AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧ, ಎಂಎಸ್ ಬಿಲ್ಡಿಂಗ್ ಸುತ್ತಮುತ್ತ ಪಾರ್ಕಿಂಗ್ ಜಂಜಾಟ: ಶಕ್ತಿಸೌಧಕ್ಕೂ ತಟ್ಟಿದ ಬಿಸಿ

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ವಾಹನ ಸಂಖ್ಯೆ ಹೆಚ್ಚಾಗುತ್ತಿದ್ದು, ಟ್ರಾಫಿಕ್ ಕಿರಿಕಿರಿಯಂತೂ ಹೇಗೂ ಹೆಚ್ಚಾಗಿದೆ. ಇದರ ಮಧ್ಯೆ ನಗರದಲ್ಲಿ ಪಾರ್ಕಿಂಗ್ ಸಮಸ್ಯೆ ಕೂಡ ತೀವ್ರಗೊಂಡಿದೆ. ಇದಕ್ಕೆ ಪರಿಹಾರ ಕೊಡಲು ಸರ್ಕಾರಕ್ಕೆ ಇನ್ನೂ ಸಾಧ್ಯವಾಗಿಲ್ಲ. ಇದರ ಮಧ್ಯೆ ರಾಜ್ಯದ ಶಕ್ತಿಸೌಧ ಎಂದೇ ಕರೆಸಿಕೊಳ್ಳುವ ವಿಧಾನಸೌಧ ಸುತ್ತಮುತ್ತ ಕೂಡ ಪಾರ್ಕಿಂಗ್ ಜಂಜಾಟ ಜೋರಾಗಿದೆ.

ವಿಧಾನಸೌಧ, ಎಂಎಸ್ ಬಿಲ್ಡಿಂಗ್ ಸುತ್ತಮುತ್ತ ಪಾರ್ಕಿಂಗ್ ಜಂಜಾಟ: ಶಕ್ತಿಸೌಧಕ್ಕೂ ತಟ್ಟಿದ ಬಿಸಿ
ವಿಧಾನಸೌಧ, ಎಂಎಸ್ ಬಿಲ್ಡಿಂಗ್ ಸುತ್ತಮುತ್ತ ಪಾರ್ಕಿಂಗ್ ಜಂಜಾಟ
ಗಣಪತಿ ಶರ್ಮಾ
|

Updated on: Jun 19, 2025 | 6:27 AM

Share

ಬೆಂಗಳೂರು, ಜೂನ್ 19: ಬೆಂಗಳೂರಿನಲ್ಲಿ ಜನಸಂಖ್ಯೆಗಿಂತ ವಾಹನ ಸಂಖ್ಯೆಯೇ ಹೆಚ್ಚಾಗಿರುವುದು ಒಂದು ರೀತಿಯ ದುರಂತ. ಹೀಗಾಗಿಯೇ ನಗರ ಟ್ರಾಫಿಕ್ ಜಾಮ್ (Bengaluru Traffic Jam) ವಿಚಾರದಲ್ಲಿ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಇದರ ಜೊತೆಜೊತೆಗೆ ಪಾರ್ಕಿಂಗ್ ಸಮಸ್ಯೆ (Parking Problem) ಕೂಡ ವಾಹನ ಸವಾರರನ್ನು ನಿತ್ಯ ಕಾಡುತ್ತಿದೆ. ಸದ್ಯ ಈ ಸಮಸ್ಯೆ ರಾಜ್ಯದ ಶಕ್ತಿ ಸೌಧ ಎಂದೇ ಕರೆಸಿಕೊಳ್ಳುವ ವಿಧಾನಸೌಧ, ವಿಕಾಸಸೌಧ ಸುತ್ತಮುತ್ತಲೇ ತೀವ್ರಗೊಂಡಿದೆ. ಇದಕ್ಕೆ ಪರಿಹಾರ ನೀಡದ ಸರ್ಕಾರದ ವಿರುದ್ಧ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಆಡಳಿತ ಸೌಧಗಳ ಬಳಿಯೇ ಪಾರ್ಕಿಂಗ್​ಗೆ ಜಾಗವಿಲ್ಲ!

