AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಲ್ಲಿ ಸಿಗುತ್ತಿದ್ದ ಬೀಡಿ, ಸಿಗರೇಟ್ ಬಂದ್ ಮಾಡಿದ್ದಕ್ಕೆ ಪರಪ್ಪನ ಅಗ್ರಹಾರದ ಕೈದಿಗಳಿಂದ ಪ್ರತಿಭಟನೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಬೀಡಿ-ಸಿಗರೇಟ್ ನಿಷೇಧಿಸಿದ್ದಕ್ಕೆ ಕೈದಿಗಳು ಮೂರು ದಿನಗಳಿಂದ ಧರಣಿ ನಡೆಸುತ್ತಿದ್ದಾರೆ. ಜೈಲಿನಲ್ಲಿ ಅಕ್ರಮ ಚಟುವಟಿಕೆಗಳ ತಡೆಗೆ ಹೊಸ ಅಧೀಕ್ಷಕರು ಕಠಿಣ ಕ್ರಮ ಕೈಗೊಂಡಿದ್ದು, ಈ ಹಿನ್ನೆಲೆಯಲ್ಲಿ ನಿಷಿದ್ಧ ವಸ್ತುಗಳ ಮಾರಾಟ ನಿಂತಿತ್ತು. ಈಗ ಕೈದಿಗಳು ಬೀಡಿ-ಸಿಗರೇಟ್ ಮಾರಾಟಕ್ಕೆ ಅನುಮತಿ ಕೋರಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಜೈಲಿನಲ್ಲಿ ಸಿಗುತ್ತಿದ್ದ ಬೀಡಿ, ಸಿಗರೇಟ್ ಬಂದ್ ಮಾಡಿದ್ದಕ್ಕೆ ಪರಪ್ಪನ ಅಗ್ರಹಾರದ ಕೈದಿಗಳಿಂದ ಪ್ರತಿಭಟನೆ
ಜೈಲಿನಲ್ಲಿ ಸಿಗುತ್ತಿದ್ದ ಬೀಡಿ, ಸಿಗರೇಟ್ ಬಂದ್ ಮಾಡಿದ್ದಕ್ಕೆ ಪರಪ್ಪನ ಅಗ್ರಹಾರದ ಕೈದಿಗಳಿಂದ ಪ್ರತಿಭಟನೆ
ರಾಚಪ್ಪಾಜಿ ನಾಯ್ಕ್
| Updated By: ಭಾವನಾ ಹೆಗಡೆ|

Updated on: Dec 02, 2025 | 10:26 AM

Share

ಬೆಂಗಳೂರು, ಡಿಸೆಂಬರ್ 02: ಪರಪ್ಪನ ಅಗ್ರಹಾರದಲ್ಲಿ (Parappana Agrahara) ಅಕ್ರಮವಾಗಿ ಸಿಗುತ್ತಿದ್ದ ಬೀಡಿ, ಸಿಗರೇಟ್ ಬಂದ್ ಮಾಡಿದ್ದಕ್ಕೆ ಕೈದಿಗಳು ಪ್ರತಿಭಟನೆಗಿಳಿದಿದ್ದಾರೆ. ಕಳೆದ ಮೂರು ದಿನಗಳಿಂದ ಊಟ ತಿಂಡಿ ಬಿಟ್ಟು ಧರಣಿ ಮಾಡುತ್ತಿರುವ ಬಂಧಿತರು ನಿಷೇಧಿತ ವಸ್ತುಗಳ ಮಾರಾಟಕ್ಕೆ ಅನುಮತಿ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ.

ಶೋಧದ ವೇಳೆ 50ಕ್ಕೂ ಹೆಚ್ಚು  ಮೊಬೈಲ್‌ಗಳು ವಶ

ಜೈಲು ಕೈಪಿಡಿ ಪ್ರಕಾರ ಈ ವಸ್ತುಗಳ ಮಾರಾಟ ಕಾನೂನುಬಾಹಿರವಾಗಿರುವ ಕಾರಣ ಜೈಲು ಸಿಬ್ಬಂದಿಯೇ ಇದುವರೆಗೆ ಅವುಗಳನ್ನು ಒಳಕ್ಕೆ ತರಲಾಗುತ್ತಿದ್ದುದಾಗಿ ಆರೋಪಿಸಲಾಗಿತ್ತು. ಇತ್ತೀಚಿನ ವಿಶೇಷ ಶೋಧ ಕಾರ್ಯಾಚರಣೆಯಲ್ಲಿ 50ಕ್ಕೂ ಹೆಚ್ಚು ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದ್ದರಿಂದ ಆಡಳಿತ ಮತ್ತಷ್ಟು ಜಾಗೃತಗೊಂಡಿದೆ. ಈ ಹಿನ್ನೆಲೆ ಬೀಡಿ–ಸಿಗರೇಟ್ ಮಾರಾಟ ನಿಲ್ಲಿಸಿದ್ದಕ್ಕೆ ಅಸಮಾಧಾನಗೊಂಡ ಕೈದಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕಳೆದ ಮೂರು ದಿನಗಳಿಂದ ಕೈದಿಗಳಿಂದ ಧರಣಿ ಮತ್ತು ಉಪವಾಸ ಪ್ರತಿಭಟನೆ ನಡೆಸುತ್ತಿದ್ದು, ಮಾರಾಟಕ್ಕೆ ಅನುಮತಿ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಆದರೆ ಅಧಿಕಾರಿಗಳು ಜೈಲು ನಿಯಮಾವಳಿಯ ಪ್ರಕಾರವೇ ಕ್ರಮ ಜರುಗಿಸಲಾಗುವುದೆಂದು ಸ್ಪಷ್ಟಪಡಿಸಿದ್ದಾರೆ.

