ಜಲಶಕ್ತಿ ಮಂತ್ರಿಗಳ ಜೊತೆ ಕರವೇ ನಾರಾಯಣ ಗೌಡ ಭೇಟಿಗೆ ಅವಕಾಶ; ಪ್ರಹ್ಲಾದ್ ಜೋಶಿ

ಕಾವೇರಿ ಸಂಕಷ್ಟ ಸೂತ್ರ ಕುರಿತು ಅಗತ್ಯ ಮಾಹಿತಿಯನ್ನು ತೀರ ಇತ್ತೀಚೆಗೆ ಕರ್ನಾಟಕ ಸರ್ಕಾರ ಒದಗಿಸಿದೆ. ಈ ಮಾಹಿತಿ ಜಲಶಕ್ತಿ ಸಚಿವರು ನಮ್ಮ ಜೊತೆ ಈಗ ಹಂಚಿಕೊಂಡಿದ್ದಾರೆ. ಮೊದಲು ಸೌರ್ಹಾದ ಮಾತುಕತೆ ತಮಿಳುನಾಡು ಮತ್ತು ಕರ್ನಾಟಕ ಆರಂಭ ಮಾಡಬೇಕು ಎಂದು ಪ್ರಹ್ಲಾದ್​

ಜಲಶಕ್ತಿ ಮಂತ್ರಿಗಳ ಜೊತೆ ಕರವೇ ನಾರಾಯಣ ಗೌಡ ಭೇಟಿಗೆ ಅವಕಾಶ; ಪ್ರಹ್ಲಾದ್ ಜೋಶಿ
ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ, ಕರವೇ ಅಧ್ಯಕ್ಷ ನಾರಾಯಣಗೌಡ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 18, 2023 | 3:43 PM

ನವದೆಹಲಿ, ಅ.18: ಕಾವೇರಿ ನೀರಿಗಾಗಿ ರೈತ ಪರ ಸಂಘಟನೆಗಳು ಹೋರಾಟ ನಡೆಸುತ್ತಲೇ ಇದೆ. ಈಗಾಗಲೇ ಒಮ್ಮೆ ರಾಜ್ಯವನ್ನು ಬಂದ್​ ಮಾಡುವ ಮೂಲಕ ನೀರಿನ ಅವಶ್ಯಕತೆಯನ್ನು ಸರ್ಕಾರಕ್ಕೆ ಮನವರಿಕೆ ಮಾಡಲಾಗಿದೆ. ಆದರೂ, ಇತ್ತೀಚೆಗೆ ಅ.31 ರವರೆಗೆ 15 ದಿನಗಳ ಕಾಲ ಮತ್ತೆ 3ಸಾವಿರ ಕ್ಯೂಸೆಕ್​ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWMA) ಅವರು ಆದೇಶಿಸಿದ್ದರು. ಈ ಹಿನ್ನಲೆ ಕರವೇ ಕಾರ್ಯಕರ್ತರು ಇಂದು(ಅ.18) ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು. ಅದರಂತೆ ಕಾವೇರಿ ಜಲಸಂಕಷ್ಟ ಪರಿಹರಿಸುವಂತೆ ಕರವೇ ನಾರಾಯಣ ಗೌಡರ ನೇತೃತ್ವದಲ್ಲಿ ದೆಹಲಿಗೆ ಬಂದಿದ್ದು, ಜಲಶಕ್ತಿ ಮಂತ್ರಿಗಳನ್ನು ಭೇಟಿಯಾಗಬೇಕು ಎಂದರು, ಆ ವ್ಯವಸ್ಥೆಯನ್ನು ನಮ್ಮ ನಿವಾಸದಲ್ಲಿ ಮಾಡಿದ್ದೇನೆ ಎಂದು  ಕೇಂದ್ರ  ಸಚಿವ ಪ್ರಹ್ಲಾದ್ ಜೋಶಿ (Pralhad Joshi) ನವದೆಹಲಿಯಲ್ಲಿ ಹೇಳಿದರು.

