ವರ್
ವಿರಾಟ್ ಕೊಹ್ಲಿ ಒಂದಂಕಿಗೆ ಔಟ್ ಆಗುತ್ತಿದ್ದಂತೆ ಸ್ಟೇಡಿಯಂ ಖಾಲಿ ಖಾಲಿ
ವಿರಾಟ್ ಕೊಹ್ಲಿ ಒಂದಂಕಿಗೆ ಔಟ್ ಆಗುತ್ತಿದ್ದಂತೆ ಸ್ಟೇಡಿಯಂ ಖಾಲಿ ಖಾಲಿ