AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯೋತ್ಸವ ಪ್ರಶಸ್ತಿ ನಾಮನಿರ್ದೇಶನಕ್ಕೆ ಆನ್​ಲೈನ್​ ಮೂಲಕ ಆಹ್ವಾನ; ಇಲ್ಲಿದೆ ಮಾಹಿತಿ

ಕಳೆದ ವರ್ಷ ವಿವಿಧ ಕ್ಷೇತ್ರಗಳಲ್ಲಿ ಎಲೆಮರೆ ಕಾಯಿಯಂತೆ ಸಾಧನೆ ಮಾಡಿದ 67 ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗಿತ್ತು. ಅದರಂತೆ ಈ ಬಾರಿ ಕೂಡ ಸಾಧಕರ ಪ್ರಶಸ್ತಿಗೆ ನಾಮ ನಿರ್ದೇಶನ ಮಾಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಹ್ವಾನಿಸಲಾಗಿದೆ.

ರಾಜ್ಯೋತ್ಸವ ಪ್ರಶಸ್ತಿ ನಾಮನಿರ್ದೇಶನಕ್ಕೆ ಆನ್​ಲೈನ್​ ಮೂಲಕ ಆಹ್ವಾನ; ಇಲ್ಲಿದೆ ಮಾಹಿತಿ
ಕನ್ನಡ ಬಾವುಟ
TV9 Web
| Edited By: |

Updated on:Sep 30, 2023 | 9:17 PM

Share

ಬೆಂಗಳೂರು, ಸೆ.30: ರಾಜ್ಯ ಸರ್ಕಾರದ ವತಿಯಿಂದ ಈ ಬಾರಿ 68 ನೇ ಕನ್ನಡ ರಾಜ್ಯೋತ್ಸವ(Kannada Rajyotsava) ಆಚರಣೆಯನ್ನು ಆಚರಿಸುತ್ತಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ. ಈ ಹಿನ್ನಲೆ  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಸಾಧಕರ ಹೆಸರುಗಳನ್ನು ಸಾರ್ವಜನಿಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ಅ.01 ರಿಂದ ಅ. 15 ರವರೆಗೆ ನಾಮನಿರ್ದೇಶನ ಮಾಡಬಹುದಾಗಿದೆ.

ಸೇವಾ ಸಿಂಧು ಪೋರ್ಟಲ್​ ಮೂಲಕ ನಾಮನಿರ್ದೇಶನಕ್ಕೆ ಅವಕಾಶ

ಹೌದು, ಈ ಬಾರಿ ಕೂಡ ಸಾಧಕರ ಪ್ರಶಸ್ತಿಗೆ ನಾಮ ನಿರ್ದೇಶನ ಮಾಡಲು ಸೇವಾ ಸಿಂಧು ಪೋರ್ಟಲ್‌ನ ವೆಬ್‌ಸೈಟ್‌  https://sevasindhu.Karnataka.gov.in ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ.

