AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಮ ಸ್ವರೂಪಿಯಾದ ಬಿಎಂಟಿಸಿ ಬಸ್​​​​​ಗಳು: ಬೆಂಗಳೂರಿನಲ್ಲಿ ಮತ್ತೊಂದು ಅಪಘಾತ

Bengaluru News: ಬೆಂಗಳೂರಿನಲ್ಲಿ BMTC ಬಸ್​ಗಳ ಅಪಘಾತಗಳ ಸರಣಿ ಮುಂದುವರೆದಿದೆ. ನಿನ್ನೆ(ಜುಲೈ 04) ಕೆ.ಆರ್ ಸರ್ಕಲ್ ಬಳಿ ಎಡು ಬಿಎಂಟಿಸಿ (BMTC)ಬಸ್​​ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿದ್ದರು. ಈ ಘಟನೆ ಮಾಸುವ ಮುನ್ನೇ ನಗರದಲ್ಲಿ ಮತ್ತೊಂದು ಬಿಎಂಟಿಸಿ ಬಸ್ ಅಪಘಾತ ಸಂಭವಿಸಿದೆ. ಲಗ್ಗೆರೆ ಸೇತುವೆ ಸಮೀಪ ಎರಡು ಬಿಎಂಟಿಸಿ ಬಸ್‌ಗಳ ನಡುವೆ ಭೀಕರ ಡಿಕ್ಕಿಯಾಗಿದ್ದು, ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಯಮ ಸ್ವರೂಪಿಯಾದ ಬಿಎಂಟಿಸಿ ಬಸ್​​​​​ಗಳು: ಬೆಂಗಳೂರಿನಲ್ಲಿ ಮತ್ತೊಂದು ಅಪಘಾತ
Bmtc Buses
ಕಿರಣ್​ ಸೂರ್ಯ
| Edited By: |

Updated on: Jul 05, 2026 | 7:08 PM

Share

ಮುಖ್ಯಾಂಶಗಳು

  • ಬೆಂಗಳೂರಲ್ಲಿ ಮುಂದುವರಿದ BMTC ಬಸ್​ಗಳ ಅಪಘಾತ
  • ಲಗ್ಗೆರೆ ಬಳಿ 2 ಬಿಎಂಟಿಸಿ ಬಸ್​ ಡಿಕ್ಕಿ, ಮೂವರಿಗೆ ಗಾಯ
  • ಎಲೆಕ್ಟ್ರಿಕ್ ಬಸ್ ಮತ್ತು ಡಿಸೇಲ್ ಬಸ್ ನಡುವೆ ಡಿಕ್ಕಿ

ಬೆಂಗಳೂರು, (ಜುಲೈ 05): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಂದು ಮತ್ತೊಂದು ಬಿಎಂಟಿಸಿ (BMTC) ಬಸ್ ಅಪಘಾತ ಸಂಭವಿಸಿದೆ. ಲಗ್ಗೆರೆ  (Laggere ) ಸಮೀಪ, ಗೊರಗುಂಟೆಪಾಳ್ಯ ಕಡೆಗೆ ಹೋಗುವ ಮಾರ್ಗದಲ್ಲಿ ಎರಡು ಬಿಎಂಟಿಸಿ ಬಸ್‌ಗಳ ನಡುವೆ ಭೀಕರ ಡಿಕ್ಕಿಯಾಗಿದ್ದು, ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಿಎಂಟಿಸಿ ಡೀಸೆಲ್ ಬಸ್ ಮುಂದೆ ಚಲಿಸುತ್ತಿದ್ದ ಕಾರು ಚಾಲಕನೊಬ್ಬ ಹಠಾತ್ತನೆ ಬ್ರೇಕ್ ಹಾಕಿದ್ದಾನೆ. ಈ ವೇಳೆ ಬಸ್ ಚಾಲಕ ಕೂಡ ತಕ್ಷಣವೇ ಬ್ರೇಕ್ ತುಳಿದಿದ್ದಾನೆ. ಅದೇ ಸಮಯದಲ್ಲಿ ಹಿಂಬದಿಯಿಂದ ಓವರ್‌ಟೇಕ್ ಮಾಡಲು ವೇಗವಾಗಿ ಬಂದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್, ಮುಂಭಾಗದಲ್ಲಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ.

16ನೇ ಡಿಪೋ ಎಲೆಕ್ಟ್ರಿಕ್ ಬಸ್ (ದೀಪಾಂಜಲಿ ನಗರ ) 26ನೇ ಡಿಪೋಗೆ ಸೇರಿದ ಡಿಸೇಲ್ (ಯಶವಂತಪುರ) ಬಸ್ಸಿಗೆ ಡಿಕ್ಕಿ ಹೊಡೆದಿದೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಮತ್ತು ಸಹ ಪ್ರಯಾಣಿಕರು ತಕ್ಷಣವೇ ಕಾರ್ಯಪ್ರವೃತ್ತರಾಗಿ, ಗಾಯಾಳುಗಳನ್ನು ಹತ್ತಿರದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಬಿಎಂಟಿಸಿಯಲ್ಲ ಸಾಕ್ಷಾತ್​​ ಯಮ!: 17 ವರ್ಷಗಳಲ್ಲಿ 1,142 ಜನರ ಬಲಿ ಪಡೆದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್​​ಗಳು!

