AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಹಲ್ಗಾಮ್ ದಾಳಿ ಬಗ್ಗೆ ಎನ್​ಐಎ ತನಿಖೆ ಚುರುಕು: ಭರತ್ ಭೂಷಣ್ ಪತ್ನಿಯಿಂದ ಮಹತ್ವದ ಮಾಹಿತಿ ಕಲೆ ಹಾಕಿದ ಅಧಿಕಾರಿಗಳು

ಪಹಲ್ಗಾಮ್ ಉಗ್ರರ ದಾಳಿಗೆ ಬಲಿಯಾದ ಬೆಂಗಳೂರಿನ ಭರತ್ ಭೂಷಣ್ ಮನೆಯಲ್ಲಿ ಸದ್ಯ ನೀರವ ಮೌನ ಆವರಿಸಿದೆ. ಇದೇ ಹೊತ್ತಿನಲ್ಲಿ ದಾಳಿಯ ತನಿಖೆ ಹೊಣೆ ಹೊತ್ತಿರುವ ಎನ್​ಐಎ ಅಧಿಕಾರಿಗಳ ತಂಡ ಬೆಂಗಳೂರಿಗೆ ಬಂದಿದ್ದು, ಭರತ್ ಪತ್ನಿ ಬಳಿ ಸಾಕಷ್ಟು ಮಾಹಿತಿ ಸಂಗ್ರಹಿಸಿದೆ. ದಾಳಿ ಸಂದರ್ಭದ ಬಗ್ಗೆ ಹೇಳಿಕೆ ಪಡೆದಿದೆ. ಶಿವಮೊಗ್ಗದ ಮಂಜುನಾಥ್ ಮನೆಗೂ ತೆರಳಲಿರುವ ಎನ್​ಐಎ ತಂಡ, ಮಂಜುನಾಥ್ ಪತ್ನಿ ಪಲ್ಲವಿ ಅವರಿಂದಲೂ ಮಾಹಿತಿ ಕಲೆ ಹಾಕಲಿದೆ.

ಪಹಲ್ಗಾಮ್ ದಾಳಿ ಬಗ್ಗೆ ಎನ್​ಐಎ ತನಿಖೆ ಚುರುಕು: ಭರತ್ ಭೂಷಣ್ ಪತ್ನಿಯಿಂದ ಮಹತ್ವದ ಮಾಹಿತಿ ಕಲೆ ಹಾಕಿದ ಅಧಿಕಾರಿಗಳು
ಬೆಂಗಳೂರಿನಲ್ಲಿರುವ ಭರತ್ ಭೂಷಣ್ ನಿವಾಸ ಮತ್ತು ಎನ್​ಐಎ ಅಧಿಕಾರಿಗಳ ಸಂಗ್ರಹ ಚಿತ್ರ
Ganapathi Sharma
|

Updated on: Apr 29, 2025 | 10:01 AM

Share

ಬೆಂಗಳೂರು, ಏಪ್ರಿಲ್ 29: ದೇಶವನ್ನೇ ಬೆಚ್ಚಿಬೀಳಿಸಿದ್ದ ಕಾಶ್ಮೀರದ ಪಹಲ್ಗಾಮ್ ದಾಳಿಯ (Pahalgam Terror Attack) ಬಗ್ಗೆ ಎನ್​ಐಎ (NIA) ಅಧಿಕಾರಿಗಳು ತನಿಖೆಗೆ ಆರಂಭಿಸಿದ್ದಾರೆ. ಉಗ್ರರ ಗುಂಡೇಟಿಗೆ ಬಲಿಯಾದ, ಬೆಂಗಳೂರಿನ ಮತ್ತಿಕೆರೆಯ ನಿವಾಸಿ ಭರತ್ ಭೂಷಣ್ (Bharath Bhushan) ಮನೆಗೂ ಎನ್​ಐಎ ಅಧಿಕಾರಿಗಳ ತಂಡ ಆಗಮಿಸಿದೆ. ಭರತ್ ಭೂಷಣ್ ನಿವಾಸಕ್ಕೆ ಭೇಟಿ ನೀಡಿದ ನಾಲ್ವರು ಅಧಿಕಾರಿಗಳು ದಾಳಿ ಬಗ್ಗೆ ಮಹತ್ವದ ಮಾಹಿತಿ ಸಂಗ್ರಹ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಾಲ್ವರು ಅಧಿಕಾರಿಗಳ ತಂಡ ಭರತ್ ಭೂಷಣ್ ಪತ್ನಿ ಡಾ.ಸುಜಾತಾರನ್ನು ವಿಚಾರಣೆ ನಡೆಸಿದೆ. ಈ ವೇಳೆ ಘಟನೆ ಬಗ್ಗೆ ಕೆಲ ಮಾಹಿತಿ ಕಲೆ ಹಾಕಿದ ತಂಡ, ಶಂಕಿತ ಉಗ್ರರ ರೇಖಾಚಿತ್ರಗಳನ್ನು ತೋರಿಸಿ ಹೇಳಿಕೆ ಪಡೆದಿದ್ದಾರೆ.

