AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ರಾಜ್ಯದಲ್ಲಿ ಆನ್‌ಲೈನ್ ಗೇಮಿಂಗ್ ಬ್ಯಾನ್: ಸರ್ಕಾರದ ವಿರುದ್ಧ ರಿಟ್ ಹಾಕಿದ ಗೇಮಿಂಗ್ ಕಂಪನಿಗಳು

Online Gambling Ban in Karnataka: ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹಲವು ಕಂಪನಿಗಳು ರಿಟ್ ಸಲ್ಲಿಸಿವೆ. ಕ್ರಿಮಿನಲ್‌ ಕೇಸ್ ಭೀತಿ ಎದುರಿಸುತ್ತಿದ್ದ ಕಂಪನಿಗಳಿಂದ ರಿಟ್ ಅರ್ಜಿಗೆ ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ಕೋರಿವೆ.

ಕರ್ನಾಟಕ ರಾಜ್ಯದಲ್ಲಿ ಆನ್‌ಲೈನ್ ಗೇಮಿಂಗ್ ಬ್ಯಾನ್: ಸರ್ಕಾರದ ವಿರುದ್ಧ ರಿಟ್ ಹಾಕಿದ ಗೇಮಿಂಗ್ ಕಂಪನಿಗಳು
ಕರ್ನಾಟಕ ಹೈಕೋರ್ಟ್​
TV9 Web
| Edited By: |

Updated on:Oct 22, 2021 | 1:29 PM

Share

ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್ ಗೇಮಿಂಗ್ ಬ್ಯಾನ್ ಹಿನ್ನೆಲೆಯಲ್ಲಿ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹಲವು ಕಂಪನಿಗಳು ರಿಟ್ ಸಲ್ಲಿಸಿವೆ. ಕ್ರಿಮಿನಲ್‌ ಕೇಸ್ ಭೀತಿ ಎದುರಿಸುತ್ತಿದ್ದ ಕಂಪನಿಗಳಿಂದ ರಿಟ್ ಅರ್ಜಿಗೆ ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ಕೋರಿವೆ. ಈ ಬಗ್ಗೆ ಹೈಕೋರ್ಟ್‌ಗೆ ಎಜಿ ಪ್ರಭುಲಿಂಗ್ ನಾವದಗಿ ಮನವಿ ಸಲ್ಲಿಸಿದ್ದು ಮಧ್ಯಂತರ ಆದೇಶ ಸಂಬಂಧ ಅ.27ಕ್ಕೆ‌ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. 

ರಾಜ್ಯದಲ್ಲಿ ಎಲ್ಲಾ ಬಗೆಯ ಆನ್ ಲೈನ್ ಗೇಮಿಂಗ್ ಗ್ಯಾಂಬ್ಲಿಂಗ್ ನಿಷೇಧಿಸುವ ರಾಜ್ಯ ಸರ್ಕಾರ ಆದೇಶವನ್ನು ಇದೀಗ ಕಂಪೆನಿಗಳು ಹೈಕೋರ್ಟ್ ನಲ್ಲಿ ಪ್ರಶ್ನಿಸಿವೆ. ಆಲ್‌ ಇಂಡಿಯಾ ಗೇಮಿಂಗ್ ಫೆಡರೇಷನ್, ಗ್ಯಾಲಕ್ಟಸ್ ಪೊನ್ ವೇರ್ ಟೆಕ್ನಾಲಜೀಸ್ ಸೇರಿದಂತೆ ಹಲವು ಕಂಪೆನಿಗಳು ಅರ್ಜಿ ಸಲ್ಲಿಸಿದ್ದು, ರಾಜ್ಯ ಸರ್ಕಾರದ ನಿರ್ಧಾರ ಸಂವಿಧಾನ ಬಾಹಿರ ಎಂದು ವಾದಿಸಿವೆ. ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಆದೇಶ ಹೊರಡಿಸಿದ್ದು ಇದರಿಂದ ತುಂಬಾ ನಷ್ಟವಾಗಿದೆ. ಅನಗತ್ಯವಾಗಿ ಪೊಲೀಸ್ ಕೇಸ್ ಎದುರಿಸುವಂತಾಗಿದೆ.‌ ತನಿಖೆಯ ನೆಪದಲ್ಲಿ ಪೊಲೀಸರಿಂದ ತೊಂದರೆಯಾಗಬಾರದು.‌ ಹೀಗಾಗಿ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಬೇಕೆಂದೂ ಮನವಿ ಮಾಡಲಾಗಿದೆ.

