AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಪರಿಸರ ಸ್ನೇಹಿ ಪಟಾಕಿಗೆ ಮಾತ್ರ ಅವಕಾಶ: ಮಾಲಿನ್ಯ ನಿಯಂತ್ರಣ ಮಂಡಳಿ

ಈ ವರ್ಷವು ಹಸಿರು ಪಟಾಕಿಯನ್ನಷ್ಟೇ ಇಡುವುದಕ್ಕೆ ಅವಕಾಶ ಕಲ್ಪಿಸಿದ್ದು, ಒಂದು ವೇಳೆ ಹಸಿರು ಪಟಾಕಿಯನ್ನ ಹೊರೆತು ಪಡಿಸಿ ಬೇರೆ ಪಟಾಕಿ ಇಡುವುದು ಕಂಡುಬಂದರೆ ಮುಲಾಜಿಲ್ಲದೇ ಸೀಜ್ ಮಾಡಲು ಸೂಚನೆ ನೀಡಲಾಗಿದೆ.

ಕರ್ನಾಟಕದಲ್ಲಿ ಪರಿಸರ ಸ್ನೇಹಿ ಪಟಾಕಿಗೆ ಮಾತ್ರ ಅವಕಾಶ: ಮಾಲಿನ್ಯ ನಿಯಂತ್ರಣ ಮಂಡಳಿ
ಪಟಾಕಿ (ಸಂಗ್ರಹ ಚಿತ್ರ)
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Oct 17, 2022 | 3:49 PM

Share

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆ ಮಾಲಿನ್ಯ ಹೆಚ್ಚಾಗದಂತೆ ಪರಿಸರ ಮಾಲಿನ್ಯ ಮಂಡಳಿಯಿಂದ ಅಗತ್ಯ ಕ್ರಮಕ್ಕೆ ಮುಂದಾಗಿದೆ. ಈ ವರ್ಷವು ಹಸಿರು ಪಟಾಕಿ (Green crackers) ಯನ್ನಷ್ಟೇ ಇಡುವುದಕ್ಕೆ ಅವಕಾಶ ಕಲ್ಪಿಸಿದ್ದು, ಒಂದು ವೇಳೆ ಹಸಿರು ಪಟಾಕಿಯನ್ನ ಹೊರೆತು ಪಡಿಸಿ ಬೇರೆ ಪಟಾಕಿ ಇಡುವುದು ಕಂಡುಬಂದರೆ ಮುಲಾಜಿಲ್ಲದೇ ಸೀಜ್ ಮಾಡುವಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ಡಿಸಿಗಳಿಗೆ, ಪೋಲಿಸ್ ಇಲಾಖೆ, ಅಗ್ನಿ ಶಾಮಾಕ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಬಿಬಿಎಂಪಿಗೆ ಸೂಚನೆ ನೀಡಲಾಗಿದೆ. ರಾತ್ರಿ 8 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಮಾತ್ರ ಪಾಟಾಕಿ ಹೊಡೆಯಲು ಅವಕಾಶ. ಪರಿಸರ ಸ್ನೇಹಿ ಪಾಟಾಕಿಗಳನ್ನ ಹೊಡೆಯುವಂತೆ ಸಾರ್ವಜನಿಕರಲ್ಲಿ ಜಾಗೃತಿ‌ ಮೂಡಿಸಬೇಕು. ದೀಪಾವಳಿ ಹಬ್ಬಕ್ಕೂ ಮುಂಚೆ ಹಾಗೂ ನಂತರ ರಾಜಾಧಾನಿ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಎಷ್ಟೇಷ್ಟು ವಾಯುಮಾಲಿನ್ಯ ಹಾಗೂ ಶಬ್ದಮಾಲಿನ್ಯ ಆಗಲಿದೆ ಎನ್ನುವುದನ್ನ ಪತ್ತೆ ಮಾಡಲು ಮಾಪನ ಅಳವಡಿಕೆ ಮಾಡಲಾಗಿದೆ.

