Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾ.9 ರಂದು ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ: 3 ಗಂಟೆಗಳ ಕಾಲ ಈ ನಿಲ್ದಾಣಗಳ ನಡುವೆ ಸಂಚಾರ ಸ್ಥಗಿತ

ಮಾರ್ಚ್ 9, ಭಾನುವಾರ ಬೆಳಿಗ್ಗೆ 7 ರಿಂದ 10 ಗಂಟೆಯವರೆಗೆ ಬೆಂಗಳೂರಿನ ನೇರಳೆ ಮಾರ್ಗದ ಈ ನಿಲ್ದಾಣಗಳ ನಡುವೆ ಸಂಚಾರ ಸ್ಥಗಿತಗೊಳ್ಳಲಿದೆ. ಹಳಿ ನಿರ್ವಹಣಾ ಕಾರ್ಯಕ್ಕಾಗಿ ಸ್ಥಗಿತಗೊಳಿಸಲಾಗುತ್ತದೆ ಎಂದು ಬಿಎಂಆರ್​​ ಸಿಎಲ್​ ತಿಳಿಸಿದೆ.ಕ್ಯೂಆರ್ ಟಿಕೆಟ್ ಖರೀದಿ ನಿಷ್ಕ್ರಿಯಗೊಳಿಸಲಾಗಿದೆ.ಹಸಿರು ಮಾರ್ಗದ ಸೇವೆಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತವೆ. ಪ್ರಯಾಣಿಕರು ಬದಲಾವಣೆಗಳನ್ನು ಗಮನಿಸಬೇಕು ಎಂದು ಬಿಎಂಆರ್​ ಸಿಎಲ್​ ಮನವಿ ಮಾಡಿದೆ.

ಮಾ.9 ರಂದು ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ: 3 ಗಂಟೆಗಳ ಕಾಲ ಈ ನಿಲ್ದಾಣಗಳ ನಡುವೆ ಸಂಚಾರ ಸ್ಥಗಿತ
ನಮ್ಮ ಮೆಟ್ರೋ
Follow us
ವಿವೇಕ ಬಿರಾದಾರ
|

Updated on:Mar 08, 2025 | 9:35 AM

ಬೆಂಗಳೂರು, ಮಾರ್ಚ್​ 09: ಭಾನುವಾರ (ಮಾರ್ಚ್​.09) ರಂದು ನೇರಳೆ ಮಾರ್ಗದ (Purple Line) ಮಾಗಡಿ ರಸ್ತೆ (Magadi Road) ಮತ್ತು ಎಂಜಿ ರಸ್ತೆ (MG Road) ಮೆಟ್ರೋ ನಿಲ್ದಾಣಗಳ ನಡುವೆ ನಮ್ಮ ಮೆಟ್ರೋ (Namma Metro) ಸಂಚಾರ ಬೆಳಗ್ಗೆ 7 ಗಂಟೆಯಿಂದ 10ಗಂಟೆಯವರೆಗೆ ಸಂಚಾರ ಸ್ಥಗಿತಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ತಿಳಿಸಿದೆ.

ನಮ್ಮ ಮೆಟ್ರೋ ನಿಗಮವು ಅಂದು ನೇರಳ ಮಾರ್ಗದಲ್ಲಿ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಹಳಿ ನಿರ್ವಹಣಾ ಕಾಮಗಾರಿಯನ್ನು ಬೆಳಿಗೆ 07:00 ರಿಂದ 10:00 ಗಂಟೆಯವರೆಗೆ (ಮೂರು ಗಂಟೆಗಳ ಕಾಲ) ಕೈಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ಯಾಣಗಳ ನಡುವಿನ ಮೆಟ್ರೋ ಸೇವೆಗಳನ್ನು ರದ್ದುಪಡಿಸಲಾಗುತ್ತದೆ ಎಂದು ತಿಳಿಸಿದೆ.

ಈ ಅವಧಿಯಲ್ಲಿ ಕಬ್ಬನ್ ಪಾರ್ಕ್, ಡಾ. ಬಿ.ಆರ್. ಅಂಬೇಡ್ಕರ್ ನಿಲ್ದಾಣ, ವಿಧಾನಸೌಧ, ಸ‌ರ್.ಎಂ ವಿಶ್ವೇಶ್ವರಯ್ಯ ನಿಲ್ದಾಣ, ಸೆಂಟ್ರಲ್ ಕಾಲೇಜು, ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್ (ನೇರಳೆ ಮಾರ್ಗ) ಮತ್ತು ಕ್ರಾಂತಿವೀರ ಸಂಗೋಳಿ ರಾಯಣ್ಣ ರೈಲು ನಿಲ್ದಾಣಗಳು ಮುಚ್ಚಲಾಗಿರುತ್ತದೆ ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ
Image
ನಮ್ಮ ಮೆಟ್ರೋ ದರ ಏರಿಕೆ ನಂತರ ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಹೆಚ್ಚಳ: ವರದಿ
Image
ಮೆಟ್ರೋದಲ್ಲಿ ಅರಶಿನ ಶಾಸ್ತ್ರ; ವೈರಲ್‌ ವಿಡಿಯೋದ ಸತ್ಯಾಸತ್ಯತೆ ಏನು?
Image
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
Image
ಗೆಳೆಯನ ಜತೆ ಬೇರೆ ಹುಡುಗಿಯ ನೋಡಿ, ಮೆಟ್ರೋ ನಿಲ್ದಾಣದಲ್ಲಿ ಜಗಳವಾಡಿದ ಯುವತಿ