ಹೌದು, ನವದೆಹಲಿಯಲ್ಲಿ ಮಾತನಾಡಿದ ಪ್ರಹ್ಲಾದ್ ಜೋಷಿ ಅವರು ‘ಸಂಕಷ್ಟ ಸೂತ್ರ ಹಾಗು ಮೇಕೆದಾಟು ವಿಚಾರ ಅವರು ಪ್ರಸ್ತಾಪಿಸಿದ್ದಾರೆ. ಸಂಕಷ್ಟ ಸೂತ್ರ ಕುರಿತು ಅಗತ್ಯ ಮಾಹಿತಿಯನ್ನು ತೀರ ಇತ್ತೀಚೆಗೆ ಕರ್ನಾಟಕ ಸರ್ಕಾರ ಒದಗಿಸಿದೆ. ಈ ಮಾಹಿತಿ ಜಲಶಕ್ತಿ ಸಚಿವರು ನಮ್ಮ ಜೊತೆ ಈಗ ಹಂಚಿಕೊಂಡಿದ್ದಾರೆ. ಮೊದಲು ಸೌರ್ಹಾದ ಮಾತುಕತೆ ತಮಿಳುನಾಡು ಮತ್ತು ಕರ್ನಾಟಕ ಆರಂಭ ಮಾಡಬೇಕು. ಈಗಾಗಲೇ ಡಿಎಂಕೆ ಪಕ್ಷ ಮತ್ತು ಕಾಂಗ್ರೆಸ್ ನಡುವೆ ಉತ್ತಮ ಸಂಬಂಧ ಇದೆ. ಅವರು ಮಾತುಕತೆ ಶುರು ಮಾಡಲಿ ಎಂದರು.

ಇದನ್ನೂ ಓದಿ:ಕಾವೇರಿ ನೀರಿಗಾಗಿ 2016ರಲ್ಲಿ ಸಂಕಷ್ಟ ಎದುರಾದಾಗ ದೇವೇಗೌಡರ ಮನೆಗೆ ಓಡೋಡಿ ಬಂದಿದ್ದ ಸಿದ್ದರಾಮಯ್ಯ ಈಗ ಅವರ ಬದ್ಧತೆಯನ್ನು ಪ್ರಶ್ನಿಸುತ್ತಿದ್ದಾರೆ: ಕುಮಾರಸ್ವಾಮಿ

ಇನ್ನು ಈ ಕುರಿತು ಮಾತನಾಡಿದ ಕರವೇ ಅಧ್ಯಕ್ಷ ನಾರಾಯಣ್ ಗೌಡ ‘ಇವತ್ತು ಕಾವೇರಿಗೋಸ್ಕರ ಕರ್ನಾಟಕದಿಂದ ಡೆಲ್ಲಿಗೆ ಬಂದಿದ್ದೇವೆ. ರಾಜ್ಯದ ಎಲ್ಲಾ ಜಿಲ್ಲೆಯಿಂದ ನಮ್ಮ ಕಾರ್ಯಕರ್ತರು ಬಂದಿದ್ದಾರೆ. ನಾನು ಇವತ್ತಿನ ನೀರಿನ ಪರಿಸ್ಥಿತಿ, ಕಾವೇರಿ ಪರಿಸ್ಥಿತಿ ಮಾತಾಡೋಕೆ ಬಂದಿದ್ದು ಅಲ್ಲ. ನಮಗೆ ಸಂಕಷ್ಟ ಸೂತ್ರ ಬೇಕು ಅನ್ನೋದರ ಬಗ್ಗೆ ‘ಪ್ರಧಾನ ಮಂತ್ರಿ, ಪ್ರಹ್ಲಾದ್ ಜೋಶಿ ಹಾಗೂ ನಮ್ಮ ನೀರಾವರಿ ಸಚಿವರ ಬಳಿ ಮಾತಾಡಬೇಕು ಎಂದು ಬಂದಿದ್ದೇನೆ. ನಮ್ಮ ಬಳಿ ನೀರು ಇದ್ದಾಗ ನಾವು ನೀರು ಕೊಡುತ್ತೇವೆ. ನಾವು-ತಮಿಳುನಾಡು ಅಣ್ಣ-ತಮ್ಮನ ತರ ಬದುಕುತ್ತಿದ್ದೇವೆ.  ನಾವು ನೀರು ಕೊಡುತ್ತೇವೆ. ಆದ್ರೆ, ನಮ್ಮ ಬಳಿ ನೀರು ಇಲ್ಲ ಅಂದಾಗ ಏನ್ ಮಾಡಬೇಕು.

