Cash Seize: ಬೆಂಗಳೂರು; ಕೆಟ್ಟು ನಿಂತಿದ್ದ ಆಟೋದಲ್ಲಿತ್ತು 1 ಕೋಟಿ ರೂ. ನಗದು!

ಬೆಂಗಳೂರಿನಲ್ಲಿ ಎಸ್‌.ಜೆ.ಪಾರ್ಕ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಟ್ಟು ನಿಂತಿದ್ದ ಆಟೋ ಒಂದರಲ್ಲಿ 1 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ.

Cash Seize: ಬೆಂಗಳೂರು; ಕೆಟ್ಟು ನಿಂತಿದ್ದ ಆಟೋದಲ್ಲಿತ್ತು 1 ಕೋಟಿ ರೂ. ನಗದು!
ಅಬ್ಬಾ, ಕೆಟ್ಟು ನಿಂತ ಆಟೋದಲ್ಲಿ ಎಷ್ಟೊಂದು ಹಣ!
Follow us
Ganapathi Sharma
|

Updated on:Apr 13, 2023 | 10:14 PM

ಬೆಂಗಳೂರು: ವಿಧಾನಸಭೆ ಚುನಾವಣೆ (Karnataka Assembly Elections 202) ಘೋಷಣೆಯಾದ ಬೆನ್ನಲ್ಲೇ ರಾಜ್ಯದಾದ್ಯಂತ ಅಕ್ರಮ ವಹಿವಾಟು ತಡೆಯುವ ನಿಟ್ಟಿನಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗಿದೆ. ಹಲವು ಕಡೆ ಚೆಕ್​ಪೋಸ್ಟ್​​ಗಳನ್ನು ನಿರ್ಮಿಸಿ ಚುನಾವಣಾ ಅಧಿಕಾರಿಗಳು ಅಕ್ರಮ ನಗದು, ಉಡುಗೊರೆ ಸಾಗಾಟದ ಬಗ್ಗೆ ಹದ್ದಿನಕಣ್ಣಿಟ್ಟಿದ್ದಾರೆ. ಅಭ್ಯರ್ಥಿಗಳು ಮತದಾರರಿಗೆ ಉಡುಗೊರೆ, ನಗದಿನ ಆಮಿಷವೊಡ್ಡುತ್ತಿರುವ ಪ್ರಕರಣಗಳೂ ಹೆಚ್ಚಾಗಿವೆ. ಈ ಮಧ್ಯೆ, ಬೆಂಗಳೂರಿನಲ್ಲಿ ಎಸ್‌.ಜೆ.ಪಾರ್ಕ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಟ್ಟು ನಿಂತಿದ್ದ ಆಟೋ ಒಂದರಲ್ಲಿ 1 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ. ಈ ಹಣವನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎನ್ನಲಾಗಿದ್ದು, ಪೊಲೀಸರು ಜಪ್ತಿ ಮಾಡಿದ್ದಾರೆ.

ಸುರೇಶ್‌, ಪ್ರವೀಣ್‌ ಎಂಬವರು ಆಟೋದಲ್ಲಿ 1 ಕೋಟಿ ರೂಪಾಯಿ ನಗದು ಸಾಗಿಸುತ್ತಿದ್ದರು. ಈ ವೇಳೆ ಆಟೋ ಕೆಟ್ಟು ನಿಂತಿತ್ತು. ಅನುಮಾನಾಸ್ಪದವಾಗಿ ಕಂಡುಬಂದ ಆಟೋವನ್ನು ಪರಿಶೀಲಿಸಿದಾಗ 1 ಕೋಟಿ ರೂ. ನಗದು ಪತ್ತೆಯಾಗಿದೆ. ನಗದಿಗೆ ಸಂಬಂಧಪಟ್ಟ ದಾಖಲೆಗಳು ಇರಲಿಲ್ಲ. ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಪೊಲೀಸ್ ಠಾಣೆಗೆ ಐಟಿ ಇಲಾಖೆ ಅಧಿಕಾರಿಗಳೂ ಭೇಟಿ ನೀಡಿದ್ದು ಆರೋಪಿಗಳ ವಿಚಾರಣೆ ನಡೆಸಿದ್ದಾರೆ. ತಮ್ಮ ಬಳಿ ಇದ್ದ ನಗದು ರಾಜೇಶ್‌ ಎಂಟರ್‌ಪ್ರೈಸಸ್‌ಗೆ ಸೇರಿದ್ದು ಎಂದು ಆರೋಪಿಗಳು ಹೇಳಿದ್ದಾರೆ. ವಿಜಯನಗರದಿಂದ ಜಯನಗರಕ್ಕೆ ಸಾಗಿಸಲಾಗುತ್ತಿತ್ತು ಎಂದೂ ತಿಳಿಸಿದ್ದಾರೆ.

ಇದನ್ನೂ ಓದಿ: ಪದ್ಮನಾಭನಗರ ಅಭ್ಯರ್ಥಿಗೆ ಬಿ ಫಾರಂ ನೀಡದ ಡಿಕೆ ಶಿವಕುಮಾರ್ ನಡೆಯ ಹಿಂದಿನ ಮರ್ಮವೇನು?

ಮೆಜೆಸ್ಟಿಕ್​ನಲ್ಲಿ ಖಾಸಗಿ ಬಸ್​​ಗಳ ತಪಾಸಣೆ

ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮವಾಗಿ ಹಣ, ವಸ್ತುಗಳ ಸಾಗಾಟ ಶಂಕೆ ವ್ಯಕ್ತವಾಗಿರುವ ಕಾರಣ ಬೆಂಗಳೂರಿನ ಮೆಜೆಸ್ಟಿಕ್​ನಲ್ಲಿ ಖಾಸಗಿ ಬಸ್​ಗಳನ್ನು ಪೊಲೀಸರು ಗುರುವಾರ ರಾತ್ರಿ ತಪಾಸಣೆಗೆ ಒಳಪಡಿಸಿದ್ದಾರೆ. 4 ತಂಡಗಳಾಗಿ ಉಪ್ಪಾರಪೇಟೆ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ರಾಜ್ಯದ ಬೇರೆ ಬೇರೆ ಕಡೆ ತೆರಳುವ ಬಸ್‌ಗಳಲ್ಲಿ ಪರಿಶೀಲನೆ ನಡೆಸಿದರು. ಮತದಾರರಿಗೆ ಹಂಚಲು ನಗದು, ಉಡುಗೊರೆಗಳನ್ನು ಅಕ್ರಮವಾಗಿ ಸಾಗಿಸುವ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ದಾಖಲೆ ಇಲ್ಲದ 46 ದ್ವಿಚಕ್ರ ವಾಹನಗಳ ಜಪ್ತಿ

ಶಿವಮೊಗ್ಗದಲ್ಲಿ ದಾಖಲೆ ಇಲ್ಲದ 46 ದ್ವಿಚಕ್ರ ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈ ದ್ವಿಚಕ್ರ ವಾಹನಗಳು ಅಂದಾಜು 33,78,336 ರೂ. ಮೌಲ್ಯ ಹೊಂದಿವೆ ಎನ್ನಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:42 pm, Thu, 13 April 23

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್