ಪಶ್ಚಿಮಘಟ್ಟ ಕರಡು ಅಧಿಸೂಚನೆಗೆ ವಿರೋಧ: ಜುಲೈ 18ರಂದು ಸಭೆ‌ ಕರೆದ ಗೃಹಸಚಿವ ಆರಗ ಜ್ಞಾನೇಂದ್ರ

ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪರಿಸರ ವಲಯ ಎಂದು ಘೋಷಿಸುವುದರಿಂದ ಆ ಭಾಗದಲ್ಲಿ ವಾಸಿಸುವ ಜನರ ಜೀವನೋಪಾಯಕ್ಕೆ ಧಕ್ಕೆಯಾಗಲಿದೆ. ಹಾಗಾಗಿ ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ಸರ್ಕಾರದ ವಿರೋಧವಿದೆ.

ಪಶ್ಚಿಮಘಟ್ಟ ಕರಡು ಅಧಿಸೂಚನೆಗೆ ವಿರೋಧ: ಜುಲೈ 18ರಂದು ಸಭೆ‌ ಕರೆದ ಗೃಹಸಚಿವ ಆರಗ ಜ್ಞಾನೇಂದ್ರ
ಗೃಹಸಚಿವ ಆರಗ ಜ್ಞಾನೇಂದ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jul 13, 2022 | 1:49 PM

ಬೆಂಗಳೂರು: ಪಶ್ಚಿಮಘಟ್ಟ ಕರಡು ಅಧಿಸೂಚನೆ ವಿರೋಧಿಸಿ ಜುಲೈ 18ರಂದು ಗೃಹಸಚಿವ ಆರಗ ಜ್ಞಾನೇಂದ್ರ (Araga Jnanendra) ಸಭೆ‌ ಕರೆದಿದ್ದಾರೆ. ಪಶ್ಚಿಮಘಟ್ಟ ಕುರಿತಂತೆ ಪರಿಸರ ಸಚಿವಾಲಯ ಕರಡು ಅಧಿಸೂಚನೆ ವಿರೋಧಿಸಿ ಮಲೆನಾಡು ಶಾಸಕರ ಸಭೆ ಕರೆಯಲಾಗಿದೆ. ಕಳೆದ ವಾರ ಅಧಿಸೂಚನೆ ಹೊರಡಿಸಿರುವ ಕೇಂದ್ರ ಸರ್ಕಾರ, ಕರ್ನಾಟಕ ಒಳಗೊಂಡಂತೆ ಒಟ್ಟು 56,826 ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶವೆಂದು ಅಧಿಸೂಚನೆ ಹೊರಡಿಸಲಾಗಿದೆ. ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು 2 ತಿಂಗಳ ಗಡುವು ನೀಡಲಾಗಿತ್ತು. ಈ ಹಿಂದೆ ಕಸ್ತೂರಿರಂಗನ್ ಸಮಿತಿಯ ವರದಿಯನ್ನ ಸರ್ಕಾರ ತಿರಸ್ಕರಿಸಿತ್ತು. ತನ್ನ ನಿಲುವಿನ ಬಗ್ಗೆ ಸ್ಪಷ್ಟ ಅಭಿಪ್ರಾಯ ತಿಳಿಸಿರುವ ಕರ್ನಾಟಕ, ಜುಲೈ 18ರಂದು ನಡೆಯುವ ಸಭೆಯಲ್ಲಿ ಅಧಿಸೂಚನೆ ವಿರೋಧಿಸಿ ಶಾಸಕರು ಗೊತ್ತುವಳಿ ಮಂಡಿಸಲಿದ್ದಾರೆ.

ಇದನ್ನೂ ಓದಿ: Karnataka Floods: ಮಳೆಯಿಂದ 32 ಸಾವು, 1062 ಮನೆಗಳು, 355 ಹೆಕ್ಟೇರ್ ಬೆಳೆಗೆ ಹಾನಿ; ಸಿಎಂ ಬಸವರಾಜ ಬೊಮ್ಮಾಯಿ

ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ಸರ್ಕಾರದ ವಿರೋಧವಿದೆ:

ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪರಿಸರ ವಲಯ ಎಂದು ಘೋಷಿಸುವುದರಿಂದ ಆ ಭಾಗದಲ್ಲಿ ವಾಸಿಸುವ ಜನರ ಜೀವನೋಪಾಯಕ್ಕೆ ಧಕ್ಕೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ಸರ್ಕಾರ ಹಾಗೂ ಆ ಭಾಗದ ಜನತೆಯ ಒಕ್ಕೊರಲಿನ ವಿರೋಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಹಿಂದೆ ಸ್ಪಷ್ಟಪಡಿಸಿದರು. ಪಶ್ಚಿಮ ಘಟ್ಟದ ಕಸ್ತೂರಿ ರಂಗನ್ ವರದಿ ಜಾರಿ ಕುರಿತಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಕಾರ್ಮಿಕ ಸಚಿವ ಭೂಪೇಂದರ್ ಯಾದವ್ ಅವರು ನಡೆಸಿದ ವರ್ಚುವಲ್ ಸಭೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು ರಾಜ್ಯದ ಈ ನಿಲುವನ್ನು ಸ್ಪಷ್ಟಪಡಿಸಿದ್ದರು. ಪಶ್ಚಿಮ ಘಟ್ಟ ಪ್ರದೇಶದ ನಿವಾಸಿಗಳು, ಅಧಿಕಾರಿಗಳು ಮತ್ತು ಸಂಬಂಧಪಟ್ಟ ಎಲ್ಲರೊಂದಿಗೆ ಕೂಲಂಕಷವಾಗಿ ಸಮಾಲೋಚನೆ ನಡೆಸಿ ಕಸ್ತೂರಿ ರಂಗನ್ ವರದಿ ಜಾರಿಯನ್ನು ವಿರೋಧಿಸಿ ರಾಜ್ಯ ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ ಎಂಬುದನ್ನು ಸಿಎಂ ಬೊಮ್ಮಾಯಿ ಸಭೆಯ ಗಮನಕ್ಕೆ ತಂದಿದ್ದರು.

ಇದನ್ನೂ ಓದಿ: ಐದು ವರ್ಷಗಳ ನಂತರ ಚಾಮರಾಜೇಶ್ವರ ರಥೋತ್ಸವ; ಯದುವೀರ್ ಒಡೆಯರ್ ಚಾಲನೆ

ಕರ್ನಾಟಕ ರಾಜ್ಯ ಅತಿ ಹೆಚ್ಚು ಅರಣ್ಯ ಪ್ರದೇಶಗಳನ್ನು ಹೊಂದಿರುವ ರಾಜ್ಯಗಳಲ್ಲಿ ಒಂದು ಎಂಬ ಹೆಗ್ಗಳಿಕೆಯನ್ನು ಹೊಂದಿದೆ. ನಮ್ಮ ಸರ್ಕಾರ ಹಾಗೂ ಜನತೆ ಪಶ್ಚಿಮ ಘಟ್ಟದ ಜೀವ ವೈವಿಧ್ಯದ ಸಂರಕ್ಷಣೆಗೆ ಹೆಚ್ಚಿನ ಕಾಳಜಿ ತೋರಿದೆ. ಯಾವುದೇ ಕಾಯ್ದೆ ಕಾನೂನು ಜಾರಿಯಾಗುವ ಮುನ್ನವೂ ಆ ಭಾಗದ ಜನರು ಪ್ರಕೃತಿಗೆ ಸಹಜವಾದ ಕೃಷಿ, ತೋಟಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳುತ್ತಿದ್ದು, ಪರಿಸರ ಸ್ನೇಹಿ ಜೀವನ ಶೈಲಿಯನ್ನು ರೂಢಿಸಿಕೊಂಡಿದ್ದಾರೆ. ಈ ಮೂಲಕ ಪಶ್ಚಿಮ ಘಟ್ಟದ ಸಂರಕ್ಷಣೆಗೆ ಆದ್ಯತೆ ನೀಡುತ್ತಲೇ ಬಂದಿದ್ದಾರೆ. ಈಗಾಗಲೇ ಜೀವ ವೈವಿಧ್ಯ ಸಂರಕ್ಷಣೆ ಕಾಯ್ದೆ, ಅರಣ್ಯ ಸಂರಕ್ಷಣೆ ಕಾಯ್ದೆ ಮೊದಲಾದ ಹಲವಾರು ಕಾನೂನುಗಳಡಿ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮತ್ತೊಂದು ಕಾನೂನು ಜಾರಿಗೆ ತರುವ ಮೂಲಕ ಈ ಭಾಗದ ಜನರ ಜೀವನೋಪಾಯಕ್ಕೆ ಧಕ್ಕೆ ತರುವುದು ಸರಿಯಲ್ಲ ಎಂದು ಮುಖ್ಯಮಂತ್ರಿಯವರು ಈ ಹಿಂದೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು.

Published On - 1:49 pm, Wed, 13 July 22

ಮಿಡಲ್ ಸ್ಟಂಪ್... ಮೊದಲ ಇನಿಂಗ್ಸ್​ನ ಹೀರೋನ ಝೀರೋ ಮಾಡಿದ ಬುಮ್ರಾ
ಮಿಡಲ್ ಸ್ಟಂಪ್... ಮೊದಲ ಇನಿಂಗ್ಸ್​ನ ಹೀರೋನ ಝೀರೋ ಮಾಡಿದ ಬುಮ್ರಾ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್