ನ. 1ರಂದು ನಟ ದಿ. ಪುನೀತ್ ರಾಜ್​ಕುಮಾರ್​ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಸಿಎಂ ಬೊಮ್ಮಾಯಿ

ಪುನೀತ್ ರಾಜ್​ಕುಮಾರ್​ ಯುವಜನತೆಗೆ ಸದಾ ಪ್ರೇರಣೆ ನೀಡುತ್ತಿದ್ದರು. ಅವರ ಹೆಸರು ಚಿರಸ್ಥಾಯಿಯಾಗಬೇಕು, ಪ್ರೇರಣೆಯಾಗಬೇಕು ಎಂದು ಈ ಪುರಸ್ಕಾರ ನೀಡಲಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ನ. 1ರಂದು ನಟ ದಿ. ಪುನೀತ್ ರಾಜ್​ಕುಮಾರ್​ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ, ಪುನೀತ್ ರಾಜ್​ಕುಮಾರ್
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Oct 20, 2022 | 5:37 PM

ಬೆಂಗಳೂರು: ನಮ್ಮ ನೆಚ್ಚಿನ ನಟ ದಿ. ಪುನೀತ್ ರಾಜ್​ಕುಮಾರ್ (Puneeth Rajkumar) ​ಗೆ ಕರ್ನಾಟಕ ರತ್ನ ಪ್ರಶಸ್ತಿ (Karnataka Ratna award) ಕೊಡಲು ತೀರ್ಮಾನಿಸಿದ್ದು, ನವೆಂಬರ್ 1 ರಂದು ವಿಧಾನಸೌಧದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಈ ಕುರಿತಾಗಿ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು (ಅ. 20) ಸಭೆ ಮಾಡಿದ್ದು, ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಎಲ್ಲರ ಮನದಾಳದಲ್ಲಿ ಚಿರಸ್ಥಾಯಿಯಾಗಿ ಉಳಿದಿರುವ ಪುನೀತ್ ನಿಜವಾಗಿಯೂ ಕರ್ನಾಟಕ ರತ್ನ. ಯುವಜನತೆಗೆ ಸದಾ ಪ್ರೇರಣೆ ನೀಡುತ್ತಿದ್ದರು. ಪುನೀತ್ ಹೆಸರು ಚಿರಸ್ಥಾಯಿಯಾಗಬೇಕು, ಪ್ರೇರಣೆಯಾಗಬೇಕು ಎಂದು ಈ ಪುರಸ್ಕಾರ ನೀಡಲಾಗುತ್ತಿದೆ. ಹಲವಾರು ಶ್ರೇಷ್ಠ ಸಾಹಿತಿಗಳು, ಮುಖ್ಯ ಅತಿಥಿಗಳು, ನಟರು, ಸಚಿವರು, ಶಾಸಕರು, ಹಿರಿಯ ರಾಜಕಾರಣಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಅರ್ಥಪೂರ್ಣ ಕಾರ್ಯಕ್ರಮ ಮಾಡಲಿದ್ದೇವೆ. ನವೆಂಬರ್ 1ರ ನಂತರ ಬೆಂಗಳೂರಿನಲ್ಲಿ 10 ದಿನಗಳ ಅಂತರದಲ್ಲಿ ಮೂರು ಭಾಗಗಳಲ್ಲಿ ಅಪ್ಪು ಕಾರ್ಯಕ್ರಮ ಮಾಡಲು ತೀರ್ಮಾನ ಮಾಡಲಿದ್ದೇವೆ ಎಂದು ಸಿಎಂ ಬೊಮ್ಮಾಯಿ‌ ಹೇಳಿದರು.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಇಂದಿನ ಸಭೆಯಲ್ಲಿ ರಾಜ್‌ಕುಮಾರ್ ಕುಟುಂಬದ ಸದಸ್ಯರು ಭಾಗಿಯಾಗಿದ್ದರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ನವೆಂಬರ್ 1 ಸಂಜೆ 4 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. 2009ರ ನಂತರ ಯಾರಿಗೂ ಕೂಡ ಕರ್ನಾಟಕ ರತ್ನ ಪ್ರಶಸ್ತಿ ಕೊಟ್ಟಿರಲಿಲ್ಲ. ಈಗ 8 ಜನರಿಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡಲಾಗುತ್ತಿದೆ ಎಂದು ತಿಳಿಸಿದರು.