ಬೆಂಗಳೂರಿನ ಕಚೇರಿ ಕೆಲಸಗಳ ನಿಮಿತ್ತ ನಿತ್ಯ ಸಾವಿರಾರು ಮಂದಿ ಸಾರ್ವಜನಿಕರ ಓಡಾಟಕ್ಕೆ ಸಾಕ್ಷಿಯಾಗುವ ವಿಧಾನಸೌಧ, ವಿಕಾಸಸೌಧ, ಎಂಎಸ್ ಬಿಲ್ಡಿಂಗ್, ಲೋಕಾಯುಕ್ತ, ಮಾಹಿತಿ ಆಯೋಗ, ಕೆಪಿಎಸ್ಸಿ, ಕಬ್ಬನ್ ಪಾರ್ಕ್, ಕರ್ನಾಟಕ ಲೋಕೋಪಯೋಗಿ ಇಲಾಖೆ ಭಾಗಗಳಲ್ಲಿ ಪಾರ್ಕಿಂಗ್ ಮಾಡಲು ಪರದಾಟ ನಡೆಸುವ ಸ್ಥಿತಿ ನಿರ್ಮಾಣವಾಗಿದೆ.

ಎಲ್ಲೆಂದರಲ್ಲಿ ಪಾರ್ಕಿಂಗ್

ವಾಹನ ನಿಲುಗಡೆಗೆ ಸರಿಯಾದ ಜಾಗ ಇಲ್ಲೇ ಇರುವ ಕಾರಣ ‘ನೋ ಪಾರ್ಕಿಂಗ್’ ಜಾಗಗಳಲ್ಲಿ ಪಾರ್ಕ್ ಮಾಡುತ್ತಾ ಅಥವಾ ಅಡ್ಡಾದಿಡ್ಡಿ ಪಾರ್ಕಿಂಗ್ ಮಾಡುವುದು ಸಾಮಾನ್ಯವಾಗಿದೆ. ಇದು ವಾಹನ ದಟ್ಟಣೆ ಹೆಚ್ಚಾಗಲು ಮತ್ತು ಸಂಚಾರ ದಟ್ಟಣೆಗೆ ಕಾರಣವಾಗಿದೆ.

ಇದನ್ನೂ ಓದಿ
Image
ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್​ ಮಳಿಗೆ ಸ್ಥಾಪನೆಗೆ ಮುಂದಾದ ಬಿಎಂಆರ್​ಸಿಎಲ್​
Image
ಬೆಳಗಾವಿಯಲ್ಲಿ ಹೆಚ್ಚಾದ ಮಳೆ ಅಬ್ಬರ: 6 ಸಂಪರ್ಕ ಸೇತುವೆಗಳು ಮುಳುಗಡೆ
Image
ಆಂಧ್ರದ ವೈಎಸ್​ಆರ್​ಪಿ ಮಾಜಿ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿ ಬೆಂಗಳೂರಿನ
Image
ಮಳೆ ಅಬ್ಬರ ಜೋರು; ಮಂಗಳೂರು, ಚಿಕ್ಕಮಗಳೂರಿನ ಹಲವೆಡೆ ಅನಾಹುತ

ಇದನ್ನೂ ಓದಿ: ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್​ ಮಳಿಗೆ ಸ್ಥಾಪನೆಗೆ ಮುಂದಾದ ಬಿಎಂಆರ್​ಸಿಎಲ್​: ಸಾರ್ವಜನಿಕರಿಂದ ಆಕ್ಷೇಪ

ಒಟ್ಟಾರೆಯಾಗಿ, ಮಹಾನಗರ ಬೆಂಗಳೂರಿನಾದ್ಯಂತ ಪಾರ್ಕಿಂಗ್ ಸಮಸ್ಯೆಗೆ ಪರಿಹಾರ ಮಾಡಿಕೊಡುತ್ತೇವೆ ಎಂದು ಹೇಳಿಕೊಳ್ಳುವ ಸರ್ಕಾರಕ್ಕೆ ತನ್ನ ಶಕ್ತಿ ಕೇಂದ್ರ, ಇಲಾಖೆಯ ಪ್ರಧಾನ ಕಚೇರಿಗಳು ಇರುವ ಕಡೆಯಲ್ಲೇ ಪಾರ್ಕಿಂಗ್ ಸಮಸ್ಯೆಗೆ ಮುಕ್ತಿ ಕೊಡುವುದಕ್ಕೆ ಸಾಧ್ಯವಾಗಿಲ್ಲ. ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸದೆ ಇದ್ದಲ್ಲಿ ಸಮಸ್ಯೆ ಮತ್ತಷ್ಟು ಗಂಭೀರ ಆಗಲಿದೆ.

ವರದಿ: ಲಕ್ಷ್ಮಿ ನರಸಿಂಹ, ‘ಟಿವಿ9’ ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