ಜನವರಿ 3ರಂದು ಕಲಬುರಗಿಯಲ್ಲಿ ಉದ್ಯಮಿಯಾಗು ಉದ್ಯೋಗ ನೀಡು -ಕೈಗಾರಿಕಾ ಅದಾಲತ್ ಕಾರ್ಯಕ್ರಮ; ವೇದಿಕೆಗೆ ಪುನೀತ್ ರಾಜಕುಮಾರ್ ಹೆಸರು ನಾಮಕರಣ

ವೇದಿಕೆಗೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹೆಸರನ್ನು ನಾಮಕರಣ ಮಾಡಲು ನಿರ್ಧರಿಸಲಾಗಿದೆ. ಪುನೀತ್ ರಾಜಕುಮಾರ್ ಚಿತ್ರರಂಗದಲ್ಲಿ ತಮ್ಮನ್ನು ಗುರುತಿಸಿಕೊಳ್ಳುವ ಜೊತೆಗೆ ಅವರೊಬ್ಬ ಯಶಸ್ವಿ ಉದ್ಯಮಿಯೂ ಆಗಿದ್ದರು.

ಜನವರಿ 3ರಂದು ಕಲಬುರಗಿಯಲ್ಲಿ ಉದ್ಯಮಿಯಾಗು ಉದ್ಯೋಗ ನೀಡು -ಕೈಗಾರಿಕಾ ಅದಾಲತ್ ಕಾರ್ಯಕ್ರಮ;  ವೇದಿಕೆಗೆ ಪುನೀತ್ ರಾಜಕುಮಾರ್ ಹೆಸರು ನಾಮಕರಣ
ಮುರುಗೇಶ್ ನಿರಾಣಿ
Follow us
TV9 Web
| Updated By: sandhya thejappa

Updated on:Jan 02, 2022 | 5:14 PM

ಬೆಂಗಳೂರು: ವಿದ್ಯಾವಂತ ಯುವಕರಿಗೆ ಸ್ಥಳದಲ್ಲೇ ಉದ್ಯೋಗ ಹಾಗೂ ಉದ್ಯಮ ಆರಂಭಿಸುವವರಿಗೆ ಸೂಕ್ತ ಮಾರ್ಗದರ್ಶನ ನೀಡುವ ಬಹುನಿರೀಕ್ಷಿತ ‘ಉದ್ಯಮಿಯಾಗು ಉದ್ಯೋಗ ನೀಡು ಹಾಗೂ ಕೈಗಾರಿಕಾ ಅದಾಲತ್’ ಕಾರ್ಯಕ್ರಮ ನಾಳೆ (ಜನವರಿ 3) ಕಲಬುರಗಿಯಲ್ಲಿ ನಡೆಯಲಿದೆ. ಕಲಬುರಗಿಯ ಗುಲ್ಬರ್ಗ ವಿವಿಯ ಡಾ. ಬಿ ಆರ್ ಅಂಬೇಡ್ಕರ್ ಸಭಾಂಗಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿಯವರು ಚಾಲನೆ ನೀಡುತ್ತಾರೆ.

ಕಾರ್ಯಕ್ರಮ ನಡೆಯುವ ವೇದಿಕೆಗೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹೆಸರನ್ನು ನಾಮಕರಣ ಮಾಡಲು ನಿರ್ಧರಿಸಲಾಗಿದೆ. ಪುನೀತ್ ರಾಜಕುಮಾರ್ ಚಿತ್ರರಂಗದಲ್ಲಿ ತಮ್ಮನ್ನು ಗುರುತಿಸಿಕೊಳ್ಳುವ ಜೊತೆಗೆ ಯಶಸ್ವಿ ಉದ್ಯಮಿಯೂ ಆಗಿದ್ದರು. ತಮ್ಮ ಸಂಸ್ಥೆಗಳಲ್ಲಿ ನೂರಾರು ಜನರಿಗೆ ಉದ್ಯೋಗ ನೀಡುವ ಮೂಲಕ ಉದ್ಯೋಗದಾತರೂ ಆಗಿದ್ದರು.

ಯುವಕರನ್ನು ಉದ್ಯಮದತ್ತ ಆಕರ್ಷಿಸಲು ಮುಂದಾಗಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿಯವರು ಮುಂದೆ ನಡೆಯಲಿರುವ ಉದ್ಯಮಿಯಾಗು ಉದ್ಯೋಗ ನೀಡುವ ಕಾರ್ಯಕ್ರಮದ ವೇದಿಕೆಗೆ ಪುನೀತ್ ಹೆಸರನ್ನು ನಾಮಕರಣ ಮಾಡಲು ತೀರ್ಮಾನಿಸಿದ್ದಾರೆ. ಕಲಬುರಗಿ ಜನತೆಯ ಜೊತೆ ಪುನೀತ್ ರಾಜಕುಮಾರ್ ಅವಿನಾಭಾವ ಸಂಬಂಧ ಹೊಂದಿದ್ದರು. ಅನೇಕ ಸಂದರ್ಭಗಳಲ್ಲಿ ಇಲ್ಲಿಗೆ ಬಂದಾಗ ಪ್ರವಾಸಿ ತಾಣಗಳು ಮತ್ತು ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡುತ್ತಿದ್ದರು.

