ಬೆಂಗಳೂರಿನಲ್ಲಿ ಶುರುವಾಯಿತು ಆಪರೇಷನ್​ ಒತ್ತುವರಿ ತೆರವು, 600 ಕಟ್ಟಡಗಳಿಗೆ ನೋಟಿಸ್​: ತುಷಾರ್ ಗಿರಿನಾಥ್

ರಾಜಕಾಲುವೆ ಒತ್ತುವರಿ ಕಾರ್ಯ ಮುಂದುವರೆದಿದ್ದು, ಮಹಾದೇವಪುರ ಭಾಗದಲ್ಲಿ ಬಿಬಿಎಂಪಿ ರಾಜಕಾಲುವೆ ಒತ್ತುವರಿ ತೆರವು ಮಾಡುತ್ತಿದೆ.

ಬೆಂಗಳೂರಿನಲ್ಲಿ ಶುರುವಾಯಿತು ಆಪರೇಷನ್​ ಒತ್ತುವರಿ ತೆರವು, 600 ಕಟ್ಟಡಗಳಿಗೆ ನೋಟಿಸ್​: ತುಷಾರ್ ಗಿರಿನಾಥ್
ಒತ್ತುವರಿ ತೆರವು ಕಾರ್ಯ ಆರಂಭ, ಆಯುಕ್ತ ತುಷಾರ್ ಗಿರಿನಾಥ್
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Sep 12, 2022 | 12:41 PM

ಬೆಂಗಳೂರು: ರಾಜಕಾಲುವೆ ಒತ್ತುವರಿದಾರರಿಗೆ ನೋಟಿಸ್ ನೀಡಲಾಗಿದೆ. ಕಂದಾಯ ಇಲಾಖೆಯಿಂದ ಈಗಾಗಲೇ ನೋಟಿಸ್ ಜಾರಿ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ಟಿವಿ9ಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿಕೆ ನೀಡಿದರು.  ರಾಜಕಾಲುವೆ ಒತ್ತುವರಿಯಾಗಿರುವ ಕಟ್ಟಡಗಳ ಬಗ್ಗೆ ಪಟ್ಟಿ ಮಾಡಿದ್ದು, 600 ಒತ್ತುವರಿ ಕಟ್ಟಡಗಳ ತೆರವಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ರಾಜಕಾಲುವೆ ಒತ್ತುವರಿ ಕಾರ್ಯ ಮುಂದುವರೆದಿದ್ದು, ಮಹಾದೇವಪುರ ಭಾಗದಲ್ಲಿ ಬಿಬಿಎಂಪಿ ರಾಜಕಾಲುವೆ ಒತ್ತುವರಿ ತೆರವು ಮಾಡುತ್ತಿದೆ. ಮಳೆ ಕಡಿಯಾಗಿರುವ ಕಾರಣ, ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಈಗಾಗಲೇ ಕೆಲವು ಕಡೆ ಒತ್ತುವರಿ ತೆರವು ಮಾಡಲಾಗಿದೆ. ಇಂದಿನಿಂದ ಪ್ರತಿಷ್ಠಿತ ವಿಲ್ಲಾಗಳ ಬಳಿ ಒತ್ತುವರಿ ತೆರವು ಮಾಡಲಾಗುತ್ತದೆ.

ಮಹದೇವಪುರದ ಬಸವನಗರದಲ್ಲಿನ ಗೋಪಾಲನ್ ಕಾಲೇಜ್ ಆಡಳಿತ ಮಂಡಳಿಯಿಂದ ರಾಜಕಾಲುವೆ ಒತ್ತುವರಿ ಸ್ಥಳದಲ್ಲಿ ರಾಜಕಾಲುವೆ ಒತ್ತುವರಿ ಮಾಡಿಕೊಂಡು ಮೈದಾನ ನಿರ್ಮಾಣ ಮಾಡಲಾಗುತ್ತಿದೆ. ಮಳೆ ಬಂದಾಗೊಮ್ಮೆ ಮೈದಾನ ಬಳಿಯ ಜಾಗದಲ್ಲಿ ಪ್ರವಾಹ ಉಂಟಾಗಿತ್ತು. ಸದ್ಯ ಒತ್ತುವರಿ ಜಾಗದಲ್ಲಿ ಅಧಿಕಾರಿಗಳು ಮಾರ್ಕಿಂಗ್ ಮಾಡುತ್ತಿದ್ದಾರೆ. ಅದೇ ರೀತಿಯಾಗಿ ದೊಡ್ಡಾನೆಗುಂದಿ ರಸ್ತೆಯ ಬಾಗ್ಮನೆ ವರ್ಲ್ಡ್ ಟೆಕ್ನಾಲಜಿ ಸೆಂಟರ್​ನಿಂದ ರಾಜಕಾಲುವೆ ಒತ್ತುವರಿ ಮಾಡಲಾಗುತ್ತಿದೆ. ಒತ್ತುವರಿ ತೆರವು ಮಾಡಲು ಬಂದ ಜೆಸಿಬಿಯನ್ನು ಟೆಕ್ ಪಾರ್ಕ್​ನ ಸಿಬ್ಬಂದಿ ತಡೆದು ನಿಲ್ಲಿಸಿದ್ದಾರೆ.