ಮಕ್ಕಳಿಗೆ ಪಟಾಕಿ ಕುರಿತು ಜಾಗೃತಿ ಮೂಡಿಸಲು ಶಿಕ್ಷಣ ಇಲಾಖೆಯಿಂದ ವಿಶೇಷ ಕಾರ್ಯಕ್ರಮ ಮಾಡಲಾಗುವುದು. ಪಟಾಕಿ ಸ್ಟಾಲ್​​ಗಳ ಮೇಲೆ ಹದ್ದಿನ ಕಣ್ಣಿಡಲು ಪೋಲಿಸ್ ಇಲಾಖೆಯಗೂ ಸೂಚನೆ ನೀಡಲಾಗಿದೆ. ಪಾಟಾಕಿಯಿಂದಾಗುವ ತ್ಯಾಜ್ಯವನ್ನ ಹೊರಹಾಕಲು ಘನತ್ಯಾಜ್ಯ ವಾಹನಗಳ ನೇಮಕಕ್ಕೆ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ. ಪಟಾಕಿಗಳಿಂದಾಗುವ ಹಾನಿಯನ್ನ ತಪ್ಪಿಸಲು ಅಗ್ನಿಶಾಮಕ ಇಲಾಖೆಯೊಂದಿಗೂ ಚರ್ಚೆ ಮಾಡಿದ್ದು, ವಾಯುಮಾಲಿನ್ಯ ಹೆಚ್ಚಾಗದಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತಿದೆ.

ಹಸಿರು ಪಟಾಕಿ ಎಂದರೇನು? 

ಕಡಿಮೆ ಬೆಳಕು ಮತ್ತು ಶಬ್ದವನ್ನು ಹೊರ ಹಾಕುವ ಮತ್ತು ಸಿಡಿದ ನಂತರ ನೈಟ್ರೋಜನ್, ಆಕ್ಸೈಡ್​, ಸಲ್ಫರ್ ಡೈ ಆಕ್ಸೈಡ್ ಹೊರಚಲ್ಲುವ ಪಟಾಕಿಗಳನ್ನು ಹಸಿರು ಪಟಾಕಿ ಎಂದು ಕರೆಯುತ್ತಾರೆ. ಕೌನ್ಸಿಲ್ ಫಾರ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್ಐಆರ್) ಹಸಿರು ಪಟಾಕಿಯನ್ನು ಅಭಿವೃದ್ಧಿಪಡಿಸಿದ್ದು, ಮಾಲಿನ್ಯಕಾರಕಗಳನ್ನು ಶೇ.30ರಷ್ಟು ಕಡಿಮೆ ಪ್ರಮಾಣದಲ್ಲಿ ಹೊರಸೂಸುತ್ತದೆ ಎನ್ನಲಾಗಿದೆ.

ದೀಪಾವಳಿ ಹಬ್ಬದ ಪ್ರಯುಕ್ತ ಧಾರವಾಡದಲ್ಲಿ ಮೊಬೈಲ್ ಉತ್ಸವ

ಧಾರವಾಡ: ದೀಪಾವಳಿ ಹಬ್ಬದ ಪ್ರಯುಕ್ತವಾಗಿ ಜಿಲ್ಲೆಯ ನಗರದ ಟಿಕಾರೆ ರಸ್ತೆಯಲ್ಲಿ ಅ. 17 ರಿಂದ ಅ. 26 ವರೆಗೆ ಮೊಬೈಲ್ ಉತ್ಸವ ನಡೆಯಲಿದ್ದು, ಹು-ಧಾ ಮಹಾನಗರ ಪಾಲಿಕೆ ಮೇಯರ್ ಈರೇಶ ಅಂಚಟಗೇರಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.  ಸ್ಥಳೀಯ ಮೊಬೈಲ್ ಮಾರಾಟಗಾರರ ಸಂಘದಿಂದ ಆಯೋಜನೆ ಮಾಡಿದ್ದು, ಉತ್ಸವಕ್ಕೆ ವಿವಿಧ ಮೊಬೈಲ್ ಕಂಪನಿಗಳು ಸಾಥ್ ನೀಡಿವೆ. ಹತ್ತು ದಿನಗಳ ಕಾಲ ಉತ್ಸವ ನಡೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:51 pm, Mon, 17 October 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