AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ ಖಾಸಗಿ ಅಂಗದಲ್ಲಿ ತಂಬಾಕು, ಸಿಮ್ ಕಾರ್ಡ್​ ತಂದು ಜೈಲಿನಲ್ಲಿ ಸ್ಮಗ್ಲಿಂಗ್! ಯುವತಿ ಅಂದರ್

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮಗಳು ಮುಂದುವರಿದಿವೆ. ಇತ್ತೀಚೆಗೆ, 27 ವರ್ಷದ ಮಹಿಳೆಯೊಬ್ಬಳು ಕೈದಿ ಫರ್ಹಾನ್ ಖಾನ್‌ಗೆ ತಂಬಾಕು ಹಾಗೂ 5ಜಿ ಸಿಮ್ ಕಾರ್ಡ್‌ಗಳನ್ನು ಖಾಸಗಿ ಭಾಗದಲ್ಲಿ ಅಡಗಿಸಿ ಕಳ್ಳಸಾಗಣೆ ಮಾಡಲು ಯತ್ನಿಸಿದ್ದು ತಡವಾಗಿ ಬೆಳಕಿಗೆ ಬಂದಿದೆ. ಯುವತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ತನ್ನ ಖಾಸಗಿ ಅಂಗದಲ್ಲಿ ತಂಬಾಕು, ಸಿಮ್ ಕಾರ್ಡ್​ ತಂದು ಜೈಲಿನಲ್ಲಿ ಸ್ಮಗ್ಲಿಂಗ್! ಯುವತಿ ಅಂದರ್
ತನ್ನ ಖಾಸಗಿ ಅಂಗದಲ್ಲಿ ತಂಬಾಕು, ಸಿಮ್ ಕಾರ್ಡ್​ ತಂದು ಜೈಲಿನಲ್ಲಿ ಸ್ಮಗ್ಲಿಂಗ್!Image Credit source: The Hindu
ಭಾವನಾ ಹೆಗಡೆ
|

Updated on: Mar 30, 2026 | 12:41 PM

Share

ಬೆಂಗಳೂರು, ಮಾರ್ಚ್​ 30: ಪರಪ್ಪನ ಅಗ್ರಹಾರದಲ್ಲಿ ನಿರಂತರವಾಗಿ ಅವ್ಯವಹಾರಗಳ ಪ್ರಕರಣಗಳು ವರದಿಯಾಗುತ್ತಿವೆ. ಡಿಜಿಪಿ ಅಲೋಕ್ ಕುಮಾರ್​ರಿಂದ  (DGP Alok Kumar) ಜಾರಿಯಾಗಿರುವ ಕಟ್ಟುನಿಟ್ಟಿನ ಕ್ರಮದ ನಂತರವೂ ಈ ಅವ್ಯವಹಾರಗಳಿಗೆ ಬ್ರೇಕ್ ಬಿದ್ದಿಲ್ಲ. ಜೈಲಿನಲ್ಲೇ ಕೂತು ಕೈದಿಗಳು ವೀಡಿಯೋ ಮಾಡಿರುವುದು ಚರ್ಚೆಯಾದ ಬೆನ್ನಲ್ಲೇ ಕಳೆದ ಗುರುವಾರ ನಡೆದ ಮತ್ತೊಂದು ಅಕ್ರಮ ತಡವಾಗಿ ಬೆಳಕಿಗೆ ಬಂದಿದೆ.ಕೇಂದ್ರ ಕಾರಾಗೃಹದಲ್ಲಿ ನಿಷೇಧಿತ ವಸ್ತುಗಳನ್ನು ಒಳಗೆ ಕಳ್ಳಸಾಗಣೆ ಮಾಡಲು ಯತ್ನಿಸಿದ 27 ವರ್ಷದ ಮಹಿಳೆಯನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ತಪಾಸಣೆ ವೇಳೆ ವಿಷಯ ಬಯಲು

ಮಾರ್ಚ್ 26ರಂದು ಸಂಜೆ ಸುಮಾರು 4 ಗಂಟೆಗೆ ಸಾಮಾನ್ಯ ಭೇಟಿಯ ವಿಭಾಗದಲ್ಲಿ ಈ ಘಟನೆ ನಡೆದಿದೆ. ಆರೋಪಿಯಾಗಿರುವ ರಿತಿಕಾ ರೈ, ಅಂಡರ್‌ಟ್ರಯಲ್ ಕೈದಿ ಫರ್ಹಾನ್ ಖಾನ್ ಅವರನ್ನು ಭೇಟಿ ಮಾಡಲು ಮಾನ್ಯ ಪಾಸ್ ಪಡೆದು ಬಂದಿದ್ದಳು. ಸಾಮಾನ್ಯ ತಪಾಸಣೆ ವೇಳೆ ಮಹಿಳಾ ಪೊಲೀಸ್ ಸಿಬ್ಬಂದಿಗೆ ಅನುಮಾನ ಉಂಟಾಗಿ ಸವಿವರ ಪರಿಶೀಲನೆ ನಡೆಸಿದಾಗ, ಮಹಿಳೆ ತನ್ನ ದೇಹದ ಖಾಸಗಿ ಭಾಗದಲ್ಲಿ ತಂಬಾಕು ಪದಾರ್ಥಗಳ ಮೂರು ಪ್ಯಾಕೆಟ್‌ಗಳು ಹಾಗೂ ಏರ್ಟೆಲ್ 5ಜಿ ಸಿಮ್ ಕಾರ್ಡ್‌ಗಳನ್ನು ಅಡಗಿಸಿಕೊಂಡಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ ‘ನಮಗೆ ಡಿಜಿಪಿನೇ ಮೊಬೈಲ್ ಕೊಟ್ಟಿದ್ದು’: ಜೈಲಲ್ಲೇ ಕೂತು ವಿಡಿಯೋ ಮಾಡಿದ ಕೈದಿಗಳು!

