ಪಂಚಮಸಾಲಿಗೆ 2ಸಿ, 2ಡಿ ಮೀಸಲಾತಿ ವಿಚಾರ; ಹೈಕೋರ್ಟ್​ಗೆ ಪ್ರಮಾಣಪತ್ರ ಸಲ್ಲಿಸಿದ ಎಜಿ ಪ್ರಭುಲಿಂಗ ನಾವದಗಿ

ಲಿಂಗಾಯತ ಪಂಚಮಸಾಲಿಗೆ 2ಸಿ, 2ಡಿ ಮೀಸಲಾತಿ ಸಂಬಂಧ ಕರ್ನಾಟಕ ಹೈಕೋರ್ಟ್ ನೀಡಿದ್ದ ಯಥಾಸ್ಥಿತಿ ಮಧ್ಯಂತರ ಆದೇಶ ತೆರವುಗೊಳಿಸಿದ ಬೆನ್ನಲ್ಲೇ ಸರ್ಕಾರದ ಪರ ವಕೀಲ ಅಡ್ವೊಕೇಟ್‌ ಜನರಲ್‌ (ಎಜಿ) ಪ್ರಭುಲಿಂಗ್ ನಾವದಗಿ ಅವರು ಹೈಕೋರ್ಟ್​​​ಗೆ ಪ್ರಮಾಣಪತ್ರ ಸಲ್ಲಿಸಿದ್ದಾರೆ.

ಪಂಚಮಸಾಲಿಗೆ 2ಸಿ, 2ಡಿ ಮೀಸಲಾತಿ ವಿಚಾರ; ಹೈಕೋರ್ಟ್​ಗೆ ಪ್ರಮಾಣಪತ್ರ ಸಲ್ಲಿಸಿದ ಎಜಿ ಪ್ರಭುಲಿಂಗ ನಾವದಗಿ
ಲಿಂಗಾಯತ ಪಂಚಮಸಾಲಿಗೆ 2ಸಿ, 2ಡಿ ಮೀಸಲಾತಿ ವಿಚಾರ ಸಂಬಂಧ ಕರ್ನಾಟಕ ಹೈಕೋರ್ಟ್​ಗೆ ಪ್ರಮಾಣಪತ್ರ ಸಲ್ಲಿಸಿದ ಎಜಿ ಪ್ರಭುಲಿಂಗ್ ನಾವದಗಿ
Follow us
Rakesh Nayak Manchi
|

Updated on:Mar 23, 2023 | 3:32 PM

ಬೆಂಗಳೂರು: ಲಿಂಗಾಯತ ಪಂಚಮಸಾಲಿಗೆ 2ಸಿ, 2ಡಿ ಮೀಸಲಾತಿ (Panchamasali 2C 2D reservation) ಸಂಬಂಧ ಕರ್ನಾಟಕ ಹೈಕೋರ್ಟ್ (Karnataka High Court) ನೀಡಿದ್ದ ಯಥಾಸ್ಥಿತಿ ಮಧ್ಯಂತರ ಆದೇಶ ತೆರವುಗೊಳಿಸಿದ ಬೆನ್ನಲ್ಲೇ ಸರ್ಕಾರದ ಅಡ್ವೊಕೇಟ್‌ ಜನರಲ್‌ (ಎಜಿ) ಪ್ರಭುಲಿಂಗ ನಾವದಗಿ (Prabhuling Navadgi) ಅವರು ಹೈಕೋರ್ಟ್​​​ಗೆ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಸರ್ಕಾರದ ನಿರ್ಧಾರದಿಂದ 2ಎ ಮೀಸಲಾತಿ ಪ್ರಮಾಣದಲ್ಲಿ ಬದಲಾವಣೆ ಆಗಲ್ಲ, 2ಎನಲ್ಲಿ ಯಾವುದೇ ಜಾತಿ ಸೇರಿಸುವುದಿಲ್ಲ ಮತ್ತು ತೆಗೆಯುವುದಿಲ್ಲ. ಮಾರ್ಚ್ 30, 2002ರ ಸರ್ಕಾರಿ ಆದೇಶದಲ್ಲಿ ಮಾರ್ಪಾಡು ಮಾಡುವುದಿಲ್ಲ. ಹೈಕೋರ್ಟ್ ಅನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ತುಳಸಿ ಮದ್ದಿನೇನಿ ಸಹಿ ಹಾಕಿದ ಪ್ರಮಾಣಪತ್ರವನ್ನು ಪ್ರಭುಲಿಂಗ್ ನಾವದಗಿ ಅವರು ಹೈಕೋರ್ಟ್​​​ಗೆ ಸಲ್ಲಿಸಿದ್ದಾರೆ.