ಬೆಳಗ್ಗೆ 10.00 ಗಂಟೆಯವರೆಗೆ ಈ ರದ್ದತಿಯ ಕಾರಣದಿಂದಾಗಿ, ಕ್ಯೂಆರ್ ಟಿಕೆಟ್‌ಗಳ ಖರೀದಿಯನ್ನು ನಿಷ್ಕ್ರಿಯಗೊಳಿಸಲಾಗುತ್ತದೆ. ನೇರಳೆ ಮಾರ್ಗದಲ್ಲಿನ ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್​ನಲ್ಲಿ ರೈಲು ಲಭ್ಯವಿರುವುದಿಲ್ಲವಾದ್ದರಿಂದ, ನೇರಳೆ ಮಾರ್ಗದಿಂದ ಹಸಿರು ಮಾರ್ಗಕ್ಕೆ ಮತ್ತು ಹಸಿರು ಮಾರ್ಗದಿಂದ ನೇರಳೆ ಮಾರ್ಗಕ್ಕೆ ಪ್ರಯಾಣಿಸಲು ಸಾರ್ವಜನಿಕರು ಕ್ಯೂಆರ್ ಟಿಕೆಟ್ ಹಾಗೂ ಟೋಕನ್​ಗಳನ್ನು ಖರೀದಿಸದಂತೆ ಬಿಎಂಆರ್​ಸಿಎಲ್​ ಸೂಚಿಸಿದೆ.

ನೇರಳೆ ಮಾರ್ಗದ ಇತರ ವಿಭಾಗಗಳಲ್ಲಿ ಅಂದರೆ, ಚಲ್ಲಘಟ್ಟ ಮತ್ತು ಮಾಗಡಿ ರಸ್ತೆ ನಡುವೆ, ಹಾಗೂ ಎಂಜಿ ರಸ್ತೆ ಮತ್ತು ವೈಟ್ ಫೀಲ್ಡ್ (ಕಾಡುಗೋಡಿ) ನಡುವೆ, ರೈಲು ಸೇವೆಗಳು ಎಂದಿನಂತೆ ಬೆಳಿಗ್ಗೆ 07:00 ಗಂಟೆಗೆ ಪ್ರಾರಂಭವಾಗುತ್ತವೆ ಮತ್ತು ಮೇಲಿನ ಅವಧಿಯಲ್ಲಿ ವೇಳಾಪಟ್ಟಿಯ ಪ್ರಕಾರ ಲಭ್ಯವಿರುತ್ತವೆ ಎಂದಿದೆ.

ಇದನ್ನೂ ಓದಿ: ಟಿಕೆಟ್ ದರ ಏರಿಕೆ ಪರಿಣಾಮ: 5 ಲಕ್ಷಕ್ಕಿಳಿದ ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆ

ಹಸಿರು ಮಾರ್ಗದಲ್ಲಿ ರೇಷ್ಮೆ ಸಂಸ್ಥೆ ಮತ್ತು ಮಾದಾವರ ಮೆಟ್ರೋ ನಿಲ್ದಾಣಗಳಿಂದ ರೈಲುಗಳ ಸೇವೆಗಳು ನಿಗದಿತ ಸಮಯ ಬೆಳಿಗ್ಗೆ 7.00 ಗಂಟೆಗೆ ಪ್ರಾರಂಭವಾಗುತ್ತವೆ. ನಮ್ಮ ಮೆಟ್ರೋ ಪ್ರಯಾಣಿಕರು ಸದರಿ ಬದಲಾವಣೆಯನ್ನು ಗಮನಿಸಬೇಕೆಂದು ಬಿಎಂಆರ್​ಸಿಎಲ್​ ಕೋರಿದೆ. ಪ್ರಯಾಣಿಕರಿಗೆ ಇದರಿಂದಾಗುವ ಅನಾನುಕೂಲತೆಗೆ ಬಿಎಂಆರ್​ಸಿಎಲ್​ ವಿಷಾದಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:34 am, Sat, 8 March 25

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