ಸಿಎಂ ಭರವಸೆ: ಪಂಚಮಸಾಲಿ ಮೀಸಲಾತಿ ಹೋರಾಟ ಮುಂದೂಡಲು ಜಯಮೃತ್ಯುಂಜಯ ಸ್ವಾಮೀಜಿ ನಿರ್ಧಾರ

ಹಿಂದುಳಿದ ವರ್ಗಗಳ ಆಯೋಗದ ವರದಿ ಬಂದ ನಂತರ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು.

ಸಿಎಂ ಭರವಸೆ: ಪಂಚಮಸಾಲಿ ಮೀಸಲಾತಿ ಹೋರಾಟ ಮುಂದೂಡಲು ಜಯಮೃತ್ಯುಂಜಯ ಸ್ವಾಮೀಜಿ ನಿರ್ಧಾರ
ಪಂಚಮಸಾಲಿ ಮೀಸಲಾತಿಗೆ ಹೋರಾಟ ನಡೆಸುತ್ತಿರುವ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಇತರ ನಾಯಕರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಸಭೆ ನಡೆಸಿದರು.
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Oct 01, 2021 | 4:37 PM

ಬೆಂಗಳೂರು: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ನಡೆಸಲು ಉದ್ದೇಶಿರುವ ಧರಣಿಯನ್ನು ಮುಖ್ಯಮಂತ್ರಿ ಭರವಸೆ ಮೇರೆಗೆ ಮುಂದೂಡಲು ನಿರ್ಧರಿಸಲಾಗಿದೆ ಎಂದು ಬೆಂಗಳೂರಿನಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಹಿಂದುಳಿದ ವರ್ಗಗಳ ಆಯೋಗದ ವರದಿ ಬಂದ ನಂತರ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, 2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯದ ಹೋರಾಟದ ಬಗ್ಗೆ ನನಗೆ ಅರಿವಿದೆ. ಮೀಸಲಾತಿ ಬಗ್ಗೆ ಸರ್ಕಾರ ಆದಷ್ಟು ಬೇಗ ಪ್ರಕ್ರಿಯೆ ಆರಂಭಿಸುತ್ತದೆ. ಮೀಸಲಾತಿ ನೀಡುವ ನಿರ್ಧಾರ ತೆಗೆದುಕೊಳ್ಳುವ ಜವಾಬ್ದಾರಿಯನ್ನು ಇದೀಗ ರಾಜ್ಯಗಳಿಗೆ ಕೊಡಲಾಗಿದೆ. ಮೀಸಲಾತಿ ಒದಗಿಸುವ ಪ್ರಕ್ರಿಯೆಯನ್ನು ಸರ್ಕಾರ ಆರಂಭಿಸುವ ಕುರಿತು ಬಸವ ಜಯಮೃತ್ಯುಂಜಯ ಸ್ವಾಮೀಜಿಗೆ ಮಾಹಿತಿ ನೀಡಿರುವೆ. ಹಿಂದುಳಿದ ವರ್ಗಗಳ ಆಯೋಗದ ವರದಿ ಬಂದ ಬಳಿಕ ಅಗತ್ಯ ಕ್ರಮ ಜರುಗಿಸಲಾಗುವುದು. ಸ್ವಾಮೀಜಿ ಸತ್ಯಾಗ್ರಹ ಕೈಬಿಟ್ಟಿರುವ ಬಗ್ಗೆ ಮಾಧ್ಯಮಗಳಿಂದಲೇ ಗೊತ್ತಾಗಿದ್ದು ಎಂದು ತಿಳಿಸಿದರು.

ಬಿಜೆಪಿ ಕರ್ನಾಟಕ ಘಟಕದ ಕೋರ್ ಕಮಿಟಿ ಸಭೆಯ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನಾಡಿದ್ದು (ಅ.3) ರಾಜ್ಯಕ್ಕೆ ಬರುತ್ತಿದ್ದಾರೆ. ಅವರ ಸಮಕ್ಷಮ ನಡೆಯಲಿರುವ ಕೋರ್ ಕಮಿಟಿ ಸಭೆಯಲ್ಲಿ ಉಪ ಚುನಾವಣೆ ಬಗ್ಗೆ ಚರ್ಚಿಸಲಾಗುತ್ತದೆ ಎಂದು ತಿಳಿಸಿದರು.