ಲಿಂಗಾಯತ ಪಂಚಮಸಾಲಿಗೆ 2ಸಿ, 2ಡಿ ಮೀಸಲಾತಿ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನೀಡಿದ್ದ ಮಧ್ಯಂತರ ಆದೇಶವನ್ನು ಕರ್ನಾಟಕ ಹೈಕೋರ್ಟ್ ಇಂದು ತೆರವುಗೊಳಿಸಿತ್ತು. ಹೈಕೋರ್ಟ್ ಯಥಾಸ್ಥಿತಿ ಆದೇಶ ತೆರವುಗೊಳಿಸಿದ್ದರಿಂದ ಚುನಾವಣೆ ಹೊಸ್ತಿಲಿನಲ್ಲಿ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿತ್ತು. 2ಎ ಮೀಸಲಾತಿಯಲ್ಲಿ ಯಾವುದೇ ಪರಿವರ್ತನೆ ಮಾಡುವುದಿಲ್ಲ ಎಂದು ಹೈಕೋರ್ಟ್​​ಗೆ ಕೇಂದ್ರ ಸರ್ಕಾರದ ಸಾಲಿಸಿಟರ್ ಭರವಸೆ ನೀಡಿದರು. ಕೇಂದ್ರ ಸರ್ಕಾರದ ಭರವಸೆ ಹಿನ್ನೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಿ ಈಗ ಹೊಸ ಆದೇಶ ಹೊರಡಿಸಿತ್ತು.

ಇದನ್ನೂ ಓದಿ: ಲಿಂಗಾಯತ ಪಂಚಮಸಾಲಿಗೆ 2 ಸಿ, 2 ಡಿ ಮೀಸಲಾತಿ: ಯಥಾಸ್ಥಿತಿ ಆದೇಶ ತೆರವುಗೊಳಿಸಿದ ಹೈಕೋರ್ಟ್, ಸರ್ಕಾರಕ್ಕೆ ಬಿಗ್ ರಿಲೀಫ್

ಹೈಕೋರ್ಟ್ ಆದೇಶವನ್ನು ಸ್ವಾಗತಿಸುತ್ತೇವೆ: ಜಯಮೃತ್ಯಂಜಯಶ್ರೀ

ಪಂಚಮಸಾಲಿಗೆ 2ಸಿ, 2ಡಿ ಮೀಸಲಾತಿಗೆ ಅಡ್ಡಿಯಿಲ್ಲ ಎಂಬ ಹೈಕೋರ್ಟ್ ಆದೇಶ ವಿಚಾರವಾಗಿ ಟಿವಿ9 ಜೊತೆ ಮಾತನಾಡಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ, 2ಸಿ, 2ಡಿ ವಿಚಾರವಾಗಿ ಈ ಹಿಂದೆ ಸಂಪುಟದಲ್ಲಿ ಒಪ್ಪಿಗೆ ಸಿಕ್ಕಿರಲಿಲ್ಲ. ವಿನಾಕಾರಣ ಕೆಲವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಿದ್ದರು. ಆದರೆ ಆಗ ಸರ್ಕಾರ ತಕ್ಷಣ ಪ್ರಶ್ನಿಸುವ ನಿರ್ಧಾರವನ್ನೂ ಮಾಡಿರಲಿಲ್ಲ. ರಾಜ್ಯ ಸರ್ಕಾರದ ಅಡ್ವೋಕೇಟ್ ಸರಿಯಾಗಿ ವಾದ ಮಂಡಿಸಲಿಲ್ಲ. ಅದಾಗ್ಯೂ ಹೊರಬಿದ್ದ ಹೈಕೋರ್ಟ್ ಆದೇಶವನ್ನು ಸ್ವಾಗತಿಸುತ್ತೇವೆ. ಸದ್ಯ ಮೀಸಲಾತಿಗೆ ಇದ್ದ ಎಲ್ಲ ಅಡೆತಡೆಗಳು ತೆರವಾಗಿವೆ ಎಂದರು.