ರಾಜ್ಯೋತ್ಸವ ಪ್ರಶಸ್ತಿಗೆ ಪುರಸ್ಕೃತರನ್ನು ಆಯ್ಕೆ ಮಾಡಲು ಸಲಹಾ ಸಮಿತಿ ರಚನೆ

2023 ರ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪುರಸ್ಕೃತರನ್ನು ಆಯ್ಕೆ ಮಾಡಲು ಸಲಹಾ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ಸರ್ಕಾರದ ಸಚಿವಾಲಯವು ಆದೇಶ ಹೊರಡಿಸಿದೆ. ಸಮಿತಿಯ ಸದಸ್ಯರ ಹೆಸರು ಇಲ್ಲಿದೆ. ಅಧ್ಯಕ್ಷರಾಗಿ ಮಾನ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವರು, ಸದಸ್ಯರಾಗಿ ಸರ್ಕಾರದ  ಕಾರ್ಯದರ್ಶಿ  ಕನ್ನಡ ಮತ್ತು ಸಂಸ್ಕೃತಿ ಇಲಾಖೆ,  ಪ್ರೊ. ಜಾಣಗೆರೆ ವೆಂಕಟರಾಮಯ್ಯ, ಡಾ. ಹೆಚ್.ಎಲ್. ಪುಷ್ಪ , ಡಾ. ವೀರಣ, ದಂಡೆ, ಡಾ. ಮೂಡಾಕೂಡು ಚಿನ್ನಸ್ವಾಮಿ, ಶ್ರೀ ಅಲ್ಲಮಪುಭು ಬೆಟ್ಟದೂರ, ಶ್ರೀ ಕಾ.ತ. ಚಿಕ್ಕಣ, ಡಾ. ಸಿ.ಆರ್. ಚಂದ್ರಶೇಖ‌, ಶ್ರೀ ಪಿಂಡಿಪಾವನಹಳ್ಳಿ ಮುನಿವೆಂಕಟಪ್ಪ, ಡಾ. ಕೃಷ್ಣಮೂರ್ತಿ, ಹನೂರು, ಶ್ರೀ ಟಾಕಪ್ಪ ಕಣ್ಣೂರು,  ಶ್ರೀ ಪಿಚ್ಚಳ್ಳಿ ಶ್ರೀನಿವಾಸ್‌, ಡಾ. ವಿಠಲ್ ಐ. ಬೆಣಗಿ, ನಿವೃತ್ತ ಉಪ ಕುಲಪತಿಗಳು, ಡಾ. ಸಣ್ಣರಾಮು, ಶ್ರೀ ವೆಂಕಟರಮಣಯ್ಯ, ಡಾ. ಎಮ್.ಎಸ್. ಮೂರ್ತಿ, ಡಾ. ಗೀತಾ, ಶಿವಮೊಗ್ಗ, ಡಾ. ವಿಠಲ್ ಐ. ಬೆಣಗಿ, ನಿವೃತ್ತ ಉಪ ಕುಲಪತಿಗಳು, ಡಾ. ಸಣ್ಣರಾಮು, ಶ್ರೀ ವೆಂಕಟರಮಣಯ್ಯ,ಡಾ. ಜಯದೇವಿ ಜಂಗಮ ಶೆಟ್ಟಿ, ಶ್ರೀ ಐಕೋಡಿ ಗೋವಿಂದಪ್ಪ, ಶ್ರೀ ಸಾಧುಕೋಕಿಲ, ಶ್ರೀಮತಿ ರೀತು ಅಬ್ರಹಾಂ ಶ್ರೀಮತಿ ಸುಕನ್ಯಾ ಪುಭಾಕ‌, ಶ್ರೀ ಫಯಾಜ್ ಖಾನ್,  ಶ್ರೀ ಹೃಷಿಕೇಶ್ ಬಹದ್ದೂರ್ ದೇಸಾಯಿ, ಶ್ರೀ ನರಸಿಂಹಲು ವಡವಾಟಿ, ಶ್ರೀ ಡಿ.ಎನ್.ನರಸಿಂಹರಾಜು, ನಿವೃತ್ತ ಐ.ಎ.ಎಸ್. ಅಧಿಕಾರಿ, ಶ್ರೀ ಪುರುಷೋತ್ತಮ ಬಿಳಿಮಲೆ, ಶ್ರೀ ಚನ್ನಬಸವಣ್ಯ ಪ್ರಕಾಶಕರು, ಶ್ರೀ ಶೈಲೇಶ್ ಚಂದ್ರಗುಪ್ತ, ಶ್ರೀ ಜೆ. ಲೋಕೇಶ್ ಸೇರಿ ಒಟ್ಟು 39 ಜನರನ್ನು ಆಯ್ಕೆ ಮಾಡಲಾಗಿದೆ.

2023- ಅಧಿಸೂಚನೆ (2)

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:31 pm, Sat, 30 September 23

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