ನಟ ಚೇತನ್ ಹೇಳಿಕೆ ನಾನು ಒಪ್ಪುವುದಿಲ್ಲ

ನಟ ಚೇತನ್ ಹೇಳಿಕೆ ನಾನು ಒಪ್ಪುವುದಿಲ್ಲ. ಎಲ್ಲರಿಗೂ ವಾಕ್ ಸ್ವಾತಂತ್ರ್ಯ ಇದೆ, ಮಾತಾಡಿಕೊಂಡು ಇರಲಿ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ‘ಕಾಂತಾರ’ ಸಿನಿಮಾ ನೋಡಿದ್ದೇನೆ, ತುಂಬಾ ಚೆನ್ನಾಗಿದೆ. ಸಿನಿಮಾದಲ್ಲಿ ಮಲೆನಾಡು ಭಾಗದ ಸೊಗಡನ್ನು ತೋರಿಸಿದ್ದಾರೆ ಎಂದು ಹೇಳಿದರು. ಸಿನಿಮಾಗೆ ಕಾಯ್ದೆ ಮಾಡಿದ್ದೀವಿ. ಮುಂದಿನ‌ ಅಧಿವೇಶನದಲ್ಲಿ ಕಾಯ್ದೆ ಜಾರಿಗೆ ತರುತ್ತೇವೆ. ಸಣ್ಣ ಸಣ್ಣ ಟಾಕೀಸ್​ಗಳನ್ನ ಮಾಡೋಕೆ ನಿರ್ಧಾರ ಮಾಡಿದ್ದೇವೆ. ಕನ್ನಡ ಸಿನಿಮಾಗಳಿಗೆ ಹೆಚ್ಚು ಒತ್ತನ್ನ ನೀಡುತ್ತೇವೆ.

ಸಿನಿಮಾಗೆ ತುಂಬಾ ನೇಗ್ಲಿಜೇನ್ಸಿ ಮಾಡಲಾಗುತ್ತಿದೆ. ಕಾಂತಾರ ತರದ ಸಿನಿಮಾ ನೋಡಿ ಐದಾರು ವರ್ಷ ಆಗಿತ್ತು. ನೋಡಿದಾಗ ನೈಜನೆ ಕರಾವಳಿ ಬದುಕು ನೋಡಿದಾಗ ನಂದು ಅಂತ‌ಅನ್ನಿಸಿತು. ನೈಜತೆ ಚೆನ್ನಾಗಿದ್ದಾಗ ಜನ ನೋಡುತ್ತಾರೆ. ನಮ್ಮ ತೀರ್ಥಹಳ್ಳಿ ಹುಡುಗರು ಮಾಡಿರೋ‌ ಸಿನಿಮಾ ಇದು ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:50 pm, Thu, 20 October 22

ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?
ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?
Daily Devotional: ಪೂಜೆಯ ಫಲ ಪಡೆಯುವುದು ಹೇಗೆ? ವಿಡಿಯೋ ನೋಡಿ
Daily Devotional: ಪೂಜೆಯ ಫಲ ಪಡೆಯುವುದು ಹೇಗೆ? ವಿಡಿಯೋ ನೋಡಿ
ವಾರ ಭವಿಷ್ಯ: ನವೆಂಬರ್​ 11 ರಿಂದ ​17ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ನವೆಂಬರ್​ 11 ರಿಂದ ​17ರವರೆಗೆ ವಾರ ಭವಿಷ್ಯ ಹೀಗಿದೆ
Nithya Bhavishya: ಈ ರಾಶಿಯವರಿಗೆ 5 ಗ್ರಹಗಳ ಶುಭ ಫಲವಿದೆ
Nithya Bhavishya: ಈ ರಾಶಿಯವರಿಗೆ 5 ಗ್ರಹಗಳ ಶುಭ ಫಲವಿದೆ
ನಾಗೇಂದ್ರರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳುವ ಸುಳಿವು ನೀಡಿದ ಸಿಎಂ
ನಾಗೇಂದ್ರರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳುವ ಸುಳಿವು ನೀಡಿದ ಸಿಎಂ
ಬಿಜೆಪಿಯ ನಿಷ್ಠಾವಂತ ನಾಯಕರಿಂದ ಸರ್ಕಾರದ ವಿರುದ್ಧ ಪುನಃ ಹೋರಾಟ: ಯತ್ನಾಳ್
ಬಿಜೆಪಿಯ ನಿಷ್ಠಾವಂತ ನಾಯಕರಿಂದ ಸರ್ಕಾರದ ವಿರುದ್ಧ ಪುನಃ ಹೋರಾಟ: ಯತ್ನಾಳ್
ಮೂರು ಬಾರಿ ಸಂಸದರಾಗಿದ್ದ ಸುರೇಶ್ ಚನ್ನಪಟ್ಟಣಕ್ಕೆ ನೀಡಿದ್ದೇನು? ನಿಖಿಲ್
ಮೂರು ಬಾರಿ ಸಂಸದರಾಗಿದ್ದ ಸುರೇಶ್ ಚನ್ನಪಟ್ಟಣಕ್ಕೆ ನೀಡಿದ್ದೇನು? ನಿಖಿಲ್
ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಕುತಂತ್ರ ಅಡ್ಡಿಯಾಗಿತ್ತು:ಕುಮಾರಸ್ವಾಮಿ
ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಕುತಂತ್ರ ಅಡ್ಡಿಯಾಗಿತ್ತು:ಕುಮಾರಸ್ವಾಮಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ;18 ಮಂದಿಗೆ ಗಾಯ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ;18 ಮಂದಿಗೆ ಗಾಯ
ವಾರದ ಪಂಚಾಯಿತಿ ನಡೆಸಲು ಬಂದ ಸುದೀಪ್, ಮಂಜುಗೆ ಕಾದಿದೆ ಮಾತಿನ ಚಾಟಿ?
ವಾರದ ಪಂಚಾಯಿತಿ ನಡೆಸಲು ಬಂದ ಸುದೀಪ್, ಮಂಜುಗೆ ಕಾದಿದೆ ಮಾತಿನ ಚಾಟಿ?