ಕೆ.ಆರ್ ಸರ್ಕಲ್ ಬಳಿಯೂ ನಡೆದಿತ್ತು ಅಪಘಾತ

ಇನ್ನು ನಿನ್ನೆ (ಜುಲೈ 04) ಅಷ್ಟೇ ಬೆಂಗಳೂರಿನ ಕೆ.ಆರ್ ಸರ್ಕಲ್ (KR Circle) ಬಳಿ ಎರಡು ಬಿಎಂಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ಬಸ್ ಚಾಲಕನ (Driver) ಸ್ಥಿತಿ ಚಿಂತಾಜನಕವಾಗಿದೆ. 13ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಘಟನೆಯಲ್ಲಿ ಯುವತಿಯೊಬ್ಬರು ಬಸ್‌ನ ಒಳಗಡೆ ಸಿಲುಕಿಕೊಂಡು ಗೋಳಾಡಿದ್ದಯ, ಗಾಯಗೊಂಡವರನ್ನು ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

EV ಬಸ್‌ಗಳಿಂದ ಸಾಲು ಸಾಲು ಅಪಘಾತ

ಇವಿ ಬಸ್ ಚಾಲಕರ ಯಡವಟ್ಟಿಗೆ ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಹಿಂದಿನ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಕೇಂದ್ರಕ್ಕೆ ಪತ್ರ ಬರೆದಿದ್ದರು. ಇವಿ ಬಸ್ ಅವಾಂತರದ ಬಗ್ಗೆ ದಾಖಲೆ ಸಮೇತ ಕೇಂದ್ರದ ಗಮನಕ್ಕೆ ತಂದಿದ್ದರು. ಆದರೂ ಯಾವುದೇ ಪ್ರಯೋಜನವಾಗಿಲ್ಲ. ಈಗ ಸಾರಿಗೆ ಇಲಾಖೆ, ಸದ್ಯಕ್ಕೆ ಹೊಸ ಇವಿ ಬಸ್ ಖರೀದಿ ಬೇಡ ಎಂಬ ನಿರ್ಧಾರಕ್ಕೆ ಸರ್ಕಾರ ಬಂದಿದೆ. ಪದೇ ಪದೇ ಮರುಕಳಿಸುತ್ತಿರೋ ಇವಿ ಬಸ್‌ ಅಪಘಾತದ ಬಗ್ಗೆ ಅಧ್ಯಯನಕ್ಕೆ ಸಾರಿಗೆ ಇಲಾಖೆ ಮುಂದಾಗಿದೆ. ಸಾರಿಗೆ ಸಚಿವರ ಸೂಚನೆ ಮೇರೆಗೆ ನಗರದ ಇವಿ ಬಸ್ ಕಾರ್ಯಕ್ಷಮತೆ ಅಧ್ಯಯನ ನಡೆಸಲಿದೆ. ಈ ಬಗ್ಗೆ ಸಾರಿಗೆ ಇಲಾಖೆ ಕಾರ್ಯದರ್ಶಿಗೆ ಸೂಚನೆ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ
ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್!
ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್!
10 ವರ್ಷ ಜೈಲು, 10 ಕೋಟಿ ರೂ ದಂಡ ಎಂದ ಸಚಿವ ಜೋಶಿ
10 ವರ್ಷ ಜೈಲು, 10 ಕೋಟಿ ರೂ ದಂಡ ಎಂದ ಸಚಿವ ಜೋಶಿ
ದೆಹಲಿಯಲ್ಲಿ ಸಿಜೆಪಿ ವಕ್ತಾರರ ಜೊತೆ ಕೇಂದ್ರ ಸರ್ಕಾರದ 3ನೇ ಸುತ್ತಿನ ಮಾತುಕತೆ
ದೆಹಲಿಯಲ್ಲಿ ಸಿಜೆಪಿ ವಕ್ತಾರರ ಜೊತೆ ಕೇಂದ್ರ ಸರ್ಕಾರದ 3ನೇ ಸುತ್ತಿನ ಮಾತುಕತೆ
ಪ್ರಧಾನ್ ರಾಜೀನಾಮೆ ಕ್ರೆಡಿಟ್ ಬಗ್ಗೆ ಬಿಕೆ ಹರಿಪ್ರಸಾದ್ ಹೇಳಿದ್ದಿಷ್ಟು
ಪ್ರಧಾನ್ ರಾಜೀನಾಮೆ ಕ್ರೆಡಿಟ್ ಬಗ್ಗೆ ಬಿಕೆ ಹರಿಪ್ರಸಾದ್ ಹೇಳಿದ್ದಿಷ್ಟು
ಪ್ರಧಾನ್ ರಾಜೀನಾಮೆ ನೀಡಿದ್ರೂ ಸಿಜೆಪಿಗಿಲ್ಲ ಸಮಾಧಾನ
ಪ್ರಧಾನ್ ರಾಜೀನಾಮೆ ನೀಡಿದ್ರೂ ಸಿಜೆಪಿಗಿಲ್ಲ ಸಮಾಧಾನ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಹಿನ್ನೆಲೆ CJP ಬೆಂಬಲಿಗರ ಸಂಭ್ರಮಾಚರಣೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಹಿನ್ನೆಲೆ CJP ಬೆಂಬಲಿಗರ ಸಂಭ್ರಮಾಚರಣೆ