ತಕ್ಷಣವೇ ನಿಷೇಧಿತ ವಸ್ತುಗಳನ್ನು ವಶಕ್ಕೆ ಪಡೆದು ಪರಪ್ಪನ ಅಗ್ರಹಾರ ಪೊಲೀಸರಿಗೆ ಒಪ್ಪಿಸಲಾಗಿದೆ. ಜೈಲು ಅಧೀಕ್ಷಕರು ನೀಡಿದ ದೂರಿನ ಆಧಾರದ ಮೇಲೆ ರಿತಿಕಾ ರೈ ಮತ್ತು ಫರ್ಹಾನ್ ಖಾನ್ ವಿರುದ್ಧ ಕರ್ನಾಟಕ ಕಾರಾಗೃಹ (ತಿದ್ದುಪಡಿ) ಕಾಯ್ದೆ 2022 ಮತ್ತು ಬಿಎನ್‌ಎಸ್ ಸೆಕ್ಷನ್ 323 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು
ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು
ಕಾಡಾನೆ ದಾಳಿಗೆ ಮಹಿಳೆ ಬಲಿ: ತೀವ್ರಗೊಂಡ ಚೌಡಹಳ್ಳಿ ಗ್ರಾಮಸ್ಥರ ಪ್ರತಿಭಟನೆ
ಕಾಡಾನೆ ದಾಳಿಗೆ ಮಹಿಳೆ ಬಲಿ: ತೀವ್ರಗೊಂಡ ಚೌಡಹಳ್ಳಿ ಗ್ರಾಮಸ್ಥರ ಪ್ರತಿಭಟನೆ
ಕೆಎಎಸ್ ಪರೀಕ್ಷೆ: ಅಕ್ರಮ ತಡೆಯಲು ಬೆಂಗಳೂರು ಕೇಂದ್ರಗಳಲ್ಲಿ ಬಿಗಿ ಭದ್ರತೆ
ಕೆಎಎಸ್ ಪರೀಕ್ಷೆ: ಅಕ್ರಮ ತಡೆಯಲು ಬೆಂಗಳೂರು ಕೇಂದ್ರಗಳಲ್ಲಿ ಬಿಗಿ ಭದ್ರತೆ
ಹಿರಿಯೂರು ಉಪಚುನಾವಣೆಗೆ NDA ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಗೊಂದಲ
ಹಿರಿಯೂರು ಉಪಚುನಾವಣೆಗೆ NDA ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಗೊಂದಲ
ಕೆಎಎಸ್ ಪರೀಕ್ಷೆಗೆ ವಿಎಓ ಹಾಲ್ ಟಿಕೆಟ್ ತಂದ ಮಹಿಳಾ ಅಭ್ಯರ್ಥಿ
ಕೆಎಎಸ್ ಪರೀಕ್ಷೆಗೆ ವಿಎಓ ಹಾಲ್ ಟಿಕೆಟ್ ತಂದ ಮಹಿಳಾ ಅಭ್ಯರ್ಥಿ
ಸಿಎಂ ಸ್ಥಾನ ಸಿಗದಿದ್ದಕ್ಕೆ ಡಿಸಿಎಂ ಡಾ.ಜಿ. ಪರಮೇಶ್ವರ್​​ ಬೇಸರ
ಸಿಎಂ ಸ್ಥಾನ ಸಿಗದಿದ್ದಕ್ಕೆ ಡಿಸಿಎಂ ಡಾ.ಜಿ. ಪರಮೇಶ್ವರ್​​ ಬೇಸರ
ನವೆಂಬರ್ 16 ರಿಂದ 22ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನವೆಂಬರ್ 16 ರಿಂದ 22ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಬಿಗ್ ಬಾಸ್ ಮನೆಯಲ್ಲಿ ಮಂಜ-ಮಂಜಿ ಪ್ರಸಂಗ; ಎಳೆಎಳೆಯಾಗಿ ವಿವರಿಸಿದ ಸುದೀಪ್
ಬಿಗ್ ಬಾಸ್ ಮನೆಯಲ್ಲಿ ಮಂಜ-ಮಂಜಿ ಪ್ರಸಂಗ; ಎಳೆಎಳೆಯಾಗಿ ವಿವರಿಸಿದ ಸುದೀಪ್
ಬೆಂಗಳೂರು ಪಿಂಕ್ ಲೈನ್ ಮೆಟ್ರೋಗೆ ಮೊದಲ ದಿನವೇ ಭರ್ಜರಿ ಸ್ಪಂದನೆ
ಬೆಂಗಳೂರು ಪಿಂಕ್ ಲೈನ್ ಮೆಟ್ರೋಗೆ ಮೊದಲ ದಿನವೇ ಭರ್ಜರಿ ಸ್ಪಂದನೆ
ಇಂದು ಈ ರಾಶಿಯವರಿಗೆ ಆರ್ಥಿಕವಾಗಿ ಅಧಿಕ ಲಾಭ
ಇಂದು ಈ ರಾಶಿಯವರಿಗೆ ಆರ್ಥಿಕವಾಗಿ ಅಧಿಕ ಲಾಭ