ಬಿಎಂಟಿಸಿ ಬಸ್​ಗೆ ಮತ್ತೊಂದು ಬಲಿ, ಎರಡು ದಿನದ ಅಂತರದಲ್ಲಿ ಎರಡು ಸಾವು

ಬೆಂಗಳೂರಿನ ಉತ್ತರಹಳ್ಳಿ ರಸ್ತೆಯ ಮಂತ್ರಿ ಆಲ್ಪೈನ್ ಅಪಾರ್ಟ್ಮೆಂಟ್ ಮುಂಭಾಗ ಬಿಎಂಟಿಸಿ ಬಸ್​ಗೆ ಬೈಕ್ ಸವಾರ ಬಲಿಯಾಗಿದ್ದಾನೆ.ಇಸರೊಂದಿಗೆ ಎರಡು ದಿನದ ಅಂತರದಲ್ಲಿ ಕಿಲ್ಲರ್ ಬಿಎಂಟಿಸಿಗೆ ( Bmtc) ಮತ್ತೊಂದು ಬಲಿಯಾದಂತಾಗಿದೆ.

ಬಿಎಂಟಿಸಿ ಬಸ್​ಗೆ ಮತ್ತೊಂದು ಬಲಿ, ಎರಡು ದಿನದ ಅಂತರದಲ್ಲಿ ಎರಡು ಸಾವು
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Jan 08, 2024 | 5:22 PM

ಬೆಂಗಳೂರು, (ಜನವರಿ 08): ಎರಡು ದಿನದ ಅಂತರದಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ( Bmtc) ಬಲಿಯಾಗಿದೆ. ಬಿಎಂಟಿಸಿ ಬಸ್‌ನಡಿ ಸಿಲುಕಿ ಯುವಕನೊರ್ವ ಮೃತಪಟ್ಟಿದ್ದಾನೆ. ತೇಜಸ್ (22) ಮೃತ ದುರ್ದೈವಿ. ಬೆಂಗಳೂರಿನ ಉತ್ತರಹಳ್ಳಿ ರಸ್ತೆಯ ಮಂತ್ರಿ ಆಲ್ಪೈನ್ ಅಪಾರ್ಟ್ಮೆಂಟ್ ಮುಂಭಾಗ ಈ ದುರ್ಘಟನೆ ನಡೆದಿದೆ. ಮೈಸೂರು ರಸ್ತೆಯಿಂದ ಉತ್ತರಹಳ್ಳಿ ‌ಕಡೆಗೆ ತೇಜಸ್‌ ಬೈಕ್‌ನಲ್ಲಿ‌ ಹೋಗುತ್ತಿದ್ದ. ಆ ವೇಳೆ ಎದುರಿಗೆ ಇದ್ದ ಬಸ್‌ ಅನ್ನು ಓವರ್ ಟೇಕ್ ಮಾಡಲು ಹೋಗಿದ್ದಾನೆ. ಆದರೆ ನಿಯಂತ್ರಣ ತಪ್ಪಿ ಬೈಕ್‌ನಿಂದ ಕೆಳ ಬಿದ್ದ ತೇಜಸ್ ಮೇಲೆ ಬಿಎಂಟಿಸಿ ಬಸ್ ಹರಿದಿದೆ. ಇದರಿಂದ ತೇಜಸ್‌ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೆ‌‌ ಮೃತಪಟ್ಟಿದ್ದಾನೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಬಿಎಂಟಿಸಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ವೋಲ್ವೋ ಬಸ್​ಗೆ ಬೈಕ್ ಸವಾರ ಬಲಿ

ಮೊನ್ನೆ ಬಿಎಂಟಿಸಿ ವೋಲ್ವೋ ಬಸ್‌ ಡಿಕ್ಕಿ

ಮೊನ್ನೇ ಜ.6ರಂದು ಮಾರತ್ತಹಳ್ಳಿಯ ವರ್ತೂರು ಮುಖ್ಯರಸ್ತೆಯಲ್ಲಿ ಬಿಎಂಟಿಸಿ ವೋಲ್ವೋ ಬಸ್‌. ಬೈಕ್​ಗೆ ಡಿಕ್ಕಿಯಾಗಿ ಹೊಡೆದಿತ್ತು. ಕುಂದಲಹಳ್ಳಿ ಜಂಕ್ಷನ್ ಕಡೆಯಿಂದ ಬೆಳ್ಳಂದೂರಿಗೆ ಬೈಕ್‌ ಸವಾರ ಎಳಂಗೋವನ್ ಸೆಂಕತ್ತವಲ್ (43) ತೆರಳುತಿದ್ದ, ಅದೇ ಮಾರ್ಗದಲ್ಲಿ ಬಿಎಂಟಿಸಿ ವೋಲ್ವೋ ಬಸ್ ಬರುತ್ತಿತ್ತು. ಈ ವೇಳೆ ವೋಲ್ವೋ ಬಸ್‌ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ಸವಾರ ಗಂಭೀರ ಗಾಯಗೊಂಡಿದ್ದಾರೆ. ಅಪಘಾತದಿಂದ ತಲೆ ಹಾಗೂ ಮುಖದ ಭಾಗಕ್ಕೆ ಬಲವಾದ ಗಾಯವಾಗಿದ್ದು, ಕೂಡಲೇ ಸ್ಥಳೀಯರು ಗಾಯಾಳನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದರು. ಆದರೆ ಆಸ್ಪತ್ರೆಗೆ ಸೇರುವ ಮೊದಲೇ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 5:19 pm, Mon, 8 January 24

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