ಮೀಸಲಾತಿ ಜಾರಿಗೆ ಸರ್ಕಾರ ಬದ್ಧ: ಸಿ.ಸಿ.ಪಾಟೀಲ ಪಂಚಮಸಾಲಿ ಸಮುದಾಯದ ಸಮಾವೇಶದಲ್ಲಿ ಮಾತನಾಡಿದ ಸಚಿವ ಸಿ.ಸಿ.ಪಾಟೀಲ, ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರದ ಬಗ್ಗೆ ಸರ್ಕಾರಕ್ಕೆ ಬದ್ಧತೆಯಿದೆ. ಹಿಂದುಳಿದ ವರ್ಗಗಳ ಆಯೋಗದ ವರದಿ ಬಂದ ತಕ್ಷಣ ಮೀಸಲಾತಿ ನಿರ್ಧಾರವನ್ನು ಜಾರಿಗೊಳಿಸಲಾಗುವುದು. ಮುಖ್ಯಮಂತ್ರಿಗಳೇ ಈ ಬಗ್ಗೆ ಭರವಸೆ ನೀಡಿದ್ದಾರೆ. ಮೀಸಲಾತಿ ಸಿಗುವ ದಿನ ಬರುತ್ತೆದೆ. ಆ ಬಗ್ಗೆ ವಿಶ್ವಾಸ ಇರಬೇಕು ಎಂದು ಸಲಹೆ ಮಾಡಿದರು.

ಸತ್ಯಾಗ್ರಹ ಮುಂದೂಡಲು ಸಮುದಾಯದ ನಾಯಕರು ಗಮನ ಹರಿಸಬೇಕು ಎಂದು ಮನವಿ ಮಾಡಿದ ಅವರು, ಹೋರಾಟ ಇರಲಿ, ಸತ್ಯಾಗ್ರಹ ಬೇಡ. ಒಳ್ಳೆಯ ದಿನಗಳು ಬರುತ್ತವೆ. ಆಶಾಭಾವನೆ ಜತೆ ಸತ್ಯಾಗ್ರಹ ಕೈಬಿಡಲು ಮನವಿ ಮಾಡುತ್ತೇನೆ ಎಂದು ವಿನಂತಿಸಿದರು.

ಮುಖ್ಯಮಂತ್ರಿ ಬೊಮ್ಮಾಯಿ ಅವರು ಸ್ವಾಮೀಜಿಗಳ ಜೊತೆ ಸಭೆ ನಡೆಸಿದ್ದರು. ಬೊಮ್ಮಾಯಿ ಅವರಷ್ಟು ಸುದೀರ್ಘ ಚರ್ಚೆ ಈವರೆಗೂ ಯಾವ ಮುಖ್ಯಮಂತ್ರಿಯೂ ನಡೆಸಿಲ್ಲ. ಇಷ್ಟುದಿನ ಮೀಸಲಾತಿ ಕೇಂದ್ರ ಸರ್ಕಾರ ನೀಡ್ತಿತ್ತು. ಆದರೆ ಈಗ ಮೀಸಲಾತಿ ನೀಡುವ ಅಧಿಕಾರ ರಾಜ್ಯಕ್ಕೆ ಸಿಕ್ಕಿದೆ. ಹಿಂದುಳಿದ ವರ್ಗಗಳ ಆಯೋಗದ ವರದಿ ಬಂದ ತಕ್ಷಣ ಮುಖ್ಯಮಂತ್ರಿಗಳು ಮೀಸಲಾತಿ ನಿರ್ಧಾರವನ್ನು ಜಾರಿ ಮಾಡುತ್ತಾರೆ. ಮೀಸಲಾತಿ ಸಿಗುವ ದಿನ ಬಂದೇ ಬರುತ್ತೆ. ಆ ಬಗ್ಗೆ ವಿಶ್ವಾಸ ಇರಲಿ. ನಾಳೆಯಿಂದ ಆರಂಭ ಮಾಡಬೇಕು ಎಂದುಕೊಂಡಿರುವ ಸತ್ಯಾಗ್ರಹ ಮುಂದೂಡಬೇಕೆಂದ ಮನವಿ ಮಾಡುತ್ತೇನೆ ಎಂದರು.

ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಚಿವ ಮಾಜಿ ಸಚಿವ ವಿನಯ್​ ಕುಲಕರ್ಣಿ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನರ್​ ಪಾಲ್ಗೊಂಡಿದ್ದರು.

(Panchamasali Reservation Agitation Postponed on Assurance of CM Basavaraj Bommai)

ಇದನ್ನೂ ಓದಿ: ಪಂಚಮಸಾಲಿಗಳಿಗೆ ಮೀಸಲಾತಿ ನೀಡಲು ಸರ್ಕಾರ ಮರೆತಿದೆ ಎಂದ ಜಯಮೃತ್ಯುಂಜಯ ಸ್ವಾಮೀಜಿ, ನೆನಪಿದೆ ಎಂದ ಮುರುಗೇಶ್ ನಿರಾಣಿ

ಇದನ್ನೂ ಓದಿ: ಪಂಚಮಸಾಲಿ ಸೇರಿ 10 ಜಾತಿಗಳನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಲು ಸದ್ಯದಲ್ಲೇ ಸರ್ಕಾರಕ್ಕೆ ಶಿಫಾರಸು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