ರಾಜ್ಯ ಸರ್ಕಾರಕ್ಕೆ ಆನ್ ಲೈನ್ ಗೇಮಿಂಗ್ ಮತ್ತು ಆನ್ ಲೈನ್ ಗ್ಯಾಂಬ್ಲಿಂಗ್ ಅನ್ನು ನಿಷೇಧಿಸುವ ಅಧಿಕಾರ ಇಲ್ಲ. ಹೀಗಾಗಿ ಸರ್ಕಾರದ ಆದೇಶ ರದ್ದುಪಡಿಸುವಂತೆ ಕಂಪನಿಗಳ ಪರ ಹಿರಿಯ ವಕೀಲ ಅರವಿಂದ್ ದಾತಾರ್, ಸಜನ್ ಪೂವಯ್ಯ, ಡಿಎಲ್ ಎನ್ ರಾವ್ ಸೇರಿ ಹಲವರು ವಾದ ಮಂಡಿಸಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರದ ಪರ ಎಜಿ ಪ್ರಭುಲಿಂಗ್ ನಾವದಗಿ ಆಕ್ಷೇಪ ಎತ್ತಿದ್ದು, ರಿಟ್ ಅರ್ಜಿಗಳಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ವಿವರವಾದ ವಿಚಾರಣೆ ಅಗತ್ಯವಿರುವುದರಿಂದ ಹೈಕೋರ್ಟ್ ವಿಚಾರಣೆಯನ್ನು ಅ. 27 ಕ್ಕೆ ಮುಂದೂಡಿದೆ. ಕಂಪೆನಿಗಳು ರಾಜ್ಯ ಸರ್ಕಾರದ ಆನ್ ಲೈನ್ ಗೇಮಿಂಗ್ ನಿರ್ಬಂಧ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆಯೂ ಮಧ್ಯಂತರ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಗಳ ಬಗ್ಗೆಯೂ ಹೈಕೋರ್ಟ್ ಅ.27 ರಂದು ತೀರ್ಮಾನಿಸಲಿದೆ.

ರಾಜ್ಯದಲ್ಲಿ ಆನ್‌ಲೈನ್ ಗೇಮಿಂಗ್ ಬ್ಯಾನ್ ಮಾಡಿದ ಸರ್ಕಾರ ಆನ್‌ಲೈನ್ ಜೂಜುಕೋರರಿಗೆ ಸರ್ಕಾರ ಶಾಕ್ ಕೊಟ್ಟಿದೆ. ರಾಜ್ಯದಲ್ಲಿ ಆನ್‌ಲೈನ್ ಗ್ಯಾಂಬ್ಲಿಂಗ್ (Online gambling)​ ಅನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಡ್ರೀಮ್ ಇಲೆವೆನ್ (Dream 11), ಪೇ ಟೀಂ ಫಸ್ಟ್ (PayTM first), ಗೇಮ್​ಜಿ (Gamezy) ಆ್ಯಪ್ ಸೇರಿದಂತೆ ಹಲವು ಫ್ಯಾಂಟಸಿ ಗೇಮ್ (Fantasy gamess) ಆಪ್​ಗಳನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚೆಗಷ್ಟೇ ಸರ್ಕಾರ ಆನ್‌ಲೈನ್ ಗೇಮ್‌, ಆನ್‌ಲೈನ್ ಜೂಜು, ಬೆಟ್ಟಿಂಗ್‌ಗೆ ನಿಷೇಧ ಹೇರಿತ್ತು. ಇದೀಗ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತಂದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ ಆನ್‌ಲೈನ್ ಜೂಜು ನಿಷೇಧದ ಆದೇಶ ಅಧಿಕೃತವಾಗಿ ಹೊರಬಿದ್ದಿದೆ.

ಇದನ್ನೂ ಓದಿ: ಆನ್​ಲೈನ್ ಜೂಜು ನಿಯಂತ್ರಣಕ್ಕೆ ಸಂಬಂಧಿಸಿ ಹೈಕೋರ್ಟ್​ನಲ್ಲಿ ಪಿಐಎಲ್ ವಿಚಾರಣೆ

Published On - 1:04 pm, Fri, 22 October 21

ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?