‘ಮಾನ್ಯ ಪ್ರಧಾನಿ ಮಧ್ಯಸ್ಥಿಕೆ ವಹಿಸಿ, 4 ರಾಜ್ಯದ ಮುಖ್ಯಮಂತ್ರಿಗಳನ್ನ ಕರೆದು ಚರ್ಚೆ ಮಾಡಬೇಕು. ಹಿಂದೆ ಇಂತಹ ಸಂಕಷ್ಟ ಬಂದಾಗ, ಇಂದಿರಾ ಗಾಂಧಿಯವರು ಬಂದು ಸಂಕಷ್ಟ ಬಗೆ ಹರಿಸಿದರು. 2003 ರಲ್ಲಿ ಅನಂತ್ ಕುಮಾರ್​ ರವರ ಅಧ್ಯಕ್ಷತೆಯಲ್ಲಿ ವಾಜಪೇಯಿ ಅವರನ್ನು ಭೇಟಿ ಮಾಡಿದ್ದೆ. ಅವರು ಆವತ್ತು ಸಂಕಷ್ಟ ಸೂತ್ರಕ್ಕೆ ಒತ್ತಡ ಹಾಕಿದ್ದರು. ಇದಕ್ಕೆ ಒಂದು ಶಾಶ್ವತ ಪರಿಹಾರ ಹುಡುಕುವಂತಹ ಕೆಲಸವನ್ನು ಮಾನ್ಯ ಮೋದಿಯವರು ಮಾಡಲಿ. ಪ್ರಪಂಚದ ಅನೇಕ ರಾಷ್ಟ್ರಗಳನ್ನು ಒಗ್ಗೂಡಿಸುವ ಕೆಲಸ ಮಾಡುವ ಮೋದಿಯವರು, ನಮ್ಮ ದೇಶದ ಒಳಗೆ ಇರುವ ಕರ್ನಾಟಕ -ತಮಿಳುನಾಡು ಮುಖ್ಯಮಂತ್ರಿ ಗಳನ್ನು ಕರೆದು ಶಾಶ್ವತ ಪರಿಹಾರ ನೀಡಬೇಕು ಎಂದರು.

ಇದನ್ನೂ ಓದಿ:ಯಡಿಯೂರಪ್ಪ, ಬೊಮ್ಮಾಯಿ, ಕುಮಾರಸ್ವಾಮಿ ನೇಮಕ ಮಾಡಿದ ವಕೀಲರೇ ಈಗಲೂ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ: ಡಿಕೆ ಶಿವಕುಮಾರ್

ಕಾವೇರಿ ಇತಿಹಾಸ 150 ವರ್ಷಗಳ ಇತಿಹಾಸ

ಮೇಕೆದಾಟು ಆಣೆಕಟ್ಟು ಕಟ್ಟಿದ್ದೆ ಆದ್ರೆ, ಅದಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ರೆ, ಸುಮಾರು 60ಟಿಎಂಸಿ, ಬೆಂಗಳೂರು ಜನರಿಗೆ ಕುಡಿಯುವ ನೀರಿಗೆ ಬಳಸಿಕೊಳ್ಳಬಹುದು. ತಮಿಳುನಾಡಿಗೆ ನೀರು ಕೊಡೋಕು ಸಹ ಅನುಕೂಲ ಆಗುತ್ತೆ. ಎರಡೂ ರಾಜ್ಯ ಒಂದಾಗಿ ಬರೋದಾದ್ರೆ, ಮೇಕೆದಾಟು ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಡುತ್ತೆ ಎಂದು ಪ್ರಹ್ಲಾದ್ ಜೋಶಿ ಅವರು ಹೇಳಿದ್ದಾರೆ. ಕೇಂದ್ರ ನೀರಾವರಿ ಸಚಿವ ಗಜೇಂದ್ರ ಸಿಂಗ್ ಶೇಖವತ್ ಸಹ ಹೇಳಿದ್ದಾರೆ. ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ನೀವು ಮಾಡಿರುವ ಒಕ್ಕೂಟ, ರಾಜಕೀಯಕ್ಕೋಸ್ಕರ. ಅದರಲ್ಲಿ ನಿಮ್ಮ ಜೊತೆ ಸ್ಟಾಲಿನ್ ಇದ್ದಾರೆ, ಹಾಗಾಗಿ ಇವರು ಕುತ್ಕೊಂಡು ಮಾತಾಡಿದ್ರೆ ಕಾವೇರಿ ವಿಚಾರವಾಗಿ ಶಾಶ್ವತ ಪರಿಹಾರ ಸಿಗುತ್ತದೆ ಎಂದು ಹೇಳಿದರು.

