AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್​ಗೆ ಮತ್ತೊಂದು ಬಲಿ, ತುಮಕೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಹಿಟ್​ ಆ್ಯಂಡ್​ ರನ್​ ನಡೆದಿದೆ. 8ನೇ ಮೈಲಿ ಬಳಿ ನಡೆದ ಹಿಟ್ ಆ್ಯಂಡ್ ರನ್​ಗೆ ಬೈಕ್ ಸವಾರ ಬಲಿಯಾಗಿದ್ದಾನೆ. ಮತ್ತೊಂದೆಡೆ ತುಮಕೂರು, ಕೋಲಾರದಲ್ಲೂ ಸಹ ರಸ್ತೆ ಅಪಘಾತದಲ್ಲಿ ಬೈಕ್ ಸವಾರರು ಸಾವನ್ನಪ್ಪಿದ್ದಾರೆ.

ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್​ಗೆ ಮತ್ತೊಂದು ಬಲಿ, ತುಮಕೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್
ಪ್ರಾತಿನಿಧಿಕ ಚಿತ್ರ
ಬಿ ಮೂರ್ತಿ, ನೆಲಮಂಗಲ
| Edited By: |

Updated on:Nov 14, 2024 | 9:04 PM

Share

ಬೆಂಗಳೂರು, (ನವೆಂಬರ್ 14): ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇಂದು(ನವೆಂಬರ್ 14) ಬೆಂಗಳೂರಿನಲ್ಲಿ ಮತ್ತೊಂದು ಹಿಟ್ ಆ್ಯಂಡ್ ರನ್ ಆಗಿದ್ದು, ಬೈಕ್ ಸವಾರ ಬಲಿಯಾಗಿದ್ದಾನೆ. ಇಂದು (ನವೆಂಬರ್ 14) ಬೆಂಗಳೂರಿನ 8ನೇ ಮೈಲಿ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ 25 ವರ್ಷದ ಯುವಕ ಮೃತಪಟ್ಟಿದ್ದಾನೆ. ಇದರಿಂದ ತುಮಕೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದೆ. ಇನ್ನು ಈ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ನು ಗುದ್ದಿಕೊಂಡು ಹೋಗಿರುವ ಅಪರಿಚಿತ ವಾಹನಕ್ಕಾಗಿ ಪೊಲೀಸರು ಶೋಧ ನಡೆಸಿದ್ದಾರೆ.

ದ್ವಿಚಕ್ರ ವಾಹನಕ್ಕೆ ಬಸ್​ ಡಿಕ್ಕಿ

ತುಮಕೂರು: ಮಧುಗಿರಿ ತಾಲೂಕಿನ ಕೊಡಗದಾಲ ಗ್ರಾಮದ‌ ಬಳಿ ಸರ್ಕಾರಿ ಬಸ್​ ಡಿಕ್ಕಿಯಾಗಿ ಬೈಕ್​ ಸವಾರ ಸಾವನ್ನಪ್ಪಿದ್ದಾನೆ. ಚಿಂತಾಮಣಿಯಿಂದ ಹಾವೇರಿಗೆ ತೆರಳುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಬಸ್, ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಕೊಡಗದಾಲ ಗ್ರಾಮದ‌ ಬಳಿ ಲೋಕೇಶ್ ತೆರಳುತ್ತಿದ್ದ ಬೈಕ್​ ಗುದ್ದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಸಂಬಂಧ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಂತ ಕಾರಿಗೆ ಬೈಕ್ ಡಿಕ್ಕಿ

ಕೋಲಾರ: ನಗರದ ಕಾರಂಜಿಕಟ್ಟೆ ಬಡಾವಣೆಯಲ್ಲಿ ಮನೆ ಮುಂದೆ ನಿಂತಿದ್ದ ಕಾರ್​ಗೆ ಬೈಕ್ ಡಿಕ್ಕಿಯಾಗಿ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ನಿಯಂತ್ರಣ ತಪ್ಪಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದು, ಬೈಕ್​​ ಸವಾರ ಯಶ್ವಂತ್(20) ಮೃತೊಟ್ಟಿದ್ದಾನೆ. ಕೋಲಾರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Published On - 9:03 pm, Thu, 14 November 24

Follow Us
ಬಿ ಮೂರ್ತಿ, ನೆಲಮಂಗಲ
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More