ಭರತ್ ಪತ್ನಿ ಬಳಿ ಎನ್​ಐಎ ಕೇಳಿದ ಪ್ರಶ್ನೆಗಳೇನು?

  • ಕಾಶ್ಮೀರಕ್ಕೆ ಯಾವಾಗ ಹೋಗಿದ್ರು, ಯಾರ್ಯಾರು ಹೋಗಿದ್ರಿ?
  • ಉಗ್ರರು ಬಂದಾಗ ನೀವು ಎಲ್ಲಿದ್ರಿ, ಭರತ್ ಭೂಷಣ್ ಎಲ್ಲಿದ್ರು?
  • ಉಗ್ರರು ಬಂದಾಗ ಯಾವ ಭಾಷೆ ಮಾತಾಡಿದ್ರು, ಎಷ್ಟು ಜನ ಇದ್ರು?
  • ಉಗ್ರರ ಮುಖ ಚಹರೆ, ವೇಷ ಭೂಷಣ ನೆನಪಿದ್ಯಾ?
  • ಉಗ್ರರ ಸ್ಕೇಚ್ ತೋರಿಸಿ ಮಾಹಿತಿ ಸಂಗ್ರಹ
  • ಉಗ್ರರ ಬಳಿಯಿದ್ದ ಆಯುಧವನ್ನ ನೋಡಿದ್ರಾ? ಅದು ಯಾವ ರೀತಿ ಇತ್ತು?

ಹೀಗೆ ಎನ್​ಐಎ ಅಧಿಕಾರಿಗಳು ಪ್ರಾಥಮಿಕ ತನಿಖೆ ನಡೆಸಿದ್ದಾರೆ. ‌ಉಗ್ರರ ಪೈಶಾಚಿಕ ಕೃತ್ಯವನ್ನು ಕಣ್ಣಾರೆ ಕಂಡಿದ್ದ ಸುಜಾತಾ ಕಂಡಿದ್ದೆಲ್ಲವನ್ನು ವಿವರಿಸಿದ್ದಾರೆ. ಮುಂದೆಯೂ ತನಿಖೆಗೆ ಸಹಕಾರ ನೀಡುವುದಾಗಿ ಹೇಳಿದ್ದಾರೆ. ಇಷ್ಟಲ್ಲದೇ ಉಗ್ರರ ದಾಳಿಗೆ ಬಲಿಯಾದ ಎಲ್ಲರ ಮನೆಗೂ ಹೋಗಿ ಎನ್​ಐಎ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ.

ಇದನ್ನೂ ಓದಿ
Image
ಬನ್ನೇರುಘಟ್ಟ ಜೂ, ಸಫಾರಿಗೆ ಆನ್​ಲೈನ್ ಮೂಲಕ ಟಿಕೆಟ್ ಬುಕ್ ಮಾಡುವಾಗ ಎಚ್ಚರ
Image
‘ಭಾರತವನ್ನು ದ್ವೇಷಿಸುತ್ತೇನೆ’: ವೈದ್ಯೆ ಅಫೀಫ ಫಾತಿಮಾ ದೇಶ ವಿರೋಧಿ ಪೋಸ್ಟ್
Image
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್ ಸೌಲಭ್ಯ
Image
ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಆನ್​ಲೈನ್ ವಂಚನೆ: ಎಚ್ಚರದಿಂದಿರಿ

ಉಗ್ರರ ದಾಳಿಯಲ್ಲಿ ಹತರಾಗಿದ್ದ ಶಿವಮೊಗ್ಗದ ಮಂಜುನಾಥ್ ಅವರ ಮನೆಗೂ ತೆರಳಿ ಅವರ ಪತ್ನಿ ಪಲ್ಲವಿ ಅವರಿಂದ ಎನ್​ಐಎ ಅಧಿಕಾರಿಗಳು ಮಾಹಿತಿ ಕಲೆ ಹಾಕಲಿದ್ದಾರೆ.

ಇದನ್ನೂ ಓದಿ: ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ

ಕಳೆದ ವಾರ ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್ ಜಿಲ್ಲೆಯ ಪಹಲ್ಗಾಮ್​ನಲ್ಲಿ ನಡೆದಿದ್ದ ಭೀಕರ ಉಗ್ರ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. ಇದರಲ್ಲಿ 25 ಮಂದಿ ಪ್ರವಾಸಿಗರು ಹಾಗೂ ಒಬ್ಬ ಸ್ಥಳೀಯ ವ್ಯಕ್ತಿ ಸೇರಿದ್ದಾನೆ. ಶಿವಮೊಗ್ಗದ ಮಂಜುನಾಥ್ ಹಾಗೂ ಬೆಂಗಳೂರಿನ ಭರತ್ ಭೂಷಣ್ ಸಹ ಘಟನೆಯಲ್ಲಿ ಸಾವಿಗೀಡಾಗಿದ್ದರು.

ವರದಿ: ಪ್ರದೀಪ್ ಚಿಕ್ಕಾಟಿ, ‘ಟಿವಿ9’

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