ಪ್ರಧಾನಿ ಮೋದಿಯವರನ್ನ ಭೇಟಿ ಮಾಡುಸ್ತೀನಿ ಎಂದು ಜೋಶಿಯವರು  ಹೇಳಿದ್ದಾರೆ

ಇನ್ನು ಈ ಕುರಿತು ಮಾತನಾಡಲು ಪ್ರಧಾನಿ ಮೋದಿಯವರ ಜೊತೆ ಭೇಟಿ ಮಾಡಿಸುತ್ತೇನೆ ಎಂದಿದ್ದಾರೆ. ಹಾಗಾಗಿ ನಾನು ಇವತ್ತು ದೆಹಲಿಯಲ್ಲೇ ಉಳಿಯುತ್ತೇನೆ. ನಾಳೆ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಲಿದ್ದೇನೆ. ‘ಪ್ರಧಾನಿ ಮೋದಿಯವರು ಕಾವೇರಿ ವಿಚಾರವಾಗಿ ಶಾಶ್ವತ ಪರಿಹಾರ ಕೊಡೋದು ಆದರೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ, ನಾವೆಲ್ಲ ಮೋದಿ ಪರವಾಗಿ ನಿಲ್ಲುತ್ತೆವೆ. ಪಕ್ಷದ ಪರವಾಗಿ ಅಲ್ಲ, ಮೋದಿ ಪರವಾಗಿ ನಾವು ನಿಲ್ಲುತ್ತೇವೆ ಎಂದರು.

ಇದನ್ನೂ ಓದಿ:ರಾಜ್ಯದ ಸಂಸತ್ ಸದಸ್ಯರಿಗೆ ಮಾನ ಮರ್ಯಾದೆ ಇದ್ದರೆ ಕಾವೇರಿ ನೀರಿಗಾಗಿ ಕೂಡಲೇ ರಾಜೀನಾಮೆ ಸಲ್ಲಿಸಬೇಕು: ವಾಟಾಳ್ ನಾಗರಾಜ್

‘ನನಗೆ ಬಹಳ ಬೇಸರದ ಸಂಗತಿ ಅಂದ್ರೆ, ಮೋದಿಯವರನ್ನ ಸಿದ್ದರಾಮಯ್ಯ ಅವರು ಭೇಟಿ ಮಾಡೋಕೆ ಬಂದಾಗ, ಅವರನ್ನ ಕೇವಲವಾಗಿ ಕಂಡು, ಅವರಿಗೆ ಭೇಟಿ ಮಾಡೋಕೆ ಅವಕಾಶ ಕೊಡದೆ ಇರುವುದು. ಸಿದ್ದರಾಮಯ್ಯ ರಿಗೆ ಮಾಡಿದ ಅವಮಾನ ಅಲ್ಲ, ಅದು ಏಳೂವರೆ ಕೋಟಿ ಜನರಿಗೆ ಮಾಡಿದ ಅವಮಾನ ಎಂದರು. ಮತ್ತೊಂದು ಭಾರತ ಕಟ್ಟುವ ತಾಕತ್ತು ಇರುವುದು ನಮ್ಮ ಕರ್ನಾಟಕಕ್ಕೆ ಮಾತ್ರ, ಕೇವಲ ಉತ್ತರ ಭಾರತ ಮಾತ್ರ ಅಲ್ಲ, ದಕ್ಷಿಣ ಭಾರತವನ್ನು ಸಹ ಪರಿಗಣನೆಗೆ ತೆಗೆದುಕೊಳ್ಳಬೇಕು. ನಮ್ ಟ್ಯಾಕ್ಸ್​ ನ್ನು ತಂದು ಬಿಹಾರ ಸೇರಿದಂತೆ ಬೇರೆ ರಾಜ್ಯಗಳಿಗೆ ಸುರಿತಾರೆ. ಈ ಎಲ್ಲಾ ಬಗ್ಗೆ ನಾನು ನಾಳೆ ಪ್ರಧಾನಿ ಬಳಿ ಮಾತಾಡುತ್ತೇನೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