ಸಚಿವ ಸಂಪುಟದಲ್ಲಿ ಸಿಎಂ ಸ್ಪಷ್ಟ ನಿರ್ಧಾರವನ್ನು ತೆಗೆದುಕೊಳ್ಳಬೇಕು. ರಾಜ್ಯ ಸರ್ಕಾರಕ್ಕೆ ಮೋದಿ ಹಾಗೂ ಅಮಿತ್ ಶಾ ಸೂಚನೆ ಸಹ ಇದೆ. ಆ ಪ್ರಕಾರ ಸಂಪುಟ ಸಭೆ ನಿರ್ಧರಿಸುತ್ತಾ ಎಂಬುದನ್ನು ನೋಡಬೇಕು. 2A ನಲ್ಲಿ ಸಿಗುತ್ತಿರುವ 15% ಮೀಸಲಾಗಿ ಶಿಕ್ಷಣ ಹಾಗೂ ಉದ್ಯೋಗದಲ್ಲಿ 2D ಅಡಿಯಲ್ಲಿ ನೀಡಲಿ, ಸದ್ಯ ನಮಗೆ ಶೇಕಾಡ 5% ಸಿಗುತ್ತಿದೆ. 10% ಮಾಡಿದರೆ ನಮಗೆ ಖುಷಿ ಇದೆ. ನಾಳಿನ ಸಚಿವ ಸಂಪುಟದ ನಿರ್ಧಾರದ ಮೇಲೆ ತುರ್ತು ಸಭೆ ಮಾಡುತ್ತೇವೆ. ಕೇವಲ ಭರವಸೆಗಳಿಂದ ನಾವು ಬಹಳ ಮೋಸಕ್ಕೆ ಒಳಗಾಗಿದ್ದೇವೆ. ನಮಗೆ ಆದೇಶ ಪ್ರತಿಯೇ ಬೇಕು. ಆ ಬಳಿಕ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಮಾಡುತ್ತೇವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಸೇರಿ ನಮಗೆ ನ್ಯಾಯ ಕೊಡಬೇಕು ಎಂದು ಸ್ವಾಮೀಜಿ ಹೇಳಿದರು.

ಜಾಣತನದಿಂದ ಸಮಾಜಕ್ಕೆ ಮೀಸಲಾತಿ ಪಡೆಯುವ ಕೆಲಸ ಆಗಬೇಕು: ವಚನಾನಂದಶ್ರೀ

2ಎ ಮೀಸಲಾತಿಗೆ ಜಯಮೃತ್ಯುಂಜಯ ಸ್ವಾಮೀಜಿ ಪಟ್ಟು ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ವಚನಾನಂದಶ್ರೀ, ಜಾಣತನದಿಂದ ಸಮಾಜಕ್ಕೆ ಮೀಸಲಾತಿ ಪಡೆಯುವ ಕೆಲಸ ಆಗಬೇಕು. 2ಎ ಕೆಟಗರಿಯಲ್ಲಿರುವ ಸಮುದಾಯಗಳು ಕೋರ್ಟ್​ಗೆ ಹೋಗುತ್ತವೆ. ಹೀಗಾಗಿ ನಮಗೆ ಮೀಸಲಾತಿ ಸಿಗುತ್ತಾ ಇಲ್ವಾ ಅಂತಾ ಯೋಚಿಸಬೇಕು. ಯಾವ ಮನೆಗೆ ಕಳುಹಿಸಿದರೂ ಅಲ್ಲಿ ವಾತಾವರಣ ಚೆನ್ನಾಗಿ ಇರಬೇಕು. ನಮಗೆ ಇದೆ ಮನೆ ಬೇಕು ಎಂದು ಹಠ ಹಿಡಿಯುವುದು ಒಳ್ಳೆಯದಲ್ಲ. ಸರ್ಕಾರದ ಜೊತೆ ನಾವು ಯುದ್ಧಕ್ಕೆ ಹೋಗದೇ ಮನವೊಲಿಸಬೇಕು. ಹುಂಬತನಗಿಂತಲೂ ಜಾಣತನ ಎಂಬುವುದು ಬಹಳ ಕೆಲಸ ಮಾಡುತ್ತದೆ ಎಂದರು.

