AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ 10,000ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರ ಎಂಟ್ರಿ! ಚುರುಕುಗೊಂಡ ಎನ್​ಐಎ ತನಿಖೆ

ಎರಡು ದಿನಗಳ ಹಿಂದೆ ಬೆಂಗಳೂರು ಹಾಗೂ ಹೊರವಲಯದ ಹಲವು ಕಡೆಗಳಲ್ಲಿ ದಾಳಿ ನಡೆಸಿದ್ದ ಎನ್​ಐಎ, ಅಕ್ರಮವಾಗಿ ಬಾಂಗ್ಲಾ ವಲಸಿಗರನ್ನು ನಗರಕ್ಕೆ ಕರೆತರುತ್ತಿದ್ದ 11 ಜನರನ್ನು ಬಂಧಿಸಿತ್ತು. ತನಿಖೆ ವೇಳೆ ಸುಮಾರು 10 ಸಾವಿರಕ್ಕೂ ಅಧಿಕ ಮಂದಿ ಅಕ್ರಮವಾಗಿ ಬಂದಿರುವುದು ಬೆಳಕಿಗೆ ಬಂದಿದ್ದು, ತನಿಖೆ ಮುಂದುವರಿದಿದೆ.

ಬೆಂಗಳೂರಿಗೆ 10,000ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರ ಎಂಟ್ರಿ! ಚುರುಕುಗೊಂಡ ಎನ್​ಐಎ ತನಿಖೆ
ರಾಷ್ಟ್ರೀಯ ತನಿಖಾ ದಳ (ಎನ್​ಐಎ)
Jagadisha B
| Edited By: Rakesh Nayak Manchi|

Updated on:Nov 10, 2023 | 9:11 AM

Share

ಬೆಂಗಳೂರು, ನ.10: ಅಕ್ರಮವಾಗಿ ಬಾಂಗ್ಲಾ ವಲಸಿಗರನ್ನು ನಗರಕ್ಕೆ (Bengaluru) ಕರೆತರುತ್ತಿದ್ದ 11 ಜನರನ್ನು ಬಂಧಿಸಿ ತನಿಖೆ ನಡೆಸುತ್ತಿರುವ ಎನ್​ಐಎ (NIA) ಅಧಿಕಾರಿಗಳಿಗೆ, ಸುಮಾರು 10 ಸಾವಿರಕ್ಕೂ ಅಧಿಕ ಮಂದಿ ಅಕ್ರಮವಾಗಿ ಬಂದಿರುವುದು ತಿಳಿದುಬಂದಿದೆ. ಹೀಗಾಗಿ ಬಂಧಿತರನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಎರಡು ದಿನಗಳ ಹಿಂದೆ ಬೆಂಗಳೂರು ಹಾಗೂ ಹೊರವಲಯದ ಹಲವು ಕಡೆಗಳಲ್ಲಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಮೇಲೆ ಎನ್​ಐಎ ದಾಳಿ ಮಾಡಿತ್ತು. ಈ ವೇಳೆ ಅಕ್ರಮವಾಗಿ ನಗರಕ್ಕೆ ಕರೆತರುತ್ತಿದ್ದ 11 ಜನರನ್ನು ಅಧಿಕಾರಿಗಳು ಬಂಧಿಸಿ ಅಕ್ರಮ ವಲಸಿಗರ ಮಾಹಿತಿ ಕಲೆ ಹಾಕಿದ್ದರು.