ಬೆಳಗ್ಗೆ 10 ಗಂಟೆಗೆ ಆರಂಭವಾಗಲಿರುವ ಈ ವಿಶೇಷ ಕಾರ್ಯಕ್ರಮಕ್ಕೆ ಈಗಾಗಲೇ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಕಲ್ಯಾಣ ಕರ್ನಾಟಕದ ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಮತ್ತು ಬೀದರ್ ಜಿಲ್ಲೆಯ ಸಾವಿರಾರು ವಿದ್ಯಾರ್ಥಿಗಳು ಮತ್ತು ಯುವ ಉದ್ಯಮಿಗಳು ಭಾಗವಹಿಸಲಿದ್ದಾರೆ.

ಸಾರಿಗೆ ವ್ಯವಸ್ಥೆ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಹೊರ ಜಿಲ್ಲೆಯ ವಿದ್ಯಾರ್ಥಿಗಳಿಗೆ ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಕಾರ್ಯಾಗಾರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಬಂದಲ್ಲಿ ಮುಂಜಾಗ್ರತವಾಗಿ ಭವನದ ಹೊರಗಡೆಯೂ ವೀಕ್ಷಣೆಗೆ ಸ್ಕ್ರೀನ್ ಅಳವಡಿಸಲಾಗುತ್ತಿದೆ.

ಕಳೆದ ನವೆಂಬರ್​ನಲ್ಲಿ ಬೆಂಗಳೂರಿನ ಅರಮನೆಯಲ್ಲಿ ಮೊದಲ ಉದ್ಯಮಿಯಾಗು ಉದ್ಯೋಗ ನೀಡು ಮತ್ತು ಕೈಗಾರಿಕಾ ಅದಾಲತ್ ನಡೆಸಲಾಗಿತ್ತು. ಮೊದಲ ಬಾರಿಗೆ ನಡೆಸಿದ ಈ ಕಾರ್ಯಕ್ರಮಕ್ಕೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಸುತ್ತಮುತ್ತಲ ಜಿಲ್ಲೆಯ ಸಾವಿರಾರು ಐಟಿಐ, ಎಂಜಿನಿಯರಿಂಗ್, ಎಂಬಿಎ, ಬಿಬಿಎಂ ಸೇರಿದಂತೆ ಮತ್ತಿತರ ವೃತ್ತಿಪರ ಕೋರ್ಸ್​ಗಳನ್ನು ಮುಗಿಸಿದ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಅರ್ಹತೆಗೆ ಅನುಗುಣವಾಗಿ ಉದ್ಯೋಗ ಪಡೆದಿದ್ದರು.

ಜೊತೆಗೆ ಹೊಸದಾಗಿ ಉದ್ಯಮ ಆರಂಭಿಸುವವರಿಗೆ ಯಶಸ್ವಿ ಉದ್ಯಮಿಗಳಿಂದ ಮಾರ್ಗದರ್ಶನ, ಸಲಹೆ ನೀಡಲಾಗಿತ್ತು. ಇದು ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದ್ದರಿಂದ ಇದೀಗ ಕಲಬುರಗಿಯಲ್ಲಿ 2ನೇ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಮೂಲಕ ಸರ್ಕಾರವೇ ಉದ್ಯಮಿಗಳ ಮನೆ ಬಾಗಿಲಿಗೆ ಹೋಗಿ ಉದ್ಯಮದಾರರ ಸಮಸ್ಯೆ ಆಲಿಸಿ, ಸಮಸ್ಯೆ ಇತ್ಯರ್ಥಪಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಿದೆ.

ಇದೇ 18ರಂದು ಮೈಸೂರು ಹಾಗೂ 28ರಂದು ಬೆಳಗಾವಿ ಹಾಗೂ ಫೆಬ್ರವರಿಯಲ್ಲಿ ದಕ್ಷಿಣ ಕನ್ನಡ ಮತ್ತು ತುಮಕೂರಿನಲ್ಲಿ ಆಯೋಜಿಸಲಾಗಿದೆ.

ಇದನ್ನೂ ಓದಿ

IND vs SA: ಜೋಹಾನ್ಸ್‌ಬರ್ಗ್‌ನಲ್ಲಿ ಭಾರತಕ್ಕಿಲ್ಲ ಸೋಲು; ಉಭಯ ತಂಡಗಳ ಮುಖಾಮುಖಿ ವರದಿ ಇಲ್ಲಿದೆ

ಮಹಿಳೆಯರ ಅವಮಾನ ಮತ್ತು ಕೋಮುದ್ವೇಷದ ವಿರುದ್ಧ ದನಿಯೆತ್ತೋಣ: ರಾಹುಲ್ ಗಾಂಧಿ

Published On - 5:11 pm, Sun, 2 January 22

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?