
ಬೆಂಗಳೂರು, ಮೇ 06: ಪಹಲ್ಗಾಮ್ನಲ್ಲಿ ಉಗ್ರರ ದಾಳಿ (Pahalgam Terrorist attack) ನಂತರ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪಾಕಿಸ್ತಾನದ (Pakistan) ಜೊತೆಗಿನ ಯುದ್ಧದ ಸಾಧ್ಯತೆಯ ನಡುವೆ ಮೇ 7ರಂದು ದೇಶಾದ್ಯಂತ ಮಾಕ್ ಡ್ರಿಲ್ (Mock Drill) ನಡೆಸಲು ಗೃಹ ಸಚಿವಾಲಯ ರಾಜ್ಯಗಳಿಗೆ ನಿರ್ದೇಶನ ನೀಡಿದೆ. ಅದರಂತೆ ಕರ್ನಾಟಕದ ಬೆಂಗಳೂರಿನಲ್ಲಿ ಮಾಕ್ ಡ್ರಿಲ್ ನಡೆಯಲಿದೆ. ಮಾಕ್ ಡ್ರಿಲ್ ಸಂಬಂಧ ಬೆಂಗಳೂರು ನಗರದಾದ್ಯಂತ 6.40ರ ಸುಮಾರಿಗೆ ವಿದ್ಯುತ್ ಸ್ಥಗಿತಗೊಳ್ಳಲಿದೆ. ರಾಯಚೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಡೆಯಬೇಕಿದ್ದ ಮಾಕ್ ಡ್ರಿಲ್ ಮುಂದೂಡಲಾಗಿದೆ.
ಬೆಂಗಳೂರಿನಲ್ಲಿ ಸಂಜೆ 5.30ರಿಂದ ಸಂಜೆ 7 ಗಂಟೆಯವರೆಗೆ ಮಾಕ್ ಡ್ರಿಲ್ ನಡೆಯುವ ಸಾಧ್ಯತೆ ಇದೆ. ಸಂಜೆ 6.40ರ ಸುಮಾರಿಗೆ ನಗರದಾದ್ಯಂತ ವಿದ್ಯುತ್ ಸ್ಥಗಿತಗೊಳ್ಳಲಿದೆ. ದೊಡ್ಡ ದೊಡ್ಡ ಕಟ್ಟಡಗಳನ್ನು ರಕ್ಷಣೆ ಮಾಡುವ ಅಣಕು ಪ್ರದರ್ಶನ ನಡೆಯುತ್ತದೆ. ವಾಟರ್ ಜೆಟ್ ಬಳಸಿ ರಕ್ಷಣಾ ಕಾರ್ಯಾಚರಣೆ ಅಣಕು ಪ್ರದರ್ಶನ ನಡೆಯಲಿದೆ.
ಕ್ಯಾಟಗರಿ 2 ರಲ್ಲಿ ಕರ್ನಾಟಕದ ಎರಡು ಮೂರು ಜಿಲ್ಲೆಗಳಿವೆ. ಕಾರವಾರದ ಮಲ್ಲಾಪುರ, ರಾಯಚೂರಿನ ಶಕ್ತಿನಗರ ಮತ್ತು ಬೆಂಗಳೂರು ಕ್ಯಾಟಗರಿ 2 ನಲ್ಲಿ ಬರುವ ಪ್ರದೇಶವಾಗಿದೆ. ಆಪರೇಶನ್ ಅಭ್ಯಾಸ್ ಹೆಸರಿನಲ್ಲಿ ಮಾಕ್ ಡ್ರಿಲ್ ನಡೆಯಲಿದೆ.
ಇದನ್ನೂ ಓದಿ: ಮಾಕ್ ಡ್ರಿಲ್ ಅಂದ್ರೇನು? ಬೆಂಗಳೂರಿನಲ್ಲಿ ಎಲ್ಲೆಲ್ಲಿ, ಹೇಗೆ ನಡೆಯುತ್ತೆ? ಇಲ್ಲಿದೆ ಸಂಪೂರ್ಣ ವಿವರ
ದೆಹಲಿ, ಮುಂಬೈ, ಪುಣೆ, ಬೆಂಗಳೂರು, ಹೈದರಾಬಾದ್ ಮತ್ತು ಅಹಮದಾಬಾದ್‌ನಂತಹ ಮೆಟ್ರೋ ನಗರಗಳು ಸೇರಿದಂತೆ ಭಾರತದ 259 ಸ್ಥಳಗಳಲ್ಲಿ ನಾಳೆ ಮಾಕ್ ಡ್ರಿಲ್ ನಡೆಯಲಿದೆ. ಇವುಗಳಲ್ಲಿ 100ಕ್ಕೂ ಹೆಚ್ಚು ಸ್ಥಳಗಳನ್ನು ಅತ್ಯಂತ ಸೂಕ್ಷ್ಮವೆಂದು ಗುರುತಿಸಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:03 pm, Tue, 6 May 25