ಜಯಮೃತ್ಯುಂಜಯ ಸ್ವಾಮೀಜಿ ಮಾತಿನ ಬಗ್ಗೆ ನಾನು ಮಾತಾಡಲ್ಲ, ಅವರ ಹೋರಾಟಕ್ಕೂ ನಮ್ಮ ಹೋರಾಟಕ್ಕೂ ಬಹಳ ವ್ಯತ್ಯಾಸ ಇದೆ. ಯಾರಲ್ಲಿ ಗೊಂದಲ ಇದೆ, ಯಾರಲ್ಲಿ ಸ್ಪಷ್ಟತೆ ಇದೆ ಗೊತ್ತಾಗುತ್ತದೆ ಎಂದು ಹೇಳುವ ಮೂಲಕ ವಚನಾನಂದಶ್ರೀಯವರು ಬಸವಜಯ ಮೃತ್ಯುಂಜಯ ಸ್ವಾಮೀಜಿಯ ಆರೋಪಕ್ಕೆ ತಿರುಗೇಟು ನೀಡಿದರು. ಕೇಂದ್ರ ನಾಯಕರನ್ನು ಮನವೊಲಿಸುವಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ವಿಫಲ ಎಂದು ಶ್ರೀಗಳು ಆರೋಪಿಸಿದ್ದರು.

ನಾಳೆ ಸರ್ಕಾರದಿಂದ ಸ್ಪಷ್ಟತೆ ಸಿಗುವ ಸಾಧ್ಯತೆ

ಹೈಕೋರ್ಟಿನ ತೀರ್ಪು ಸಂತೋಷ ನಮಗೆ ತಂದಿದೆ. ಸಮುದಾಯ ದೃಷ್ಟಿಯಿಂದ ಇದು ಒಳ್ಳೆಯ ತೀರ್ಪು ಆಗಿದೆ. ಯಾವುದೇ ಸಮುದಾಯಕ್ಕೆ ಮೀಸಲಾತಿ ಕೊಡಬೇಕಾದರೆ ಸ್ಪಷ್ಟತೆ ಇರಬೇಕು. ಸಂವಿಧಾನವಾಗಿ ಕಾನೂನಿನ ತೊಡಕುಗಳು ಆಗಬಾರದು. ಸರ್ಕಾರ ಎಲ್ಲಾ ದೃಷ್ಟಿಯಿಂದ ಯೋಚನೆ ಮಾಡಿ 2ಸಿ, 2ಡಿ ಮೀಸಲಾತಿ ತೀರ್ಮಾನ ಮಾಡಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ನಮ್ಮ ಸಂಪರ್ಕದಲ್ಲಿವೆ. ನಮ್ಮ 30 ವರ್ಷಗಳ ಹೋರಾಟಕ್ಕೆ ಒಂದು ಸ್ಪಷ್ಟ ಚಿತ್ರಣ ಸಿಗಬೇಕಿದೆ. ಸರ್ಕಾರ 2ಡಿ, 2ಸಿ ಮಾಡಿದಾಗ ನಮಗೆ ಒಂದು ಸ್ಪಷ್ಟತೆ ಇರಲಿಲ್ಲ. ಹೀಗಾಗಿ ನಮ್ಮ ಸಮುದಾಯಕ್ಕೆ ಅನುಕೂಲ ಆಗುವ ರೀತಿಯಲ್ಲಿ ನಾಳೆ ಸರ್ಕಾರದಿಂದ ನಮಗೆ ಒಂದು ಸ್ಪಷ್ಟತೆ ಸಿಗಲಿದೆ. ಬೊಮ್ಮಾಯಿ ಸರ್ಕಾರದ ಮೇಲೆ ನಮಗೆ ವಿಶ್ವಾಸ ಇದೆ. ಕೇಂದ್ರದ ನಾಯಕರನ್ನು ಮನವೊಲಿಸುವಲ್ಲಿ ಸಿಎಂ ಬೊಮ್ಮಾಯಿ ಯಶಸ್ವಿ ಯಾಗಿದ್ದಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:32 pm, Thu, 23 March 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