AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೆ ಶುರುವಾಗಲಿದೆ ಟೋಯಿಂಗ್: ಎಲ್ಲೆಂದರಲ್ಲಿ ವಾಹನ ಪಾರ್ಕ್ ಮಾಡೋ ಮುನ್ನ ಎಚ್ಚರ

ಬೆಂಗಳೂರಿನಲ್ಲಿ ಮಿತಿಮೀರಿದ ವಾಹನಗಳ ಸಂಖ್ಯೆಯಿಂದಾಗಿ ಟ್ರಾಫಿಕ್ ಕಿರಿಕಿರಿ ಹೆಚ್ಚಾಗಿದ್ದರೆ, ಅನಧಿಕೃತ ಪಾರ್ಕಿಂಗ್ ಕೂಡ ಹೆಚ್ಚಾಗಿರುವುದು ತಲೆನೋವಾಗಿ ಪರಿಣಮಿಸಿದೆ. ಇದರಿಂದಾಗಿ ನಗರದ ಹಲವೆಡೆ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದು, ಟ್ರಾಫಿಕ್ ಪೊಲೀಸರಿಗೂ ವಾಹನಗಳ ನಿಯಂತ್ರಣ ಕಷ್ಟವಾಗಿದೆ. ಹೀಗಾಗಿ ಮತ್ತೆ ಟೋಯಿಂಗ್ ಅಸ್ತ್ರ ಹೂಡಲು ಜಿಬಿಎ ಹಾಗೂ ಸಂಚಾರ ಪೊಲೀಸರು ಸಜ್ಜಾಗಿದ್ದಾರೆ.

ಬೆಂಗಳೂರಿನಲ್ಲಿ ಮತ್ತೆ ಶುರುವಾಗಲಿದೆ ಟೋಯಿಂಗ್: ಎಲ್ಲೆಂದರಲ್ಲಿ ವಾಹನ ಪಾರ್ಕ್ ಮಾಡೋ ಮುನ್ನ ಎಚ್ಚರ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Feb 02, 2026 | 6:57 AM

Share

ಬೆಂಗಳೂರು, ಫೆಬ್ರವರಿ 2: ಬೆಂಗಳೂರಿನಲ್ಲಿ (Bangalore) ಜನಸಂಖ್ಯೆಗಿಂತಲೂ ವಾಹನ ಸಂಖ್ಯೆ ಅತಿಯಾಗಿದ್ದು, ಟ್ರಾಫಿಕ್ ಜಾಮ್ (Traffic Jam) ತಲ್ಲಣ ಹುಟ್ಟಿಸುತ್ತಿದೆ. ಇನ್ನು ನಗರದಲ್ಲಿ ಅನೇಕ ಜಾಗಗಳಲ್ಲಿ ಬೇಕಾಬಿಟ್ಟಿ ಅನಧಿಕೃತ ಪಾರ್ಕಿಂಗ್ ಕೂಡ ಹೆಚ್ಚಾಗಿದ್ದು, ಸುಗಮ ಸಂಚಾರಕ್ಕೆ ಹೊಡೆತ ಬಿದ್ದಿದೆ. ಹೀಗಾಗಿ ನಗರದಲ್ಲಿ ಮತ್ತೆ ಟೋಯಿಂಗ್ ವ್ಯವಸ್ಥೆ ಜಾರಿ ಮಾಡಲು ಜಿಬಿಎ ಹಾಗೂ ಸಂಚಾರ ಪೊಲೀಸ್ ನಿರ್ಧರಿಸಿದೆ.

ಬೆಂಗಳೂರಿನ ಅನಧಿಕೃತ ಪಾರ್ಕಿಂಗ್ ಜಾಲದ ಬಗ್ಗೆ ‘ಟಿವಿ9’ ಕನ್ನಡ ರಿಯಾಲಿಟಿ ಚೆಕ್ ನಡೆಸಿದೆ. ನಗರದ ರಾಜಾಜಿನಗರ ವೆಸ್ಟ್ ಆಫ್ ಕಾರ್ಡ್ ರಸ್ತೆಯ ಶಿವನಗರದಲ್ಲಿ ರಸ್ತೆಗಳು ಪಾರ್ಕಿಂಗ್​​ಗೆ ಮಾತ್ರ ಸೀಮಿತವಾಗಿವೆ. ಪಾರ್ಕ್ ಮಾಡಿ ವರ್ಷಾನುಗಟ್ಟಲೆ ಆದರೂ ವಾಹನಗಳ ಮಾಲೀಕರು ಇತ್ತ ತಿರುಗಿ ನೋಡುತ್ತಿಲ್ಲ. ವಾಹನಗಳು ಧೂಳು ಹಿಡಿದು, ತುಕ್ಕು ಹಿಡಿದರೂ ಇಲ್ಲೇ ಬಿದ್ದಿವೆ.

