AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Metro: ಕೆಆರ್ ಪುರಂ, ವೈಟ್‌ಫೀಲ್ಡ್ ಹೊಸ ಮೆಟ್ರೋ ಮಾರ್ಗದಲ್ಲಿ ಮೊದಲ ದಿನ 16 ಸಾವಿರಕ್ಕೂ ಹೆಚ್ಚು ಜನರು ಪ್ರಯಾಣಿಸಿದ್ದಾರೆ: ವರದಿ

ಹೊಸದಾಗಿ ಉದ್ಘಾಟನೆಗೊಂಡ ಕೆಆರ್ ಪುರಂ - ವೈಟ್‌ಫೀಲ್ಡ್ ಮೆಟ್ರೋ ಮಾರ್ಗದ ಸೇವೆಯನ್ನು ಮೊದಲ ದಿನವೇ 16,000 ಕ್ಕೂ ಹೆಚ್ಚು ಪ್ರಯಾಣಿಕರು ಬಳಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ . ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ (ಮಾ.25) ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮೆಟ್ರೋ ಮಾರ್ಗವನ್ನು ಉದ್ಘಾಟಿಸಿದರು.

Bengaluru Metro:  ಕೆಆರ್ ಪುರಂ, ವೈಟ್‌ಫೀಲ್ಡ್ ಹೊಸ ಮೆಟ್ರೋ ಮಾರ್ಗದಲ್ಲಿ ಮೊದಲ ದಿನ 16 ಸಾವಿರಕ್ಕೂ ಹೆಚ್ಚು ಜನರು ಪ್ರಯಾಣಿಸಿದ್ದಾರೆ: ವರದಿ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Mar 27, 2023 | 2:29 PM

Share

ಬೆಂಗಳೂರು: ಹೊಸದಾಗಿ ಉದ್ಘಾಟನೆಗೊಂಡ ಕೆಆರ್ ಪುರಂ – ವೈಟ್‌ಫೀಲ್ಡ್ ಮೆಟ್ರೋ (Puram, Whitefield) ಮಾರ್ಗದ ಸೇವೆಯನ್ನು ಮೊದಲ ದಿನವೇ 16,000 ಕ್ಕೂ ಹೆಚ್ಚು ಪ್ರಯಾಣಿಕರು ಬಳಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ . ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ (ಮಾ.25) ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮೆಟ್ರೋ ಮಾರ್ಗವನ್ನು ಉದ್ಘಾಟಿಸಿದರು. ವರದಿಯ ಪ್ರಕಾರ, ಕೆಆರ್ ಪುರಂ – ವೈಟ್‌ಫೀಲ್ಡ್ ಮೆಟ್ರೋ ಮಾರ್ಗದಲ್ಲಿ ಭಾನುವಾರ ಬೆಳಿಗ್ಗೆ 7 ರಿಂದ ಸಂಜೆ 6 ರ ನಡುವೆ 16, 319 ಜನರು ಪ್ರಯಾಣಿಸಿದ್ದಾರೆ. ಹೊಸದಾಗಿ ಉದ್ಘಾಟನೆಗೊಂಡ ಮೆಟ್ರೋ ನೇರಳೆ ಮಾರ್ಗದ ಮೆಟ್ರೋದ ವಿಸ್ತರಣೆಯಾಗಿದ್ದು, ಇದು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದೊಂದಿಗೆ ಇನ್ನೂ ಸಂಪರ್ಕವನ್ನು ಸಾಧಿಸಿಲ್ಲ. ಕೆಆರ್ ಪುರಂ-ಬೈಯಪ್ಪನಹಳ್ಳಿ ಮೆಟ್ರೋ ಮಾರ್ಗದ ಕಾಮಗಾರಿಗಳು ನಡೆಯುತ್ತಿದ್ದು, ಈ ಮಾರ್ಗವು ಈ ವರ್ಷದ ಕೊನೆಯಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.

ವೈಟ್‌ಫೀಲ್ಡ್ ಮೆಟ್ರೋದಿಂದ ಕೆಆರ್ ಪುರಂವರೆಗಿನ ಬೆಂಗಳೂರು ಮೆಟ್ರೋದ 2 ನೇ ಹಂತದ ವಿಸ್ತರಣೆ ಯೋಜನೆಯಲ್ಲಿ, ಈಗಾಗಲೇ 13.71 ಕಿಲೋಮೀಟರ್ (ಕಿಮೀ) ವಿಸ್ತರಣೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. BMRCL (ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ) ಪ್ರಕಾರ ಇದು 10 – 12 ನಿಮಿಷಗಳ ಸಮಯದಲ್ಲಿ ಏಳು ರೈಲುಗಳು ಸಂಚರಿಸಲಾಗುತ್ತದೆ. ನಗರದಲ್ಲಿ ಸಂಚಾರ ದಟ್ಟಣೆಯನ್ನು ನಿವಾರಿಸಲು ಮತ್ತು ಸಂಚಾರ ದಟ್ಟಣೆಯನ್ನು ತಡೆಯಲು ಸುಮಾರು 4,250 ಕೋಟಿ ರೂ. ವೆಚ್ಚದಲ್ಲಿ ಇದನ್ನು ನಿರ್ಮಿಸಲಾಗಿದೆ.

ಇದನ್ನೂ ಓದಿ: Bengaluru Metro: ದೇಶದ ಎರಡನೇ ಅತಿದೊಡ್ಡ ಮೆಟ್ರೋ ನೆಟ್​ವರ್ಕ್ ಆಗಿ ಹೊರಹೊಮ್ಮಿದ ಬೆಂಗಳೂರು ನಮ್ಮ ಮೆಟ್ರೋ

ಕೆಆರ್ ಪುರಂ-ವೈಟ್‌ಫೀಲ್ಡ್ ಮಾರ್ಗವು ವೈಟ್‌ಫೀಲ್ಡ್, ಚನ್ನಸಂದ್ರ, ಕಾಡುಗೋಡಿ, ಪಟ್ಟಂದೂರು ಅಗ್ರಹಾರ, ಶ್ರೀ ಸತ್ಯ ಸಾಯಿ ಆಸ್ಪತ್ರೆ, ನಲ್ಲೂರು ಹಳ್ಳಿ, ಕುಂದಲಹಳ್ಳಿ, ಸೀತಾರಾಮ ಪಾಳ್ಯ, ಹೂಡಿ ಜಂಕ್ಷನ್, ಗರುಡಾಚಾರ್ಪಾಳ್ಯ, ಮಹದೇವಪುರ ಮತ್ತು ಕೆಆರ್ ಪುರಂ ಸೇರಿದಂತೆ 12 ಮೆಟ್ರೋ ನಿಲ್ದಾಣಗಳನ್ನು ಹೊಂದಿರುತ್ತದೆ.

Published On - 2:29 pm, Mon, 27 March 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