AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮಗೆ ಡಿಜಿಪಿನೇ ಮೊಬೈಲ್ ಕೊಟ್ಟಿದ್ದು’: ಜೈಲಲ್ಲೇ ಕೂತು ವಿಡಿಯೋ ಮಾಡಿದ ಕೈದಿಗಳು!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮೊಬೈಲ್ ಬಳಸಿ ವಿಡಿಯೋ ಮಾಡಿ ವೈರಲ್ ಮಾಡಿದ್ದು ಭದ್ರತಾ ಲೋಪವನ್ನು ಬಯಲು ಮಾಡಿದೆ. ಬೇಕಂತಲೇ ಡಿಜಿಪಿ ಅಲೋಕ್ ಕುಮಾರ್ ಅವರ ಹೆಸರು ಹೇಳಿ ಮಾಡಿರುವ ವೀಡಿಯೋ ವೈರಲ್ ಆಗಿದೆ. ಆದೇಶದಂತೆ ತನಿಖೆ ನಡೆಸಿದಾಗ, ಮೊಬೈಲ್‌ಗಳು ಪತ್ತೆಯಾಗಿದ್ದು, ಮೂವರು ಕೈದಿಗಳನ್ನು ಗುರುತಿಸಲಾಗಿದೆ. ಕರ್ತವ್ಯ ಲೋಪ ಎಸಗಿದ ವಾರ್ಡರ್‌ಗಳನ್ನು ಅಮಾನತುಗೊಳಿಸಿ, ಜೈಲರ್ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ.

‘ನಮಗೆ ಡಿಜಿಪಿನೇ ಮೊಬೈಲ್ ಕೊಟ್ಟಿದ್ದು’: ಜೈಲಲ್ಲೇ ಕೂತು ವಿಡಿಯೋ ಮಾಡಿದ ಕೈದಿಗಳು!
ವೀಡಿಯೋ ಮಾಡಿದ್ದ ಕೈದಿಗಳು
ಪ್ರದೀಪ್​ ಚಿಕ್ಕಾಟಿ
| Edited By: |

Updated on:Mar 29, 2026 | 12:25 PM

Share

ಬೆಂಗಳೂರು, ಮಾರ್ಚ್​ 29: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್ ಪತ್ತೆ, ಡ್ರಗ್ಸ್ ಸಾಗಾಟ ಇವೆಲ್ಲ ಹೊಸದೇನಲ್ಲ. ಆದರೆ ಇತ್ತೀಚಿಗೆ ಡಿಜಿಪಿ ಅಲೋಕ್ ಕುಮಾರ್ (DGP Alok Kumar )ಅವರ ಕಟ್ಟುನಿಟ್ಟಾದ ಕ್ರಮದಿಂದ ಈ ಎಲ್ಲಾ ಅವ್ಯವಹಾರಗಳಿಗೆ ಬ್ರೇಕ್ ಬೀಳುವ ನಿರೀಕ್ಷೆಯಿತ್ತು. ಆದರೆ ಈಗ ಮತ್ತೊಮ್ಮೆ ಜೈಲಿನೊಳಗೇ ಕೈದಿಗಳು ಮೊಬೈಲ್ ಬಳಸಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದು ಬೆಳಕಿಗೆ ಬಂದಿದೆ.

ಡ್ರೈನೇಜ್​ನಲ್ಲಿ ಮೊಬೈಲ್ ಫೋನ್​ಗಳು ಪತ್ತೆ

ವಿಡಿಯೋದಲ್ಲಿ ಜೈಲಿನಲ್ಲಿ ಮೊಬೈಲ್, ಟಿವಿ ಹಾಗೂ ನೆಟ್‌ಫ್ಲಿಕ್ಸ್‌ನಂತಹ ಸೌಲಭ್ಯಗಳು ಲಭ್ಯವಿವೆ ಎಂದು ಹೇಳಲಾಗಿದ್ದು, ಡಿಜಿಪಿ ಅಲೋಕ್ ಕುಮಾರ್ ಅವರೇ ಮೊಬೈಲ್ ನೀಡಿದ್ದಾರೆಂದೂ ಕೈದಿಗಳು ಹೇಳಿದ್ದಾರೆ. ಈ ವಿಡಿಯೋ ನಿಜವಾಗಿಯೂ ಜೈಲಿನೊಳಗೇ ಚಿತ್ರೀಕರಿಸಲ್ಪಟ್ಟಿದೆಯೇ ಅಥವಾ ಬೇರೆಡೆ ಸೆಟಪ್ ಮಾಡಿ ಚಿತ್ರಿಸಿಲಾಗಿದೆಯೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ.