ಇನ್ನು ಮಲ್ಲೇಶ್ವರಂ 8ನೇ ಮುಖ್ಯರಸ್ತೆ ಜನವಸತಿ ಪ್ರದೇಶಗಳೂ ಅನಾಮಿಕರ ವಾಹನಗಳ ಪಾರ್ಕಿಂಗ್ ಸ್ಪಾಟ್ ಆಗಿವೆ. 2019ರಲ್ಲಿ ನಿಲ್ಲಿಸಿಹೋಗಿದ್ದ ವಾಹನವೊಂದು ಇನ್ನೂ ಕದಲಲೇ ಇಲ್ಲ. ಸ್ಕ್ರಾಪ್ ಆದ ವಾಹನಕ್ಕೂ ಕೂಡ ಇದೇ ಆಶ್ರಯತಾಣ. ಪೊಲೀಸರು ಹಾಗೂ ಪಾಲಿಕೆ ಅಧಿಕಾರಿಗಳಿಗೆ ಸ್ಥಳೀಯರು ವಿಚಾರ ಮುಟ್ಟಿಸಿದರೂ ಏನೂ ಪ್ರಯೋಜನವಾಗಿಲ್ಲ.

ನಗರದ ಹಲವು ಕಡೆಗಳಲ್ಲಿ ಬೇಕಾಬಿಟ್ಟಿ ಪಾರ್ಕಿಂಗ್ ಮಾಡುವ ಕೆಟ್ಟ ಪ್ರವೃತ್ತಿ ಹೆಚ್ಚಾಗಿದೆ. ಹೀಗಾಗಿಯೇ ಟೋಯಿಂಗ್ ವ್ಯವಸ್ಥೆ ಮತ್ತೆ ಜಾರಿ ಮಾಡುತ್ತಿರುವುದು ಒಳ್ಳೆಯದೇ ಎಂದು ಸಾರ್ವಜನಿಕರು ಸಹಮತ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ವಿಶ್ವದಲ್ಲೇ ಹೆಚ್ಚು ಟ್ರಾಫಿಕ್ ಇರುವ ನಗರ: ಬೆಂಗಳೂರಿಗೆ 2ನೇ ಸ್ಥಾನ!

ಇತ್ತೀಚೆಗಷ್ಟೇ, ಸಂಚಾರ ದಟ್ಟಣೆಯ ಕಾರಣಕ್ಕಾಗಿ ವಿಶ್ವಮಟ್ಟದಲ್ಲಿ ಬೆಂಗಳೂರು ಸುದ್ದಿಯಾಗಿತ್ತು. ನೆದರ್ಲೆಂಡ್ಸ್ ಮೂಲದ ‘ಟಾಮ್‌ಟಾಮ್’ ಸಂಸ್ಥೆ ಬಿಡುಗಡೆ ಮಾಡಿರುವ 2025ರ ಸಂಚಾರ ಸೂಚ್ಯಂಕ ವರದಿಯಲ್ಲಿ, ಟ್ರಾಫಿಕ್ ಸಮಸ್ಯೆಯಲ್ಲಿ ಬೆಂಗಳೂರು ವಿಶ್ವದಲ್ಲೇ ಟಾಪ್ 2 ನಗರವಾಗಿ ಹೊರಹೊಮ್ಮಿತ್ತು. 2025ರಲ್ಲಿ ಬೆಂಗಳೂರಿನ ಸರಾಸರಿ ಸಂಚಾರ ದಟ್ಟಣೆ ಶೇ 74.4ಕ್ಕೆ ತಲುಪಿದೆ. 2024ರಲ್ಲಿ ಇದು ಶೇ 72.7 ಆಗಿದ್ದು, ಒಂದೇ ವರ್ಷದಲ್ಲಿ ಶೇ 1.7ರಷ್ಟು ದಟ್ಟಣೆ ಹೆಚ್ಚಾಗಿದೆ ಎಂದು ವರದಿ ತಿಳಿಸಿತ್ತು.