ಜೈಲಿನಲ್ಲಿನ ಅಕ್ರಮ ಚಟುವಟಿಕೆಗಳ ವಿಡಿಯೋ ಹೊರಬಂದ ನಂತರ, ಸರ್ಕಾರ ಜೈಲು ಆಡಳಿತದಲ್ಲಿ ಬದಲಾವಣೆ ಮಾಡಿ ಅಂಶುಕುಮಾರ್ ಅವರನ್ನು ಮುಖ್ಯ ಅಧೀಕ್ಷಕರನ್ನಾಗಿ ನೇಮಿಸಿತ್ತು. ಅವರ ನಿರ್ದೇಶನದಂತೆ ಜೈಲಿನಲ್ಲಿ ಅಕ್ರಮವಾಗಿ ಸಿಗುತ್ತಿದ್ದ ಬೀಡಿ, ಸಿಗರೇಟ್ ಹಾಗೂ ಇತರ ನಿಷೇಧಿತ ವಸ್ತುಗಳ ಮಾರಾಟಕ್ಕೆ ಕಟ್ಟುನಿಟ್ಟಿನ ಕ್ರಮ ಜರುಗಿತ್ತು.

ಇದನ್ನೂ ಓದಿ ಪರಪ್ಪನ ಅಗ್ರಹಾರ ಜೈಲು ಜಾಲಾಡಿದ ಹೊಸ ಅಧೀಕ್ಷಕ, 33 ಮೊಬೈಲ್, 22 ಸಿಮ್​ ಸೇರಿದಂತೆ ಇತರೆ ವಸ್ತುಗಳು ಪತ್ತೆ

ಕಾರಾಗೃಹಗಳ ಸುಧಾರಣೆಗಾಗಿ ಹೈಪವರ್ ಸಮಿತಿ

ಕೈದಿಗಳು ಜೈಲಿನೊಳಗೆ ಮೊಬೈಲ್ ಬಳಸುತ್ತಿರುವ ವಿಡಿಯೋ ವೈರಲ್ ಆಗುತ್ತಿದ್ದಂತೇ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸಭೆ ನಡೆಸಿ ಇಬ್ಬರು ಜೈಲಾಧಿಕಾರಿಗಳನ್ನು ಅಮಾನತು ಮಾಡಿದ್ದರು. ಇದರ ಬಳಿಕ ಸರ್ಕಾರ ರಾಜ್ಯದ ಎಲ್ಲಾ ಕಾರಾಗೃಹಗಳ ಸುಧಾರಣೆಗಾಗಿ ಉನ್ನತ ಮಟ್ಟದ ಹೈಪವರ್ ಸಮಿತಿಯನ್ನು ರಚಿಸಿದೆ. ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಅವರ ನೇತೃತ್ವದ ಸಮಿತಿ, ದೆಹಲಿಯ ತಿಹಾರ್ ಜೈಲಿಗೆ ಭೇಟಿ ನೀಡಿ ಅಲ್ಲಿ ಜಾರಿಯಲ್ಲಿರುವ ಆಡಳಿತ, ತಾಂತ್ರಿಕ ವ್ಯವಸ್ಥೆ, ಬಂಧಿಗಳ ಪುನರ್ವಸತಿ ಕಾರ್ಯಕ್ರಮ ಸೇರಿದಂತೆ ಅನೇಕ ಸುಧಾರಣಾತ್ಮಕ ಕ್ರಮಗಳನ್ನು ಅಧ್ಯಯನ ಮಾಡಿದೆ. ನಂತರ ಮಂಗಳೂರು ಹಾಗೂ ಕಲಬುರಗಿ ಜೈಲುಗಳಿಗೂ ಭೇಟಿ ನೀಡಿ ಸಿಬ್ಬಂದಿ ಕೊರತೆ, ಜೈಲು ಸಾಮರ್ಥ್ಯಕ್ಕೆ ಹೋಲಿಸಿದರೆ ಬಂಧಿಗಳ ಹೆಚ್ಚುವರಿ ಸಂಖ್ಯೆ, ಸುರಕ್ಷತಾ ವ್ಯವಸ್ಥೆ ಮತ್ತು ಆಧುನಿಕ ತಂತ್ರಜ್ಞಾನ ಬಳಕೆಯಂತಹ ಅಂಶಗಳನ್ನು ಪರಿಶೀಲಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