ವಿಡಿಯೋ ವೈರಲ್ ಆದ ನಂತರ ಪೊಲೀಸರು ತಕ್ಷಣವೇ ಜೈಲಿನಲ್ಲಿ ಪರಿಶೀಲನೆ ನಡೆಸಿದರು. ಕೇಂದ್ರ ಕಾರಾಗೃಹದ 9ನೇ ಬ್ಯಾರಕ್‌ನಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ವೇಳೆ ಡ್ರೈನೇಜ್ ಮಾರ್ಗದಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ. ಹಾಲಿನ ಪ್ಯಾಕೆಟ್‌ಗಳಲ್ಲಿ ಸುತ್ತಿ ಅಡಗಿಸಿಡಲಾಗಿದ್ದ ಮೊಬೈಲ್​ಗಳನ್ನು ಅಧಿಕಾರಿಗಳು ಆರೋಪಿಗಳಿಂದಲೇ ಹೊರತೆಗೆಸಿದ್ದಾರೆ.

ಮೊಬೈಲ್ ದೊರಕಿದ ವೀಡಿಯೋ ಇಲ್ಲಿದೆ

ಉದ್ದೇಶಪೂರ್ವಕವಾಗಿ ಡಿಜಿಪಿ ಹೆಸರು ಹೇಳಿ ವೀಡಿಯೋ ಮಾಡಿರುವ ಕೈದಿಗಳು

ತನಿಖೆಯಲ್ಲಿ ವಿಡಿಯೋ ಮಾಡಿದ್ದ ಕೈದಿಗಳನ್ನು ಪತ್ತೆಹಚ್ಚಲಾಗಿದೆ. ದರ್ಶನ್, ಅಭಿಷೇಕ್ ಮತ್ತು ಎಂಡ್ರೋಸ್ ಎಂಬ ವಿಚಾರಣಾಧೀನ ಕೈದಿಗಳು ಈ ಕೃತ್ಯದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಇವರು ಹಿಂದೆ ನಡೆದಿದ್ದ ಕೊಲೆ ಪ್ರಕರಣದ ಆರೋಪಿಗಳಾಗಿದ್ದು, ಬೇರೆ ಬ್ಯಾರಕ್‌ಗೆ ಸ್ಥಳಾಂತರ ಮಾಡಿದ ಹಿನ್ನೆಲೆಯಲ್ಲಿ ಅಸಮಾಧಾನದಿಂದ ಉದ್ದೇಶಪೂರ್ವಕವಾಗಿ ಡಿಜಿಪಿ ಅಲೋಕ್ ಕುಮಾರ್​ ಹೆಸರಿಗೆ ಚ್ಯುತಿ ತರಲು ವಿಡಿಯೋ ಮಾಡಿ ವೈರಲ್ ಮಾಡಿರುವ ಸಾಧ್ಯತೆ ವ್ಯಕ್ತವಾಗಿದೆ. ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರನ್ನು ಕ್ವಾರಂಟೈನ್ ಸೆಲ್‌ಗೆ ಸ್ಥಳಾಂತರಿಸಲಾಗಿದೆ.