ಇದನ್ನೂ ಓದಿ: ಪುಣೆ ಐಸಿಸ್ ಮಾಡ್ಯೂಲ್‌ ಬಗ್ಗೆ ಭಯಾನಕ ಸತ್ಯ ಬಿಚ್ಚಿಟ್ಟ ಎನ್‌ಐಎ ಚಾರ್ಜ್ ಶೀಟ್

ಇದುವರೆಗಿನ ತನಿಖೆ ವೇಳೆ ಸುಮಾರು 10 ಸಾವಿರಕ್ಕೂ ಅಧಿಕ ಜನ ಅಕ್ರಮವಾಗಿ ಬಂದಿರುವುದು ಬೆಳಕಿಗೆ ಬಂದಿದೆ. 11 ಜನರ ವಿಚಾರಣೆ ವೇಳೆ ಮಾಸ್ಟರ್ ಮೈಂಡ್ ಜಾಕಿರ್ ಹುಸೇನ್ ಹೆಸರನ್ನು ಆರೋಪಿಗಳು ಬಾಯಿಬಿಟ್ಟಿದ್ದಾರೆ. ಈತನ ಸೂಚನೆಯಂತೆ ಅನಧಿಕೃತವಾಗಿ ನಗರಕ್ಕೆ ಕರೆತರಲಾಗುತ್ತಿತ್ತು ಎಂದು ಹೇಳಿದ್ದಾರೆ. ಇತ್ತ, ಎನ್​​ಐಎ ದಾಳಿ ಆಗುವ ವೇಳೆ ಆರೋಪಿ ಜಾಕಿರ್ ಹುಸೇನ್ ಪರಾರಿಯಾಗಿದ್ದಾನೆ.

ಆಧಾರ್ ಕಾರ್ಡ್, ವೋಟರ್ ಐಡಿ ಪತ್ತೆ

ಎನ್​ಐಎ ದಾಳಿ ವೇಳೆ ಮತ್ತೊಂದು ಸ್ಫೋಟಕವಾದ ವಿಚಾರ ಬೆಳಕಿಗೆ ಬಂದಿದೆ. ಬಹುತೇಕ ಬಾಂಗ್ಲಾ ಪ್ರಜೆಗಳ ಬಳಿ ಆಧಾರ್ ಕಾರ್ಡ್ ಮತ್ತು ವೋಟರ್ ಐಡಿ ಪತ್ತೆಯಾಗಿದೆ. ಹೀಗಾಗಿ ಐಡಿ ಕಾರ್ಡ್ ಮಾಡಿಕೊಟ್ಟಿದ್ದು ಯಾರು ಎಂಬುದನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ರಾಜಸ್ಥಾನ: ಶಸ್ತ್ರಾಸ್ತ್ರ ತರಬೇತಿ ಶಿಬಿರ ಆಯೋಜಿಸಿದ್ದ ಪಿಎಫ್​ಐನ ಇಬ್ಬರು ಸದಸ್ಯರನ್ನು ಬಂಧಿಸಿದ ಎನ್​ಐಎ

ರಾಬರಿ, ಡಕಾಯತಿಗೆ ಪ್ಲ್ಯಾನ್

ಅಕ್ರಮವಾಗಿ ಬಾಂಗ್ಲಾ ವಲಸಿಗರನ್ನು ಕರೆತಂದು ಆರೋಪಿಗಳು ರಾಬರಿ, ಡಕಾಯತಿ ನಡೆಸಲು ಫ್ಲಾನ್ ಮಾಡಿದ್ದರು ಎಂಬ ಶಂಕೆ ವ್ಯಕ್ತವಾಗಿದೆ. ಕೆಲವರಿಗೆ ರಾಬರಿ ಡಕಾಯತಿಗಾಗಿ ತರಬೇತಿ ಕೂಡ ನೀಡಿದ್ದರು ಎನ್ನಲಾಗಿದೆ. ಇನ್ನೂ ಕೆಲವರನ್ನು ವೇಶ್ಯಾವಾಟಿಕೆಯಲ್ಲಿ ಸೇರಿಸಲು ಪ್ಲ್ಯಾನ್ ನಡೆದಿತ್ತು.

ಈ ಸಂಬಂಧ ಆರೋಪಿಗಳ ಪ್ಲ್ಯಾನ್ ಬಗ್ಗೆ ಮಾತ್ರ ಬಾಯಿಬಿಡುತ್ತಿರುವ ಆರೋಪಿಗಳು, ಮಾಡಿದವರ ಹೆಸರನ್ನು ಬಾಯಿ ಬಿಡುತ್ತಿಲ್ಲ ಎಂಬ ವಿಚಾರ ಮೂಲಗಳಿಂದ ತಿಳಿದುಬಂದಿದೆ. ಸದ್ಯ ಎನ್​ಐಎ ಅಧಿಕಾರಿಗಳು 11 ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:11 am, Fri, 10 November 23

Follow Us
Jagadisha B
Jagadisha B

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