ಓಬವ್ವ ಆತ್ಮರಕ್ಷಣೆ ಕಲೆ ಯೋಜನೆಗೆ ಚಾಲನೆ ನೀಡಲಿದ್ದಾರೆ ಸಿಎಂ ಬಸವರಾಜ ಬೊಮ್ಮಾಯಿ; ಏನಿದು? ವಿವರ ಓದಿ

| Updated By: ganapathi bhat

Updated on: Feb 04, 2022 | 6:18 PM

ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ 257 ಹಾಸ್ಟೆಲ್​ಗಳ 30 ಸಾವಿರ ಹೆಣ್ಣುಮಕ್ಕಳಿಗೆ ತರಬೇತಿ ನಡೆಯಲಿದೆ. 818 ಕ್ರೈಸ್ ಹಾಸ್ಟೆಲ್​ಗಳ 1.02 ಲಕ್ಷ ಹೆಣ್ಣುಮಕ್ಕಳಿಗೆ ತರಬೇತಿ ಸಿಗಲಿದೆ. 1704 ಹಾಸ್ಟೆಲ್, ವಸತಿ ಶಾಲೆಗಳ 1.82 ಲಕ್ಷ ಹೆಣ್ಣುಮಕ್ಕಳಿಗೆ ತರಬೇತಿ ನೀಡುವ ಗುರಿ ಹೊಂದಿದೆ ಎಂದು ಮಾಹಿತಿ ನೀಡಲಾಗಿದೆ.

ಓಬವ್ವ ಆತ್ಮರಕ್ಷಣೆ ಕಲೆ ಯೋಜನೆಗೆ ಚಾಲನೆ ನೀಡಲಿದ್ದಾರೆ ಸಿಎಂ ಬಸವರಾಜ ಬೊಮ್ಮಾಯಿ; ಏನಿದು? ವಿವರ ಓದಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.
Follow us on

ಬೆಂಗಳೂರು: ಹೆಣ್ಣುಮಕ್ಕಳ ಸ್ವಯಂ ರಕ್ಷಣೆಗೆ ಪರಿಚಯಿಸುತ್ತಿರುವ ನೂತನ ಯೋಜನೆ ಒಂದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫೆಬ್ರವರಿ 7 ರಂದು ಚಾಲನೆ ನೀಡಲಿದ್ದಾರೆ. ಕರ್ನಾಟಕ ಸರ್ಕಾರ ಪರಿಚಯಿಸ್ತಿರುವ ಓಬವ್ವ ಆತ್ಮರಕ್ಷಣೆ ಕಲೆ ಯೋಜನೆಗೆ ಫೆಬ್ರವರಿ 7 ರಂದು ಚಾಲನೆ ಸಿಗಲಿದೆ. ಅದರಂತೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಯೋಗಿಕವಾಗಿ 100 ವಸತಿ ಶಾಲೆಗಳಲ್ಲಿ ಕರಾಟೆ ತರಬೇತಿ ನೀಡಲಿದೆ.

ತರಬೇತಿ ಪಡೆಯುವ ಮಕ್ಕಳಿಗೆ ಇಲಾಖೆ ವತಿಯಿಂದ ಸಮವಸ್ತ್ರ ನೀಡಲಾಗುವುದು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ತರಬೇತಿ ಕೊಡಲಾಗುವುದು. 625 ಹಾಸ್ಟೆಲ್​ಗಳ 50 ಸಾವಿರ ಹೆಣ್ಣುಮಕ್ಕಳಿಗೆ ತರಬೇತಿ ನೀಡಲಾಗುವುದು. ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ 257 ಹಾಸ್ಟೆಲ್​ಗಳ 30 ಸಾವಿರ ಹೆಣ್ಣುಮಕ್ಕಳಿಗೆ ತರಬೇತಿ ನಡೆಯಲಿದೆ. 818 ಕ್ರೈಸ್ ಹಾಸ್ಟೆಲ್​ಗಳ 1.02 ಲಕ್ಷ ಹೆಣ್ಣುಮಕ್ಕಳಿಗೆ ತರಬೇತಿ ಸಿಗಲಿದೆ. 1704 ಹಾಸ್ಟೆಲ್, ವಸತಿ ಶಾಲೆಗಳ 1.82 ಲಕ್ಷ ಹೆಣ್ಣುಮಕ್ಕಳಿಗೆ ತರಬೇತಿ ನೀಡುವ ಗುರಿ ಹೊಂದಿದೆ ಎಂದು ಮಾಹಿತಿ ನೀಡಲಾಗಿದೆ.

ಹೆಣ್ಣುಮಕ್ಕಳ ತರಬೇತಿಗೆ ಮಹಿಳಾ ತರಬೇತುದಾರರ ನೇಮಕ ಮಾಡಲಾಗಿದೆ. ಬ್ಲ್ಯಾಕ್​ ಬೆಲ್ಟ್​ ಪಡೆದ ಮಹಿಳಾ ತರಬೇತುದಾರರಿಂದ ತರಬೇತಿ ನೀಡಲಾಗುವುದು. ಸಾವಿರಕ್ಕೂ ಹೆಚ್ಚು ತರಬೇತುದಾರರನ್ನು ತಾತ್ಕಾಲಿಕವಾಗಿ ನೇಮಕ ಮಾಡಲಾಗಿದೆ. ತರಬೇತುದಾರರಿಗೆ ಗೌರವ ಧನ ನೀಡಲು ಸರ್ಕಾರ ತೀರ್ಮಾನ ಮಾಡಿದೆ. 100 ಹಾಸ್ಟೆಲ್, ವಸತಿ ಶಾಲೆಗಳಲ್ಲಿ ಈಗಾಗಲೇ ತರಬೇತಿ ಶುರು ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಚಿವ ಸುಧಾಕರ್ ಸಿಎಂ ಬೊಮ್ಮಾಯಿಗಿಂತ ದೊಡ್ಡೋರಾ: ಸೋಮಶೇಖರ್ ರೆಡ್ಡಿ ಆಕ್ರೋಶ

ಇದನ್ನೂ ಓದಿ: ನಮ್ಮ ಮಾಹಿತಿ ಪ್ರಕಾರ ಬಸವರಾಜ ಬೊಮ್ಮಾಯಿ 6 ತಿಂಗಳ ಸಿಎಂ: ಹೊಸ ಬಾಂಬ್ ಸಿಡಿಸಿದ ಸತೀಶ್ ಜಾರಕಿಹೊಳಿ