ವೀಡಿಯೋ ಇಲ್ಲಿದೆ

ಇದನ್ನೂ ಓದಿ ಜೈಲಿನಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಬ್ರೇಕ್ ಹಾಕಲು ಹೊಸ ಅಸ್ತ್ರ ಪ್ರಯೋಗಿಸಿದ ಡಿಜಿಪಿ ಅಲೋಕ್ ಕುಮಾರ್

ಸಿಬ್ಬಂದಿ ಅಮಾನತು

ಘಟನೆ ಬಳಿಕ ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಅವರ ಆದೇಶದ ಮೇರೆಗೆ ವಾರ್ಡರ್‌ಗಳಾದ ಶಿವಾನಂದ ಕರ್ಲಬಟ್ಟಿ, ನಿರಂಜನ ಎ. ಕಾಮತ್ ಮತ್ತು ಹನುಮಂತಪ್ಪ ಹಡಪದ್ ಅವರನ್ನು ಅಮಾನತು ಮಾಡಲಾಗಿದೆ. ಜೊತೆಗೆ ಜೈಲರ್ ವಿರುದ್ಧವೂ ಶಿಸ್ತು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಜೈಲಿನ ಕೆಲವು ಭಾಗಗಳಲ್ಲಿ ಏರ್‌ಟೆಲ್ ಸಿಗ್ನಲ್ ಲಭ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರತೆಯನ್ನು ಮತ್ತಷ್ಟು ಕಟ್ಟು ನಿಟ್ಟಾಗಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಡಿಜಿಪಿ ಹೇಳಿದ್ದೇನು?

ಡಿಜಿಪಿ ಅಲೋಕ್ ಕುಮಾರ್  ಮಾತನಾಡಿ, ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಬಳಿ ಮೊಬೈಲ್ ಸಿಕ್ಕ ನಂತರ ಅವರನ್ನು ಕ್ವಾರೆಂಟೈನ್ ಸೆಲ್‌ಗೆ ಹಾಕಲಾಗಿತ್ತು. ಗ್ಯಾಂಗ್ ಸದಸ್ಯರನ್ನು ಅಕ್ಷರ ಕ್ರಮದಲ್ಲಿ ಬೇರೆ ಬ್ಯಾರಕ್‌ಗಳಿಗೆ ಸ್ಥಳಾಂತರಿಸಲಾಗುತ್ತಿತ್ತು. ಇದಕ್ಕೆ ಅಸಮಾಧಾನಗೊಂಡು ಕೈದಿಗಳು ಟಾಯ್ಲೆಟ್ ಚೇಂಬರ್‌ನಲ್ಲಿ ಮೊಬೈಲ್ ಇಟ್ಟು ಬಳಸಿದ್ದಾರೆ. ಪ್ರಕರಣ ದಾಖಲಾಗಿದ್ದು, ನಿರ್ಲಕ್ಷ್ಯ ಹಿನ್ನೆಲೆ ಮೂವರು ಸಿಬ್ಬಂದಿ ಅಮಾನತು ಮಾಡಿ ಜೈಲರ್ ವಿರುದ್ಧವೂ ಶಿಸ್ತು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:39 am, Sun, 29 March 26

Follow Us
ಪ್ರದೀಪ್​ ಚಿಕ್ಕಾಟಿ
ಪ್ರದೀಪ್​ ಚಿಕ್ಕಾಟಿ

ಮೂಲತಃ ಚಾಮರಾಜನಗರ ಜಿಲ್ಲೆಯವನಾಗಿದ್ದು, ಶಾಲಾ ದಿನಗಳಿಂದಲೂ ಮಾಧ್ಯಮಕ್ಕೆ ಸೇರುವ ಹಂಬಲ ಇತ್ತು. ಹೀಗಾಗಿ ಫೈರ್ ಅಂಡ್ ಸೇಫ್ಟಿ ಇಂಜಿನಿಯರಿಂಗ್ ವ್ಯಾಸಂಗ ಮಾಡಿ ಕೆಲಸಕ್ಕೆ ಸೇರಿದ್ದರು ಅ ಕೆಲಸ ಬಿಟ್ಟು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿದೆ. ಬಳಿಕ ಸುಮಾರು 7 ವರ್ಷ‌ದಿಂದ ಮೈಸೂರು, ಹೈದರಾಬಾದ್ ನ ಕೆಲ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಪ್ರಸ್ತುತ Tv9 ಕನ್ನಡದ ಕ್ರೈಂ ವರದಿಗಾರನಾಗಿದ್ದೇನೆ. ಓದು, ಬರಹ, ಪ್ರವಾಸ ನನ್ನಿಷ್ಟದ ಹವ್ಯಾಸಗಳು.

Read More
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