ಒತ್ತುವರಿ ಜಾಗ ತೆರವು: ರೈನ್​ಬೋ ಡ್ರೈವ್​ ಲೇಔಟ್ ವಿಲ್ಲಾಗಳಿಗೆ ನೋಟಿಸ್

ಮಳೆ ನೀರು ನಿಂತು ರೈನ್ ಬೋ ಡ್ರೈವ್ ಲೇಔಟ್ ದೇಶಾದ್ಯಂತ ಹೆಸರುವಾಸಿಯಾಗಿತ್ತು. ಸದ್ಯ ಕಾಲುವೆ ಒತ್ತುವರಿ ಜಾಗ ತೆರವುಗೊಳಿಸುವಂತೆ ನಗರದ ರೈನ್​ಬೋ ಡ್ರೈವ್​ ಲೇಔಟ್ ವಿಲ್ಲಾಗಳಿಗೆ ಬೆಂಗಳೂರು ಪೂರ್ವ ತಹಶೀಲ್ದಾರ್ ನೋಟಿಸ್ ಜಾರಿ ಮಾಡಿದ್ದಾರೆ. ಒತ್ತುವರಿ ಜಾಗವನ್ನು ತೆರವು ಮಾಡದಿದ್ರೆ ನಾವೇ ಮಾಡುತ್ತೇವೆ. ತೆರವು ಕಾರ್ಯಾಚರಣೆ ವೆಚ್ಚ ನೀವೇ ಭರಿಸಬೇಕೆಂದು, 15ಕ್ಕೂ ಹೆಚ್ಚು ವಿಲ್ಲಾಗಳಿಗೆ ತಹಶೀಲ್ದಾರ್​ ನೋಟಿಸ್​ ಜಾರಿಗೊಳಿಸಿದ್ದಾರೆ. ಮಳೆಯಿಂದ ರೈನ್​ಬೋ ಡ್ರೈವ್ ಲೇಔಟ್ ಜಲಾವೃತಗೊಂಡಿತ್ತು.

ರೈನ್​ಬೋ ಡ್ರೈವ್ ಲೇಔಟ್​​ನಲ್ಲಿ ಜಿಲ್ಲಾಡಳಿತ ಸರ್ವೆ ನಡೆಸಿದ್ದು, ಕಾಲುವೆ ಒತ್ತುವರಿ ಮಾಡಿ ವಿಲ್ಲಾಗಳನ್ನ ನಿರ್ಮಿಸಿರುವುದು ಬಹಿರಂಗವಾಗಿದೆ. ಇದೀಗ ವಿಲ್ಲಾಗಳ‌ನ್ನ ತೆರವುಗೊಳಿಸುವಂತೆ ಮಾಲೀಕರಿಗೆ ನೋಟಿಸ್ ನೀಡಲಾಗಿದೆ. ಮಳೆ ನಿಂತು ಹೋದ ಮೇಲೆ ರೈನ್ ಬೋ ಡ್ರೈವ್​ಗೆ ಆತಂಕ ಶುರುವಾಗಿದ್ದು, ಮಳೆ‌ ಹಿನ್ನೆಲೆ ಸುಮ್ಮನಿದ್ದ ಅಧಿಕಾರಿಗಳು, ಈಗ ತೆರವು ಮಾಡಲೇ ಬೇಕೆಂದು ಪಟ್ಟು ಹಿಡಿದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:39 pm, Mon, 12 September 22

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