AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyber Crime: ಕರ್ನಾಟಕ ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿ ಹೆಸರಿನಲ್ಲಿ ಆನ್​ಲೈನ್ ವಂಚನೆ

ಸಿಜೆ ಹೆಸರಲ್ಲಿ ಅಧಿಕಾರಿಯ ವಾಟ್ಸಾಪ್​ಗೆ 10 ಸಾವಿರ ಮೌಲ್ಯದ ಒಟ್ಟು 9 ಅಮೆಜಾನ್​ ಗಿಫ್ಟ್​​ ವೋಚರ್ ಕಳಿಸಿ ವಂಚನೆ ಮಾಡಲಾಗಿದೆ. ಆ.6ರ ಬೆಳಗ್ಗೆ 7.30ಕ್ಕೆ ಅಧಿಕಾರಿಯ ವಾಟ್ಸಾಪ್​ಗೆ ಸಂದೇಶ ರವಾನೆ ಮಾಡಲಾಗಿದೆ.

Cyber Crime: ಕರ್ನಾಟಕ ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿ ಹೆಸರಿನಲ್ಲಿ ಆನ್​ಲೈನ್ ವಂಚನೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 11, 2022 | 11:37 AM

Share

ಬೆಂಗಳೂರು: ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಹೆಸರಿನಲ್ಲಿ ಹೈಕೋರ್ಟ್​ ಸಾರ್ವಜನಿಕ ಸಂಪರ್ಕ ಅಧಿಕಾರಿಗೆ ವಂಚನೆ (Fraud) ಮಾಡಿರುವಂತಹ ಘಟನೆ ಬೆಳಕಿ ಬಂದಿದೆ. ಸಿಜೆ ಹೆಸರಲ್ಲಿ ಅಧಿಕಾರಿಯ ವಾಟ್ಸಾಪ್​ಗೆ 10 ಸಾವಿರ ಮೌಲ್ಯದ ಒಟ್ಟು 9 ಅಮೆಜಾನ್​ ಗಿಫ್ಟ್​​ ವೋಚರ್ ಕಳಿಸಿ ವಂಚನೆ ಮಾಡಲಾಗಿದೆ. ಆ.6ರ ಬೆಳಗ್ಗೆ 7.30ಕ್ಕೆ ಅಧಿಕಾರಿಯ ವಾಟ್ಸಾಪ್​ಗೆ ಸಂದೇಶ ರವಾನೆ ಮಾಡಲಾಗಿದೆ. ಈ ಬಗ್ಗೆ ಬೆಂಗಳೂರಿನ ಸೈಬರ್ ಕ್ರೈಂ ಠಾಣೆಗೆ ಪಿಆರ್​ಒ ದೂರು ನೀಡಿದ್ದು, ದೂರಿನ ಮೇರೆಗೆ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ. ಆರೋಪಿ ಪತ್ತೆಗೆ ಸೈಬರ್ ಕ್ರೈಂ ಠಾಣೆ ಪೊಲೀಸರು ಮುಂದಾಗಿದ್ದಾರೆ.

ಇದನ್ನೂ ಓದಿ: IAS​, IPS ಅಧಿಕಾರಿಗಳ ಹೆಸರು ಹೇಳಿ 59 ಲಕ್ಷ ವಂಚನೆ: ಆರೋಪಿ ವಿರುದ್ಧ 420 ಕೇಸ್ ದಾಖಲು

ಗವರ್ನರ್ ಹೆಸರಲ್ಲೂ ಚೀಟಿಂಗ್:

