AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರ ಜೈಲು ವಾರ್ಡರ್ ಮೇಲೆ ಹಲ್ಲೆ: ಐವರ ವಿರುದ್ಧ ಎಫ್ಐಆರ್!

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಾರ್ಡರ್ ಮಂಜುನಾಥ್ ಮೇಲೆ ಐವರು ಕೈದಿಗಳು ಭೀಕರ ಹಲ್ಲೆ ನಡೆಸಿದ್ದಾರೆ. ಹೆಚ್ಚುವರಿ ವಸ್ತುಗಳನ್ನು ಒಳಗೆ ಬಿಡದ ಕಾರಣಕ್ಕೆ ಅನೆಕ್ಸ್-1 ಕಟ್ಟಡದ ಕೊಠಡಿಗೆ ಎಳೆದುಕೊಂಡು ಹೋಗಿ ರಕ್ತ ಬರುವಂತೆ ಥಳಿಸಲಾಗಿದೆ. ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಾದ ಮೊಹಮ್ಮದ್ ಮುಜಾಮಿಲ್ ಸೇರಿದಂತೆ ಐವರ ವಿರುದ್ಧ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಪರಪ್ಪನ ಅಗ್ರಹಾರ ಜೈಲು ವಾರ್ಡರ್ ಮೇಲೆ ಹಲ್ಲೆ: ಐವರ ವಿರುದ್ಧ ಎಫ್ಐಆರ್!
ಪರಪ್ಪನ ಅಗ್ರಹಾರImage Credit source: Deccan herald
ರಾಮು, ಆನೇಕಲ್​
| Edited By: |

Updated on:Sep 05, 2026 | 8:58 AM

Share

ಮುಖ್ಯಾಂಶಗಳು

  • ಪರಪ್ಪನ ಅಗ್ರಹಾರದಲ್ಲಿ ವಾರ್ಡರ್ ಮಂಜುನಾಥ್ ಮೇಲೆ ಕೈದಿಗಳಿಂದ ಭೀಕರ ಹಲ್ಲೆ.
  • ಹೆಚ್ಚುವರಿ ವಸ್ತು ತಡೆದಿದ್ದಕ್ಕೆ ಜೈಲು ವಾರ್ಡರ್ ಮೇಲಿನ ಹಳೆ ದ್ವೇಷ.
  • ಹಲ್ಲೆ ನಡೆಸಿದ ಐವರು ಕೊಲೆ ಕೇಸ್ ಆರೋಪಿಗಳ ವಿರುದ್ಧ ಎಫ್‌ಐಆರ್.

ಬೆಂಗಳೂರು, ಸೆಪ್ಟೆಂಬರ್ 05: ಪರಪ್ಪನ ಅಗ್ರಹಾರ ಮಧ್ಯವರ್ತಿ ಕಾರಾಗೃಹದಲ್ಲಿ ಕೈದಿಗಳ ಅಟ್ಟಹಾಸ ಮಿತಿಮೀರಿದ್ದು, ಸಿಬ್ಬಂದಿಯೇ ಭಯದ ವಾತಾವರಣದಲ್ಲಿ ಕರ್ತವ್ಯ ನಿರ್ವಹಿಸುವಂತಾಗಿದೆ. ಜೈಲಿನಲ್ಲಿ ಕೈದಿಗಳ ನಿಯಂತ್ರಣವೇ ಅಧಿಕಾರಿಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದ್ದು,  ಜೈಲು ವಾರ್ಡರ್ ಮಂಜುನಾಥ್ ಹವೇಲಿ ಅವರ ಮೇಲೆ ನಡೆದ ಭೀಕರ ಹಲ್ಲೆ ನಡೆದಿದೆ. ಈ ಹಿನ್ನೆಲೆ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಘಟನೆಯ ಹಿನ್ನೆಲೆ

ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಆಗಸ್ಟ್ 22 ರಂದು ಪರಪ್ಪನ ಅಗ್ರಹಾರದ ‘ಅನೆಕ್ಸ್-1’ ಕಟ್ಟಡಕ್ಕೆ ವರ್ಗಾಯಿಸಲಾಗಿತ್ತು. ಆ ವೇಳೆ ಆರೋಪಿಗಳು ತಮ್ಮೊಂದಿಗೆ ನಿಯಮಬಾಹಿರವಾಗಿ ಹೆಚ್ಚುವರಿ ವಸ್ತುಗಳನ್ನು ಜೈಲಿನೊಳಗೆ ತೆಗೆದುಕೊಂಡು ಹೋಗಲು ಯತ್ನಿಸಿದ್ದರು. ಆದರೆ ಜೈಲು ವಾರ್ಡರ್ ಮಂಜುನಾಥ್ ಅವರು ಕಾನೂನಿನಂತೆ ಆ ಹೆಚ್ಚುವರಿ ವಸ್ತುಗಳನ್ನು ಒಳಗೆ ಬಿಡದೆ ತಡೆದಿದ್ದರು. ಇದೇ ವಿಷಯವನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದ ಆರೋಪಿಗಳು ಮಂಜುನಾಥ್ ವಿರುದ್ಧ ವೈಷಮ್ಯ ಬೆಳೆಸಿಕೊಂಡಿದ್ದರು.