ವರದಿ: ಲಕ್ಷ್ಮಿ ನರಸಿಂಹ, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಸಿಇಸಿ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಆಗ್ರಹಿಸಿ ವಿಪಕ್ಷಗಳ ಮಾರ್ಚ್
ಸಿಇಸಿ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಆಗ್ರಹಿಸಿ ವಿಪಕ್ಷಗಳ ಮಾರ್ಚ್
ಮೈಸೂರು ಅರಮನೆಗೆ ಭೇಟಿ ನೀಡಿದ ನಟಿ ಕಾಜಲ್ ಅಗರ್ವಾಲ್; ಗತವೈಭವ ಕಂಡು ಬೆರಗು
ಮೈಸೂರು ಅರಮನೆಗೆ ಭೇಟಿ ನೀಡಿದ ನಟಿ ಕಾಜಲ್ ಅಗರ್ವಾಲ್; ಗತವೈಭವ ಕಂಡು ಬೆರಗು
ಬಿಗ್ ಬಾಸ್ ಮನೆಯಲ್ಲಿ ಗಂಧರ್ವರು vs ರಾಕ್ಷಸರು; ಮಂಜು ಅಬ್ಬರ
ಬಿಗ್ ಬಾಸ್ ಮನೆಯಲ್ಲಿ ಗಂಧರ್ವರು vs ರಾಕ್ಷಸರು; ಮಂಜು ಅಬ್ಬರ
ಇಂದು ಈ ರಾಶಿಯವರು ಸಾಲದ ವಿಚಾರದಲ್ಲಿ ಸ್ವಲ್ಪ ಜಾಗೃತರಾಗಿರಿ
ಇಂದು ಈ ರಾಶಿಯವರು ಸಾಲದ ವಿಚಾರದಲ್ಲಿ ಸ್ವಲ್ಪ ಜಾಗೃತರಾಗಿರಿ
ಬೆಂಗಳೂರಿನಾದ್ಯಂತ ವರುಣಾರ್ಭಟ: ರಾತ್ರಿ ಮಳೆಗೆ ರಸ್ತೆಗಳು ಜಲಾವೃತ
ಬೆಂಗಳೂರಿನಾದ್ಯಂತ ವರುಣಾರ್ಭಟ: ರಾತ್ರಿ ಮಳೆಗೆ ರಸ್ತೆಗಳು ಜಲಾವೃತ
ಮುಂಬೈನ ಡಿಪೋದಲ್ಲಿ ಭಾರೀ ಬೆಂಕಿ ಅವಘಡ; ಧಗಧಗನೆ ಹೊತ್ತಿ ಉರಿದ ಬಸ್‌ಗಳು
ಮುಂಬೈನ ಡಿಪೋದಲ್ಲಿ ಭಾರೀ ಬೆಂಕಿ ಅವಘಡ; ಧಗಧಗನೆ ಹೊತ್ತಿ ಉರಿದ ಬಸ್‌ಗಳು
ಶಿವರಾಜ್‌ಕುಮಾರ್ ಆಗಮನ ವೇಳೆ ಪಟಾಕಿ ಸ್ಫೋಟ; ತಪ್ಪಿದ ದೊಡ್ಡ ಅಪಾಯ
ಶಿವರಾಜ್‌ಕುಮಾರ್ ಆಗಮನ ವೇಳೆ ಪಟಾಕಿ ಸ್ಫೋಟ; ತಪ್ಪಿದ ದೊಡ್ಡ ಅಪಾಯ
ಹೆಚ್ಚಿತು ಗಾನವಿ, ಯಶಸ್ ನಡುವಿನ ಆಪ್ತತೆ; ಸೌಂದರ್ಯಾ ಶೆಟ್ಟಿ ಕಥೆ ಏನು?
ಹೆಚ್ಚಿತು ಗಾನವಿ, ಯಶಸ್ ನಡುವಿನ ಆಪ್ತತೆ; ಸೌಂದರ್ಯಾ ಶೆಟ್ಟಿ ಕಥೆ ಏನು?
‘ಹೆದ್ದಾರಿ ವಿಸ್ತರಣೆಗೆ 2,326 ಮರಗಳಿಗೆ ಕೊಡಲಿ ಪೆಟ್ಟು’
‘ಹೆದ್ದಾರಿ ವಿಸ್ತರಣೆಗೆ 2,326 ಮರಗಳಿಗೆ ಕೊಡಲಿ ಪೆಟ್ಟು’
ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಪ್ರಸಂಗ ಬಿಚ್ಚಿಟ್ಟ ಸಿದ್ದರಾಮಯ್ಯ
ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಪ್ರಸಂಗ ಬಿಚ್ಚಿಟ್ಟ ಸಿದ್ದರಾಮಯ್ಯ