ಪಾಕ್ ಪರ ಘೋಷಣೆ ಜಟಾಪಟಿ: ವಿಧಾನಸಭೆ ಕಲಾಪ ಮತ್ತೊಂದು ದಿನಕ್ಕೆ ವಿಸ್ತರಣೆ
ನಿನ್ನೆ(ಫೆ.27) ರಾಜ್ಯಸಭೆಯ ನೂತನ ಸಂಸದರಾಗಿ ಕಾಂಗ್ರೆಸ್‌ನ ನಾಸಿರ್ ಹುಸೇನ್ ಆಯ್ಕೆಯಾಗಿದ್ದು, ಈ ಹಿನ್ನಲೆ ಅವರ ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾಚರಣೆ ಮಾಡುತ್ತಿದ್ದರು. ಈ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು, ಇದೀಗ ವಿಧಾನಸಭೆಯ ಕಲಾಪದಲ್ಲಿ ದೊಡ್ಡಮಟ್ಟದಲ್ಲಿ ಜಟಾಪಟಿ ಶುರುವಾಗಿದೆ.
ಬೆಂಗಳೂರು, ಫೆ.28: ರಾಜ್ಯಸಭಾ ಚುನಾವಣೆ ನಡೆದು ಕಾಂಗ್ರೆಸ್‌ನ ಮೂವರು ರಾಜ್ಯಸಭೆಯ ನೂತನ ಸಂಸದರಾಗಿ ಆಯ್ಕೆಯಾಗಿದ್ದಾರೆ. ಈ ಹಿನ್ನಲೆ ನಿನ್ನೆ(ಫೆ.27) ಕಾಂಗ್ರೆಸ್‌ನ ನಾಸಿರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾಚರಣೆ ಮಾಡುತ್ತಿದ್ದರು. ಈ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ. ಇದನ್ನು ಖಂಡಿಸಿ ಇಂದು(ಫೆ,28) ವಿಧಾನಸಭೆ ಕಲಾಪದಲ್ಲಿ ಸದನದ ಬಾವಿಯಲ್ಲಿ ವಿಪಕ್ಷ ಬಿಜೆಪಿ ಧರಣಿ ನಡೆಸಿದೆ. ಈ ಹಿನ್ನಲೆ ಕಲಾಪವನ್ನು ನಾಳೆ ಬೆಳಗ್ಗೆ 9 ಗಂಟೆಗೆ ಮುಂದೂಡಿಕೆ ಮಾಡಲಾಗಿದೆ.
ನಾಳೆ ರಾಜ್ಯಪಾಲರಿಗೆ ದೂರು ನೀಡಲಿರುವ ಬಿಜೆಪಿ
ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದಲ್ಲದೆ ಸ್ಪೀಕರ್ ಪೀಠದ ಎದುರು ಬಿಜೆಪಿ ಸದಸ್ಯರು ಕಾಗದ ಹರಿದು ಎಸೆದಿದ್ದಾರೆ. ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರನ್ನು ಕೂಡಲೇ ಬಂಧಿಸಿ ಎಂದು ಬಿಜೆಪಿ ಒತ್ತಾಯಿಸಿದ್ದಾರೆ. ಈ ಹಿನ್ನಲೆ ವಿಧಾನಸಭೆ ಕಲಾಪವನ್ನು ಮತ್ತೊಂದು ದಿನಕ್ಕೆ ವಿಸ್ತರಣೆ ಮಾಡಲಾಗಿದ್ದು, ಇವತ್ತಿನ ಬದಲು ನಾಳೆ ರಾಜ್ಯಪಾಲರಿಗೆ ದೂರು ನೀಡಲು ಬಿಜೆಪಿ ನಿರ್ಧರಿಸಿದೆ.
ಇದನ್ನೂ ಓದಿ:ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ: ರಾಜ್ಯಾದ್ಯಂತ ನಾಳೆ ಪ್ರತಿಭಟನೆಗೆ ಕರೆ ನೀಡಿದ ಬಿಜೆಪಿ
ಕಿಡಿಕಾರಿದ್ದ ಆರ್ ಅಶೋಕ
ಈ ಘಟನೆ ಕುರಿತು ಬೆಂಗಳೂರಿನಲ್ಲಿ ಕಿಡಿಕಾರಿದ ಆರ್ ಅಶೋಕ ಎಕ್ಸ್ನಲ್ಲಿ ‘ಪ್ರಜಾಪ್ರಭುತ್ವದ ದೇಗುಲವಾದ ವಿಧಾನಸೌಧದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಈ ಘಟನೆ ಕಾಂಗ್ರೆಸ್ ಪಕ್ಷದ ವಿಕೃತ, ದೇಶದ್ರೋಹಿ ಮನಸ್ಥಿತಿಯನ್ನು ಪ್ರದರ್ಶನ ಮಾಡಿದೆ. ಚುನಾವಣೆಯಲ್ಲಿ ಗೆದ್ದಿದ್ದರೆ ನಿಮ್ಮ ಅಭ್ಯರ್ಥಿಗಳಿಗೆ ಜೈಕಾರ ಹಾಕಿ, ನಿಮ್ಮ ಪಕ್ಷಕ್ಕೆ ಜೈಕಾರ ಹಾಕಿ, ನಿಮ್ಮ ನಾಯಕರಿಗೆ ಜೈಕಾರ ಹಾಕಿ, ಅದು ಬಿಟ್ಟು ಪಾಕಿಸ್ತಾನ ಜಿಂದಾಬಾದ್ ಎಂದು ನಿಮ್ಮ ಪಕ್ಷದ ಕಾರ್ಯಕರ್ತರು ಘೋಷಣೆ ಕೂಗುತ್ತಾರಲ್ಲ ಸಿಎಂ ಸಿದ್ದರಾಮಯ್ಯ ಅವರೇ, ಮೂರು ರಾಜ್ಯಸಭೆ ಸ್ಥಾನ ಗೆದ್ದ ಮಾತ್ರಕ್ಕೆ ಮತೊಮ್ಮೆ ದೇಶ ವಿಭಜನೆ ಮಾಡಬಹುದು ಎಂದು ಕೊಂಡಿದ್ದೀರಾ?, ಪಾಕಿಸ್ತಾನ ಜಿಂದಾಬಾದ್ ಎಂಬುದೇ ಕಾಂಗ್ರೆಸ್ ಪಕ್ಷದ ಆತ್ಮಸಾಕ್ಷಿನಾ ಡಿಕೆ ಶಿವಕುಮಾರ್ ಅವರೇ ಎಂದು ವಾಗ್ದಾಳಿ ನಡೆಸಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:50 pm, Wed, 28 February 24