AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Traffic Advisory: ಜುಲೈ 17, 18ರಂದು ಬೆಂಗಳೂರಿನ ಹಲವೆಡೆ ಮಾರ್ಗ ಬದಲಾವಣೆ

ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ವಿಪಕ್ಷ ನಾಯಕರ ಜಂಟಿ ಸಭ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಎರಡು ದಿನ ನಗರದ ಈ ರಸ್ತೆಗಳಲ್ಲಿ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ.

Bengaluru Traffic Advisory: ಜುಲೈ 17, 18ರಂದು ಬೆಂಗಳೂರಿನ ಹಲವೆಡೆ ಮಾರ್ಗ ಬದಲಾವಣೆ
ಬೆಂಗಳೂರು ಸಂಚಾರಿ ಪೊಲೀಸ್ ಪ್ರಕಟಣೆ
ರಮೇಶ್ ಬಿ. ಜವಳಗೇರಾ
|

Updated on: Jul 17, 2023 | 11:38 AM

Share

ಬೆಂಗಳೂರು, (ಜುಲೈ 15): ವಿಧಾನಸಭೆ ಅಧಿವೇಶನ ಅಲ್ಲದೇ ವಿಪಕ್ಷಗಳ ಸಭೆ(Opposition leaders meeting)  ಹಿನ್ನೆಲೆಯಲ್ಲಿ ದೇಶದ ವಿವಿಧ ರಾಜ್ಯಗಳಿಂದ ಘಟಾನುಘಟಿ ನಾಯಕರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಹೀಗಾಗಿ ಇಂದು ಮತ್ತು ನಾಳೆ (ಜುಲೈ 17, 18) ಬೆಂಗಳೂರಿನ ಹಲವೆಡೆ ವಾಹನಗಳ ಸಂಚಾರ (Bengaluru Traffic advisory) ಮಾರ್ಗ ಬದಲಾವಣೆ ಮಾಡಲಾಗಿದೆ. ಬಿ.ಆರ್‌.ಅಂಬೇಡ್ಕರ್ ರಸ್ತೆ, ಕಬ್ಬನ್ ರಸ್ತೆ, ಪ್ಯಾಲೆಸ್‌ ರಸ್ತೆ. ರೇಸ್‌ ಕೋರ್ಸ್‌ ರಸ್ತೆ, ಶೇಷಾದ್ರಿ ರಸ್ತೆ ಬಳಸದಂತೆ ಸೂಚನೆ ನೀಡಲಾಗಿದ್ದು, ಪರ್ಯಾಯ ಮಾರ್ಗ ಬಳಸಲು ಸಂಚಾರ ವಿಭಾಗದ ಜಂಟಿ ಆಯುಕ್ತ ಎಂಎನ್ ಅನುಚೇತ್ ಟ್ವಿಟ್ಟರ್​ ಮೂಲಕ ವಾಹನ ಸವಾರರಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಇಂದಿನಿಂದ 2 ದಿನ ವಿಪಕ್ಷಗಳ ಮಹಾಸಂಗಮ, ಮೋದಿ ವಿರುದ್ಧದ ಯುದ್ಧಕ್ಕೆ ಕರ್ನಾಟಕದಿಂದ್ಲೇ ರಣಕಹಳೆ!

ಜುಲೈ 17 ಮತ್ತು 18ರಂದು ಎರಡು ದಿನಗಳ ಕಾಳ ಲೋಕಸಭೆಯ ವಿರೋಧ ಪಕ್ಷಗಳ ಹಲವು ಗಣ್ಯರು ಬೆಂಗಳೂರಿನ ತಾಜ್​ವೆಸ್ಟ್ ಎಂಡ್​ ಹೋಟೆಲ್​ನಲ್ಲಿ ಸಭೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅತೀ ಗಣ್ಯ ವ್ಯಕ್ತಿಗಳ ಸಂಚಾರ ಇರುವ ಕಾರಣ ಈ ರಸ್ತೆ ಬಳಕೆದಾರರು ಬೇರೆ ಮಾರ್ಗದಲ್ಲಿ ಸಂಚರಿಸಬೇಕೆಂದು ಬೆಂಗಳೂರು ಸಂಚಾರಿ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ.

ಇನ್ನು ವಿವಿಐಪಿ ಸಂಚಾರದಿಂದಾಗಿ ಬಿ.ಆರ್‌.ಅಂಬೇಡ್ಕರ್ ರಸ್ತೆ, ರಾಜಭವನ ರಸ್ತೆ, ಬಳ್ಳಾರಿ ರಸ್ತೆ ಹಾಗೂ ರೇಸ್ ಕೋರ್ಸ್‌ ರಸ್ತೆಯಲ್ಲೂ ಪಾರ್ಕಿಂಗ್‌ ನಿಷೇಧಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೇಗಾದ್ರೂ ಮಾಡಿ ಮುಂದಿನ ಬಾರಿ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯನ್ನು ಕಟ್ಟಿಹಾಕಲೇಬೇಕೆಂದು ದೇಶದ ಪ್ರತಿಪಕ್ಷಗಳೆಲ್ಲ ಒಗ್ಗಟ್ಟಿನ ಮಂತ್ರ ಪಠಿಸುತ್ತಿವೆ.ಇದಕ್ಕಾಗಿ ಇಂದು (ಜುಲೈ 17) ಬೆಂಗಳೂರಿನಲ್ಲಿ ಶಕ್ತಿಪ್ರದರ್ಶನಕ್ಕೆ ಸಜ್ಜಾಗಿವೆ . ಇನ್ನು  ಈ ಸಭೆಯಲ್ಲಿ ಒಟ್ಟು 24 ಪಕ್ಷದ ನಾಯಕರು ಭಾಗವಹಿಸಲಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?