ವಿವಿ ಸಿಂಡಿಕೇಟ್ ಸದಸ್ಯ ಮಾಡುವುದಾಗಿ ನಂಬಿಸಿ ರಾಜ್ಯಪಾಲ (Governor) ಥಾವರ್​ಚಂದ್ ಗೆಹ್ಲೋಟ್​ ಹೆಸರಿನಲ್ಲಿ ವಂಚನೆ ಮಾಡಿದ್ದ, ಬಳ್ಳಾರಿ ಮೂಲದ ಸದರುಲ್ಲಾ ಖಾನ್​ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಗವರ್ನರ್ ಅಧೀನ ಕಾರ್ಯದರ್ಶಿ ಎಂದು ಹೇಳಿಕೊಂಡಿದ್ದು, ಎಲ್ಲಾ ವಿವಿಗಳಿಗೆ ಸೆನೆಟ್ ಸದಸ್ಯ ಎಂದು ಆಸಾಮಿ ಹೇಳಿಕೊಂಡಿದ್ದ. ನಕಲಿ ಗುರುತಿನ ಚೀಟಿ ಮಾಡಿಕೊಂಡು ಆರೋಪಿ ಓಡಾಡುತ್ತಿದ್ದ. ಇನ್ನೂ ರಾಜ್ಯಪಾಲರ ಹೆಸರು ಹೇಳಿದರೆ ಜನ ಬೇಗ ನಂಬುತ್ತಾರೆ. ರಾಜ್ಯಪಾಲರ ಕಚೇರಿ ಹೆಸರು ಬಳಸಿಕೊಂಡು ವಂಚಿಸುತ್ತಿದ್ದ ವಿಚಾರ ತಿಳಿದು ರಾಜ್ಯಪಾಲರ ಕಚೇರಿ ಸಿಬ್ಬಂದಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಯಾರು ತನ್ನ ಮೇಲೆ ಅನುಮಾನ ಪಡೋದಿಲ್ಲ ಎಂದು ರಾಜ್ಯಪಾಲರ ಹೆಸರು ಬಳಕೆ ಮಾಡಿದ್ದು, ಗವರ್ನರ್ ಕಚೇರಿಯಿಂದ ಎಂದು ಕೆಲವು ಗಣ್ಯ ವ್ಯಕ್ತಿಗಳಿಗು ಕರೆ ಮಾಡಿರುವುದು ಬೆಳಕಿಗೆ ಬಂದಿದೆ. ನಿಮ್ಮವರನ್ನ ಸಿಂಡಿಕೇಟ್ ಸದಸ್ಯರಾಗಿ ಮಾಡುತ್ತೇನೆ ಎಂದು ಆರೋಪಿ ಕರೆ ಮಾಡಿದ್ದ. ಈ ಬಗ್ಗೆ ಆರೋಪಿ ಸದರುಲ್ಲಾ ಖಾನ್ ವಶಕ್ಕೆ ಪಡೆದು ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಸರ್ಕಾರಿ ಕಚೇರಿಗಳಲ್ಲಿ ಲಂಚದ ಪಿಡುಗು: 

ಸರ್ಕಾರಿ ಕಚೇರಿಗಳಲ್ಲಿ ಕೆಲಸಗಳಿಗೆ ಲಂಚ ಪಡೆಯುವುದು ನಿಯಮವಾಗಿ ಹೋಗಿದೆ. ಇದು ಕ್ಯಾನ್ಸರ್‌ಗಿಂತ ಗಂಭೀರವಾಗಿದೆ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಜಾಮೀನು ಕೋರಿ ಹಿಂದಿನ ಡಿಸಿ ಜೆ. ಮಂಜುನಾಥ್‌ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ತೀರ್ಪಿನಲ್ಲಿ ಈ ಅಂಶಗಳನ್ನು ನ್ಯಾಯಮೂರ್ತಿ ಕೆ.ನಟರಾಜನ್ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಉಜ್ಜಯಿನಿ ದೇವಸ್ಥಾನದಲ್ಲಿ ಬ್ಯಾರಿಕೇಡ್ ಮುರಿದು, ತೇಜಸ್ವಿ ಸೂರ್ಯ ಬೆಂಬಲಿಗರಿಂದ ಸೆಕ್ಯುರಿಟಿಗಳ ಮೇಲೆ ಹಲ್ಲೆ

ಲಂಚವಿಲ್ಲದೆ ಫೈಲ್‌ ಮುಂದೆ ಹೋಗಲ್ಲ. ಕಂದಾಯ ಇಲಾಖೆಯಲ್ಲಿ ಮೇಲಿನ ಶ್ರೇಣಿಯಿಂದ ಕೆಳ ಹಂತದವರೆಗೂ ಭ್ರಷ್ಟಾಚಾರವಿದೆ. ಸರ್ಕಾರಿ ಕಚೇರಿಗಳಲ್ಲಿನ ಅಧಿಕೃತ ಕೆಲಸಗಳಿಗೂ ಲಂಚ ನಿಯಮವಾಗಿದೆ. ಮೊದಲಿಗೆ ಅರ್ಜಿದಾರ ಮಂಜುನಾಥ್‌ ವಿರುದ್ಧ ಕ್ರಮ ಕೈಗೊಳ್ಳದೆ ಸರ್ಕಾರ ವರ್ಗಾಯಿಸಿದೆ. ಸದ್ಯ ಜಾಮೀನು ಅರ್ಜಿ ವಜಾಗೊಳಿಸಿ ಹೈಕೋರ್ಟ್ ತೀರ್ಪು ನೀಡಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 11:22 am, Thu, 11 August 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್