ಕೊಠಡಿಗೆ ಎಳೆದೊಯ್ದು ಹಲ್ಲೆ

ಸೆಪ್ಟೆಂಬರ್ 2 ರಂದು ಆರೋಪಿಗಳ ವಿಡಿಯೋ ಕಾನ್ಫರೆನ್ಸ್ (VC) ಹಾಜರಿಗೆ ಸಂಬಂಧಿಸಿದ ಮಾಹಿತಿ ಸಂಗ್ರಹಿಸಲು ವಾರ್ಡರ್ ಮಂಜುನಾಥ್ ಅವರು ಅನೆಕ್ಸ್-1 ಕಟ್ಟಡಕ್ಕೆ ತೆರಳಿದ್ದರು. ಈ ವೇಳೆ ಸಿಕ್ಕ ಅವಕಾಶವನ್ನು ಬಳಸಿಕೊಂಡ ಆರೋಪಿ ಮೊಹಮ್ಮದ್ ಮುಜಾಮಿಲ್ ಹಳೆಯ ದ್ವೇಷವನ್ನು ಮುಂದಿಟ್ಟುಕೊಂಡು ವಾರ್ಡರ್ ಜೊತೆ ವಾಗ್ವಾದ ನಡೆಸಿದ್ದಾನೆ. ಹಠಾತ್ತನೆ ಮಂಜುನಾಥ್ ಅವರ ಮುಖ ಹಾಗೂ ಮೂಗಿಗೆ ಮುಷ್ಠಿಯಿಂದ ಬಲವಾಗಿ ಗುದ್ದಿ ರಕ್ತ ಬರುವಂತೆ ಗಾಯಗೊಳಿಸಿದ್ದಾನೆ. ತಕ್ಷಣವೇ ಆತನ ಸಹಚರರು ಕೈಜೋಡಿಸಿ, ಮಂಜುನಾಥ್ ಅವರನ್ನು ಕೊಠಡಿ ಸಂಖ್ಯೆ 4 ಕ್ಕೆ ಎಳೆದುಕೊಂಡು ಹೋಗಿ ಮನಸೋಇಚ್ಛೆ ಥಳಿಸಿದ್ದಾರೆ.

ಇದನ್ನೂ ಓದಿ ಪರಪ್ಪನ ಅಗ್ರಹಾರದಲ್ಲಿ ಜೈಲು ಬಂಧಿಗಳ ಪುಂಡಾಟ: ವಾರ್ಡರ್​​ ಕೊಲೆಗೆ ಯತ್ನ

ಐವರು ಆರೋಪಿಗಳ ವಿರುದ್ಧ FIR ದಾಖಲು

ಘಟನೆಗೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಐವರು ಆರೋಪಿಗಳಾದ ಮೊಹಮ್ಮದ್ ಮುಜಾಮಿಲ್, ಅಬ್ದುಲ್ ಶಫ್ಗನ್ (ಶಫ್ವಾನ್), ಮೊಹಮ್ಮದ್ ರಿಜ್ವಾನ್, ನಿಯಾಜ್ (ನಯಾಜ್), ಕಲಂದರ್ ಶಫಿ ವಿರುದ್ಧ ಕೊಲೆ ಯತ್ನ ಸೇರಿದಂತೆ ವಿವಿಧ ಗಂಭೀರ ಪ್ರಕರಣಗಳ ಅಡಿಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ. ಘಟನೆಯ ಬಳಿಕ ಇತರ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ವಾರ್ಡರ್ ಅವರನ್ನು ರಕ್ಷಿಸಿದ್ದು, ಜೈಲಿನ ಆಡಳಿತ ವ್ಯವಸ್ಥೆ ಮತ್ತು ಭದ್ರತೆಯ ಬಗ್ಗೆ ಸಾರ್ವಜನಿಕವಾಗಿ ತೀವ್ರ ಕಳವಳ ವ್ಯಕ್ತವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:48 am, Sat, 5 September 26

Follow Us
ರಾಮು, ಆನೇಕಲ್​
ರಾಮು, ಆನೇಕಲ್​

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