ಯುಗಾದಿ ಹಬ್ಬದ ಸಂದರ್ಭದಲ್ಲಿ ಈ ಕೆಟ್ಟ ಆಡಳಿತ ತೊಲಗಲಿ; ಕಾಂಗ್ರೆಸ್ ಸರ್ಕಾರ ಜನಪರವಾಗಿದೆ -ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹೊಸ ವರ್ಷ ಯುಗಾದಿಯ ದಿನದಂದು ಈ ಕೆಟ್ಟ ಆಡಳಿತ ತೊಲಗಲಿ ಎಂದು ದೇವರಲ್ಲಿ ಬೇಡಿಕೊಳ್ಳಿ ಎಂದು ಹೇಳಿದ್ದಾರೆ.
ಬೆಂಗಳೂರು: ಬಿಜೆಪಿ(BJP Karnataka) ನಾಯಕರ ರೀತಿ ನಾವು ಸುಳ್ಳು ಆಶ್ವಾಸನೆ ಕೊಡುವುದಿಲ್ಲ. ಕಳೆದ 3 ವರ್ಷದಿಂದ ಜನ ಸಾಕಷ್ಟು ಸಂಕಷ್ಟ ಅನುಭವಿಸುತ್ತಿದ್ದಾರೆ. ಯುಗಾದಿ ಹಬ್ಬದ ಸಂದರ್ಭದಲ್ಲಿ ಈ ಕೆಟ್ಟ ಆಡಳಿತ ತೊಲಗಲಿ. ಕಾಂಗ್ರೆಸ್ ಸರ್ಕಾರ ಜನಪರವಾಗಿದೆ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಗೂ ಇದೇ ವೇಳೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಸಂಬಂಧ ಮಾತನಾಡಿದ್ದಾರೆ(Congress Candidates List).
ಕಳೆದ ಮೂರು ವರ್ಷಗಳಿಂದ ಜನ ಸಾಕಷ್ಟು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಯುಗಾದಿ ಸಂದರ್ಭದಲ್ಲಿ ಈ ಕೆಟ್ಟ ಆಡಳಿತ ತೊಲಗಲಿ. ಈ ರೀತಿ ನೀವೂ ಹಾರೈಸಿ. ಕಾಂಗ್ರೆಸ್ ಸರ್ಕಾರ ಜನಪರವಾಗಿದೆ. ರಾಜ್ಯದ ಜನರಿಗೆ ಹಲವು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೇವೆ. ಬಿಜೆಪಿಯವರ ತರಹ ನಾವು ಸುಳ್ಳು ಆಶ್ವಾಸನೆ ಕೊಡಲ್ಲ. ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ $15 ಲಕ್ಷ ಕೊಡ್ತೀವಿ ಎಂದಿದ್ದರು. ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದಿದ್ದರು, ಏನಾದ್ರೂ ಮಾಡಿದ್ರಾ? ಆದ್ರೆ ನಾವು ಕೊಟ್ಟ ಭರವಸೆಗಳನ್ನು ಈಡೇರಿಸುವ ಬಗ್ಗೆ ಚರ್ಚೆ ಮಾಡಿದ್ದೇವೆ. ನಮ್ಮ ಗ್ಯಾರಂಟಿ ಭರವಸೆಗಳನ್ನು ಈಡೇರಿಸಿಯೇ ತೀರುತ್ತೇವೆ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಇದನ್ನೂ ಓದಿ: Bengaluru: ಕಾಂಗ್ರೆಸ್ ಸಮಾವೇಶದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯನ್ನು ಟೀಕಿಸುತ್ತಾ ಗೇಲಿ ಮಾಡಿದ ಸಿದ್ದರಾಮಯ್ಯ
ಇಂದು(ಮಾರ್ಚ್ 22) ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಬೇಕಿತ್ತು. ಆದ್ರೆ ಹಬ್ಬ ಹಾಗೂ ಕೆಲವು ಕಾರಣಾಂತರಗಳಿಂದ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡಿಲ್ಲ. ಈ ಸಂಬಂಧ ಮಾತನಾಡಿರುವ ಡಿಕೆ ಶಿವಕುಮಾರ್ 2-3 ದಿನದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದಿದ್ದಾರೆ. ಇವತ್ತು ಮೊದಲ ಪಟ್ಟಿ ಬಿಡುಗಡೆಯಾಗಬೇಕಿತ್ತು. ಹಬ್ಬಕ್ಕಾಗಿ ಎಐಸಿಸಿ ಅಧ್ಯಕ್ಷ ಖರ್ಗೆ ಬೆಂಗಳೂರಿಗೆ ಬಂದಿದ್ದಾರೆ. ಹೀಗಾಗಿ 2-3 ದಿನದಲ್ಲಿ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಆಗುತ್ತೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.
ಇನ್ನು ಮತ್ತೊಂದೆಡೆ ಈ ಬಗ್ಗೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಗ್ಗೆ ನನಗೆ ಗೊತ್ತಿಲ್ಲ. ವೇಣುಗೋಪಾಲ್ ಯಾವಾಗ ಪಟ್ಟಿ ಬಿಡುಗಡೆ ಮಾಡ್ತಾರೋ ಗೊತ್ತಿಲ್ಲ ಎಂದಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 1:33 pm, Wed, 22 March 23