ಬೆಂಗಳೂರು, ಫೆ.28: ರಾಜ್ಯಸಭೆಯ ನೂತನ ಸಂಸದರಾಗಿ ಆಯ್ಕೆಯಾದ ಕಾಂಗ್ರೆಸ್‌ನ ನಾಸಿರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿತ್ತು.ರಾಜ್ಯಸಭಾ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಆರೋಪ ಕೇಳಿಬಂದಿದ್ದು, ಘಟನೆ ಬಗ್ಗೆ ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆಸುವಂತೆ ಕೇಂದ್ರ ಗೃಹಸಚಿವ ಅಮಿತ್ ಶಾಗೆ ಕೇಂದ್ರ ಕೃಷಿ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ(Shobha Karandlaje)ಪತ್ರ ಬರೆದಿದ್ದಾರೆ.
ನಿನ್ನೆ(ಫೆ.27) ಚುನಾವಣೆಯಲ್ಲಿ ಗೆದ್ದ ಬಳಿಕ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ನೂತನ ಸಂಸದ ನಾಸೀರ್ ಹುಸೇನ್ ಮಾತನಾಡುತ್ತಿದ್ದರು. ಈ ವೇಳೆ ನಾಸಿರ್ ಹುಸೇನ್ ಹುಸೇನ್ ಪಕ್ಕದಲ್ಲಿ ನಿಂತಿದ್ದ ಯುವಕನೊಬ್ಬ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದ ಆರೋಪ ಕೇಳಿಬಂದಿತ್ತು. ಈ ಕುರಿತು ಹಲವು ಬಿಜೆಪಿ ನಾಯಕರು ಕಿಡಿಕಾರಿದ್ದರು. ಜೊತೆಗೆ ನಾಳೆ(ಫೆ.28) ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮತ್ತು ಕಾಂಗ್ರೆಸ್ ಕಚೇರಿಗಳಿಗೆ ಮುತ್ತಿಗೆಗೆ ವಿಪಕ್ಷ ಬಿಜೆಪಿ ಕರೆ ಕೊಟ್ಟಿದ್ದಾರೆ. ಈ ನಡುವೆ ಈ ಘಟನೆಯ ವಿಚಾರಣೆಯನ್ನು ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆಸುವಂತೆ ಶೋಭಾ ಕರಂದ್ಲಾಜೆ ಪತ್ರ ಅಮಿತ್ ಶಾಗೆ ಪತ್ರ ಬರೆದಿದ್ದಾರೆ.
ಇದನ್ನೂ ಓದಿ:ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದವ ಯಾರು? ಪತ್ತೆ ಮಾಡಿದ ಬ್ಯಾಡಗಿ ಬಿಜೆಪಿ ಮುಖಂಡರು!
ಬೆಂಗಳೂರಿನಲ್ಲಿ ಮಾತನಾಡಿದ್ದ ಆರ್ ಅಶೋಕ, ‘ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ರಾಜ್ಯಪಾಲರು ಕಾಂಗ್ರೆಸ್ ಸರ್ಕಾರವನ್ನು ಕೂಡಲೇ ವಜಾ ಮಾಡಲಿ, ಈ ಪಾಕ್ ಪರ ಘೋಷಣೆ ಕೂಗಿರುವ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದಿದ್ದರು. ಈ ಕುರಿತು ಎಕ್ಸ್ನಲ್ಲಿ ‘ಪ್ರಜಾಪ್ರಭುತ್ವದ ದೇಗುಲವಾದ ವಿಧಾನಸೌಧದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಈ ಘಟನೆ ಕಾಂಗ್ರೆಸ್ ಪಕ್ಷದ ವಿಕೃತ, ದೇಶದ್ರೋಹಿ ಮನಸ್ಥಿತಿಯನ್ನು ಪ್ರದರ್ಶನ ಮಾಡಿದೆ ಎಂದು ಕಿಡಿಕಾರಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:35 pm, Wed, 28 February 24